Celebration of the centenary of the national anthem in Doddaballapura

ಗುಡ್ಮಾರ್ನಿಂಗ್ ನ್ಯೂಸ್: ದೊಡ್ಡಬಳ್ಳಾಪುರದಲ್ಲಿಂದು ನಾಡಗೀತೆಯ ಶತಮಾನದ ಸಂಭ್ರಮ

ದೊಡ್ಡಬಳ್ಳಾಪುರ: ಸಾವಿರ ಸ್ವರಗಳ ಸಂಗಮ ಕುವೆಂಪು ರಚಿಸಿರುವ  ನಾಡಗೀತೆಗೆ (State anthem) ನೂರು ವರ್ಷ ತುಂಬಿದ ಸಂಭ್ರಮವನ್ನು ದೊಡ್ಡಬಳ್ಳಾಪುರ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನ.1 ರಂದು ಡಾ.ರಾಜ್ ಕುಮಾರ್ ಪ್ರತಿಮೆ ಮುಂಭಾಗ ನಡೆಯುವ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ನಗರದ ವಿವಿಧ ಶಾಲೆಗಳ ಸಾವಿರ ವಿದ್ಯಾರ್ಥಿಗಳು ನಾಡಗೀತೆ ಹಾಡುವ ಮೂಲಕ ಆಚರಿಸಲಿದ್ದಾರೆ.

ಕುವೆಂಪು ಅವರು 1924-25ರಲ್ಲಿ ‘ಕನ್ನಡ ರಾಷ್ಟ್ರಗೀತೆ’ ಎಂದು ನಾಡಗೀತೆಯನ್ನು ಬರೆದಿದ್ದರು. 2004 ರಲ್ಲಿ ಕುವೆಂಪು ಜನ್ಮ ಶತಮಾನೋತ್ಸವದ ಸಮಯದಲ್ಲಿ ಕರ್ನಾಟಕ ಸರ್ಕಾರ ಈ ಗೀತೆಯನ್ನು ಅಧಿಕೃತ ನಾಡ ಗೀತೆಯನ್ನಾಗಿ ಗೌರವಿಸಿ ಅದಕ್ಕೊಂದು ವಿಶೇಷ ಸ್ಥಾನ ನೀಡಿತು.

ಶಾಲೆಗಳಲ್ಲಿ ತರಗತಿಗಳು ಪ್ರಾರಂಭವಾಗುವ ಮೊದಲು ಪ್ರತಿದಿನ ಹಾಡಬೇಕು ಮತ್ತು ಎಲ್ಲಾ ಕಾರ್ಯಕ್ರಮಗಳಲ್ಲಿಯೂ ಸಹ ಹಾಡಬೇಕು ಎಂದು ಅದು ನಿರ್ದೇಶಿಸಿತು. ರಾಜ್ಯಕ್ಕೆ ಗೌರವ ಸಲ್ಲಿಸುವ ಸಂಕೇತವಾಗಿ ಹಾಡನ್ನು ಪ್ರದರ್ಶಿಸುವ ಸಮಯದಲ್ಲಿ ಹಾಜರಿದ್ದವರು ಎದ್ದು ನಿಲ್ಲಬೇಕು ಎಂಬ ಮೂಲಕ ಗೌರವ ಸಲ್ಲಿಸಲಾಗಿದೆ.

ಕುವೆಂಪು ಅವರು ರಚಿಸಿರುವ ಇಂದು  ನಾಡಗೀತೆಗಿರುವ ಕವಿತೆಯನ್ನು  ಗಾಯಕ ಮೈಸೂರು ಅನಂತಸ್ವಾಮಿ 1960 ರ ದಶಕದಲ್ಲಿ ಇದಕ್ಕೆ ಒಂದು ರಾಗವನ್ನು ನೀಡಿದರು. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಕುವೆಂಪು ಅವರ ಸಮ್ಮುಖದಲ್ಲಿ ಅನಂತಸ್ವಾಮಿ ಕೂಡ ಇದನ್ನು ಹಾಡಿದ್ದರು.

ಕರ್ನಾಟಕವನ್ನು ಭಾರತಮಾತೆಯ ಮಗಳು ಎಂದು ಬಣ್ಣಿಸುತ್ತದೆ. ಈ ಗೀತೆಯು ಕರ್ನಾಟಕದ ಇತಿಹಾಸ, ಸಂಸ್ಕೃತಿ, ಭಾಷೆ ಮತ್ತು ವೈವಿಧ್ಯಮಯ ಜನಸಮುದಾಯಗಳ ಶಾಂತಿಯುತ ಸಹಬಾಳ್ವೆಯನ್ನು ಕೊಂಡಾಡುತ್ತದೆ. ಇದು ಕನ್ನಡಿಗರಲ್ಲಿ ಅಭಿಮಾನ ಮತ್ತು ಸ್ಫೂರ್ತಿಯನ್ನು ತುಂಬುವ ಮೂಲಕ ನಾಡಿನ ಘನತೆಯನ್ನು ಸಾರುತ್ತದೆ. 

ಕರ್ನಾಟಕದ ಹೆಗ್ಗಳಿಕೆ

ಕರ್ನಾಟಕವು ಭಾರತಮಾತೆಯ ಮಗಳು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಭಾರತದ ಇತರ ರಾಜ್ಯಗಳೊಂದಿಗೆ ಶಾಂತಿಯುತ ಸಹಬಾಳ್ವೆ ನಡೆಸುವ, ಅದೇ ಸಮಯದಲ್ಲಿ ಆತ್ಮವಿಶ್ವಾಸ ಮತ್ತು ಶಕ್ತಿಯಿಂದ ತನ್ನ ಸ್ವಾಭಿಮಾನವನ್ನು ಕಾಪಾಡಿಕೊಳ್ಳುವ ಗತವೈಭವದ ನಾಡು ಇದಾಗಿದೆ. 

ಇತಿಹಾಸ ಮತ್ತು ಪರಂಪರೆ

ಕಾವೇರಿ, ತುಂಗಾ, ಶರಾವತಿ ಮುಂತಾದ ನದಿಗಳ ನಾಡಾಗಿ, ಡಂಕಣ ಮತ್ತು ಜಕ್ಕಣರಂತಹ ಶಿಲ್ಪಿಗಳ ತವರಾಗಿ, ಹಾಗೂ ತೈಲಪ ಮತ್ತು ಹೊಯ್ಸಳರಂತಹ ರಾಜಮನೆತನಗಳನ್ನು ಆಳಿದ ನಾಡಾಗಿ ಕರ್ನಾಟಕದ ಶ್ರೀಮಂತ ಇತಿಹಾಸವನ್ನು ಈ ಗೀತೆ ನೆನಪಿಸುತ್ತದೆ. 

ಸಂಸ್ಕೃತಿ ಮತ್ತು ವೈವಿಧ್ಯತೆ

ಇದು ಸರ್ವಜನಾಂಗದ ಶಾಂತಿಯ ತೋಟವಾಗಿದ್ದು, ಹಿಂದೂ, ಕ್ರಿಶ್ಚಿಯನ್, ಮುಸ್ಲಿಂ, ಪಾರ್ಸಿ ಮತ್ತು ಜೈನರು ಸೇರಿದಂತೆ ವಿವಿಧ ಸಮುದಾಯಗಳು ಒಟ್ಟಾಗಿ ಬಾಳುತ್ತವೆ. 

ಭಾಷೆ ಮತ್ತು ಸಾಹಿತ್ಯ

ಕನ್ನಡ ನುಡಿ ಕುಣಿದಾಡುವ ಗೇಹವಾಗಿದ್ದು, ಕನ್ನಡಿಗರ ಹೃದಯದ ಮನೆ ಎನಿಸಿದೆ. ಕನ್ನಡವನ್ನು ಪ್ರೀತಿಸುವ ಮತ್ತು ಆರಾಧಿಸುವ ಜನರನ್ನು ಇದು ಒಳಗೊಂಡಿದೆ. 

ವಿವಿಧ ಕ್ಷೇತ್ರಗಳ ಕೊಡುಗೆ

ಇದು ಗಾಯಕರು, ವೈಣಿಕರು, ರಸಋಷಿಗಳು ಮತ್ತು ತತ್ವಜ್ಞಾನಿಗಳಿಗೆ ಜನ್ಮ ನೀಡಿದ ನಾಡಾಗಿದೆ. ವಿವೇಕಾನಂದರಂತಹ ಮಹಾಪುರುಷರಿಗೆ ತವರಾಗಿರುವುದು ಗೀತೆಯ ಮತ್ತೊಂದು ಅಂಶವಾಗಿದೆ. 

ರಾಜಕೀಯ

ಕಾಂಗ್ರೆಸ್‌ ಆಡಳಿತದ ಅವಧಿ ಮುಗಿಯುತ್ತಾ ಬಂದಿದೆ: ಆರ್‌.ಅಶೋಕ

ಕಾಂಗ್ರೆಸ್‌ ಆಡಳಿತದ ಅವಧಿ ಮುಗಿಯುತ್ತಾ ಬಂದಿದೆ: ಆರ್‌.ಅಶೋಕ

ಈ ಬಾರಿಯ ಬಜೆಟ್‌ ಅಧಿವೇಶನದಲ್ಲಿ ಸರ್ಕಾರದ ಲೋಪದೋಷಗಳನ್ನು ಚರ್ಚಿಸಲಾಗುವುದು. ರಾಜ್ಯದ ಆರ್ಥಿಕ ದುಸ್ಥಿತಿಯ ವಿರುದ್ಧ ಹೋರಾಟ ಮಾಡಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R.Ashoka) ಹೇಳಿದರು.

[ccc_my_favorite_select_button post_id="119883"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ಗ್ಯಾಸ್ ಗೀಸರ್ (Gas geyser) ಬಳಕೆ ಮಾಡುವವರು ಆದಷ್ಟು ಮುಂಜಾಗ್ರತೆಯ ಕ್ರಮಕೈಗೊಳ್ಳಬೇಕಿದೆ. ಏಕೆಂದರೆ ಪದೇ ಪದೇ ವಿಷಾನಿಲ ಸೋರಿಕೆಯಿಂದ ಸಾವನಪ್ಪುವ ಪ್ರಕರಣಗಳು ವರದಿಯಾಗುತ್ತಿವೆ.

[ccc_my_favorite_select_button post_id="119828"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!