Buy Kannada books wholesale H.D. Kumaraswamy demand

ಕನ್ನಡ ಪುಸ್ತಕ ಸಗಟು ಖರೀದಿಗೆ ಹೆಚ್.ಡಿ. ಕುಮಾರಸ್ವಾಮಿ ಆಗ್ರಹ

ಬೆಂಗಳೂರು: ಓದುವ ಸಂಸ್ಕೃತಿ ಬೆಳೆಯಬೇಕು. ಯುವಜನರು ಮೊಬೈಲ್ ನಲ್ಲಿ ಕಳೆದುಹೋಗುವ ಬದಲು ಪುಸ್ತಕ ಓದುವ ಹವ್ಯಾಸ ರೂಢಿಸಿಕೊಳ್ಳಬೇಕು. ಇಂತಹ ಸಂಸ್ಕೃತಿಯನ್ನು ರಾಜ್ಯ ಸರ್ಕಾರ ಉತ್ತೇಜಿಸಬೇಕು. ಇದಕ್ಕಾಗಿ ಮಾತೃಪ್ರೀತಿಯಿಂದ ಸರ್ಕಾರ ಪುಸ್ತಕ ಖರೀದಿ ಮಾಡಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ (H.D. Kumaraswamy) ಅವರು ಹೇಳಿದರು.

ಬೆಂಗಳೂರಿನಲ್ಲಿ ಶನಿವಾರದಂದು ಸಪ್ನ ಪುಸ್ತಕ ಮಳಿಗೆ ಕನ್ನಡ ರಾಜ್ಯೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ಪುಸ್ತಕ ಜಾತ್ರೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಸಚಿವರು, ಸಾರ್ವಜನಿಕ ಗ್ರಂಥಾಲಯಗಳಿಗೆ ಪುಸ್ತಕ ಖರೀದಿ ಮಾಡುವ ಪ್ರಕ್ರಿಯೆಯನ್ನು ರಾಜ್ಯ ಸರ್ಕಾರ ಕೂಡಲೇ ಆರಂಭಿಸಬೇಕು. ಸಾಮಾನ್ಯರು ಓದುವ ಸಾರ್ವಜನಿಕ ಗ್ರಂಥಾಲಯಗಳಲ್ಲಿ ಸರ್ಕಾರ ಭಾಷಾಭಿಮಾನ ಬೆಳೆಸುವ, ಸಾಹಿತ್ಯಾಸಕ್ತಿ ಸೃಷ್ಟಿಸುವ ಕೆಲಸ ಮಾಡಬೇಕು ಎಂದು ಒತ್ತಾಯಿಸಿದರು.

ನಾಲ್ಕೈದು ವರ್ಷಗಳಿಂದ ಕನ್ನಡ ಪುಸ್ತಕಗಳ ಸಗಟು ಖರೀದಿ ಆಗಿಲ್ಲವೆಂದು ಕೇಳಿದ್ದೇನೆ. ಮಾಧ್ಯಮಗಳಲ್ಲಿಯೂ ನಾನು ಈ ಬಗ್ಗೆ ವರದಿಗಳನ್ನು ಓದಿದ್ದೇನೆ. ಕನ್ನಡ ಪುಸ್ತಕಗಳನ್ನು ಖರಿಸಲಾಗದಷ್ಟು ದುಸ್ಥಿತಿಯಲ್ಲಿ ರಾಜ್ಯ ಇಲ್ಲ ಎಂದು ಸಚಿವರು ಹೇಳಿದರು.

ಪುಸ್ತಕ ಸಂಸ್ಕೃತಿ ಬೆಳೆದಷ್ಟು ಭಾಷೆ ಸದೃಢವಾಗಿ ಬೆಳೆಯುತ್ತದೆ. ನಮ್ಮ ಸುದೈವಕ್ಕೆ ಕನ್ನಡದಲ್ಲಿ ಅತ್ಯಂತ ವಿಪುಲ, ಶ್ರೇಷ್ಠ ಸಾಹಿತ್ಯದ ಆಗರವೇ ಇದೆ. ಅನೇಕ ಮಹಾನ್ ಸಾಹಿತಿಗಳು, ಕವಿಗಳು, ಇನ್ನಿತರ ಬರಹಗಾರರು ಕನ್ನಡ ಸಾಹಿತ್ಯ ಪರಂಪರೆಯನ್ನು ಶ್ರೀಮಂತಗೊಳಿಸಿದ್ದಾರೆ.

ತರಾಸು ಅವರ ‘ದುರ್ಗಾಸ್ತಮಾನ’ ಕಾದಂಬರಿಯನ್ನು ಅನೇಕ ಸಲ ಓದಿದ್ದೇನೆ. ಈಗ ಮತ್ತೊಮ್ಮೆ ಓದುತ್ತಿದ್ದೇನೆ. ಎಷ್ಟು ಸಲ ಓದಿದರೂ ಮತ್ತೆ ಮತ್ತೆ ಓದಿಸಿಕೊಳ್ಳುವ ಶಕ್ತಿ ಆ ಮಹಾನ್ ಕಾದಂಬರಿಗೆ ಇದೆ.

ತರಾಸು ಅವರ ಕಥನಶೈಲಿ, ಬರವಣಿಗೆಯ ಕುಸುರಿಗಾರಿಕೆ ನನ್ನನ್ನು ಸೂಜಿಗಲ್ಲಿನಂತೆ ಸೆಳೆದಿದೆ. ಪ್ರತಿ ಪುಟ ಓದುವಾಗಲೂ ಮೈ ನವಿರೇಳುತ್ತದೆ. ಇಂತಹ ಸಾರ್ವಕಾಲಿಕ ಶ್ರೇಷ್ಠ ಕಾದಂಬರಿಗಳು ಕನ್ನಡಲ್ಲಿ ಅಸಂಖ್ಯಾತ ಸಂಖ್ಯೆಯಲ್ಲಿವೆ. ಈ ಸಾಹಿತ್ಯವನ್ನು ಕನ್ನಡಿಗರು ಓದಬೇಕಲ್ಲವೇ ಎಂದು ಕೇಂದ್ರ ಸಚಿವರು ಹೇಳಿದರು.

ಸಾರ್ವಜನಿಕ ಗ್ರಂಥಾಲಯಗಳಲ್ಲಿ ಕನ್ನಡ ಸಾಹಿತ್ಯ ಸಮಗ್ರವಾಗಿ ಲಭ್ಯ ಇರಬೇಕು. ಸರ್ಕಾರ ಸಗಟು ಪುಸ್ತಕ ಖರೀದಿಯನ್ನು ಕಾಟಾಚಾರಕ್ಕೆ ಮಾಡಬಾರದು. ಮಾತೃಪ್ರೀತಿಯಿಂದ ಮಾಡಬೇಕು. ‘ನಮ್ಮ ಕನ್ನಡ, ನಮ್ಮ ಸಾಹಿತ್ಯ, ನಮ್ಮ ಸಾಹಿತಿಗಳು’ ಎನ್ನುವ ಅಕ್ಕರೆಯಿಂದ ಸರಕಾರ ಪುಸ್ತಕ ಖರೀದಿ ಮಾಡಬೇಕು ಎಂದು ಕೇಂದ್ರ ಸಚಿವರು ಸಲಹೆ ನೀಡಿದರು.

ಇವತ್ತಿನ ಕಾಲಘಟ್ಟದಲ್ಲಿ ಪ್ರಕಾಶನ ಸಂಸ್ಥೆಯನ್ನು ಕಟ್ಟಿ ಬೆಳೆಸುವುದು, ಉಳಿಸಿಕೊಳ್ಳುವುದು ಕಷ್ಟದ ಕೆಲಸ. ಆದರೂ ಕರ್ನಾಟಕದಲ್ಲಿ ಅಸಂಖ್ಯಾತ ಪ್ರಕಾಶನ ಸಂಸ್ಥೆಗಳು ಕನ್ನಡದ ಮೇಲಿನ ಮಮತೆಯಿಂದ ಪ್ರಕಾಶನ ಕಾರ್ಯ ಮಾಡುತ್ತಿವೆ. ಸಪ್ನ ಪುಸ್ತಕ ಮಳಿಗೆ ಈ ನಿಟ್ಟಿನಲ್ಲಿ ದೊಡ್ಡ ಪ್ರಮಾಣದಲ್ಲಿ ಕೆಲಸ ಮಾಡುತ್ತಿದೆ. ನಾನು ಕೂಡ ನಿರಂತರವಾಗಿ ಪುಸ್ತಕ ಖರೀದಿ ಮಾಡುತ್ತಿದ್ದು, ಸಪ್ನ ಮಳಿಗೆಗೆ ಕಾಯಂ ಖರೀದಿದಾರನಾಗಿದ್ದೇನೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಪುಸ್ತಕ ಜಾತ್ರೆಯಲ್ಲಿ ರಾಜ್ಯಸಭೆ ಸದಸ್ಯರು, ಇನ್ಫೋಸಿಸ್ ಪ್ರತಿಷ್ಠಾನದ ಸಂಸ್ಥಾಪಕರಾದ ಸುಧಾ ಮೂರ್ತಿ, ಹಿರಿಯ ಸಾಹಿತಿ ಜಾಣಗೆರೆ ವೆಂಕಟರಾಮಯ್ಯ, ಲೇಖಕ ಮತ್ತು ನಟ ಅನಿರುದ್ಧ ಜತಕರ, ನಟಿ ಅಂಕಿತ ಅಮರ್, ಸಪ್ನ ಪುಸ್ತಕ ಮಳಿಗೆಯ ನಿತಿನ್ ಶಾ, ದೊಡ್ಡೇಗೌಡ, ಸಾಹಿತಿಗಳಾದ ಡುಂಡಿರಾಜ್, ಎಂ.ಎಸ್. ನರಸಿಂಹಮೂರ್ತಿ, ವೈ.ವಿ. ಗುಂಡೂರಾವ್ ಸೇರಿದಂತೆ ಅನೇಕ ಸಾಹಿತಿಗಳು, ಸಾಹಿತ್ಯಾಸಕ್ತರು ಪುಸ್ತಕ ಜಾತ್ರೆಯಲ್ಲಿ ಭಾಗಿಯಾಗಿದ್ದರು.

ರಾಜಕೀಯ

ಯಾರಾಗಲಿದ್ದಾರೆ ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ ಅಧ್ಯಕ್ಷ..?

ಯಾರಾಗಲಿದ್ದಾರೆ ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ ಅಧ್ಯಕ್ಷ..?

ಇತ್ತೀಚೆಗಷ್ಟೇ ಏಕಾಏಕಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ (JDS) ಅಧ್ಯಕ್ಷ ಆಯ್ಕೆ ಬೆನ್ನಲ್ಲೇ, ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷ ಯಾರಾಗಲಿದ್ದಾರೆ ಎಂಬ ಚರ್ಚೆ ವ್ಯಾಪಕವಾಗಿ ನಡೆಯುತ್ತಿದೆ.

[ccc_my_favorite_select_button post_id="120068"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಕೇಬಲ್ ತಯಾರಿಕಾ ಘಟಕದಲ್ಲಿ ಅಗ್ನಿ ಆಕಸ್ಮಿಕ.. ಕೋಟ್ಯಾಂತರ ರೂ. ನಷ್ಟ

ದೊಡ್ಡಬಳ್ಳಾಪುರ: ಕೇಬಲ್ ತಯಾರಿಕಾ ಘಟಕದಲ್ಲಿ ಅಗ್ನಿ ಆಕಸ್ಮಿಕ.. ಕೋಟ್ಯಾಂತರ ರೂ. ನಷ್ಟ

ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿನ ಅಡ್ವಾನ್ಸ್ ಕೇಬಲ್ ಟೆಕ್ನಾಲಜಿ ಯೂನಿಟ್-2ರಲ್ಲಿ ಸೋಮವಾರ ಸಂಜೆ 5 ಗಂಟೆ ಸುಮಾರಿಗೆ ಬೆಂಕಿ ಅವಘಡದಿಂದಾಗಿ (Fire accident) ಉಂಟಾಗಿರುವ ಬೆಂಕಿಯ ಕೆನ್ನಾಲಿಗೆ ಆವರಿಸುತ್ತಲೇ ಇದ್ದು, ಸತತ ಐದು ಗಂಟೆಗಳಿಂದಲೂ 10

[ccc_my_favorite_select_button post_id="120091"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!