Vatal is a fighter who does not compromise on the issue of Kannada: Cmsiddaramaiah

ವಾಟಾಳ್ ಕನ್ನಡದ ವಿಚಾರದಲ್ಲಿ ರಾಜಿ ಮಾಡಿಕೊಳ್ಳದ ಹೋರಾಟಗಾರ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ವಾಟಾಳ್ ಕನ್ನಡದ ವಿಚಾರದಲ್ಲಿ ರಾಜಿ ಮಾಡಿಕೊಳ್ಳದ ಹೋರಾಟಗಾರರು. ದೇವರಾಜ ಅರಸು ಅವರು ಮಂತ್ರಿ ಸ್ಥಾನ ಕೊಡ್ತೀನಿ ಎಂದು ಕರೆದರೂ ಕನ್ನಡ ಪಕ್ಷ ಮತ್ತು ಕನ್ನಡ ಹೋರಾಟ ಬಿಡಲು ವಾಟಾಳ್ ಅವರು ಒಪ್ಪಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಮೆಚ್ವುಗೆ ವ್ಯಕ್ತಪಡಿಸಿದರು.

ಮೈಸೂರು ಬ್ಯಾಂಕ್ ವೃತ್ತದ ನೃಪತುಂಗ ಮಂಟಪದಲ್ಲಿ ಭುವನೇಶ್ವರಿ ಹಾಗೂ ಅಣ್ಣಮ್ಮ ದೇವತೆಯ ವೈಭವದ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿದರು.

ನಾವೆಲ್ಲರೂ ಕನ್ನಡ ನೆಲ, ಜಲ, ಭಾಷೆ, ಸಂಸ್ಕೃತಿ ಬಗ್ಗೆ ಅಭಿಮಾನ, ಪ್ರೀತಿ ಬೆಳೆಸಿಕೊಳ್ಳಬೇಕು. ನಮ್ಮ ನೆಲದಲ್ಲಿ ಕನ್ನಡದ ವಾತಾವರಣ ಬೆಳೆಸಬೇಕು‌. ಇದಕ್ಕಾಗಿ ಯಾರು ಯಾವುದೇ ಭಾಷೆಯಲ್ಲಿ ಮಾತನಾಡಿದರೂ ನೀವು ಕನ್ನಡದಲ್ಲೇ ಉತ್ತರ ಕೊಡಬೇಕು ಎಂದು ಕರೆ ನೀಡಿದರು.

ಕನ್ನಡ ನೆಲದಲ್ಲಿ ಬದುಕು ಕಟ್ಟಿಕೊಂಡ ಪ್ರತಿಯೊಬ್ಬರೂ ಕನ್ನಡದ ವಾತಾವರಣವನ್ನು ಗೌರವಿಸುತ್ತಾರೆ. ಕನ್ನಡ ನೆಲದಲ್ಲಿ ನಾವು ಕನ್ನಡದಲ್ಲೇ ಮಾತಾಡುತ್ತೇವೆ ಎನ್ನುವ ಶಪಥ ಮಾಡೋಣ ಎಂದು ಕರೆ ನೀಡಿದರು.

ನಮ್ಮ ಭೂಮಿ, ನಮ್ಮ ನೆಲ, ನಮ್ಮ ಜಲ, ನಮ್ಮ ಭಾಷೆ ಎನ್ನುವ ಅಭಿಮಾನ ಮೂಡಲಿ ಎಂದು ಕರೆ ನೀಡಿದರು.

ಮೈಸೂರು ವಿಶ್ವ ವಿದ್ಯಾಲಯದಿಂದ ದೇವರಾಜು ಅರಸು ಅವರಿಗೆ ಮರಣೋತ್ತರ ಡಾಕ್ಟರೇಟ್ ಪ್ರಶಸ್ತಿ ನೀಡಬೇಕು ಎನ್ನುವ ವಾಟಾಳ್ ನಾಗರಾಜ್ ಮತ್ತು ಸಾ.ರಾ ಗೋವಿಂದು ಅವರ ಬೇಡಿಕೆಗೆ ಸ್ಪಂದಿಸಿದ ಮುಖ್ಯಮಂತ್ರಿಗಳು ಈ ಬಗ್ಗೆ ಸಿಂಡಿಕೇಟ್ ಸದಸ್ಯರ ಜೊತೆ ಚರ್ಚಿಸುವುದಾಗಿ ಭರವಸೆ ನೀಡಿದರು. ಇಲ್ಲಿಯವರೆಗೂ ಅರಸು ಅವರಿಗೆ ಡಾಕ್ಟರೇಟ್ ಏಕೆ ಕೊಟ್ಟಿಲ್ಲ ಎಂದು ಶಾಕ್ ಆಗಿದೆ. ಈ ಬಗ್ಗೆ ಗಮನ ಹರಿಸ್ತೀನಿ ಎಂದರು.

ಮೈಸೂರು ವಿವಿಯಲ್ಲಿ ನನಗೆ ಹಿಂದೆಯೇ ಡಾಕ್ಟರೇಟ್ ಕೊಡ್ತೀವಿ ಎಂದಿದ್ದರು. ಆದರೆ ನಾನು ಪಡೆಯಲಿಲ್ಲ. ಬೇಡ ಅಂದೆ. ಓದಿ, ಜ್ಞಾನ ವಿಸ್ತಾರ ಮಾಡಿಕೊಂಡು ಡಾಕ್ಟರೇಟ್ ಪಡೆಯಬೇಕು ಎನ್ನುವುದು ನನ್ನ ವೈಯುಕ್ತಿಕ ಭಾವನೆ ಎಂದರು.

ನಾನು ವೈಯುಕ್ತಿಕವಾಗಿ ದ್ವಿಭಾಷಾ ಪರವಾಗಿ ಇದ್ದೇನೆ. ಆದರೆ ದ್ವಿಭಾಷಾ ನೀತಿಯಾಗಿ ಕಾನೂನು ಜಾರಿ ಆಗಬೇಕಾದರೆ ಕ್ಯಾಬಿನೆಟ್ ನಲ್ಲಿ ಚರ್ಚಿಸಬೇಕಾಗುತ್ತದೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.

MES ನವರೂ ಕನ್ನಡಿಗರೇ. ಅವರಲ್ಲಿ ಯಾರಾದರೂ ಪುಂಡಾಟಿಕೆ ಮಾಡಿದರೆ ಅದನ್ನು ಮಟ್ಟಹಾಕ್ತೀವಿ. ಗಡಿ ಭಾಗದ ಕನ್ನಡ ಶಾಲೆಗಳ ಅಭಿವೃದ್ಧಿಗೆ ಅಗತ್ಯ ಇರುವುದನ್ನೆಲ್ಲಾ ಮಾಡಲು ಸರ್ಕಾರ ಸಿದ್ದವಿದೆ ಎಂದರು.

ಬೆಳಗಾವಿ ಕನ್ನಡ ನೆಲ, ಕರ್ನಾಟಕದ ಭಾಗ

ಬೆಳಗಾವಿ ವಿಚಾರದಲ್ಲಿ ರಾಜಿ ಇಲ್ಲ. ಮಹಾಜನ್ ವರದಿಯೇ ಅಂತಿಮ. ಬೆಳಗಾವಿ ಕನ್ನಡದ ನೆಲ, ಕರ್ನಾಟಕದ ಭಾಗ. ಇದನ್ನು ಅಲ್ಲಗಳೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.

ಕನ್ನಡ ಹೋರಾಟಗಾರರ ಮೇಲಿನ ಕೇಸುಗಳನ್ನು ವಾಪಾಸ್ ತಗೊತೀವಿ: ಸಿ.ಎಂ.ಸಿದ್ದರಾಮಯ್ಯ ಘೋಷಣೆ

ಕನ್ನಡ ಹೋರಾಟಗಾರರ ಮೇಲಿನ ಕೇಸುಗಳನ್ನು ವಾಪಾಸ್ ತಗೊತೀವಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೇ ಸಂದರ್ಭದಲ್ಲಿ ಭರವಸೆ ನೀಡಿದರು.

ರಾಜಕೀಯ

ರಸ್ತೆಬದಿ ಕಸ ಎಸೆಯುವವರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಖಡಕ್ ವಾರ್ನಿಂಗ್

ರಸ್ತೆಬದಿ ಕಸ ಎಸೆಯುವವರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಖಡಕ್ ವಾರ್ನಿಂಗ್

"ರಸ್ತೆಬದಿ ಕಸ ಎಸೆದರೆ ಮತ್ತೆ ಅದು ಮರಳಿ ನಿಮ್ಮ ಮನೆಗೇ ಬರುತ್ತದೆ ಎನ್ನುವ ಎಚ್ಚರಿಕೆ ನೀಡುವುದರ ಜೊತೆಗೆ, ಇನ್ನೂ ಹೆಚ್ಚಿನ ಸಿಸಿಟಿವಿ ಕ್ಯಾಮೆರಾಗಳನ್ನು ಪೊಲೀಸ್ ಇಲಾಖೆ‌ ಹಾಗೂ ಪಾಲಿಕೆ ನೆರವಿನಿಂದ ಅಳವಡಿಸಲಾಗುವುದು" ಎಂದು ಡಿಸಿಎಂ

[ccc_my_favorite_select_button post_id="115575"]
ಕರ್ನಾಟಕ ರಾಜ್ಯೋತ್ಸವಕ್ಕೆ ಶುಭಕೋರಿದ ಪವನ್ ಕಲ್ಯಾಣ್.. ಏನೆಂದು ಗೊತ್ತೆ..?!

ಕರ್ನಾಟಕ ರಾಜ್ಯೋತ್ಸವಕ್ಕೆ ಶುಭಕೋರಿದ ಪವನ್ ಕಲ್ಯಾಣ್.. ಏನೆಂದು ಗೊತ್ತೆ..?!

ಕರುನಾಡು ಇಂದು "70ನೇ ಕರ್ನಾಟಕ ರಾಜ್ಯೋತ್ಸವ”ದ (Karnataka Rajyotsava Celebration) ಸಂಭ್ರಮದಲ್ಲಿದೆ.

[ccc_my_favorite_select_button post_id="115602"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಗುಡ್ಮಾರ್ನಿಂಗ್ ನ್ಯೂಸ್: ಆಸ್ಟ್ರೇಲಿಯಾಗೆ ಮುಖಭಂಗ.. ಫೈನಲ್‌ಗೆ ಇಂಡಿಯಾ

ಗುಡ್ಮಾರ್ನಿಂಗ್ ನ್ಯೂಸ್: ಆಸ್ಟ್ರೇಲಿಯಾಗೆ ಮುಖಭಂಗ.. ಫೈನಲ್‌ಗೆ ಇಂಡಿಯಾ

ಭಾರತ (India) ತಂಡವು ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಯ (Women's ODI World Cup tournament) ಸೆಮಿಫೈನಲ್ ಪಂದ್ಯದಲ್ಲಿ ಬಲಿಷ್ಠ ಆಸ್ಟ್ರೇಲಿಯಾ (Australia) ವಿರುದ್ಧ 5 ವಿಕೆಟ್‌ಗಳ ರೋಚಕ ಗೆಲುವು ಸಾಧಿಸಿದೆ.

[ccc_my_favorite_select_button post_id="115495"]
ಬುದ್ದಿವಾದ ಹೇಳಿದಕ್ಕೆ ಹೆತ್ತಮ್ಮನ ಕೊಂದ ಮಗಳು..!

ಬುದ್ದಿವಾದ ಹೇಳಿದಕ್ಕೆ ಹೆತ್ತಮ್ಮನ ಕೊಂದ ಮಗಳು..!

ಚಿಕ್ಕವಯಸ್ಸಿನಲ್ಲೇ ಪ್ರೀತಿ ಏಕೆ ಎಂಬ ಕುರಿತು ಬುದ್ದಿ ಹೇಳಿದ ಕಾರಣಕ್ಕೆ ಅಪ್ರಾಪ್ತ ಮಗಳೇ ತನ್ನ ಹೆತ್ತ ತಾಯಿಯನ್ನೇ ಹತ್ಯೆಗೈದಿರುವ (Murder) ಅಮಾನುಷ ಘಟನೆ ನಗರದ ಉತ್ತರಹಳ್ಳಿಯಲ್ಲಿ ನಡೆದಿದೆ.

[ccc_my_favorite_select_button post_id="115563"]
ದೊಡ್ಡಬಳ್ಳಾಪುರ: ಅಪಘಾತ ನ್ಯೂಸ್ ಅಪ್ಡೇಟ್.. ಬಾಲಕ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ ನ್ಯೂಸ್ ಅಪ್ಡೇಟ್.. ಬಾಲಕ ದುರ್ಮರಣ

ದೊಡ್ಡಬಳ್ಳಾಪುರ ನಗರದ ಎಪಿಎಂಸಿ ಸಮೀಪದ ಹಾಲು ಶಿಥಲೀಕರಣ ಘಟಕದ ಬಳಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿ (Accident), ಸುಮಾರು 11 ವರ್ಷದ ಬಾಲಕ ಸಾವನಪ್ಪಿರುವ ದಾರುಣ ಘಟನೆ ನಡೆದಿದೆ.

[ccc_my_favorite_select_button post_id="115509"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!