Women's World Cup for India

ಗುಡ್ಮಾರ್ನಿಂಗ್ ನ್ಯೂಸ್: ಭಾರತದ ಮುಡಿಗೆ ಮಹಿಳಾ ವಿಶ್ವಕಪ್

ಮುಂಬೈ: ಹರ್ಮನ್‌ ಪ್ರೀತ್ ಕೌರ್ ನಾಯಕತ್ವದ ಭಾರತ ಮಹಿಳಾ ಕ್ರಿಕೆಟ್ ತಂಡ ಇತಿಹಾಸ ನಿರ್ಮಿಸಿದೆ. ನವಿ ಮುಂಬೈನ ಡಿ.ವೈ ಪಾಟೀಲ್‌ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಮಹಿಳಾ ಏಕದಿನ ವಿಶ್ವಕಪ್ (Women’s World Cup) ಫೈನಲ್‌ನಲ್ಲಿ ಭಾರತ ತಂಡ ದ.ಆಫ್ರಿಕಾವನ್ನು 52 ರನ್‌ಗಳಿಂದ ಮಣಿಸಿದೆ.

ಬಲಿಷ್ಠ ದಕ್ಷಿಣ ಆಫ್ರಿಕಾ ವಿರುದ್ದ ಎಲ್ಲಾ ವಿಭಾಗಗಳಲ್ಲೂ ಸರ್ವಾಂಗೀಣ ಪ್ರದರ್ಶನ ತೋರಿಸಿದ ಹರ್ಮನ್ ಪ್ರೀತ್ ಕೌರ್ ಪಡೆಯು ಮೊದಲ ಬಾರಿಗೆ ವಿಶ್ವಚಾಂಪಿಯನ್‌ ಆಗಿ ಮೂಡಿ ಬಂದಿದೆ.

2005ರಲ್ಲಿ ಆಸ್ಟ್ರೇಲಿಯಾ ಮತ್ತು 2017ರಲ್ಲಿ ಇಂಗ್ಲೆಂಡ್ ವಿರುದ್ಧ ಫೈನಲ್ ಪಂದ್ಯದಲ್ಲಿ ಪರಾಭವ ಅನುಭವಿಸಿದ್ದ ಭಾರತದ ವನಿತೆಯರು ಈ ಬಾರಿ ದಕ್ಷಿಣ ಆಫ್ರಿಕಾ ವಿರುದ್ಧ ಎಡವಲಿಲ್ಲ.

ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ದಕ್ಷಿಣ ಆಫ್ರಿಕಾ ತಂಡಕ್ಕೆ ಸೋತ ಭಾರತ ತಂಡ 7 ವಿಕೆಟ್ ಕಳೆದುಕೊಂಡು 298 ರನ್ ಗಳಿಸಿತು. ಈ ಮೊತ್ತವನ್ನು ಬೆಂಬತ್ತಿದ ದಕ್ಷಿಣ ಆಫ್ರಿಕಾ ತಂಡ 45.3 ಓವರ್‌ಗಳಲ್ಲಿ 246 ರನ್ ಗಳಿಸಲಷ್ಟೇ ಶಕ್ತವಾಯಿತು, ಆ ಮೂಲಕ ಭಾರತ ತಂಡ 52 ರನ್ ಗಳ ಭರ್ಜರಿ ವಿಜಯ ದಾಖಲಿಸಿತು.

ಬ್ಯಾಟಿಂಗ್‌ಗೆ ನೆರವಾಗುತ್ತಿದ್ದ ಪಿಚ್‌ನಲ್ಲಿ ದಕ್ಷಿಣ ಆಫ್ರಿಕಾ ತಂಡ ಭರ್ಜರಿ ಆರಂಭವನ್ನೇ ಮಾಡಿತ್ತು. ನಾಯಕಿ ಲಾರಾ ವೋಲ್ವಾರ್ಡ್ಸ್ ಮತ್ತು ತಾಜ್ಜಿನ್ ಬ್ರಿಟ್ಸ್ ಅವರು 8.4 ಓವರ್‌ಗಳಲ್ಲಿ 50 ರನ್ ಸೇರಿಸಿದರು. ಈ ಜೋಡಿ ದೊಡ್ಡ ಜತೆಯಾಟವ ನ್ನಾಡುವ ಸೂಚನೆ ನೀಡಿತ್ತು. ಆದರೆ ತಂಡದ ಮೊತ್ತ 51 ಆಗಿದ್ದಾಗ ಇಲ್ಲದ ರನ್ ತೆಗೆಯಲು ಹೋದ ತಾಜ್ಜಿ ನ್ ಬ್ರಿಟ್ಸ್ (35 ಎಸೆತದಲ್ಲಿ 23 ರನ್) ರನೌಟ್ ಆದರು. ಇದಾಗಿ 11 ರನ್‌ಗಳಾಗುವಷ್ಟರಲ್ಲೇ ಇನ್ನೂ ಖಾತೆ ತೆರೆಯದ ಅನ್ನೇರ್ ಬಾಶ್ ಅವರನ್ನು ಎಲ್‌ಬಿಡಬ್ಲ್ಯೂ ಬಲೆಗೆ ಬೀಳಿಸುವಲ್ಲಿ ಶ್ರೀಚರಣಿ ಯಶಸ್ವಿಯಾದರು.

ಇದಾದ ಬಳಿಕ ನಾಯಕಿ ವೊಲ್ವಾರ್ಡ್ಸ್ ಅವರು ಸುನೆ ಲೂಸ್ ಅವರೊಂದಿಗೆ ಸೇರಿ 52 ರನ್‌ಗಳ ಜೊತೆಯಾಟವಾಡಿದರು. ಈ ಹಂತದಲ್ಲಿ ಬೌಲಿಂಗ್‌ಗೆ ಇಳಿದ ಶೆಫಾಲಿ ವರ್ಮಾ ಅವರು ನಿರಂತರ 2 ಓವರ್ ಗಳಲ್ಲಿ 2 ವಿಕೆಟ್ ಕಬಳಿಸಿದರು.

ಸುನೆ ಲೂಸ್ (31 ಎಸೆತದಲ್ಲಿ 25 ರನ್) ಅವರು ಶೆಫಾಲಿ ವರ್ಮಾಗೆ ಕಾಟ್ ಆ್ಯಂಡ್ ಬೌಲ್ಡ್ ಆದರೆ, ಮರಿಝಾನೆ ಕಾಪ್ (5 ಎಸೆತದಲ್ಲಿ 4 ರನ್) ಅವರು ಕೀಪರ್ ರಿಚಾ ಘೋಷ್ ಅವರಿಗೆ ಕ್ಯಾಚಿತ್ತು ಮರಳಿದರು. ಆ ವಿಕೆಟ್ ಪತನದ ಬಳಿಕ ಎಚ್ಚರಿಕೆಯಿಂದ ಆಡುತ್ತಿದ್ದ ಸಿನಾಲೊ ಜಾಪ್ಪಾ ಅವರು ದೀಪ್ತಿ ಶರ್ಮಾ ಅವರ ಬೌಲಿಂಗ್‌ನಲ್ಲಿ ರಾಧಾ ಯಾದವ್ ಅವರಿಗೆ ಕ್ಯಾಚಿತ್ತರು.

ಈ ಸಂದರ್ಭದಲ್ಲಿ ಅನಾರಿ ಡೆರ್ಕ್ಸನ್ ಅವರ ಜೊತೆ ನಾಯಕಿ ವೊಲ್ವಾರ್ಡ್ಸ್ ಅವರು 61 ರನ್‌ಗಳ ಮಹತ್ವದ ಜತೆಯಾಟವಾಡಿ ತಂಡದ ಮೊತ್ತವನ್ನು 200ರ ಗೆಡಿ ದಾಟಿಸಿದರು. ಈ ಹಂತದಲ್ಲಿ ಪಂದ್ಯ ದಕ್ಷಿಣ ಆಫ್ರಿಕಾ ಕೈಗೆ ಬಂದಿತ್ತು. ಆದರೆ ಅನುಭವಿ ದೀಪ್ತಿ ಶರ್ಮಾ ಅವರ ಸೊಗಸಾದ ಯಾರ್ಕರ್ ಲೆಂಗ್ ಎಸೆತಕ್ಕೆ ಡೆರ್ಕ್ಸನ್ ಔಟಾದರು. ಆದರೂ ನಾಯಕಿ ವೊಲ್ವಾರ್ಡ್ಸ್ ಮಾತ್ರ ಹೋರಾಟ ನಿಲ್ಲಿಸಿರಲಿಲ್ಲ.

96 ಎಸೆತಗಳಲ್ಲಿ ಶತಕ ಪೂರೈಸಿದ ಅವರನ್ನು ಪೆವಿಲಿಯನ್‌ಗೆ ಕಳುಹಿಸುವಲ್ಲಿ ದೀಪ್ತಿ ಶರ್ಮಾ ಯಶಸ್ವಿಯಾದರು. ಅಮನ್ ಜೋತ್ ಕೌರ್ ಹಿಡಿದ ಅದ್ಭುತ ಕ್ಯಾಚ್ ಗೆ ದಕ್ಷಿಣ ಆಫ್ರಿಕಾ ನಾಯಕಿ ಔಟಾದರು. ಅಲ್ಲಿಂದ ಬಳಿಕ ಪಂದ್ಯದ ಮೇಲೆ ಭಾರತದ ಬೌಲರ್ ಗಳು ಸಂಪೂರ್ಣ ಹಿಡಿತ ಸಾಧಿಸಿದರು.

ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿದ ಟೀಮ್ ಇಂಡಿಯಾ ಭರ್ಜರಿ ಆರಂಭವನ್ನು ಪಡೆದುಕೊಂಡಿತು. ಸೆಮಿಫೈನಲ್ ಪಂದ್ಯದಲ್ಲಿ ವಿಫಲರಾಗಿದ್ದ ಶಫಾಲಿ ವರ್ಮಾ ಭಾನುವಾರ ಸಿಡಿಲಬ್ಬರದ ಬ್ಯಾಟಿಂಗ್ ನಡೆಸಿದರು.

ಅನುಭವಿ ಸ್ಮೃತಿ ಮಂಧಾನಾ

ಅನುಭವಿ ಸ್ಮೃತಿ ಮಂಧಾನಾ ಜತೆ ಸೇರಿ ಮೊದಲ ವಿಕೆಟ್‌ಗೆ 104 ರನ್‌ಗಳ ಜೊತೆಯಾಟ ನೀಡಿದರು. ಮಂಧಾನಾ 58 ಎಸೆತಗಳಲ್ಲಿ 8 ಬೌಂಡರಿಗಳ ನೆರವಿನಿಂದ 45 ರನ್ ಗಳಿಸಿ ಟ್ರಯಾನ್ ಬೌಲಿಂಗ್‌ನಲ್ಲಿ ಕ್ಯಾಚ್ ಔಟ್ ಆದರು.

ಬಳಿಕ ಸ್ಪೋಟಕ ಬ್ಯಾಟಿಂಗ್ ಮುಂದುವರಿಸಿದ ಶಫಾಲಿ ವರ್ಮಾ 78 ಎಸೆತಗಳಲ್ಲಿ 87 ರನ್ ಗಳಿಸಿದರು. ಅವರ ಇನ್ನಿಂಗ್ಸ್‌ನಲ್ಲಿ ಏಳು ಬೌಂಡರಿ ಮತ್ತು ಎರಡು ಸಿಕ್ಸರ್‌ಗಳಿದ್ದವು.

ಕಳೆದ ಪಂದ್ಯದಲ್ಲಿ ಶತಕ ಗಳಿಸಿದ್ದ ಜೆಮಿಮಾ ರೊಡ್ರಿಗಸ್ 37 ಎಸೆತಗಳಲ್ಲಿ ಕೇವಲ 24 ರನ್ ಗಳಿಸಲಷ್ಟೇ ಶಕ್ತರಾದರು. ನಾಯಕಿ ಹರ್ಮನ್ ಪ್ರೀತ್ ಕೌರ್ 29 ಎಸೆತಗಳಲ್ಲಿ 20 ರನ್ ಗಳಿಸಿದರೆ, ಅಮನ್ ಜೋತ್ ಕೌರ್ ಆಟ 12 ರನ್‌ಗೆ ಸೀಮಿತವಾಯಿತು.

ಆದರೆ 6ನೇ ವಿಕೆಟ್‌ಗೆ ಜತೆಯಾಟದ ದೀಪ್ತಿ ಶರ್ಮಾ ಹಾಗೂ ರಿಚಾ ಘೋಷ್ ಕೇವಲ 35 ಎಸೆತಗಳಲ್ಲಿ 47 ರನ್ ಸೂರೆಗೈದರು.

ದೀಪ್ತಿ ಶರ್ಮಾ ಫೈನಲ್‌ನಲ್ಲೂ ತಮ್ಮ ಸ್ಥಿರ ಬ್ಯಾಟಿಂಗ್ ಪ್ರದರ್ಶನ ಮುದುವರಿಸಿ 58 ಎಸೆತಗಳಲ್ಲಿ 3 ಬೌಂಡರಿ, 1 ಸಿಕ್ಸರ್ ಸಹಿತ 58 ರನ್ ಗಳಿಸಿದರೆ, ಸ್ಫೋಟಕ ಬ್ಯಾಟಿಂಗ್ ಮಾಡಿದ ರಿಚಾ ಘೋಷ್ ಕೇವಲ 24 ಎಸೆತಗಳಲ್ಲಿ 3 ಬೌಂಡರಿ, 2 ಸಿಕ್ಸರ್‌ಗಳ ಸಹಿತ 34 ರನ್ ಗಳಿಸಿ ತಂಡದ ಮೊತ್ತ 300ರ ಸನಿಹ ಬರಲು ನೆರವಾದರು.

ಭಾರೀ ಮಳೆಯಿಂದಾಗಿ ಭಾನುವಾರದ ಫೈನಲ್ ಪಂದ್ಯ ಸರಿಯಾದ ಸಮಯಕ್ಕೆ ಆರಂಭವಾಗಲಿಲ್ಲ. ಮೈದಾನ ಒದ್ದೆಯಾಗಿದ್ದ ಕಾರಣ ಎರಡು ಗಂಟೆಗಳ ಕಾಲ ಆಟ ವಿಳಂಬವಾಯಿತು. ಎರಡೂ ತಂಡಗಳು ಯಾವುದೇ ಬದಲಾವಣೆಯಿಲ್ಲದೆ ಫೈನಲ್‌ನಲ್ಲಿ ಕಣಕ್ಕಿಳಿದಿದ್ದವು.

ಫೋಟೋ ಕೃಪೆ: BCCI ‘X’ ಖಾತೆ

ರಾಜಕೀಯ

ಕಾಂಗ್ರೆಸ್‌ ಆಡಳಿತದ ಅವಧಿ ಮುಗಿಯುತ್ತಾ ಬಂದಿದೆ: ಆರ್‌.ಅಶೋಕ

ಕಾಂಗ್ರೆಸ್‌ ಆಡಳಿತದ ಅವಧಿ ಮುಗಿಯುತ್ತಾ ಬಂದಿದೆ: ಆರ್‌.ಅಶೋಕ

ಈ ಬಾರಿಯ ಬಜೆಟ್‌ ಅಧಿವೇಶನದಲ್ಲಿ ಸರ್ಕಾರದ ಲೋಪದೋಷಗಳನ್ನು ಚರ್ಚಿಸಲಾಗುವುದು. ರಾಜ್ಯದ ಆರ್ಥಿಕ ದುಸ್ಥಿತಿಯ ವಿರುದ್ಧ ಹೋರಾಟ ಮಾಡಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R.Ashoka) ಹೇಳಿದರು.

[ccc_my_favorite_select_button post_id="119883"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ಗ್ಯಾಸ್ ಗೀಸರ್ (Gas geyser) ಬಳಕೆ ಮಾಡುವವರು ಆದಷ್ಟು ಮುಂಜಾಗ್ರತೆಯ ಕ್ರಮಕೈಗೊಳ್ಳಬೇಕಿದೆ. ಏಕೆಂದರೆ ಪದೇ ಪದೇ ವಿಷಾನಿಲ ಸೋರಿಕೆಯಿಂದ ಸಾವನಪ್ಪುವ ಪ್ರಕರಣಗಳು ವರದಿಯಾಗುತ್ತಿವೆ.

[ccc_my_favorite_select_button post_id="119828"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!