We will face the next elections under Siddaramaiah's leadership: D.K. Suresh

ಸಿದ್ದರಾಮಯ್ಯ ನಾಯಕತ್ವದಲ್ಲೇ ಮುಂದಿನ ಚುನಾವಣೆಗಳನ್ನು ಎದುರಿಸುತ್ತೇವೆ: ಡಿ.ಕೆ. ಸುರೇಶ್

ಬೆಂಗಳೂರು: “ಸಿದ್ದರಾಮಯ್ಯ (Siddaramaiah) ಅವರು ಎಷ್ಟು ದಿನ ಮುಖ್ಯಮಂತ್ರಿಯಾಗಿರುತ್ತಾರೋ ಅಷ್ಟೂ ದಿನ ಅವರೇ ಸಿಎಂ. ಮುಂದೆಯೂ ಅವರೇ ಇರಬಹುದು. ಅವರು ನಮ್ಮ ನಾಯಕರು. ಅವರ ನಾಯಕತ್ವದಲ್ಲಿ ಪಕ್ಷ ಸಂಘಟಿಸಿ, ಪಕ್ಷ ಕಟ್ಟುತ್ತಿದ್ದೇವೆ” ಎಂದು ಬಮೂಲ್ ಅಧ್ಯಕ್ಷರಾದ ಡಿ.ಕೆ. ಸುರೇಶ್ (D.K. Suresh) ಅವರು ತಿಳಿಸಿದರು.

ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಸುರೇಶ್ ಅವರು ಬುಧವಾರ ಪ್ರತಿಕ್ರಿಯೆ ನೀಡಿದರು.

ನಾಯಕತ್ವ ಬದಲಾವಣೆ, ಅಧಿಕಾರ ಹಸ್ತಾಂತರ ವಿಚಾರವಾಗಿ ನಡೆಯುತ್ತಿರುವ ಚರ್ಚೆ ಬಗ್ಗೆ ಕೇಳಿದಾಗ, “ಇದೆಲ್ಲವೂ ಊಹಾಪೋಹ. ಮಾಧ್ಯಮಗಳಲ್ಲಿ ಚರ್ಚೆಯಾಗುತ್ತಿರುವ ವಿಚಾರಗಳು ಪಕ್ಷದ ಮುಂದೆ ಇಲ್ಲ. ಸಿದ್ದರಾಮಯ್ಯ ಅವರಿಗೆ ಇನ್ನು ವಯಸ್ಸಾಗಿಲ್ಲ. ಮುಂದಿನ ದಿನಗಳಲ್ಲಿ ಬರುವ ಎಲ್ಲಾ ಚುನಾವಣೆಗಳು ಅವರ ನೇತೃತ್ವದಲ್ಲೇ ನಡೆಯಲಿವೆ” ಎಂದರು.

ಮೇಕೆದಾಟು ವಿಚಾರಣೆ ಸಂಬಂಧ ಡಿಸಿಎಂ ದೆಹಲಿ ಪ್ರವಾಸ

ಡಿಸಿಎಂ ದೆಹಲಿ ಪ್ರವಾಸದ ಬಗ್ಗೆ ಕೇಳಿದಾಗ, “ಮೇಕೆದಾಟು ಯೋಜನೆ ಸಂಬಂಧ ನ್ಯಾಯಾಲಯದಲ್ಲಿ ಗುರುವಾರ (ಡಿ.6) ವಿಚಾರಣೆ ನಡೆಯಲಿದೆ. ಈ ವಿಚಾರವಾಗಿ ಸುಪ್ರೀಂ ಕೋರ್ಟ್ ಮುಖ್ಯನ್ಯಾಯಮೂರ್ತಿಗಳು ವಿಶೇಷ ಪೀಠ ರಚಿಸಿರುವಂತೆ ಕಾಣಿಸುತ್ತದೆ. ಈ ವಿಚಾರಣೆ ವೇಳೆ ನಮ್ಮ ನಿಲುವು ಏನಿರಬೇಕು ಎಂಬುದರ ಬಗ್ಗೆ ಅಧಿಕಾರಿಗಳು ಮತ್ತು ವಕೀಲರ ಜೊತೆ ಚರ್ಚೆ ನಡೆಸಲು ದೆಹಲಿಗೆ ತೆರಳಿದ್ದಾರೆ” ಎಂದರು.

ವರಿಷ್ಠರೂ ದೆಹಲಿಯಲ್ಲಿರುವ ಕಾರಣ ಈ ಪ್ರವಾಸದ ಬಗ್ಗೆ ಸಾಕಷ್ಟು ಚರ್ಚೆಯಾಗುತ್ತಿದೆ ಎಂದು ಕೇಳಿದಾಗ, ವರಿಷ್ಠರು ದೆಹಲಿಯಲ್ಲಿ ಇರದೇ ಎಲ್ಲಿ ಹೋಗುತ್ತಾರೆ. ಬಿಹಾರ ಚುನಾವಣೆಗೂ ಇದಕ್ಕೂ ಸಂಬಂಧ ವಿಲ್ಲ. ಶಿವಕುಮಾರ್ ಅವರು ಈ ಹಿಂದಿನಿಂದಲೂ ದೆಹಲಿಗೆ ಹೋದಾಗೆಲ್ಲಾ ಕಾಂಗ್ರೆಸ್ ಕಚೇರಿಗೆ ಹೋಗುತ್ತಾರೆ, ವರಿಷ್ಠರು ಸಿಕ್ಕರೆ ಮಾತನಾಡುತ್ತಾರೆ, ಬರುತ್ತಾರೆ. ತುರ್ತಾಗಿ ಮೇಕೆದಾಟು ಪ್ರಕರಣ ವಿಚಾರಣೆಗೆ ಬಂದಿದೆ.

ವಿಶೇಷ ಪೀಠ ರಚನೆಗೆ ತಮಿಳುನಾಡು ವಿರೋಧ ವ್ಯಕ್ತಪಡಿಸಿತ್ತು. ಹೀಗಾಗಿ ಈ ಪೀಠ ರಚನೆಯಿಂದ ಯಾವ ರೀತಿ ಲಾಭ ಆಗಲಿದೆ, ನಮ್ಮ ನಿಲುವು ಹೇಗಿರಬೇಕು ಎಂದು ಚರ್ಚೆ ಮಾಡಲು ತೆರಳಿದ್ದಾರೆ. ನಾಳೆ ಹೆಚ್ಚು ಕಮ್ಮಿ ಆದರೆ ಯಾಕೆ ಸರಿಯಾಗಿ ನಿಭಾಯಿಸಲಿಲ್ಲ ಎಂದು ನೀವುಗಳೇ ಪ್ರಶ್ನೆ ಮಾಡುತ್ತೀರಿ. ಇದು ರಾಜಕೀಯ ಕೆಲಸ ಅಲ್ಲ. ಕರ್ನಾಟಕ ರಾಜ್ಯದ ಹಿತ ಕಾಪಾಡುವ ಕೆಲಸ ಎಂದರು.

ಎಲ್ಲಾ ನಾಯಕರು ಸೇರಿ ಕಾಂಗ್ರೆಸ್ ಪಕ್ಷ

ಕಾಂಗ್ರೆಸ್ ಪಕ್ಷದಲ್ಲಿ ಸಿದ್ದರಾಮಯ್ಯ ಅವರಿಗೆ ಪರ್ಯಾಯ ನಾಯಕರು ಇಲ್ಲ ಎಂದು ಕೇಳಿದಾಗ, “ಎಲ್ಲಾ ನಾಯಕರೂ ಸೇರಿ ಕಾಂಗ್ರೆಸ್ ಪಕ್ಷವಾಗಿದೆ. ಸಿದ್ದರಾಮಯ್ಯ ಅಥವಾ ಡಿ.ಕೆ. ಶಿವಕುಮಾರ್ ಅವರಿಂದ ಮಾತ್ರ ಪಕ್ಷವಿಲ್ಲ. ಎಂ.ಬಿ ಪಾಟೀಲ್, ಪರಮೇಶ್ವರ್, ಸತೀಶ್ ಜಾರಕಿಹೋಳಿ, ಮಹದೇವಪ್ಪ ಸೇರಿದಂತೆ ಎಲ್ಲಾ ಸಮುದಾದ ನಾಯಕರು ಸೇರಿ ಪಕ್ಷ ಕಟ್ಟಿಕೊಂಡು ಬಂದಿದ್ದೇವೆ” ಎಂದರು.

ಕಾಂಗ್ರೆಸ್ ಕಚೇರಿಗಳ ಶಂಕುಸ್ಥಾಪನೆ ವಿಚಾರಾಗಿ ರಾಹುಲ್ ಗಾಂಧಿ ಅವನ್ನು ಭೇಟಿ ಮಾಡುವ ಸಾಧ್ಯತೆ ಇದೆಯೇ ಎಂದು ಕೇಳಿದಾಗ, “ಆ ವಿಚಾರವಾಗಿ ನನಗೆ ಮಾಹಿತಿ ಇಲ್ಲ. ಈ ವಿಚಾರವಾಗಿ ಈಗಾಗಲೇ ಮಾಹಿತಿ ನೀಡಲಾಗಿದೆ. ಅವರು ಸಮಯ ನಿಗದಿ ಮಾಡಿದ ಬಳಿಕ ಶಂಕುಸ್ಥಾಪನೆ ಕಾರ್ಯಕ್ರಮ ನಡೆಯಲಿದೆ. ಎಐಸಿಸಿ ಅಧ್ಯಕ್ಷರು ಹಾಗೂ ರಾಹುಲ್ ಗಾಂಧಿ ಅವರನ್ನು ಕರೆದು ಒಂದೇ ಸ್ಥಳದಲ್ಲಿ ಎಲ್ಲ ಕಡೆ ಶಂಕುಸ್ಥಾಪನೆ ನೆರವೇರಿಸುವ ಕಾರ್ಯ ಮಾಡುವ ಆಲೋಚನೆ ಇದೆ” ಎಂದು ತಿಳಿಸಿದರು.

ರಾಜ್ಯ ನಾಯಕರು ಸಧ್ಯಕ್ಕೆ ದೆಹಲಿ ಕಡೆ ಬರಬೇಡಿ ಎಂಬ ಹೈಕಮಾಂಡ್ ಸಂದೇಶ ರವಾನಿಸಿದೆಯೇ ಎಂದು ಕೇಳಿದಾಗ, “ನಾನು ಅಷ್ಟು ದೊಡ್ಡ ನಾಯಕನಲ್ಲ. ನನಗೆ ಬೇಕಾದಾಗ ಹೋಗಿ ಬರುತ್ತೇನೆ” ಎಂದು ತಿಳಿಸಿದರು.

ಶಿವಕುಮಾರ್ ಅವರು ಸಿಎಂ ರೇಸ್ ನಿಂದ ಹಿಂದೆ ಸರಿದಿದ್ದಾರಾ ಎಂದು ಕೇಳಿದಾಗ, “ಆ ವಿಚಾರಗಳು ಇಲ್ಲಿ ಪ್ರಸ್ತಾಪವಿಲ್ಲ. ಈಗ ನಾಯಕತ್ವ ಗಟ್ಟಿಯಾಗಿದೆ” ಎಂದು ಹೇಳಿದರು.

ಸರ್ಕಾರ ಬರಲು ಶಿವಕುಮಾರ್ ಅವರ ಪಾತ್ರವಿದೆ. ಹೀಗಾಗಿ ಅವರಿಗೆ ಅವಕಾಶ ನೀಡಬೇಕು ಎಂಬ ಹೇಳಿಕೆ ಬಗ್ಗೆ ಕೇಳಿದಾಗ, “ಕಾರ್ಯಕರ್ತರು ಹಾಗೂ ಸಾರ್ವಜನಿಕವಾಗಿ ಮಾಧ್ಯಮಗಳಲ್ಲಿ ಸಾಕಷ್ಟು ಚರ್ಚೆಯಾಗುತ್ತಿದೆ” ಎಂದು ತಿಳಿಸಿದರು.

ಅಧಿಕಾರ ಹಸ್ತಾಂತರ ವಿಚಾರವಿಲ್ಲ ಎಂದಾದರೆ, ಸಿಎಂ ಹೇಳಿದಂತೆ ಸಚಿವ ಸಂಪುಟ ವಿಸ್ತರಣೆ ನಡೆಯಲಿದೆಯೇ ಎಂದು ಕೇಳಿದಾಗ, “ಇದು ಸಿಎಂ ಅವರ ವಿವೇಚನೆ ಹಾಗೂ ಪಕ್ಷದ ಹೈಕಮಾಂಡ್ ಗೆ ಬಿಟ್ಟ ವಿಚಾರ” ಎಂದು ತಿಳಿಸಿದರು.

6-7 ತಿಂಗಳಲ್ಲಿ ಎಲ್ಲಾ ಸ್ಥಳೀಯ ಸಂಸ್ಥೆ ಚುನಾವಣೆ

ಮುಂದಿನ ವರ್ಷ ಫೆಬ್ರವರಿ ಹಾಗೂ ಮಾರ್ಚ್ ತಿಂಗಳಲ್ಲಿ ಗ್ರೇಟರ್ ಬೆಂಗಳೂರು ಚುನಾವಣೆ ನಡೆಸಲಾಗುವುದೇ ಎಂದು ಕೇಳಿದಾಗ, ಅದಕ್ಕೆ ಅಗತ್ಯವಿರುವ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಪಕ್ಷ ಕೂಡ ನಮ್ಮ ಕಾರ್ಯಕರ್ತರಿಗೆ ಅಗತ್ಯ ತಯಾರಿ ಮಾಡಿಕೊಳ್ಳಲು ಸೂಚನೆ ನೀಡಿದೆ. ಬೂತ್ ಮಟ್ಟದಲ್ಲಿನ ತಯಾರಿಗೆ ತಿಳಿಸಿದೆ.

ಸುಪ್ರೀಂ ಕೋರ್ಟ್ ಕಳೆದ ವಾರವಷ್ಟೇ ವಾರ್ಡ್ ನಿಗದಿಗೆ ಸಂಬಂಧಿಸಿದಂತೆ ಅಂತಿಮ ಅಧಿಸೂಚನೆ ಹೊರಡಿಸಲು ಕಡೇಯ ಕಾಲಾವಕಾಶ ನೀಡಿದೆ. ನಂತರ ಮೀಸಲಾತಿ ಪ್ರಕ್ರಿಯೆ ನಡೆಯಬೇಕಿದ್ದು, ಎಲ್ಲವನ್ನು ಹಂತಹಂತವಾಗಿ ನಡೆಸಲು ಸಿಎಂ ಹಾಗೂ ಡಿಸಿಎಂ ಬದ್ಧರಾಗಿದ್ದಾರೆ ಎಂದರು.

ಮತ್ತೆ ಮುಂದೂಡಿಕೊಂಡು ಹೋದರೆ ಎಂದು ಕೇಳಿದಾಗ, ಮತ್ತೆ ಮುಂದೂಡಿಕೊಂಡು ಹೋದರೆ ಸುಪ್ರೀಂ ಕೋರ್ಟ್ ನಿಂದ ಛೀಮಾರಿ ಹಾಕಿಸಿಕೊಳ್ಳಬೇಕಾಗುತ್ತದೆ‌ ಎಂದರು.

ಜಿಬಿಎನ ಐದೂ ಪಾಲಿಕೆ ಗೆಲ್ಲಬೇಕು ಎಂಬ ಟಾಸ್ಕ್ ಅನ್ನು ಶಿವಕುಮಾರ್ ಅವರಿಗೆ ನೀಡಲಾಗಿದೆಯೇ ಎಂದು ಕೇಳಿದಾಗ, “ಪ್ರತಿ ಚುನಾವಣೆಯಲ್ಲೂ ಎಲ್ಲರಿಗೂ ಟಾಸ್ಕ್ ಇದ್ದೇ ಇರುತ್ತದೆ. ಯಾವುದೇ ಚುನಾವಣೆಯಾದರೂ ಅದನ್ನು ಗೆಲ್ಲುವುದು ಪಕ್ಷದ ಜವಾಬ್ದಾರಿ’ ಎಂದು ಹೇಳಿದರು.

ತಾಲೂಕು ಹಾಗೂ ಜಿಲ್ಲಾ ಪಂಚಾಯತಿ ಚುನಾವಣೆ ಬಗ್ಗೆ ಕೇಳಿದಾಗ, ಈಗ ಮೀಸಲಾತಿ ನಡೆಯುತ್ತಿದೆ. 50% ಮೀಸಲಾತಿಯನ್ನು ಒಬಿಸಿ, ಹಿಂದುಳಿದವರಿಗೆ ನೀಡಬೇಕಾದಾಗ ನಿಖರತೆ ಇರಬೇಕು. ಈ ಬಗ್ಗೆ ಸುಪ್ರೀಂ ಕೋರ್ಟ್ ನಲ್ಲಿ ಆದೇಶ ಕೂಡ ಪ್ರಕಟವಾಗಿದ್ದು, ಯಾವ ಮಾನದಂಡದ ಆಧಾರದ ಮೇಲೆ ಇದನ್ನು ಮಾಡುತ್ತೀರಿ ಎಂದು ಕೇಳಿದೆ. ಇದು ಅಂತಿಮಗೊಳಿಸಿದ ನಂತರ ಜಿಲ್ಲಾ ಹಾಗೂ ತಾಲೂಕು ಪಂಚಾಯ್ತಿ ಎದುರಿಸಬೇಕಾಗುತ್ತದೆ.

ಸರ್ಕಾರದ ಬಳಿ ಎಸ್.ಸಿ, ಎಸ್ ಟಿ ಜನಸಂಖ್ಯೆ ಪ್ರಮಾಣ ಇದೆ. ಬೇರೆ ಸಮುದಾಯಗಳ ಜನಸಂಖ್ಯೆ ದಾಖಲೆ ಇಲ್ಲ. ಈ ಪ್ರಕ್ರಿಯೆ ಮುಗಿದ ಬಳಿಕ ಪಂಚಾಯ್ತಿ ಚುನಾವಣೆ ನಡೆಯಲಿದೆ. ಮುಂದಿನ 6-7 ತಿಂಗಳಲ್ಲಿ ಎಲ್ಲಾ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯಲಿದೆ. ಈ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸಲು ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ ಎಂದರು.

ಸಚಿವ ಸಂಪುಟ ಬದಲಾವಣೆ ಜೊತೆಗೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬೇಡಿಕೆ ಇದ್ದು, ನಿಮ್ಮ ಹೆಸರೂ ಮುಂಚೂಣಿಯಲ್ಲಿದೆ ಎಂದು ಕೇಳಿದಾಗ, “ಸುಮ್ಮನೇ ಇಲ್ಲದಿರುವ ನನ್ನ ಹೆಸರು ಯಾಕೆ ಹೇಳುತ್ತೀರಾ? ಅಧ್ಯಕ್ಷರ ಬದಲಾವಣೆ ಬಗ್ಗೆ ನನಗೆ ಗೊತ್ತಿಲ್ಲ. ಇದು ವರಿಷ್ಠರಿಗೆ ಬಿಟ್ಟ ವಿಚಾರಗಳು. ಅವರು ಏನು ಹೇಳುತ್ತಾರೋ ಅದನ್ನು ಕೇಳುತ್ತೇವೆ” ಎಂದರು.

ಅಧ್ಯಕ್ಷ ಸ್ಥಾನ ಬದಲಾವಣೆ ವಿಳಂಬವಾಗುತ್ತಿದೆ ಎಂದು ಕೇಳಿದಾಗ, “ಯಾವಾಗ ಬೇಕೋ ಆವಾಗ ಬದಲಾವಣೆ ಆಗಲಿದೆ. ಈಗ ಅದಕ್ಕೆ ಅರ್ಜೆಂಟಿಲ್ಲ” ಎಂದು ತಿಳಿಸಿದರು.

ಅಭಿಮಾನಿಗಳು ಸಿಎಂ ಆಸೆ ಪಡುವುದರಲ್ಲಿ ತಪ್ಪೇನಿಲ್ಲ

ಡಿ.ಕೆ. ಶಿವಕುಮಾರ್ ಅವರು ಸಿಎಂ ಆಗಬೇಕು ಎಂದು ಅಭಿಮಾನಿಗಳು ಸಂಕಲ್ಪ ಮಾಡುತ್ತಿರುವ ಬಗ್ಗೆ ಕೇಳಿದಾಗ, ಅಭಿಮಾನಿಗಳು ಈ ರೀತಿ ಆಸೆ ಪಡುವುದು ಸಹಜ ಪ್ರಕ್ರಿಯೆ. ಅಭಿಮಾನಿಗಳು ತಮ್ಮ ನಾಯಕರು ಸಿಎಂ ಆಗಬೇಕು ಎಂದು ಬಯಸುತ್ತಾರೆ. ಇದು ನಿರಂತರ ಪ್ರಕ್ರಿಯೆ.

ಕೆಲವರು ಕುಮಾರಸ್ವಾಮಿ ಆಗಬೇಕು ಅಂತಾರೆ, ಮತ್ತೆ ಕೆಲವರು ವಿಜಯೇಂದ್ರ ಆಗಬೇಕು ಅಂತಾರೆ, ಮತ್ತೆ ಕೆಲವರು, ಅಶ್ವತ್ಥ್ ನಾರಾಯಣ, ಅಶೋಕ್, ಪರಮೇಶ್ವರ್, ಸತೀಶ್ ಜಾರಕಿಹೊಳಿ ಸಿಎಂ ಆಗಬೇಕು ಅಂತಾ ಬಯಸುತ್ತಾರೆ. ಆಯಾ ಊರಿನಲ್ಲಿ ಅವರ ನಾಯಕರು ಆಗಬೇಕು ಎಂದು ಬಯಸುತ್ತಾರೆ. ಮತ್ತೆ ಕೆಲವರು ವೇದಿಕೆ ಮೇಲೆ ನಾಲ್ಕು ಒಳ್ಳೆ ಮಾತುಗಳನ್ನು ಆಡಿ ತಮ್ಮ ಅಭಿಮಾನ ತೋರಿಸುತ್ತಾರೆ. ಇದೆಲ್ಲವು ರಾಜಕಾರಣದ ಭಾಗ. ಇದರ ಬಗ್ಗೆ ದೊಡ್ಡ ಚರ್ಚೆ ಅಗತ್ಯವಿಲ್ಲ. ಈ ಬಗ್ಗೆ ಪಕ್ಷ ಹೈಕಮಾಂಡ್ ಹಂತದಲ್ಲಿ ತೀರ್ಮಾನ ಮಾಡಲಾಗುವುದು ಎಂದರು.

ಬೆಳಗಾವಿಯಲ್ಲಿ ಕಬ್ಬಿನ ಬೆಂಬಲ ಬೆಲೆ ವಿಚಾರವಾಗಿ ರೈತರು ನಡೆಸುತ್ತಿರುವ ಹೋರಾಟದ ಬಗ್ಗೆ ಕೇಳಿದಾಗ, “ಬಿಜೆಪಿ ಅಧಿಕಾರದಲ್ಲಿದ್ದಾಗ ಯಾವ ದರ ನಿಗದಿ ಮಾಡಿದ್ದರೋ ಅದಕ್ಕಿಂತ ಹೆಚ್ಚಿನ ದರವನ್ನು ನಮ್ಮ ಸರ್ಕಾರ ನಿಗದಿ ಮಾಡಲಿದೆ” ಎಂದು ತಿಳಿಸಿದರು.

ಬಿಹಾರ ಚುನಾವಣೆಯಲ್ಲಿ ಅಕ್ರಮ ನಡೆಯಲಿದೆ ಎಂಬ ಅನುಮಾನ ಇದೆಯೇ ಎಂದು ಕೇಳಿದಾಗ, “ಖಂಡಿತವಾಗಿಯೂ ಬಿಜೆಪಿ ಎಲ್ಲಾ ಚುನಾವಣೆಗಳಲ್ಲಿ ಇದನ್ನೇ ಮಾಡಿಕೊಂಡು ಬಂದಿದೆ. ಈ ಬಗ್ಗೆ ಜನರಿಗೆ ಮಾಹಿತಿ ನೀಡುವುದು ನಮ್ಮ ಕರ್ತವ್ಯ” ಎಂದು ತಿಳಿಸಿದರು.

ಪದೇ ಪದೆ ದಾಖಲೆ ಬಿಡುಗಡೆ ಮಾಡಿ ಅಭಿಯಾನ ನಡೆಸಿದರೂ ನ್ಯಾಯಾಲಯದ ಮುಂದೆ ಯಾಕೆ ಹೋಗುತ್ತಿಲ್ಲ ಎಂದು ಕೇಳಿದಾಗ, “ನ್ಯಾಯಾಲಯ ಕೂಡ ಚುನಾವಣಾ ಆಯೋಗದ ಮೇಲೆ ನಿರ್ಬಂಧ ಹಾಕಿದೆ. ಆದರೆ ಆಯೋಗವು ಈ ನ್ಯಾಯಾಲಯದ ಆದೇಶ ಪಾಲಿಸಲಿದೆ ಎಂಬುದು ಬಹಳ ಮುಖ್ಯ” ಎಂದು ತಿಳಿಸಿದರು.

ರಾಜಕೀಯ

ರಾಜಘಟ್ಟದಲ್ಲಿ ಬೀದಿಗೆ ಬಂದ ಜೆಡಿಎಸ್ ಮುಖಂಡರ ಒಳಜಗಳ..!

ರಾಜಘಟ್ಟದಲ್ಲಿ ಬೀದಿಗೆ ಬಂದ ಜೆಡಿಎಸ್ ಮುಖಂಡರ ಒಳಜಗಳ..!

ಜೆಡಿಎಸ್ (JDS) ಮುಖಂಡರ ಒಳಜಗಳ ರಾಜಘಟ್ಟ ಆಂಜನೇಯಸ್ವಾಮಿ ದೇವಸ್ಥಾನದ ಸಮೀಪದಲ್ಲಿನ ಅರಳಿಕಟ್ಟೆಯಲ್ಲಿ ಬೀದಿಗೆ ಬಂದಿದೆ.

[ccc_my_favorite_select_button post_id="118288"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ಅಸೆಂಬ್ಲಿ ಚುನಾವಣೆ 2028; 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ NDA ಗೆಲ್ಲುತ್ತೆ ಎಂದ ನಿಖಿಲ್ ಕುಮಾರಸ್ವಾಮಿ

ಅಸೆಂಬ್ಲಿ ಚುನಾವಣೆ 2028; 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ NDA ಗೆಲ್ಲುತ್ತೆ ಎಂದ ನಿಖಿಲ್

ಮುಂದಿನ ರಾಜ್ಯದ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳ ಎನ್ಡಿಎ (NDA) ಮೈತ್ರಿಕೂಟವು 150 ಕ್ಷೇತ್ರಗಳಲ್ಲಿ ಜಯ ಸಾಧಿಸಲಿದೆ. ಆ ನಿಟ್ಟಿನಲ್ಲಿ ಎರಡೂ ಪಕ್ಷಗಳು ಸೇರಿ ಕೆಲಸ ಮಾಡುತ್ತಿದ್ದೇವೆ ಎಂದು ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಹೇಳಿದರು.

[ccc_my_favorite_select_button post_id="118301"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರರಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರರಿಗೆ ಗಂಭೀರ ಗಾಯ

ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತ (Accident) ಸಂಭವಿಸಿ ಬೈಕ್ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ **** ಹಾಗೂ *** ನಡುವೆ ಸಂಭವಿಸಿದೆ.

[ccc_my_favorite_select_button post_id="118304"]

ಆರೋಗ್ಯ

ಸಿನಿಮಾ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

ಹಿರಿಯ ಚಲನಚಿತ್ರ ಕಲಾವಿದರು, ನಿರ್ದೇಶಕರು ನಿರ್ಮಾಪಕ ಪ್ರಕಾಶ್ ರಾಜ್ (Prakash Raj) ಅವರನ್ನು 17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ (Brand Ambassador) ಆಗಿ ನೇಮಿಸಲಾಗಿದೆ.

[ccc_my_favorite_select_button post_id="117722"]
error: Content is protected !!