Congress is a party of fools today; B.Y. Vijayendra

ಸಂಕಷ್ಟದಲ್ಲಿರುವ ರೈತರಿಗೆ ಬಿಡಿಗಾಸನ್ನೂ ನೀಡದ ಸಿದ್ದರಾಮಯ್ಯರ ಸರಕಾರ: ಬಿ.ವೈ. ವಿಜಯೇಂದ್ರ

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದಾಗಿನಿಂದ ರಾಜ್ಯದ ರೈತರ ಬಗ್ಗೆ ನೈಜ ಕಾಳಜಿಯಿಂದ ಕೆಲಸ ಮಾಡುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y. Vijayendra) ಆಕ್ಷೇಪಿಸಿದ್ದಾರೆ.

ಮಾಧ್ಯಮಗಳ ಜೊತೆ ಇಂದು ಮಾತನಾಡಿದ ಅವರು, ರೈತರಿಗೆ ಸಹಕಾರಿ ಆಗುವಂಥ ಕಾರ್ಯಕ್ರಮಗಳನ್ನು ನೀಡುವಲ್ಲಿ ಸಿದ್ದರಾಮಯ್ಯರ ನೇತೃತ್ವದ ಸರಕಾರ ವಿಫಲವಾಗಿದೆ. ಅತಿವೃಷ್ಟಿ ಸಂದರ್ಭದಲ್ಲೂ ಕೃಷಿ ಸಚಿವರು, ಕಂದಾಯ ಸಚಿವರು, ಇಲಾಖೆಯ ಕಾರ್ಯದರ್ಶಿಗಳು ಯಾವುದೇ ಜಿಲ್ಲೆಗೆ ತೆರಳಿಲ್ಲ; ಅಲ್ಲಿನ ರೈತರ ಪರಿಸ್ಥಿತಿಯನ್ನು ಅಧ್ಯಯನ ಮಾಡುವ ಪ್ರಯತ್ನವನ್ನೂ ಮಾಡಿಲ್ಲ ಎಂದು ಟೀಕಿಸಿದರು.

ನೆರೆಯ ಮಹಾರಾಷ್ಟ್ರ ಸರಕಾರವು ರೈತರಿಗೆ ಪರಿಹಾರ ಘೋಷಿಸಿ, ನೀಡಿದ್ದರೂ ನಮ್ಮ ರಾಜ್ಯದಲ್ಲಿ ಸಿದ್ದರಾಮಯ್ಯರ ನೇತೃತ್ವದ ಕಾಂಗ್ರೆಸ್ ಸರಕಾರವು ಕೇಂದ್ರ ಸರಕಾರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದೆ. ಸಂಕಷ್ಟದಲ್ಲಿರುವ ರೈತರಿಗೆ ಬಿಡಿಗಾಸನ್ನೂ ನೀಡಲು ಇವರಿಗೆ ಸಾಧ್ಯವಾಗಿಲ್ಲ ಎಂದು ಆರೋಪಿಸಿದರು.

ತಹಸೀಲ್ದಾರರ ಕಚೇರಿಗೆ ಹತ್ತಾರು ಬಾರಿ ಸುತ್ತಾಡಿದರೂ ಕೆಲಸ ಆಗದೇ ಮಂಡ್ಯದಲ್ಲಿ ರೈತ ಆತ್ಮಹತ್ಯೆ ಮಾಡಿಕೊಂಡ ದುರ್ಘಟನೆ ನಿನ್ನೆ ನಡೆದಿದೆ. ಮತ್ತೊಂದೆಡೆ ಕಬ್ಬು ಬೆಳೆಗಾರರು ಕಳೆದ ಐದಾರು ದಿನಗಳಿಂದ ನಿರಂತರವಾಗಿ ಹೋರಾಟ ಮಾಡುತ್ತಿದ್ದಾರೆ.

ಬೆಳಗಾವಿ, ಬಾಗಲಕೋಟೆ, ಬಿಜಾಪುರ ಭಾಗದ ಬೆಳೆಗಾರರು ರಾಜ್ಯ ಸರಕಾರದ ಗಮನ ಸೆಳೆಯುವ ಕೆಲಸ ಮಾಡಿದರೂ, ಪರಿಹಾರ ಕೊಟ್ಟಿಲ್ಲ; ಯಾವುದೇ ಸಚಿವರು ಬೆಳೆಗಾರರನ್ನು ಭೇಟಿ ಮಾಡುವ ಪ್ರಯತ್ನ ಮಾಡಿರಲಿಲ್ಲ ಎಂದು ದೂರಿದರು.

ನಾನು ಮೊನ್ನೆ ಹೋರಾಟ, ಪ್ರತಿಭಟನೆಯಲ್ಲಿ, ಅಹೋರಾತ್ರಿ ಧರಣಿಯಲ್ಲಿ ಭಾಗವಹಿಸಿದ್ದೇನೆ. ನನ್ನ ಜನ್ಮದಿನವನ್ನು ಅಲ್ಲಿನ ಕಬ್ಬು ಬೆಳೆಗಾರರ ಜೊತೆ ಆಚರಿಸಿ ಬಂದಿದ್ದೇನೆ. ನಿನ್ನೆ ಹೋರಾಟದ ಬಿಸಿ ತಟ್ಟಿದ್ದರಿಂದ ಸಚಿವ ಎಚ್.ಕೆ.ಪಾಟೀಲರು ಅಲ್ಲಿಗೆ ಬಂದಿದ್ದಾರೆ. ಆದರೆ, ರೈತರ ಕೋರಿಕೆ ಈಡೇರಿಸಿಲ್ಲ; ಆ ನಿಟ್ಟಿನಲ್ಲಿ ಪ್ರಯತ್ನವನ್ನೂ ಮಾಡಿಲ್ಲ ಎಂದು ಟೀಕಿಸಿದರು.

ಪಾಟೀಲರು ನೀಡಿದ ಹೇಳಿಕೆಯನ್ನು ಬೆಂಗಳೂರಿನ ಎ.ಸಿ. ಕೊಠಡಿಯಲ್ಲಿ ಕುಳಿತೇ ಕೊಡಬಹುದಾಗಿತ್ತು. ಹೋರಾಟದ ಸ್ಥಳದಲ್ಲಿ ಬಂದು ಹೇಳುವ ಅವಶ್ಯಕತೆ ಇರಲಿಲ್ಲ ಎಂದು ಆಕ್ಷೇಪಿಸಿದರು. ಅಲ್ಲಿ ಬಂದಾಗ ಕಬ್ಬು ಬೆಳೆಗಾರರ ಪರಿಸ್ಥಿತಿ ಅರ್ಥ ಮಾಡಿಕೊಂಡು ಪರಿಹಾರ ಕಲ್ಪಿಸಬೇಕಿತ್ತು ಎಂದರು.

ಈಗಲೂ ಕಾಲ ಮಿಂಚಿಲ್ಲ; ಕೇಂದ್ರ ಸರಕಾರವನ್ನು ದೂರುವುದನ್ನು ಬದಿಗಿಡಿ; ಕೇಂದ್ರದ ಬಗೆಗಿನ ಮುಖ್ಯಮಂತ್ರಿಗಳ, ಸಕ್ಕರೆ ಸಚಿವರ ಹೇಳಿಕೆ ಅರ್ಧ ಸತ್ಯ ಮಾತ್ರ ಎಂದು ತಿಳಿಸಿದರು. ರಾಜ್ಯ ಸರಕಾರ ಮನಸ್ಸು ಮಾಡಿದರೆ, ಸಕ್ಕರೆ ಕಾರ್ಖಾನೆ ಮಾಲೀಕರನ್ನು ಕೂರಿಸಿಕೊಂಡು ಕಬ್ಬು ಬೆಳೆಗಾರರಿಗೆ ನ್ಯಾಯ ಕೊಡಲು ಸಾಧ್ಯವಿದೆ ಎಂದು ತಿಳಿಸಿದರು.

2014ರಲ್ಲಿ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿತ್ತು. ಯಡಿಯೂರಪ್ಪ ಅವರು ಸದನದ ಒಳಗೆ ಮತ್ತು ಹೊರಗಡೆ ಹೋರಾಟ ಮಾಡಿದ್ದರಿಂದ ಸಿದ್ದರಾಮಯ್ಯರ ನೇತೃತ್ವದ ಕಾಂಗ್ರೆಸ್ ಸರಕಾರವು ಹೆಚ್ಚು ದರ ನಿಗದಿ ಪಡಿಸಿತ್ತು ಎಂದು ವಿವರಿಸಿದರು. ಇಷ್ಟೆಲ್ಲ ಉದಾಹರಣೆಗಳಿದ್ದರೂ ಸಿಎಂ ಕುರ್ಚಿಗೆ ಪೈಪೋಟಿ ನಡೆದಿದೆ; ಇಂಥ ಸಂದಿಗ್ಧ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿಗಳೇ ಸ್ಥಳಕ್ಕೆ ತೆರಳಿ ಸಮಸ್ಯೆ ಪರಿಹರಿಸಬೇಕಿತ್ತು ಎಂದು ತಿಳಿಸಿದರು.

ಕಾಂಗ್ರೆಸ್ ಸರಕಾರವು ರೈತರಿಗೆ ಬರೆ ಎಳೆಯುವ ಕೆಲಸ ಮಾಡುತ್ತಿದೆ. ರೈತವಿರೋಧಿ ನಡವಳಿಕೆ ತೋರುತ್ತಿದ್ದು, ಇದು ಅಕ್ಷಮ್ಯ ಅಪರಾಧ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಮುಖ್ಯಮಂತ್ರಿಗಳು ತಾತ್ಸಾರ ಮಾಡದೇ, ಕಬ್ಬು ಬೆಳೆಗಾರರ ಪರಿಸ್ಥಿತಿಯನ್ನು ಅರ್ಥ ಮಾಡಿಕೊಂಡು ಪರಿಹಾರ ಕೊಡಬೇಕು ಎಂದು ಆಗ್ರಹಿಸಿದರು.

ರಾಜಕೀಯ

ರಾಜಘಟ್ಟದಲ್ಲಿ ಬೀದಿಗೆ ಬಂದ ಜೆಡಿಎಸ್ ಮುಖಂಡರ ಒಳಜಗಳ..!

ರಾಜಘಟ್ಟದಲ್ಲಿ ಬೀದಿಗೆ ಬಂದ ಜೆಡಿಎಸ್ ಮುಖಂಡರ ಒಳಜಗಳ..!

ಜೆಡಿಎಸ್ (JDS) ಮುಖಂಡರ ಒಳಜಗಳ ರಾಜಘಟ್ಟ ಆಂಜನೇಯಸ್ವಾಮಿ ದೇವಸ್ಥಾನದ ಸಮೀಪದಲ್ಲಿನ ಅರಳಿಕಟ್ಟೆಯಲ್ಲಿ ಬೀದಿಗೆ ಬಂದಿದೆ.

[ccc_my_favorite_select_button post_id="118288"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ಅಸೆಂಬ್ಲಿ ಚುನಾವಣೆ 2028; 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ NDA ಗೆಲ್ಲುತ್ತೆ ಎಂದ ನಿಖಿಲ್ ಕುಮಾರಸ್ವಾಮಿ

ಅಸೆಂಬ್ಲಿ ಚುನಾವಣೆ 2028; 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ NDA ಗೆಲ್ಲುತ್ತೆ ಎಂದ ನಿಖಿಲ್

ಮುಂದಿನ ರಾಜ್ಯದ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳ ಎನ್ಡಿಎ (NDA) ಮೈತ್ರಿಕೂಟವು 150 ಕ್ಷೇತ್ರಗಳಲ್ಲಿ ಜಯ ಸಾಧಿಸಲಿದೆ. ಆ ನಿಟ್ಟಿನಲ್ಲಿ ಎರಡೂ ಪಕ್ಷಗಳು ಸೇರಿ ಕೆಲಸ ಮಾಡುತ್ತಿದ್ದೇವೆ ಎಂದು ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಹೇಳಿದರು.

[ccc_my_favorite_select_button post_id="118301"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರರಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರರಿಗೆ ಗಂಭೀರ ಗಾಯ

ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತ (Accident) ಸಂಭವಿಸಿ ಬೈಕ್ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ **** ಹಾಗೂ *** ನಡುವೆ ಸಂಭವಿಸಿದೆ.

[ccc_my_favorite_select_button post_id="118304"]

ಆರೋಗ್ಯ

ಸಿನಿಮಾ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

ಹಿರಿಯ ಚಲನಚಿತ್ರ ಕಲಾವಿದರು, ನಿರ್ದೇಶಕರು ನಿರ್ಮಾಪಕ ಪ್ರಕಾಶ್ ರಾಜ್ (Prakash Raj) ಅವರನ್ನು 17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ (Brand Ambassador) ಆಗಿ ನೇಮಿಸಲಾಗಿದೆ.

[ccc_my_favorite_select_button post_id="117722"]
error: Content is protected !!