A defamation suit is inevitable if the news is distorted; D.K. Sivakumar Warning

ಕಾಂಗ್ರೆಸ್ ಬ್ಲಾಕ್ ಸೋಮಾರಿ ಅಧ್ಯಕ್ಷರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಖಡಕ್ ವಾರ್ನಿಂಗ್.. ಹುದ್ದೆಯಿಂದ ಕಿತ್ತೊಗೆಯಲು ಸೂಚನೆ

ನವದೆಹಲಿ: “ಮತಗಳ್ಳತನ ವಿರುದ್ಧ ಕರ್ನಾಟಕದಲ್ಲಿ ಸಹಿಸಂಗ್ರಹ ಅಭಿಯಾನದಲ್ಲಿ ಸಕ್ರಿಯರಾಗದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ಎಚ್ಚರಿಸಿದ್ದಾರೆ.

ನವದೆಹಲಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯೆ ನೀಡಿದರು.

ಹರಿಯಾಣದಲ್ಲಿ ನಡೆದಿರುವ ಮತಗಳ್ಳತನ ವಿಚಾರವಾಗಿ ಕರ್ನಾಟಕ ರಾಜ್ಯದಲ್ಲಿ ಪ್ರತಿಭಟನೆ ನಡೆಸುತ್ತೀರಾ ಎಂದು ಕೇಳಿದಾಗ, ಖಂಡಿತವಾಗಿ ಮಾಡುತ್ತೇವೆ. ಈಗಾಗಲೇ ಲಕ್ಷಾಂತರ ಸಹಿಸಂಗ್ರಹ ಮಾಡಿದ್ದೇವೆ. ಅದನ್ನು ನ.9 ರಂದು ದೆಹಲಿಗೆ ತೆಗೆದುಕೊಂಡು ಬರುತ್ತೇವೆ. ಬ್ಲಾಕ್ ಅಧ್ಯಕ್ಷರ ಜೊತೆ ಚರ್ಚೆ ಮಾಡಲಿದ್ದೇನೆ.

ಈ ಅಭಿಯಾನದಲ್ಲಿ ಯಾರು ಕೆಲಸ ಮಾಡಿಲ್ಲವೋ ಅವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುತ್ತೇವೆ. ಸಹಿಸಂಗ್ರಹ ಅಭಿಯಾನದಲ್ಲಿ ಸರಿಯಾಗಿ ಜವಾಬ್ದಾರಿ ನಿಭಾಯಿಸದವರನ್ನು ಅವರ ಹುದ್ದೆಯಿಂದ ಕಿತ್ತೊಗೆಯಿರಿ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಸೂಚಿಸಿದ್ದಾರೆ.

ಈ ವಿಚಾರವಾಗಿ ಮುಖ್ಯಮಂತ್ರಿಗಳ ಜೊತೆಗೂ ಚರ್ಚೆ ಮಾಡುವೆ, ಶಾಸಕರಿಗೂ ತಿಳಿಸುವೆ. ಮತಗಳ್ಳತನ ರಾಷ್ಟ್ರ ಮಟ್ಟದ ಗಂಭೀರ ವಿಚಾರವಾಗಿದ್ದು, ನಮ್ಮ ರಾಜ್ಯದಲ್ಲಿ ಈಗಾಗಲೇ 70-80 ಲಕ್ಷ ಸಹಿ ಸಂಗ್ರಹ ಮಾಡಲಾಗಿದೆ.

ಕೆಲವು ಶಾಸಕರು ಹಾಗೂ ಬ್ಲಾಕ್ ಕಾಂಗ್ರೆಸ್ ನವರು ಇದನ್ನು ಗಂಭೀರವಾಗಿ ಪರಿಗಣಿಸಿಲ್ಲ, ಅಂತಹವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತೇವೆ. ನಾನು ನನ್ನ ವರದಿ ನೀಡುತ್ತೇನೆ. ಬ್ಲಾಕ್ ಅಧ್ಯಕ್ಷರನ್ನು ವಜಾಗೊಳಿಸಲು ನನಗೆ ಅಧಿಕಾರವಿದೆ. ಶಾಸಕರ ವಿಚಾರವಾಗಿ ಮುಖ್ಯಮಂತ್ರಿಗಳಿಗೆ ತಿಳಿಸುತ್ತೇವೆ. ಎಐಸಿಸಿ ನಾಯಕರು ಸೂಚನೆ ನೀಡುತ್ತಾರೆ ಎಂದರು.

ಕರ್ನಾಟಕ, ಮಹಾರಾಷ್ಟ್ರ ನಂತರ ಈಗ ಹರಿಯಾಣದಲ್ಲಿ ಮತಗಳ್ಳತನ ಆರೋಪ ಬಂದಿದ್ದು, ಚುನಾವಣಾ ಆಯೋಗ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ ಯಾಕೆ ಎಂದು ಕೇಳಿದಾಗ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರೇ ದೇವರು. ನಾವು ಈ ವಿಚಾರವನ್ನು ಜನರಿಗೆ ತಿಳಿಸುತ್ತಿದ್ದು, ಅವರು ಸೂಕ್ತ ಸಂದರ್ಭದಲ್ಲಿ ತೀರ್ಮಾನ ಮಾಡಲಿದ್ದಾರೆ. ದೇಶದಲ್ಲಿ ಏನಾಗುತ್ತಿದೆ ಎಂದು ಜನರಿಗೆ ಮನದಟ್ಟು ಮಾಡುತ್ತಿದ್ದೇವೆ.

ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಏನಾಗಿದೆ ಎಂದು ನಮಗೆ ಗೊತ್ತಿದೆ. ನಾವು ಅಲ್ಲಿ ಸೋತಾಗಿದೆ. ಈಗ ನನ್ನ ಕ್ಷೇತ್ರದ ಬಗ್ಗೆ ಚರ್ಚೆ ಬೇಡ. ಈಗ ಬೇರೆ ಕ್ಷೇತ್ರಗಳಲ್ಲಿನ ಅಕ್ರಮದ ಬಗ್ಗೆ ರಾಹುಲ್ ಗಾಂಧಿ ಅವರೇ ಸಾಕ್ಷಿ ಸಮೇತ ಜನರ ಮುಂದೆ ಇಡುತ್ತಿದ್ದಾರೆ ಎಂದು ತಿಳಿಸಿದರು.

ನಾವು ಆರ್ ಎಸ್ಎಸ್ ನಿಯಂತ್ರಿಸುವುದಾಗಿ ಹೇಳಿಲ್ಲ

ಆರ್ ಎಸ್ಎಸ್ ನಿಯಂತ್ರಣದ ಬಗ್ಗೆ ಕೇಳಿದಾಗ, ನಾವು ಆರ್ ಎಸ್ಎಸ್ ನಿಯಂತ್ರಿಸುತ್ತೇವೆ ಎಂದು ಎಲ್ಲಿ ಹೇಳಿದ್ದೇವೆ? ಸಾರ್ವಜನಿಕ ಸ್ಥಳಗಳಲ್ಲಿ ಕಾರ್ಯಕ್ರಮಕ್ಕೆ ಅನುಮತಿ ಪಡೆಯಬೇಕು ಎಂದು ಹೇಳಿದ್ದೇವೆ. ಇದು ಎಲ್ಲರಿಗೂ ಅನ್ವಯವಾಗಲಿದ್ದು, ನಾವು ಆರ್ ಎಸ್ಎಸ್ ಸುದ್ದಿ ಎಲ್ಲಿ ಪ್ರಸ್ತಾಪಿಸಿದ್ದೇವೆ? ಈ ವಿಚಾರ ಸಾರ್ವಜನಿಕ ಚರ್ಚೆಯಲ್ಲಿತ್ತು.

ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರ ಪತ್ರದ ಆದೇಶದಂತೆ ಯಾರೇ ಕಾರ್ಯಕ್ರಮ ಮಾಡಬೇಕಾದರೂ ಅನುಮತಿ ಪಡೆಯಬೇಕು ಎಂದು ಸರ್ಕಾರ ಸೂಚಿಸಿದೆ. ಆರ್ ಎಸ್ಎಸ್ ಕಾರ್ಯಕ್ರಮ ಮಾಡಬಾರದು ಎಂದು ನಾವು ಎಲ್ಲಿ ಹೇಳಿದ್ದೇವೆ? ಎಂದು ತಿಳಿಸಿದರು.

ಹೈಕೋರ್ಟ್ ಆದೇಶದಿಂದ ಸರ್ಕಾರಕ್ಕೆ ಹಿನ್ನಡೆಯಾಗಿದೆಯೇ ಎಂದು ಕೇಳಿದಾಗ, “ಸರ್ಕಾರಕ್ಕೆ ಹಿನ್ನಡೆ ಎಂದೇನೂ ಇಲ್ಲ. ನಮ್ಮ ಕಾನೂನು ತಂಡದ ಜತೆ ಕೂತು ಚರ್ಚೆ ಮಾಡುತ್ತೇವೆ. ನಾವು ನ್ಯಾಯಾಲಯಕ್ಕೆ ಗೌರವ ನೀಡುತ್ತೇವೆ” ಎಂದರು.

“ಕಾವೇರಿ (ಮೇಕೆದಾಟು ಯೋಜನೆ) ವಿಚಾರವಾಗಿ ಪ್ರತ್ಯೇಕ ಪೀಠ ರಚಿಸುವುದಾಗಿ ಹೇಳುತ್ತಿದ್ದಾರೆ. ಇದಕ್ಕೆ ದಿನಾಂಕ ನಿಗದಿ ಮಾಡಲಿದ್ದು, ರಾಜ್ಯಕ್ಕೆ ನ್ಯಾಯ ಸಿಗಲಿ ಎಂದು ಪ್ರಾರ್ಥನೆ ಮಾಡೋಣ” ಎಂದರು.

ರಾಜಕೀಯ

ರಾಜಘಟ್ಟದಲ್ಲಿ ಬೀದಿಗೆ ಬಂದ ಜೆಡಿಎಸ್ ಮುಖಂಡರ ಒಳಜಗಳ..!

ರಾಜಘಟ್ಟದಲ್ಲಿ ಬೀದಿಗೆ ಬಂದ ಜೆಡಿಎಸ್ ಮುಖಂಡರ ಒಳಜಗಳ..!

ಜೆಡಿಎಸ್ (JDS) ಮುಖಂಡರ ಒಳಜಗಳ ರಾಜಘಟ್ಟ ಆಂಜನೇಯಸ್ವಾಮಿ ದೇವಸ್ಥಾನದ ಸಮೀಪದಲ್ಲಿನ ಅರಳಿಕಟ್ಟೆಯಲ್ಲಿ ಬೀದಿಗೆ ಬಂದಿದೆ.

[ccc_my_favorite_select_button post_id="118288"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ಅಸೆಂಬ್ಲಿ ಚುನಾವಣೆ 2028; 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ NDA ಗೆಲ್ಲುತ್ತೆ ಎಂದ ನಿಖಿಲ್ ಕುಮಾರಸ್ವಾಮಿ

ಅಸೆಂಬ್ಲಿ ಚುನಾವಣೆ 2028; 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ NDA ಗೆಲ್ಲುತ್ತೆ ಎಂದ ನಿಖಿಲ್

ಮುಂದಿನ ರಾಜ್ಯದ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳ ಎನ್ಡಿಎ (NDA) ಮೈತ್ರಿಕೂಟವು 150 ಕ್ಷೇತ್ರಗಳಲ್ಲಿ ಜಯ ಸಾಧಿಸಲಿದೆ. ಆ ನಿಟ್ಟಿನಲ್ಲಿ ಎರಡೂ ಪಕ್ಷಗಳು ಸೇರಿ ಕೆಲಸ ಮಾಡುತ್ತಿದ್ದೇವೆ ಎಂದು ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಹೇಳಿದರು.

[ccc_my_favorite_select_button post_id="118301"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರರಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರರಿಗೆ ಗಂಭೀರ ಗಾಯ

ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತ (Accident) ಸಂಭವಿಸಿ ಬೈಕ್ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ **** ಹಾಗೂ *** ನಡುವೆ ಸಂಭವಿಸಿದೆ.

[ccc_my_favorite_select_button post_id="118304"]

ಆರೋಗ್ಯ

ಸಿನಿಮಾ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

ಹಿರಿಯ ಚಲನಚಿತ್ರ ಕಲಾವಿದರು, ನಿರ್ದೇಶಕರು ನಿರ್ಮಾಪಕ ಪ್ರಕಾಶ್ ರಾಜ್ (Prakash Raj) ಅವರನ್ನು 17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ (Brand Ambassador) ಆಗಿ ನೇಮಿಸಲಾಗಿದೆ.

[ccc_my_favorite_select_button post_id="117722"]
error: Content is protected !!