Unprecedented response to state-level tennis tournament: Over 300 players participate

ರಾಜ್ಯಮಟ್ಟದ ಟೆನ್ನಿಸ್ ಪಂದ್ಯಾವಳಿಗೆ ಅಭೂತಪೂರ್ವ ಪ್ರತಿಕ್ರಿಯೆ: 300ಕ್ಕೂ ಹೆಚ್ಚು ಆಟಗಾರರ ಭಾಗಿ

ಧಾರವಾಡ: ಧಾರವಾಡದಲ್ಲಿ 2023 ರಲ್ಲಿ ಐಟಿಎಫ್ ಪಂದ್ಯಾವಳಿಗಳನ್ನು ಆಯೋಜಿಸಲಾಗಿತ್ತು. ಬೇರೆ ಬೇರೆ 30 ದೇಶಗಳಿಂದ ಟೆನ್ನಿಸ್ (Tennis) ಆಟಗಾರರು ಈ ಪಂದ್ಯಾವಳಿಗಳಲ್ಲಿ ಭಾಗವಹಿಸಿದ್ದರು. ಇದು ನಮ್ಮ ಧಾರವಾಡ ಜಿಲ್ಲೆಯ ಹೆಮ್ಮೆಯ ವಿಷಯ ಎಂದು ಸಚಿವ ಸಂತೋಷ್ ಎಸ್. ಲಾಡ್ (Santosh lad) ಅವರು ಹೇಳಿದರು.

ಅವರು ಇಂದು (ನ.07) ಧಾರವಾಡ ಡಿಡಿಎಲ್‍ಟಿಎ ಆವರಣದ ರಾಜ್ಯಾಧ್ಯಕ್ಷ ಪೆವಲಿನ್‍ದಲ್ಲಿ ಜರುಗಿದ ರಾಜ್ಯ ಮಟ್ಟದ ಪುರುಷರ ಲಾನ್ ಟೆನ್ನಿಸ್ ಪಂದ್ಯಾವಳಿಯನ್ನು ಉದ್ಘಾಟಿಸಿ, ಮಾತನಾಡಿದರು.

ರಾಜ್ಯಮಟ್ಟದ ಟೆನ್ನಿಸ್ ಪಂದ್ಯಾವಳಿಗೆ ಈ ಬಾರಿ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗಿದೆ. ಪ್ರತಿಷ್ಠಿತ ಪಂದ್ಯಾವಳಿನಲ್ಲಿ 300ಕ್ಕೂ ಹೆಚ್ಚು ಕ್ರೀಡಾಪಟುಗಳು ಧಾರವಾಡದಿಂದ ಭಾಗವಹಿಸಿದ್ದು, ಇದು ರಾಜ್ಯದಲ್ಲಿ ಟೆನ್ನಿಸ್ ಕ್ರೀಡೆಯ ಜನಪ್ರಿಯತೆಯನ್ನು ಎತ್ತಿ ಹಿಡಿದಿದೆ ಎಂದು ಅವರು ತಿಳಿಸಿದರು.

ಕ್ರೀಡೆಯು ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಅತ್ಯಗತ್ಯ. ಕ್ರೀಡಾ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸುತ್ತಿರುವ ಧಾರವಾಡ ಇದೀಗ ಟೆನ್ನಿಸ್ ಕ್ರೀಡೆಯಲ್ಲಿಯೂ ಮುಂಚೂಣಿಗೆ ಬರುತ್ತಿದೆ. ರಾಜ್ಯದ ರಾಜಧಾನಿ ಬೆಂಗಳೂರಿನ ನಂತರ ಬರೋಬ್ಬರಿ ಎಂಟು ಟೆನ್ನಿಸ್ ಕೋರ್ಟ್‍ಗಳನ್ನು ಹೊಂದಿರುವ ಏಕೈಕ ನಗರ ಎಂಬ ಹೆಗ್ಗಳಿಕೆಗೆ ಧಾರವಾಡ ಪಾತ್ರವಾಗಿದೆ ಎಂದು ಸಚಿವರು ಹೇಳಿದರು.

ಮಕ್ಕಳಲ್ಲಿ ಕ್ರೀಡಾ ಮನೋಭಾವ ಬೆಳೆಸಲು ಮತ್ತು ಅವರಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸಲು ನಾವೆಲ್ಲರೂ ಬದ್ಧರಾಗಿದ್ದೇವೆ. ಧಾರವಾಡದಲ್ಲಿ ಕ್ರೀಡಾ ವಾತಾವರಣವನ್ನು ಮತ್ತಷ್ಟು ಉತ್ತಮಗೊಳಿಸುವ ನಿಟ್ಟಿನಲ್ಲಿ ಎಲ್ಲರ ಸಹಕಾರ ಮಹತ್ವದ್ದು, ಇದರಿಂದಾಗಿ ಕ್ರೀಡೆಯಲ್ಲಿ ಆಸಕ್ತಿ ಹೊಂದಿರುವ ಮಕ್ಕಳಿಗೆ ಉತ್ತಮ ಅವಕಾಶಗಳು ದೊರೆಯುತ್ತವೆ ಎಂದು ಹೇಳಿದರು.

ಶಾಸಕ ಅರವಿಂದ ಚಂದ್ರಕಾಂತ ಬೆಲ್ಲದ ಅವರು ಮಾತನಾಡಿ, ಧಾರವಾಡವು ಕ್ರೀಡಾ ಕ್ಷೇತ್ರದಲ್ಲಿ ಉತ್ತಮ ಬೆಳವಣಿಗೆಯನ್ನು ಕಾಣುತ್ತಿದೆ. ಕ್ರೀಡಾ ಮಟ್ಟದಲ್ಲಿ ಸಾಧನೆ ಮಾಡುತ್ತಿರುವುದು ಸಂತೋಷ ತಂದಿದೆ ಎಂದು ತಿಳಿಸಿದರು.

ಧಾರವಾಡವು ಕ್ರೀಡೆಯ ಚುಕ್ಕಾಣಿಯನ್ನು ಹಿಡಿದಿದೆ. ಕ್ರೀಡಾ ಕ್ಷೇತ್ರದಲ್ಲಿ ಧಾರವಾಡದ ಯುವಜನರು ಉತ್ತಮ ಸಾಧನೆ ಮಾಡುತ್ತಿದ್ದು, ಮುಂದಿನ ದಿನಗಳಲ್ಲಿ ಕ್ರೀಡೆಯಲ್ಲಿ ಇನ್ನಷ್ಟು ಪ್ರಗತಿ ಸಾಧಿಸಲು ಎಲ್ಲ ರೀತಿಯ ಸಹಕಾರ ನೀಡುವುದಾಗಿ ಹೇಳಿದರು.

ನಗರದ ಹೃದಯಭಾಗದಲ್ಲಿರುವ ಐತಿಹಾಸಿಕ ಜಿಮ್ ಖಾನಾ ಕ್ಲಬ್‍ನ ಸಮಗ್ರ ಜೀರ್ಣೋದ್ಧಾರ ಮತ್ತು ಅಭಿವೃದ್ಧಿಗೆ ಕ್ರಮಕೈಗೊಳ್ಳುವಂತೆ ಸಚಿವರಲ್ಲಿ ಮನವಿ ಮಾಡಿಕೊಂಡರು. ಈ ಕ್ಲಬ್ ಬ್ರಿಟಿಷರ ಕಾಲದಿಂದಲೂ ತನ್ನದೇ ಆದ ಮಹತ್ವವನ್ನು ಹೊಂದಿದ್ದು, ಕ್ರೀಡೆ, ಸಾಂಸ್ಕøತಿಕ ಮತ್ತು ಸಾಮಾಜಿಕ ಚಟುವಟಿಕೆಗಳ ಕೇಂದ್ರಬಿಂದುವಾಗಿದೆ ಇದರ ಅಭಿವೃದ್ಧಿಪಡಿಸಬೇಕೆಂದು ತಿಳಿಸಿದರು.

ಹುಬ್ಬಳ್ಳಿಯಲ್ಲಿ ಜಗತ್ತಿನ ಅಂತರಾಷ್ಟ್ರೀಯ ಆಟಗಳನ್ನು ಆಡಲು ಸೂಕ್ತವಾದ ಕ್ರೀಡಾಂಗಣವನ್ನು ನಿರ್ಮಾಣ ಮಾಡಲಾಗುತ್ತಿದೆ. ಇದರಿಂದಾಗಿ ನಮ್ಮ ಭಾಗದ ಕ್ರೀಡಾಪಟುಗಳು ಮತ್ತು ಕ್ರೀಡಾಭಿಮಾನಿಗಳು ಬೆಂಗಳೂರಿಗೆ ಹೋಗುವ ಅನಿವಾರ್ಯತೆ ತಪ್ಪುತ್ತದೆ, ಬೆಂಗಳೂರಿನಲ್ಲಿರುವ ಕ್ರೀಡಾಂಗಣಗಳ ಮಾದರಿಯಲ್ಲಿ, ಅತ್ಯಾಧುನಿಕ ಸೌಲಭ್ಯಗಳನ್ನು ಹೊಂದಿದ ಕ್ರೀಡಾಂಗಣವನ್ನು ಹುಬ್ಬಳ್ಳಿ-ಧಾರವಾಡ ಅವಳಿ ನಗರಗಳಲ್ಲಿ ನಿರ್ಮಿಸಲಾಗುವುದು ಎಂದು ಅವರು ಹೇಳಿದರು.

ವೇದಿಕೆಯಲ್ಲಿ ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ, ಕರ್ನಾಟಕ ವಿಧಾನ ಪರಿಷತ್ ಸರ್ಕಾರಿ ಮುಖ್ಯ ಸಚೇತಕ ಸಲೀಂ ಅಹ್ಮದ್, ಎಫ್.ಹೆಚ್.ಜಕ್ಕಪ್ಪನವರ, ಹುಬ್ಬಳ್ಳಿ-ಧಾರವಾಡ ಮಹಾನಗರ ಮಹಾಪೌರರಾದ ಜ್ಯೋತಿ ಪಾಟೀಲ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್.ಪಾಟೀಲ, ವಾ.ಕ.ರ.ಸಾ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿ ಪ್ರಿಯಾಂಗಾ ಎಂ., ಹುಬ್ಬಳ್ಳಿ ಧಾರವಾಡ ಮಹಾನಗರ ಪೆÇಲೀಸ್ ಆಯುಕ್ತ ಎನ್.ಶಶಿಕುಮಾರ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿ ಗುಂಜನ್ ಆರ್ಯ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಡಾ. ರುದ್ರೇಶ.ಎಸ್.ಘಾಳಿ ಮತ್ತು ಸಂತೋಷ ಬಿರಾದಾರ ಅವರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಕಾರ್ಯದರ್ಶಿ ಸಂತೋಷ ಶೆಟ್ಟಿ ಅವರು ಸ್ವಾಗತಿಸಿದರು. ಆರತಿ ದೇವಶಿಖಾಮಣಿ ಅವರು ನಿರೂಪಿಸಿ, ವಂದಿಸಿದರು.
ಕಾರ್ಯಕ್ರಮದಲ್ಲಿ ಟೆನ್ನಿಸ್ ತರಬೇತುದಾರರು, ನಿರ್ಣಾಯಕರು, ಸ್ಫರ್ಧಾಳುಗಳು, ಪಾಲಕರು ಉಪಸ್ಥಿತರಿದ್ದರು.

ರಾಜಕೀಯ

ದೆಹಲಿ ಬಾಂಬ್ ಸ್ಪೋಟವನ್ನು ಬಿಹಾರ ಚುನಾವಣೆಯನ್ನು ಜೋಡಿಸುವ ಷಡ್ಯಂತ್ರ: ಬಿ.ವೈ. ವಿಜಯೇಂದ್ರ ಟೀಕೆ

ದೆಹಲಿ ಬಾಂಬ್ ಸ್ಪೋಟವನ್ನು ಬಿಹಾರ ಚುನಾವಣೆಯನ್ನು ಜೋಡಿಸುವ ಷಡ್ಯಂತ್ರ: ಬಿ.ವೈ. ವಿಜಯೇಂದ್ರ ಟೀಕೆ

ಬಾಂಬ್ ಸ್ಫೋಟದಂಥ ಸಂದಿಗ್ಧ ಸಂದರ್ಭದಲ್ಲಿ ಎಲ್ಲ ರಾಜಕೀಯ ಪಕ್ಷಗಳು ಒಟ್ಟಾಗಿ ಒಂದೇ ಧ್ವನಿಯಲ್ಲಿ ಮಾತನಾಡಬೇಕಾಗುತ್ತದೆ ಎಂದು ಬಿಜೆಪಿ (BJP) ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ( B.Y. Vijayendra) ತಿಳಿಸಿದ್ದಾರೆ.

[ccc_my_favorite_select_button post_id="116125"]
ಮಾನವ-ವನ್ಯಪ್ರಾಣಿ ಸಂಘರ್ಷ ತಪ್ಪಿಸಲು ದ್ರೋಣ್ ಕ್ಯಾಮರಾಗಳ ನಿಗಾಗೆ ಸಿಎಂ ಸೂಚನೆ

ಮಾನವ-ವನ್ಯಪ್ರಾಣಿ ಸಂಘರ್ಷ ತಪ್ಪಿಸಲು ದ್ರೋಣ್ ಕ್ಯಾಮರಾಗಳ ನಿಗಾಗೆ ಸಿಎಂ ಸೂಚನೆ

ಮಾನವ-ವನ್ಯಪ್ರಾಣಿ ಸಂಘರ್ಷ ತಪ್ಪಿಸಲು ದ್ರೋಣ್ ಕ್ಯಾಮರಾಗಳ ನಿಗಾ ಹೆಚ್ಚಿಸಿ, ಕೃಪಾಕರ ಸೇನಾನಿ-ಸಂಜಯ್ ಗುಬ್ಬಿ ಸೇರಿದಂತೆ ತಜ್ಞರ ಜೊತೆ ಚರ್ಚಿಸಿ ವೈಜ್ಞಾನಿಕ ಮಾರ್ಗಗಳನ್ನು ರೂಪಿಸಿ ಎನ್ನುವ ಸೂಚನೆಗಳನ್ನು ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು

[ccc_my_favorite_select_button post_id="116144"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೆಹಲಿ ಕಾರು ಸ್ಫೋಟ: ಕೇಂದ್ರದ ವಿರುದ್ಧ ಆರೋಪ ಮಾಡೋ ಸಮಯ ಇದಲ್ಲ- ಡಿಸಿಎಂ ಡಿ.ಕೆ. ಶಿವಕುಮಾರ್

ದೆಹಲಿ ಕಾರು ಸ್ಫೋಟ: ಕೇಂದ್ರದ ವಿರುದ್ಧ ಆರೋಪ ಮಾಡೋ ಸಮಯ ಇದಲ್ಲ- ಡಿಸಿಎಂ

“ದೆಹಲಿಯಲ್ಲಿ ನಡೆದಿರುವ ಕಾರು ಸ್ಫೋಟ ಘಟನೆಯನ್ನು ಕಾಂಗ್ರೆಸ್ ಪಕ್ಷ ಖಂಡಿಸುತ್ತದೆ. ದೇಶದ ಐಕ್ಯತೆ, ಸಮಗ್ರತೆ, ಶಾಂತಿ ರಕ್ಷಣೆಗೆ ನಾವು ಉಗ್ರ ಚಟುವಟಿಕೆಗಳ ವಿರುದ್ದ ಬಹಳ ಜಾಗರೂಕರಾಗಿ ಇರಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K.

[ccc_my_favorite_select_button post_id="116009"]
ದೊಡ್ಡಬಳ್ಳಾಪುರ: ನಾಡ ಬಾಂಬ್ ಸ್ಪೋಟ.. ಮಹಿಳೆಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ನಾಡ ಬಾಂಬ್ ಸ್ಪೋಟ.. ಮಹಿಳೆಗೆ ಗಂಭೀರ ಪೆಟ್ಟು..!

ಕಾಡು ಹಂದಿಯ ಬೇಟೆಯಾಡಲು ಅರಣ್ಯ ಪ್ರದೇಶದಲ್ಲಿ ಇಡಲಾಗಿದ್ದ ನಾಡ ಬಾಂಬ್ ಸ್ಪೋಟಿಸಿ (Nada bomb blast) ಮಹಿಳೆಗೆ ಗಂಭೀರ ಪೆಟ್ಟಾಗಿರುವ ಘಟನೆ ತಾಲೂಕಿನ

[ccc_my_favorite_select_button post_id="116061"]
KSRTC ಬಸ್‌ನಿಂದ ಬಿದ್ದು ಯುವತಿ ಸಾವು.. ಕುಟುಂಬಕ್ಕೆ ಪರಿಹಾರ

KSRTC ಬಸ್‌ನಿಂದ ಬಿದ್ದು ಯುವತಿ ಸಾವು.. ಕುಟುಂಬಕ್ಕೆ ಪರಿಹಾರ

ಬಸ್‌ನಲ್ಲಿ ಪಯಣಿಸುತ್ತಿದ್ದ ಭದ್ರಾವತಿ ತಾಲೂಕು ಬೈಪಾಸ್ ರಸ್ತೆ, ಹಳೇ ಭಂಡಾರಹಳ್ಳಿ ಗ್ರಾಮ ವಾಸಿ ಹೇಮಾವತಿ ಎಂಬ 19 ವರ್ಷದ ಯುವತಿಯು KSRTC ಬಸ್‌ನಿಂದ ಕೆಳಗೆ ಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿರುತ್ತಾರೆ.

[ccc_my_favorite_select_button post_id="116039"]

ಆರೋಗ್ಯ

ಸಿನಿಮಾ

ತಿಥಿ ಸಿನಿಮಾ ಖ್ಯಾತಿಯ ಗಡ್ಡಪ್ಪ ಇನ್ನಿಲ್ಲ

ತಿಥಿ ಸಿನಿಮಾ ಖ್ಯಾತಿಯ ಗಡ್ಡಪ್ಪ ಇನ್ನಿಲ್ಲ

ತಿಥಿ ಸಿನಿಮಾದ ಖ್ಯಾತಿಯ ಗಡ್ಡಪ್ಪ (Gaddappa) ಅಲಿಯಾಸ್‌ ಚನ್ನೇಗೌಡ ವಿಧಿವಶರಾಗಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು.

[ccc_my_favorite_select_button post_id="116057"]
error: Content is protected !!