Kanakadasa Jayanti from Doddaballapur Kasapa

ದೊಡ್ಡಬಳ್ಳಾಪುರ ಕಸಾಪದಿಂದ ಕನಕದಾಸ ಜಯಂತಿ

ದೊಡ್ಡಬಳ್ಳಾಪುರ: ಕನಕದಾಸರು (Kanakadasa) ಕನ್ನಡ ಸಾಹಿತ್ಯ ಮತ್ತು ಕರ್ನಾಟಕ ಸಂಗೀತಕ್ಕೆ ನೀಡಿದ ಕೊಡುಗೆ ಅನನ್ಯವಾಗಿದೆ. ಭಕ್ತಿ ಮತ್ತು ಸಾಮಾಜಿಕ ಜಾಗೃತಿ ಮೂಡಿಸುವ ಮೂಲಕ ಕನಕದಾಸರು ದಾರ್ಶನಿಕ ಚಿಂತಕರು ಆಗಿದ್ದಾರೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕನ್ನಡ ಜಾಗೃತಿ ಸಮಿತಿ ಸದಸ್ಯ ಕೆ.ಮಹಾಲಿಂಗಯ್ಯ ತಿಳಿಸಿದರು.

ಅವರು ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಡಾ.ರಾಜ್ ಕುಮಾರ್ ಕಲಾ ಮಂದಿರದ ಆವರಣದಲ್ಲಿ ನಡೆದ ಕನಕದಾಸ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ   ಮಾತನಾಡಿದರು.

ಸಾಮಾಜಿಕ ಸಮಾನತೆ ಮತ್ತು ಸೌಹಾರ್ದತೆಗೆ ಒತ್ತು ನೀಡುವ ಕನಕದಾಸರ ತತ್ವ ಸಿದ್ಧಾಂತಗಳು ಪ್ರತಿಯೊಬ್ಬರಿಗೂ ಆದರ್ಶವಾಗಬೇಕು. ಕನಕದಾಸರ ಕೀರ್ತನೆಗಳಲ್ಲಿ ಅಡಗಿರುವ ಸಾಮಾಜಿಕ ಸಂದೇಶಗಳನ್ನು ಅರಿತುಕೊಂಡು ಬಾಳಿದರೆ ಅದು ಸಮಾಜದ ಏಳಿಗೆಗೆ ಸಹಕಾರಿ ಆಗುತ್ತದೆ ಎಂದರು.

ನವೋದಯ ವಿದ್ಯಾಲಯದ ನಿವೃತ್ತ ಶಿಕ್ಷಕ ವಿ.ಎಸ್.ಹೆಗಡೆ ಮಾತನಾಡಿ, ಭಕ್ತಿಯೆ ಹರಿದಾಸ ಸಾಹಿತ್ಯದ ಪ್ರಮುಖ ಶಕ್ತಿ. ಕನಕದಾಸರು ಕರ್ನಾಟಕದ ಭಕ್ತಿ ಆಂದೋಲನದ ಪ್ರಮುಖ ಹರಿದಾಸರು. ಕನ್ನಡ ಭಾಷೆಯಲ್ಲಿ ಕೀರ್ತನೆಗಳನ್ನು ಸರಳವಾದ ಭಾಷೆಯ ಮೂಲಕ ಜನಸಾಮಾನ್ಯರಿಗೆ ತಲುಪಿಸಿದರು. ಜನಸಾಮಾನ್ಯರ ಭಾಷೆಯಲ್ಲಿ ಸಾಹಿತ್ಯ ರಚಿಸಿದ ಶಿವಶರಣರು ಮತ್ತು ಹರಿದಾಸರುಗಳಿಗೆ ಕನ್ನಡ ಸಾಹಿತ್ಯ ಮತ್ತು ಸಂಸ್ಕೃತಿಯಲ್ಲಿ ಮಹತ್ವದ ಸ್ಥಾನವಿದೆ ಎಂದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಸಂಘಟನಾ ಕಾರ್ಯದರ್ಶಿ ರಾಜಘಟ್ಟ ರವಿ ಮಾತನಾಡಿ, ದಾರ್ಶನಿಕರನ್ನು ಮತ್ತು ಸಾಧಕರನ್ನು ಒಂದು ಸಮುದಾಯಕ್ಕೆ ಸೀಮಿತಗೊಳಿಸಬಾರದು. ಕನಕದಾಸರು ಮಾನವೀಯ ಮೌಲ್ಯಗಳ ಸಂದೇಶವನ್ನು ಸಾರಿದವರು. ಕನಕದಾಸರು ಜಾತಿ, ಕುಲ, ಮತಗಳ ಭೇದಗಳನ್ನು ವಿರೋಧಿಸಿದರು ಎಂದರು. 

ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ  ಮತ್ತು ವಿವಿಧ ಸಂಘಟನೆಗಳ  ಪದಾಧಿಕಾರಿಗಳಾದ ಪಿ.ಗೋವಿಂದರಾಜು, ಸಾ.ಲ.ಕಮಲನಸಥ್, ಆರ್.ಗೋವಿಂದರಾಜು, ದಾದಾಪೀರ್, ಜಿ.ಸುರೇಶ್, ವಿ.ಎಸ್.ಹೆಗಡೆ, ಕುಮಾರ್ ಡಿ.ಶ್ರೀಕಾಂತ್, ಸಿ ಅಣ್ಣಯ್ಯ, ನಾಗರಾಜ್, ವೆಂಕಟೇಶರೆಡ್ಡಿ, ಅಂಜನಮೂರ್ತಿ, ಕೋದಂಡರಾಮ್, ರಂಗಸ್ವಾಮಿ, ಸಫೀರ್, ನಾಗರತ್ನಮ್ಮ, ದರ್ಗಾಜೋಗಿಹಳ್ಳಿ ಮಲ್ಲೇಶ್, ಮಹಾದೇವಪ್ಪ, ಇಸ್ತೂರು ರಂಗಸ್ವಾಮಯ್ಯ, ಸೆಲ್ವರಾಜು, ಶಶಿಧರ್ ಮುಂತಾದವರು ಭಾಗವಹಿಸಿದ್ದರು.

ರಾಜಕೀಯ

ಕಾಂಗ್ರೆಸ್‌ ಆಡಳಿತದ ಅವಧಿ ಮುಗಿಯುತ್ತಾ ಬಂದಿದೆ: ಆರ್‌.ಅಶೋಕ

ಕಾಂಗ್ರೆಸ್‌ ಆಡಳಿತದ ಅವಧಿ ಮುಗಿಯುತ್ತಾ ಬಂದಿದೆ: ಆರ್‌.ಅಶೋಕ

ಈ ಬಾರಿಯ ಬಜೆಟ್‌ ಅಧಿವೇಶನದಲ್ಲಿ ಸರ್ಕಾರದ ಲೋಪದೋಷಗಳನ್ನು ಚರ್ಚಿಸಲಾಗುವುದು. ರಾಜ್ಯದ ಆರ್ಥಿಕ ದುಸ್ಥಿತಿಯ ವಿರುದ್ಧ ಹೋರಾಟ ಮಾಡಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R.Ashoka) ಹೇಳಿದರು.

[ccc_my_favorite_select_button post_id="119883"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ಗ್ಯಾಸ್ ಗೀಸರ್ (Gas geyser) ಬಳಕೆ ಮಾಡುವವರು ಆದಷ್ಟು ಮುಂಜಾಗ್ರತೆಯ ಕ್ರಮಕೈಗೊಳ್ಳಬೇಕಿದೆ. ಏಕೆಂದರೆ ಪದೇ ಪದೇ ವಿಷಾನಿಲ ಸೋರಿಕೆಯಿಂದ ಸಾವನಪ್ಪುವ ಪ್ರಕರಣಗಳು ವರದಿಯಾಗುತ್ತಿವೆ.

[ccc_my_favorite_select_button post_id="119828"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!