BJP leaders including R. Ashok arrested..!

ಆರ್. ಅಶೋಕ ಸೇರಿ ಬಿಜೆಪಿ ಮುಖಂಡರ ಬಂಧನ..!

ಬೆಂಗಳೂರು: ಪರಪ್ಪನ ಅಗ್ರಹಾರದಲ್ಲಿನ ಕೈದಿಗಳಿಗೆ ರಾಜ್ಯಾತಿಥ್ಯ ವಿಷಯ ತೀವ್ರ ಚಲನ ಸೃಷ್ಟಿದ್ದು, ಆರ್. ಅಶೋಕ (R.Ashoka) ನೇತೃತ್ವದಲ್ಲಿ ಬಿಜೆಪಿ (BJP) ಮುಖಂಡರು ಪ್ರತಿಭಟನೆ ನಡೆಸಿದರು.

ಒಂದೆಡೆ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ (Actor Darsha) ಅವರು ಹಾಸಿಗಾಗಿ ಕೋರ್ಟ್ ಮೊರೆ ಹೋಗಬೇಕಾದ ಅನಿವಾರ್ಯತೆ ಇದೆ. ಅದೇ ಮತ್ತೊಂದೆಡೆ ಜೈಲಿನಲ್ಲಿರುವ ಉಗ್ರ ಸೇರಿದಂತೆ ಇತರೆ ಕೈದಿಗಳಿಗೆ ಮೊಬೈಲ್, ಟಿವಿ ಸೇರಿದಂತೆ ರಾಜಾತಿಥ್ಯ ನೀಡುತ್ತಿರುವ ವಿಡಿಯೋ ಮತ್ತು ಫೋಟೋ ವರದಿಯಾಗಿ ರಾಜ್ಯ ಸರ್ಕಾರವನ್ನು ಮುಜುಗರಕ್ಕೆ ಒಳಗಾಗಿವಂತೆ ಮಾಡಿದೆ.

ಇದರ ಬೆನ್ನಲ್ಲೇ ಇಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ ನೇತೃತ್ವದಲ್ಲಿ ಶಿವಾನಂದ ವೃತ್ತದ ಬಳಿ ಪ್ರತಿಭಟನೆ ನಡೆಸಿ, ರಾಜ್ಯ ಸರ್ಕಾರ ಹಾಗೂ ಗೃಹಸಚಿವ ಡಾ.ಜಿ.ಪರಮೇಶ್ವರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ವಿಪಕ್ಷ ನಾಯಕ ಆರ್ ಅಶೋಕ್, ಎಂಎಲ್ಸಿ ಸಿಟಿ ರವಿ, ಎನ್ ರವಿಕುಮಾರ್, ಚಲವಾದಿ ನಾರಾಯಣ ಸ್ವಾಮಿ ಸೇರಿದಂತೆ ಬಿಜೆಪಿ ನಾಯಕರು ಪ್ರತಿಭಟನೆ ಆರಂಭಿಸಿದರು.

ಸಿಎಂ ಸಿದ್ದರಾಮಯ್ಯ ಮನೆಗೆ ಮುತ್ತಿಗೆ ಹಾಕಲು ಬರುತ್ತಿದ್ದಂತೆ ಬಿಜೆಪಿ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದು, ಬಸ್ಸಿನಲ್ಲಿ ಕರೆದೊಯ್ದರು. ಈ ವೇಳೆ ತಳ್ಳಾಟನೂಕಾಟ ಉಂಟಾಯಿತು.

ಜೈಲಿನಲ್ಲಿ ಉಗ್ರರಿಗೆ ರಾಜಾತಿಥ್ಯ, ಇದು ಕಾಂಗ್ರೆಸ್‌ ಪ್ರಾಯೋಜಿತ ಕೃತ್ಯ

ಭಯೋತ್ಪಾದಕರನ್ನು ಓಲೈಕೆ ಮಾಡುತ್ತಿರುವ ಕಾಂಗ್ರೆಸ್‌ ಸರ್ಕಾರ, ಅವರಿಗೆ ಜೈಲಿನಲ್ಲಿ ಐಷಾರಾಮಿ ಸೌಲಭ್ಯ ನೀಡಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದರು.

ರೇಸ್‌ ಕೋರ್ಸ್‌ ರಸ್ತೆ ಬಳಿ ಪ್ರತಿಭಟನೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶ ವಿಭಜನೆ ಮಾಡುವ, ಹಿಂದೂಗಳನ್ನು ಕೊಲ್ಲುವ ಭಯೋತ್ಪಾದಕರಿಗೆ ರಾಜಾತಿಥ್ಯ ನೀಡಲಾಗುತ್ತಿದೆ. ಕುಕ್ಕರ್‌ ಬಾಂಬ್‌ ಬ್ಲಾಸ್ಟ್‌ ಆದಾಗ ಅವರನ್ನು ಬ್ರದರ್‌ ಎಂದರು. ಪಾಕಿಸ್ತಾನ ಜಿಂದಾಬಾದ್‌ ಎಂದವರಿಗೆ ಬಿರಿಯಾನಿ ಊಟ ಹಾಕಿಸಿದ್ದರು.

ಕಾಂಗ್ರೆಸ್‌ ಪರೋಕ್ಷವಾಗಿ ಉಗ್ರರಿಗೆ ಬೆಂಬಲ ನೀಡುತ್ತಿದೆ. 5 ಕೋಟಿ ರೂ. ಖರ್ಚು ಮಾಡಿ, ಜೈಲಿನಲ್ಲಿ ನೂರಾರು ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಿದ್ದರೂ, ಅವುಗಳನ್ನು ಆಫ್‌ ಮಾಡಲಾಗಿದೆ. ಒಂದೇ ಬಾರಿಗೆ ಎಲ್ಲ ಕ್ಯಾಮರಾಗಳು ಆಫ್‌ ಆಗಿದ್ದು ಹೇಗೆ ಎಂದು ಪ್ರಶ್ನಿಸಿದರು.

ಜೈಲಿನೊಳಗೆ ಬಾಂಬ್‌, ಮಾಂಸ, ಗಾಂಜಾ. ಮೊಬೈಲ್‌ ಹೋಗುವುದು ಗೊತ್ತಾಗುವುದಿಲ್ಲ. ಕೈದಿಗಳು ಟಿವಿಯಲ್ಲಿ ಐಟಂ ಸಾಂಗ್‌ ನೋಡುವುದು ತಿಳಿಯುವುದಿಲ್ಲ. ಗುಪ್ತಚರ ತಂಡಕ್ಕೆ ಮಾಹಿತಿ ಸಿಗುವುದಿಲ್ಲ. ಕೈದಿಗಳು ಮೊಬೈಲ್‌ ಬಳಸಿ ಬ್ಲಾಕ್‌ಮೇಲ್‌ ಮಾಡುತ್ತಿದ್ದು, ಅದರಿಂದ ಹಣ ಸಂಪಾದಿಸುತ್ತಿದ್ದಾರೆ. ಪೊಲೀಸರು ಇದಕ್ಕೆ ಸಹಕಾರ ನೀಡುತ್ತಿದ್ದಾರೆ. ಕಾಂಗ್ರೆಸ್‌ ಸರ್ಕಾರ ಉಗ್ರರನ್ನು ಫ್ರೀಯಾಗಿ ಬಿಟ್ಟಿದೆ. ಗ್ಯಾರಂಟಿಗಳಂತೆಯೇ ಜೈಲಿನಲ್ಲಿ ರಾಜಾತಿಥ್ಯ ಉಚಿತವಾಗಿ ದೊರೆಯುತ್ತಿದೆ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಎರಡು ವರ್ಷಗಳಲ್ಲಿ ಜೈಲಿಗೆ ಸಂಬಂಧಿಸಿದ ವರದಿ ತರಿಸಿಕೊಂಡಿಲ್ಲ. ನಟ ದರ್ಶನ್‌ ಸಿಗರೇಟು ಸೇದಿದ್ದಕ್ಕೆ ಸುಪ್ರೀಂ ಕೋರ್ಟ್‌ಗೆ ಹೋಗಿದ್ದರು. ಆದರೆ ಭಯೋತ್ಪಾದಕರ ವಿರುದ್ಧ ಯಾವ ರೀತಿಯ ಕಠಿಣ ಕ್ರಮ ಕೈಗೊಳ್ಳುತ್ತಾರೆ ಎಂದು ತಿಳಿಸಲಿ. ಇದು ಕಾಂಗ್ರೆಸ್‌ ಪ್ರಾಯೋಜಿತವಾದ ಕೃತ್ಯ. ಮುಸ್ಲಿಮರ ವಿರುದ್ಧ ಮೃದುವಾದ ಧೋರಣೆಯಿಂದಾಗಿ ಹೀಗೆಲ್ಲ ಆಗುತ್ತಿದೆ. ಇದು ಇಡೀ ಕರ್ನಾಟಕಕ್ಕೆ ಕೆಟ್ಟ ಹೆಸರು ತಂದಿದೆ. ಬಿಹಾರದಲ್ಲೂ ಇಂತಹ ಪರಿಸ್ಥಿತಿ ಇಲ್ಲ ಎಂದರು.

ಮುಖ್ಯಮಂತ್ರಿ ಸ್ಥಾನಕ್ಕಾಗಿ ನಡೆಯುತ್ತಿರುವ ಕಚ್ಚಾಟದಲ್ಲಿ ಎಲ್ಲರೂ ನಿರತರಾಗಿದ್ದಾರೆ. ಇದರ ನಡುವೆ ಗೃಹಸಚಿವ ಡಾ.ಜಿ.ಪರಮೇಶ್ವರ್‌ ಏನೂ ಕೆಲಸ ಮಾಡುತ್ತಿಲ್ಲ. ಪೊಲೀಸ್‌ ಇಲಾಖೆ ನಿಷ್ಕ್ರಿಯವಾಗಿದೆ ಎಂದರು.

ರಾಜಕೀಯ

ರಾಜಘಟ್ಟದಲ್ಲಿ ಬೀದಿಗೆ ಬಂದ ಜೆಡಿಎಸ್ ಮುಖಂಡರ ಒಳಜಗಳ..!

ರಾಜಘಟ್ಟದಲ್ಲಿ ಬೀದಿಗೆ ಬಂದ ಜೆಡಿಎಸ್ ಮುಖಂಡರ ಒಳಜಗಳ..!

ಜೆಡಿಎಸ್ (JDS) ಮುಖಂಡರ ಒಳಜಗಳ ರಾಜಘಟ್ಟ ಆಂಜನೇಯಸ್ವಾಮಿ ದೇವಸ್ಥಾನದ ಸಮೀಪದಲ್ಲಿನ ಅರಳಿಕಟ್ಟೆಯಲ್ಲಿ ಬೀದಿಗೆ ಬಂದಿದೆ.

[ccc_my_favorite_select_button post_id="118288"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ಅಸೆಂಬ್ಲಿ ಚುನಾವಣೆ 2028; 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ NDA ಗೆಲ್ಲುತ್ತೆ ಎಂದ ನಿಖಿಲ್ ಕುಮಾರಸ್ವಾಮಿ

ಅಸೆಂಬ್ಲಿ ಚುನಾವಣೆ 2028; 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ NDA ಗೆಲ್ಲುತ್ತೆ ಎಂದ ನಿಖಿಲ್

ಮುಂದಿನ ರಾಜ್ಯದ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳ ಎನ್ಡಿಎ (NDA) ಮೈತ್ರಿಕೂಟವು 150 ಕ್ಷೇತ್ರಗಳಲ್ಲಿ ಜಯ ಸಾಧಿಸಲಿದೆ. ಆ ನಿಟ್ಟಿನಲ್ಲಿ ಎರಡೂ ಪಕ್ಷಗಳು ಸೇರಿ ಕೆಲಸ ಮಾಡುತ್ತಿದ್ದೇವೆ ಎಂದು ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಹೇಳಿದರು.

[ccc_my_favorite_select_button post_id="118301"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರರಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರರಿಗೆ ಗಂಭೀರ ಗಾಯ

ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತ (Accident) ಸಂಭವಿಸಿ ಬೈಕ್ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ **** ಹಾಗೂ *** ನಡುವೆ ಸಂಭವಿಸಿದೆ.

[ccc_my_favorite_select_button post_id="118304"]

ಆರೋಗ್ಯ

ಸಿನಿಮಾ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

ಹಿರಿಯ ಚಲನಚಿತ್ರ ಕಲಾವಿದರು, ನಿರ್ದೇಶಕರು ನಿರ್ಮಾಪಕ ಪ್ರಕಾಶ್ ರಾಜ್ (Prakash Raj) ಅವರನ್ನು 17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ (Brand Ambassador) ಆಗಿ ನೇಮಿಸಲಾಗಿದೆ.

[ccc_my_favorite_select_button post_id="117722"]
error: Content is protected !!