Bihar for NDA?: Polling booth survey prediction

ಎನ್‌ಡಿಎಗೆ ಬಿಹಾರ ?: ಮತಗಟ್ಟೆ ಸಮೀಕ್ಷೆ ಭವಿಷ್ಯ

ಬೆಂಗಳೂರು: ವೋಟ್ ಚೋರಿ ಆರೋಪ, ನಿರುದ್ಯೋಗ ಸಮಸ್ಯೆ, ಉಚಿತ ಯೋಜನೆಗಳ ಘೋಷಣೆ ಸೇರಿದಂತೆ ತೀವ್ರ ಜಿದ್ದಾಜಿದ್ದಿಯಿಂದ ನಡೆದ ಬಿಹಾರ ವಿಧಾನಸಭಾ ಚುನಾವಣೆ (Bihar election) ನಿನ್ನೆ ಸಂಜೆ 7ಕ್ಕೆ ಎರಡನೇ ಹಂತದ ಮತದಾನ ಅಂತ್ಯಗೊಳ್ಳುವ ಮೂಲಕ ಅಂತ್ಯವಾಗಿದ್ದು ಎಲ್ಲರ ಚಿತ್ತ ಈಗ ಮತ ಎಣಿಕೆಯತ್ತ ನೆಟ್ಟಿದೆ.

ಇದಕ್ಕೂ ಮುನ್ನ ಹಲವು ಸುದ್ದಿ ಸಂಸ್ಥೆಗಳು, ಗೋದಿ ಮೀಡಿಯಾಗಳು ಬಿಹಾರ ವಿಧಾನಸಭೆ ಚುನಾವಣೆಯ ಚುನಾವಣೋತ್ತರ ಮತಗಟ್ಟೆ ಸಮೀಕ್ಷೆಗಳನ್ನು ಬಹಿರಂಗಗೊಳಿಸಿದ್ದು, ಹಲವು ಸಮೀಕ್ಷೆಗಳು ಎನ್‌ಡಿಎಗೆ ಬಹುಮತ ಸಿಗಲಿವೆ ಎಂದು ಅಂದಾಜಿಸಿವೆ.

ದೇಶದ ವಿಶ್ವಾಸಾರ್ಹ ದೈನಿಕ್ ಭಾಸ್ಕರ ಮೀಡಿಯಾ ಸಂಸ್ಥೆ ಬಿಹಾರ ಚುನಾವಣೆಯಲ್ಲಿ ಎನ್‌ಡಿಎಗೆ 145 ರಿಂದ 160 ಹಾಗೂ ಮಹಾಘಟಬಂಧನ್‌ಗೆ 73ರಿಂದ 91 ಸ್ಥಾನಗಳು ಲಭಿಸಲಿವೆ ಎಂದು ಭವಿಷ್ಯ ನುಡಿದಿದೆ.

ಉಳಿದಂತೆ News 24 ಮಹಾಘಟಬಂಧನ್‌ಗೆ 130-144, NDAಗೆ 95-109 ಇತರೆ 0-8 ಸ್ಥಾನ ಸಿಗಬಹುದು ಎಂದಿದೆ.

IANS-Matrize ಸಂಸ್ಥೆಯ ಪ್ರಕಾರ ಎನ್‌ಡಿಎಗೆ 147 ರಿಂದ 167 ಸ್ಥಾನಗಳು ಹಾಗೂ ಮಹಾಘಟಬಂಧನ್‌ಗೆ 70 ರಿಂದ 90 ಸ್ಥಾನಗಳು ಸಿಗಲಿವೆ ಎಂದು ಅಂದಾಜಿಸಿವೆ.

ಡಿವಿ ರಿಸರ್ಚ್ ಪ್ರಕಾರ, ಎನ್‌ಡಿಎ 137-152 ಸ್ಥಾನಗಳೊಂದಿಗೆ ಸರಕಾರ ರಚಿಸುವ ನಿರೀಕ್ಷೆಯಿದೆ. ಮತ್ತೊಂದೆಡೆ, ಮಹಾಘಟಬಂಧನ್ 83-98 ಸ್ಥಾನಗಳನ್ನು ಪಡೆಯುವ ನಿರೀಕ್ಷೆ ಇದೆ. ಜನ್ ಸುರಾಜ್ 2-4 ಸ್ಥಾನಗಳನ್ನು ಮತ್ತು ಇತರರು 1-8 ಸ್ಥಾನಗಳನ್ನು ಪಡೆಯಬಹುದು ಎನ್ನುತ್ತಿದೆ.

ಜೆವಿಸಿಯ ಸಮೀಕ್ಷೆಯ ಪ್ರಕಾರ, ಎನ್‌ಡಿಎ 142 ಸ್ಥಾನಗಳನ್ನು, ಎಂಜಿಬಿ 95 ಮತ್ತು ಜೆಎಸ್‌ಪಿ 1 ಮತ್ತು ಇತರರು 5 ಸ್ಥಾನಗಳನ್ನು ಪಡೆಯಲಿದ್ದಾರೆ ಎಂದು ಊಹಿಸಲಾಗಿದೆ.

ಮ್ಯಾಟ್ರಿಜ್ ಎಕ್ಸಿಟ್ ಪೋಲ್ ಸಮೀಕ್ಷೆಯು ಎನ್‌ಡಿಎಗೆ 147-167 ಸ್ಥಾನಗಳು ಸಿಗುವ ಸುಳಿವು ನೀಡಿದ್ದು, ಇದು ಆರಾಮದಾಯಕ ಬಹುಮತವಾಗಿದೆ. ಮ್ಯಾಟ್ರಿಜ್ ಪ್ರಕಾರ, ಮಹಾಘಟಬಂಧನ್ ಚುನಾವಣೆಯಲ್ಲಿ 70-90 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ.

ರಾಜಕೀಯ

ಕಾಂಗ್ರೆಸ್‌ ಆಡಳಿತದ ಅವಧಿ ಮುಗಿಯುತ್ತಾ ಬಂದಿದೆ: ಆರ್‌.ಅಶೋಕ

ಕಾಂಗ್ರೆಸ್‌ ಆಡಳಿತದ ಅವಧಿ ಮುಗಿಯುತ್ತಾ ಬಂದಿದೆ: ಆರ್‌.ಅಶೋಕ

ಈ ಬಾರಿಯ ಬಜೆಟ್‌ ಅಧಿವೇಶನದಲ್ಲಿ ಸರ್ಕಾರದ ಲೋಪದೋಷಗಳನ್ನು ಚರ್ಚಿಸಲಾಗುವುದು. ರಾಜ್ಯದ ಆರ್ಥಿಕ ದುಸ್ಥಿತಿಯ ವಿರುದ್ಧ ಹೋರಾಟ ಮಾಡಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R.Ashoka) ಹೇಳಿದರು.

[ccc_my_favorite_select_button post_id="119883"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ಗ್ಯಾಸ್ ಗೀಸರ್ (Gas geyser) ಬಳಕೆ ಮಾಡುವವರು ಆದಷ್ಟು ಮುಂಜಾಗ್ರತೆಯ ಕ್ರಮಕೈಗೊಳ್ಳಬೇಕಿದೆ. ಏಕೆಂದರೆ ಪದೇ ಪದೇ ವಿಷಾನಿಲ ಸೋರಿಕೆಯಿಂದ ಸಾವನಪ್ಪುವ ಪ್ರಕರಣಗಳು ವರದಿಯಾಗುತ್ತಿವೆ.

[ccc_my_favorite_select_button post_id="119828"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!