If the sanctity of Chamundeshwari temple is violated, 'Chamundeshwari Chalo'; R. Ashoka

ಆರ್. ಅಶೋಕ ಹೇಳಿಕೆಗೆ ದರ್ಶನ್ ಅಭಿಮಾನಿಗಳ ಪ್ರಶಂಸೆ.. ವಿಡಿಯೋ ವೈರಲ್

ಬೆಂಗಳೂರು: ಅಶ್ಲೀಲ ಸಂದೇಶ ಕಳಿಸಿದ ವ್ಯಕ್ತಿಯೋರ್ವನ ಹತ್ಯೆ ಆರೋಪದಡಿಯಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ (Actor Darshan) ವಿರುದ್ಧ ಷಡ್ಯಂತ್ರ ನಡೆಸಲಾಗುತ್ತಿದೆ ಎಂಬ ಆರೋಪ ಅವರ ಸೆಲೆಬ್ರಿಟಿಗಳದ್ದಾಗಿದೆ (ಅಭಿಮಾನಿಗಳು)

ಸುಪ್ರೀಂ ಕೋರ್ಟ್ ಆದೇಶ ಬಳಿಕ, ಬಟ್ಟೆ, ಹಾಸಿಗೆಗೂ ದರ್ಶನ್ ಅವರು ನ್ಯಾಯಾಲಯದ ಮೊರೆ ಹೊಗಬೇಕಾದ ಅನಿವಾರ್ಯತೆ ಎದುರಾಗಿದೆ. ಆದರೆ ಈ ಬೆನ್ನಲ್ಲೇ ಪರಪ್ಪನ ಅಗ್ರಹಾರ ಜೈಲಿನಲ್ಲಿ ಭಯೋತ್ಪಾದಕ ಸೇರಿದಂತೆ ಪುಡಿ ರೌಡಿಗಳಿಗೆ ರಾಜಾತಿಥ್ಯ ನೀಡಿ, ಮೊಬೈಲ್‌ ಬಳಸಿದ ಪ್ರಕರಣ ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಮುಜುಗರಕ್ಕೆ ತಂದಿದ್ದು, ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.

ಈ ಪ್ರಕರಣದ ಕುರಿತು ವಿರೋಧ ಪಕ್ಷದ ನಾಯಕ ಆರ್. ಅಶೋಕ ಅವರು ಆಡಿರುವ ಆಡಿರುವ ಮಾತು ದರ್ಶನ್ ಅಭಿಮಾನಿಗಳಲ್ಲಿ ಮೆಚ್ಚಿಗೆಗೆ ಕಾರಣವಾಗಿದ್ದು, ಅಶೋಕ ಅವರು ಮಾಧ್ಯಮಗಳೊಂದಿಗೆ ಮಾತನಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ವ್ಯಾಪಕ ಪ್ರಶಂಸೆ ಪಡೆದಿದೆ.

ಈ ವಿಡಿಯೋದಲ್ಲಿ ನಟ ದರ್ಶನ್‌ ಸಿಗರೇಟು ಸೇದಿದ್ದಕ್ಕೆ ಸುಪ್ರೀಂ ಕೋರ್ಟ್‌ ವರೆಗೂ ಹೊರಟೋದ್ರಲ್ಲ ನೀವು (ರಾಜ್ಯ ಸರ್ಕಾರ). ಕಾಂಗ್ರೆಸ್ ಪಕ್ಷದವರು ಸುಪ್ರೀಂ ಕೋರ್ಟ್ ವರೆಗೂ. ಆದರೆ ಭಯೋತ್ಪಾದಕರ ವಿರುದ್ಧ ಯಾವ ರೀತಿಯ ಕಠಿಣ ಕ್ರಮ ಕೈಗೊಳ್ಳುತ್ತಾರೆ ಎಂದು ತಿಳಿಸಲಿ.

ಇದು ಕಾಂಗ್ರೆಸ್‌ ಪ್ರಾಯೋಜಿತವಾದ ಕೃತ್ಯ. ಮುಸ್ಲಿಮರ ವಿರುದ್ಧ ಮೃದುವಾದ ಧೋರಣೆಯಿಂದಾಗಿ ಹೀಗೆಲ್ಲ ಆಗುತ್ತಿದೆ. ಇದು ಇಡೀ ಕರ್ನಾಟಕಕ್ಕೆ ಕೆಟ್ಟ ಹೆಸರು ತಂದಿದೆ. ಬಿಹಾರದಲ್ಲೂ ಇಂತಹ ಪರಿಸ್ಥಿತಿ ಇಲ್ಲ ಎಂದಿದ್ದಾರೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿ ಭಯೋತ್ಪಾದಕ ಮೊಬೈಲ್‌ ಬಳಸಿದ ಪ್ರಕರಣವನ್ನು ಎನ್‌ಐಎ ತನಿಖೆಗೆ ನೀಡಬೇಕು

ಪರಪ್ಪನ ಅಗ್ರಹಾರ ಜೈಲಿನಲ್ಲಿ ಭಯೋತ್ಪಾದಕ ಮೊಬೈಲ್‌ ಬಳಸಿದ ಪ್ರಕರಣವನ್ನು ಎನ್‌ಐಎ ತನಿಖೆಗೆ ನೀಡಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R.Asoka) ಆಗ್ರಹಿಸಿದರು.

ನವದೆಹಲಿಯಲ್ಲಿ ನಡೆದ ಘಟನೆ ಭಯೋತ್ಪಾದನಾ ಕೃತ್ಯ ಎಂಬ ಅನುಮಾನವಿದೆ. ಇದೇ ಸಮಯದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ಒಬ್ಬ ಭಯೋತ್ಪಾದಕ ಮೊಬೈಲ್‌ ಬಳಸಿರುವ ಘಟನೆ ಬೆಳಕಿಗೆ ಬಂದಿದೆ. ಈ ಬಗ್ಗೆ ಹೆಚ್ಚು ತನಿಖೆ ಮಾಡಿದರೆ ಹೊಸ ವಿಚಾರಗಳು ಗೊತ್ತಾಗುತ್ತದೆ. ಇದು ದೇಶದ ಭದ್ರತೆಗೆ ಸಂಬಂಧಿಸಿದ ವಿಷಯವಾಗಿರುವುದರಿಂದ ಇದನ್ನು ಎನ್‌ಐಎ ತನಿಖೆಗೆ ವಹಿಸಬೇಕು ಎಂದು ಆಗ್ರಹಿಸಿದರು.

ಡಾಕ್ಟರ್‌ಗಳು ಸೇರಿದಂತೆ ಹೆಚ್ಚು ಶಿಕ್ಷಣ ಪಡೆದ ಮುಸ್ಲಿಮರೇ ಭಯೋತ್ಪಾದಕರಾಗಿ ಬದಲಾಗುತ್ತಿದ್ದಾರೆ. ಆದ್ದರಿಂದ ಕಾಂಗ್ರೆಸ್‌ ಈ ಬಗ್ಗೆ ಹೆಚ್ಚು ಎಚ್ಚರ ವಹಿಸಬೇಕಿದೆ. ಅಧಿಕಾರಕ್ಕೆ ಬರಲು ಓಲೈಕೆ ಮಾಡುವುದರಿಂದ ಹೀಗೆಲ್ಲ ಆಗುತ್ತಿದೆ.

ಪರಪ್ಪನ ಅಗ್ರಹಾರದಲ್ಲೂ ಕಾಂಗ್ರೆಸ್‌ನ ತಪ್ಪಿನಿಂದಲೇ ಉಗ್ರವಾದಿಗಳು ಮೊಬೈಲ್‌ ಬಳಸುವಂತಾಗಿದೆ. ಇಂತಹ ವಿಫಲತೆಯನ್ನು ಒಪ್ಪಿಕೊಂಡು ಕಾಂಗ್ರೆಸ್‌ ನಾಯಕರು ರಾಜೀನಾಮೆ ನೀಡಬೇಕು ಎಂದರು.

ಇದು ಮನಮೋಹನ್‌ ಸಿಂಗ್‌ ಸರ್ಕಾರವಲ್ಲ. ಪ್ರಧಾನಿ ನರೇಂದ್ರ ಮೋದಿ ಸರ್ಕಾರದಲ್ಲಿ ಭಯೋತ್ಪಾದಕರಿಗೆ ಯಾವುದೇ ವಿನಾಯಿತಿ ನೀಡುವುದಿಲ್ಲ ಎಂಬುದು ಇಡೀ ಜಗತ್ತಿಗೆ ತಿಳಿದಿದೆ. ಈ ಘಟನೆಯ ವಿರುದ್ಧವೂ ಕೇಂದ್ರ ಸರ್ಕಾರ ಕಠಿಣ ಕ್ರಮ ವಹಿಸಲಿದೆ.

ಕಾಂಗ್ರೆಸ್‌ ಇದ್ದಾಗ ನಕ್ಸಲ್‌ ಚಟುವಟಿಕೆ ಅಧಿಕವಾಗಿತ್ತು. ಅದನ್ನು ಗೃಹ ಸಚಿವ ಅಮಿತ್‌ ಶಾ ಬಹುತೇಕ ನಿರ್ಮೂಲನೆ ಮಾಡಿದ್ದಾರೆ. ಅದೇ ರೀತಿ ಭಯೋತ್ಪಾದನೆ ಕೂಡ ನಿರ್ಮೂಲನೆಯಾಗಲಿದೆ ಎಂದರು.

ರಾಜ್ಯ ಸರ್ಕಾರ ಕೇವಲ ಸುತ್ತೋಲೆ ಹೊರಡಿಸಿದರೆ ಸಾಲದು. ಗೃಹಸಚಿವರು ಹಾಗೂ ಪೊಲೀಸರು ಸಾರ್ವಜನಿಕ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಬೇಕು. ಜನರಲ್ಲಿ ವಿಶ್ವಾಸ ತುಂಬಬೇಕು. ಸಾಧ್ಯವಾದಷ್ಟು ಬಿಗಿ ಭದ್ರತೆಗೆ ಕ್ರಮ ಕೈಗೊಳ್ಳಬೇಕು. ಕಾಂಗ್ರೆಸ್‌ ಮೇಲೆ ಜನರಿಗೆ ನಂಬಿಕೆ ಇಲ್ಲ. ಪಾಕಿಸ್ತಾನವನ್ನು ಕಾಂಗ್ರೆಸ್‌ ಪ್ರೀತಿಸುತ್ತದೆ ಎಂಬುದು ಎಲ್ಲರಿಗೂ ಗೊತ್ತಿದೆ ಎಂದರು.

ರಾಜ್ಯದಲ್ಲಿ ಕಾಂಗ್ರೆಸ್‌ ಐಸಿಯುನಲ್ಲಿದೆ. ಯಾರು ಮುಖ್ಯಮಂತ್ರಿ ಎಂಬುದೇ ತಿಳಿದಿಲ್ಲ. ಶಾಸಕರಿಗೂ ಏನೂ ತಿಳಿಯುತ್ತಿಲ್ಲ. ಹೈಕಮಾಂಡ್‌ಗೆ ಇಕ್ಕಟ್ಟಿನ ಸ್ಥಿತಿ ಉಂಟಾಗಿದೆ. ಬಿಜೆಪಿಯಿಂದ ಜಿಬಿಎ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

ಆದರೀಗ ವಿಧಾನಸಭಾ ಚುನಾವಣೆ ನಡೆಯುವ ಸ್ಥಿತಿ ಬಂದಿದೆ. ಯಾವ ಚುನಾವಣೆ ಮೊದಲು ಬರಲಿದೆ ಎಂದು ಗೊತ್ತಾಗುತ್ತಿಲ್ಲ.

ಡಿ.ಕೆ.ಶಿವಕುಮಾರ್‌ ಹಾಗೂ ಸಿದ್ದರಾಮಯ್ಯ ಇಬ್ಬರೂ ರೆಬಲ್‌ ಆಗಿದ್ದಾರೆ. ಬಿಜೆಪಿಯಿಂದ ಪಕ್ಷಾಂತರ ಮಾಡುವ ಸನ್ನಿವೇಶವೇ ಇಲ್ಲ. ನಾವೆಲ್ಲರೂ ಚುನಾವಣೆಯನ್ನು ಬಯುಸುತ್ತೇವೆ ಎಂದರು.

ರಾಜಕೀಯ

ರಾಜಘಟ್ಟದಲ್ಲಿ ಬೀದಿಗೆ ಬಂದ ಜೆಡಿಎಸ್ ಮುಖಂಡರ ಒಳಜಗಳ..!

ರಾಜಘಟ್ಟದಲ್ಲಿ ಬೀದಿಗೆ ಬಂದ ಜೆಡಿಎಸ್ ಮುಖಂಡರ ಒಳಜಗಳ..!

ಜೆಡಿಎಸ್ (JDS) ಮುಖಂಡರ ಒಳಜಗಳ ರಾಜಘಟ್ಟ ಆಂಜನೇಯಸ್ವಾಮಿ ದೇವಸ್ಥಾನದ ಸಮೀಪದಲ್ಲಿನ ಅರಳಿಕಟ್ಟೆಯಲ್ಲಿ ಬೀದಿಗೆ ಬಂದಿದೆ.

[ccc_my_favorite_select_button post_id="118288"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ಅಸೆಂಬ್ಲಿ ಚುನಾವಣೆ 2028; 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ NDA ಗೆಲ್ಲುತ್ತೆ ಎಂದ ನಿಖಿಲ್ ಕುಮಾರಸ್ವಾಮಿ

ಅಸೆಂಬ್ಲಿ ಚುನಾವಣೆ 2028; 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ NDA ಗೆಲ್ಲುತ್ತೆ ಎಂದ ನಿಖಿಲ್

ಮುಂದಿನ ರಾಜ್ಯದ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳ ಎನ್ಡಿಎ (NDA) ಮೈತ್ರಿಕೂಟವು 150 ಕ್ಷೇತ್ರಗಳಲ್ಲಿ ಜಯ ಸಾಧಿಸಲಿದೆ. ಆ ನಿಟ್ಟಿನಲ್ಲಿ ಎರಡೂ ಪಕ್ಷಗಳು ಸೇರಿ ಕೆಲಸ ಮಾಡುತ್ತಿದ್ದೇವೆ ಎಂದು ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಹೇಳಿದರು.

[ccc_my_favorite_select_button post_id="118301"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರರಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರರಿಗೆ ಗಂಭೀರ ಗಾಯ

ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತ (Accident) ಸಂಭವಿಸಿ ಬೈಕ್ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ **** ಹಾಗೂ *** ನಡುವೆ ಸಂಭವಿಸಿದೆ.

[ccc_my_favorite_select_button post_id="118304"]

ಆರೋಗ್ಯ

ಸಿನಿಮಾ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

ಹಿರಿಯ ಚಲನಚಿತ್ರ ಕಲಾವಿದರು, ನಿರ್ದೇಶಕರು ನಿರ್ಮಾಪಕ ಪ್ರಕಾಶ್ ರಾಜ್ (Prakash Raj) ಅವರನ್ನು 17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ (Brand Ambassador) ಆಗಿ ನೇಮಿಸಲಾಗಿದೆ.

[ccc_my_favorite_select_button post_id="117722"]
error: Content is protected !!