Reading Kannada dailies improves Kannada language skills; Senior journalist Nagasandra Nataraj

ಕನ್ನಡ ದಿನಪತ್ರಿಕೆಗಳ ಓದುವುದರಿಂದ ಕನ್ನಡ ಭಾಷಾ ಸಾಮಾರ್ಥ್ಯ ಹೆಚ್ಚಳ; ಹಿರಿಯ ಪತ್ರಕರ್ತ ನಾಗಸಂದ್ರ ನಟರಾಜ್

ದೊಡ್ಡಬಳ್ಳಾಪುರ: ಕನ್ನಡ ದಿನಪತ್ರಿಕೆಗಳ ಓದುವ ಹವ್ಯಾಸದಿಂದ ಕನ್ನಡ ಭಾಷಾ ಸಾಮಾರ್ಥ್ಯ ಹೆಚ್ಚಿಸುವುದರೊಂದಿಗೆ ವ್ಯಕ್ತಿತ್ವ ವಿಕಸನಕ್ಕೂ ಸಹಕಾರಿ ಆಗುತ್ತದೆ ಎಂದು ಅನಿಕೇತನ ಟ್ರಸ್ಟ್‌ ಕಾರ್ಯದರ್ಶಿ, ಹಿರಿಯ ಪತ್ರಕರ್ತ ನಾಗಸಂದ್ರ ನಟರಾಜ್ (Senior journalist Nagasandra Nataraj) ತಿಳಿಸಿದರು. 

ದೊಡ್ಡಬಳ್ಳಾಪುರ ನಗರದ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಕನ್ನಡ ಜಾಗೃತ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕನ್ನಡ ಜಾಗೃತ ಸಮಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ  ಸಾಹಿತ್ಯ ವಿಜ್ಞಾನ ಸಂಸ್ಕೃತಿ ಸಮಾಗಮ 2025 ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. 

ಭಾರತದ ಕ್ಷಿಪಣಿ ಮನುಷ್ಯ ಮತ್ತು ಮಾಜಿ ರಾಷ್ಟ್ರಪತಿ ಡಾ.ಅಬ್ದುಲ್ ಕಲಾಂ ಅವರಿಗೆ ದಿನಪತ್ರಿಕೆಗಳ ಓದು ಅವರು‌ ಉನ್ನತ ಸಾಧನೆ ಮಾಡಲು ಸಾಧ್ಯವಾಯಿತು.  ದಿನಪತ್ರಿಕೆಗಳನ್ನು  ಹಂಚಿ ಉಳಿದ ಐದಾರು ದಿನಪತ್ರಿಕೆಗಳನ್ನು ಅಬ್ದುಲ್ ಕಲಾಂ ಓದುತ್ತಿದ್ದರು. ಅದು ಅವರ ಜ್ಞಾನದ ವಿಕಾಸಕ್ಕೆ ಅಡಿಪಾಯವಾಯಿತು ಎಂದರು.

ವಿದ್ಯಾರ್ಥಿಗಳು ವಿದ್ಯಾಭ್ಯಾಸದೊಂದಿಗೆ ದಿನಪತ್ರಿಕೆಗಳನ್ನು‌ ಓದುವ ಹವ್ಯಾಸ ರೂಢಿಕೊಳ್ಳಬೇಕು. ಪತ್ರಿಕೆಗಳ ಭಾಷೆ ಸರಳವಾಗಿರುತ್ತದೆ. ವಿಷಯಗಳ ನಿಖರತೆ ಇರುತ್ತದೆ. ಓದುವ ಹವ್ಯಾಸ ನೆನಪಿನ ಶಕ್ತಿಯನ್ನು ಹೆಚ್ಚಿಸುತ್ತದೆ. ಸಾಮಾನ್ಯ ಜ್ಞಾನದೊಂದಿಗೆ ಲೋಕ ಜ್ಞಾನವು ಪಡೆಯುವ ಮೂಲಕ ವ್ಯಕ್ತಿತ್ವದ  ಸರ್ವಾಂಗೀಣ ಬೆಳೆವಣಿಗೆಗೆ ಅನುಕೂಲವಾಗುತ್ತದೆ.

ಕನ್ನಡ ದಿನಪತ್ರಿಕೆ ಓದುವುದರಿಂದ ಪ್ರಚಲಿತ ವಿದ್ಯಮಾನಗಳ ಬಗ್ಗೆ ಮಾಹಿತಿ ಪಡೆಯಬಹುದು, ಸಾಮಾನ್ಯ ಜ್ಞಾನ ಹೆಚ್ಚಿಸಬಹುದು, ಮತ್ತು ವಿಮರ್ಶಾತ್ಮಕ ಚಿಂತನೆಯನ್ನು ಬೆಳೆಸಿಕೊಳ್ಳಬಹುದು ಎಂದರು.

ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ಸಂಸ್ಥಾಪಕ ಅಧ್ಯಕ್ಷ. ಡಾ.ಹುಲಿಕಲ್ ನಟರಾಜು ಮಾತನಾಡಿ, ಇಂದು ವಿಜ್ಞಾನ ಸಾಕಷ್ಟು ಬೆಳೆದಿದೆ. ಆದರೆ ಮಾನವೀಯತೆ ಬೆಳೆಯಬೇಕಾಗಿದೆ.    ಮಾನವೀಯ ಸಂವಹನವನ್ನು ವಿಜ್ಞಾನ ಬೆಳೆಸದಿದ್ದರೆ ಅದಕ್ಕೆ ಬೆಲೆ ಇಲ್ಲದಾಗುತ್ತದೆ.

ವಿದ್ಯಾರ್ಥಿಗಳು ಸಕಾರಾತ್ಮಕವಾದ  ಚಿಂತನೆಗಳನ್ನು ಬೆಳೆಸಿಕೊಳ್ಳಬೇಕು. ಆಲೋಚನೆ, ಚಿಂತನೆ, ಪ್ರಶ್ನೆ ಮಾಡುವ ಮನೋಭಾವದಿಂದ ವ್ಯಕ್ತಿತ್ವ ವಿಕಸನವಾಗುತ್ತದೆ. ಪ್ರತಿಯೊಬ್ಬ ವ್ಯಕ್ತಿಯಲ್ಕೂ ಅಗಾಧವಾದ ಚೈತನ್ಯ, ನೈಪುಣ್ಯ ಇರುತ್ತದೆ. ಅದನ್ನು ಸಕಾಲದಲಿ ಸದ್ಬಳಕೆ ಮಾಡಿಕೊಳ್ಳಬೇಕು. ಮೌಢ್ಯತೆಯಿಂದ ದೂರ ಉಳಿಯಬೇಕಾದವರು ಪಂಚಾಂಗ ನೋಡುವುದನ್ನು ಬಿಟ್ಟು, ಪಂಚ ಅಂಗಗಳ ಕಡೆಗೆ ಗಮನ‌ಕೊಡಬೇಕೆಂದರು.
ಎಂದರು.

ಕಾರ್ಯಕ್ರಮದಲ್ಲಿ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಉಪಪ್ರಾಂಶುಪಾಲರಾದ  ಡಾ.ಎಚ್.ಎಸ್.ದಾಕ್ಷಾಯಿಣಿ, ಹಿರಿಯ ಶಿಕ್ಷಕರಾದ ಪೂರ್ಣಿಮ, ನಾಗಭೂಷಣ್, ಚಿಕ್ಕೇಗೌಡ,  ಎನ್.ಆನಂದಮ್ಮ, ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ಸಂಘ ಸಂಸ್ಥೆಗಳ ಪದಾಧಿಕಾರಿಗಳಾದ ಎ.ಜಯರಾಮ್, ವಿ.ಎಸ್.ಹೆಗಡೆ, ವೆಂಕಟರಾಜು,  ಡಿ.ಪಿ.ಆಂಜನೇಯ, ಮಂಜುನಾಥ್ ಬಾಶೆಟ್ಟಿಹಳ್ಳಿ, ದರ್ಗಾಜೋಗಿಹಳ್ಳಿ ಮಲ್ಲೇಶ್, ಸೆಲ್ವರಾಜ್ ಮುಂತಾದವರು ಭಾಗವಹಿಸಿದ್ದರು.

ರಾಜಕೀಯ

ದೆಹಲಿ ಬಾಂಬ್ ಸ್ಪೋಟವನ್ನು ಬಿಹಾರ ಚುನಾವಣೆಯನ್ನು ಜೋಡಿಸುವ ಷಡ್ಯಂತ್ರ: ಬಿ.ವೈ. ವಿಜಯೇಂದ್ರ ಟೀಕೆ

ದೆಹಲಿ ಬಾಂಬ್ ಸ್ಪೋಟವನ್ನು ಬಿಹಾರ ಚುನಾವಣೆಯನ್ನು ಜೋಡಿಸುವ ಷಡ್ಯಂತ್ರ: ಬಿ.ವೈ. ವಿಜಯೇಂದ್ರ ಟೀಕೆ

ಬಾಂಬ್ ಸ್ಫೋಟದಂಥ ಸಂದಿಗ್ಧ ಸಂದರ್ಭದಲ್ಲಿ ಎಲ್ಲ ರಾಜಕೀಯ ಪಕ್ಷಗಳು ಒಟ್ಟಾಗಿ ಒಂದೇ ಧ್ವನಿಯಲ್ಲಿ ಮಾತನಾಡಬೇಕಾಗುತ್ತದೆ ಎಂದು ಬಿಜೆಪಿ (BJP) ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ( B.Y. Vijayendra) ತಿಳಿಸಿದ್ದಾರೆ.

[ccc_my_favorite_select_button post_id="116125"]
ಮಾನವ-ವನ್ಯಪ್ರಾಣಿ ಸಂಘರ್ಷ ತಪ್ಪಿಸಲು ದ್ರೋಣ್ ಕ್ಯಾಮರಾಗಳ ನಿಗಾಗೆ ಸಿಎಂ ಸೂಚನೆ

ಮಾನವ-ವನ್ಯಪ್ರಾಣಿ ಸಂಘರ್ಷ ತಪ್ಪಿಸಲು ದ್ರೋಣ್ ಕ್ಯಾಮರಾಗಳ ನಿಗಾಗೆ ಸಿಎಂ ಸೂಚನೆ

ಮಾನವ-ವನ್ಯಪ್ರಾಣಿ ಸಂಘರ್ಷ ತಪ್ಪಿಸಲು ದ್ರೋಣ್ ಕ್ಯಾಮರಾಗಳ ನಿಗಾ ಹೆಚ್ಚಿಸಿ, ಕೃಪಾಕರ ಸೇನಾನಿ-ಸಂಜಯ್ ಗುಬ್ಬಿ ಸೇರಿದಂತೆ ತಜ್ಞರ ಜೊತೆ ಚರ್ಚಿಸಿ ವೈಜ್ಞಾನಿಕ ಮಾರ್ಗಗಳನ್ನು ರೂಪಿಸಿ ಎನ್ನುವ ಸೂಚನೆಗಳನ್ನು ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು

[ccc_my_favorite_select_button post_id="116144"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೆಹಲಿ ಕಾರು ಸ್ಫೋಟ: ಕೇಂದ್ರದ ವಿರುದ್ಧ ಆರೋಪ ಮಾಡೋ ಸಮಯ ಇದಲ್ಲ- ಡಿಸಿಎಂ ಡಿ.ಕೆ. ಶಿವಕುಮಾರ್

ದೆಹಲಿ ಕಾರು ಸ್ಫೋಟ: ಕೇಂದ್ರದ ವಿರುದ್ಧ ಆರೋಪ ಮಾಡೋ ಸಮಯ ಇದಲ್ಲ- ಡಿಸಿಎಂ

“ದೆಹಲಿಯಲ್ಲಿ ನಡೆದಿರುವ ಕಾರು ಸ್ಫೋಟ ಘಟನೆಯನ್ನು ಕಾಂಗ್ರೆಸ್ ಪಕ್ಷ ಖಂಡಿಸುತ್ತದೆ. ದೇಶದ ಐಕ್ಯತೆ, ಸಮಗ್ರತೆ, ಶಾಂತಿ ರಕ್ಷಣೆಗೆ ನಾವು ಉಗ್ರ ಚಟುವಟಿಕೆಗಳ ವಿರುದ್ದ ಬಹಳ ಜಾಗರೂಕರಾಗಿ ಇರಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K.

[ccc_my_favorite_select_button post_id="116009"]
ದೊಡ್ಡಬಳ್ಳಾಪುರ: ನಾಡ ಬಾಂಬ್ ಸ್ಪೋಟ.. ಮಹಿಳೆಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ನಾಡ ಬಾಂಬ್ ಸ್ಪೋಟ.. ಮಹಿಳೆಗೆ ಗಂಭೀರ ಪೆಟ್ಟು..!

ಕಾಡು ಹಂದಿಯ ಬೇಟೆಯಾಡಲು ಅರಣ್ಯ ಪ್ರದೇಶದಲ್ಲಿ ಇಡಲಾಗಿದ್ದ ನಾಡ ಬಾಂಬ್ ಸ್ಪೋಟಿಸಿ (Nada bomb blast) ಮಹಿಳೆಗೆ ಗಂಭೀರ ಪೆಟ್ಟಾಗಿರುವ ಘಟನೆ ತಾಲೂಕಿನ

[ccc_my_favorite_select_button post_id="116061"]
KSRTC ಬಸ್‌ನಿಂದ ಬಿದ್ದು ಯುವತಿ ಸಾವು.. ಕುಟುಂಬಕ್ಕೆ ಪರಿಹಾರ

KSRTC ಬಸ್‌ನಿಂದ ಬಿದ್ದು ಯುವತಿ ಸಾವು.. ಕುಟುಂಬಕ್ಕೆ ಪರಿಹಾರ

ಬಸ್‌ನಲ್ಲಿ ಪಯಣಿಸುತ್ತಿದ್ದ ಭದ್ರಾವತಿ ತಾಲೂಕು ಬೈಪಾಸ್ ರಸ್ತೆ, ಹಳೇ ಭಂಡಾರಹಳ್ಳಿ ಗ್ರಾಮ ವಾಸಿ ಹೇಮಾವತಿ ಎಂಬ 19 ವರ್ಷದ ಯುವತಿಯು KSRTC ಬಸ್‌ನಿಂದ ಕೆಳಗೆ ಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿರುತ್ತಾರೆ.

[ccc_my_favorite_select_button post_id="116039"]

ಆರೋಗ್ಯ

ಸಿನಿಮಾ

ತಿಥಿ ಸಿನಿಮಾ ಖ್ಯಾತಿಯ ಗಡ್ಡಪ್ಪ ಇನ್ನಿಲ್ಲ

ತಿಥಿ ಸಿನಿಮಾ ಖ್ಯಾತಿಯ ಗಡ್ಡಪ್ಪ ಇನ್ನಿಲ್ಲ

ತಿಥಿ ಸಿನಿಮಾದ ಖ್ಯಾತಿಯ ಗಡ್ಡಪ್ಪ (Gaddappa) ಅಲಿಯಾಸ್‌ ಚನ್ನೇಗೌಡ ವಿಧಿವಶರಾಗಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು.

[ccc_my_favorite_select_button post_id="116057"]
error: Content is protected !!