Karave tribute to the Saalu Marada Thimmakka in Doddaballapura

ವೃಕ್ಷ ಮಾತೆಗೆ ದೊಡ್ಡಬಳ್ಳಾಪುರದಲ್ಲಿ ಗಿಡಗಳನ್ನು ವಿತರಿಸಿ ಕರವೇ ಪ್ರವೀಣ್ ಕುಮಾರ್ ಶೆಟ್ಟಿ ಬಣ ಶ್ರದ್ಧಾಂಜಲಿ

ದೊಡ್ಡಬಳ್ಳಾಪುರ: ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಕುಮಾರ್ ಶೆಟ್ಟಿ ಬಳಗ ವತಿಯಿಂದ ನಿನ್ನೆ ಇಹಲೋಕವನ್ನು ತ್ಯಜಿಸಿದ ವೃಕ್ಷ ಮಾತೆ ಸಾಲಮರದ ತಿಮ್ಮಕ್ಕ (Salumarada timmakka) ಅವರಿಗೆ ದೊಡ್ಡಬಳ್ಳಾಪುರದ ಡಿ ಕ್ರಾಸದ ಸಮೀಪದ ಡಾ.ರಾಜಕುಮಾರ್ ವೃತ್ತದ ಬಳಿ ಗಿಡಗಳನ್ನು ನೀಡುವ ಮೂಲಕ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಈ ವೇಳೆ ಮಾತನಾಡಿದ ಕರವೇ ಪ್ರವೀಣ್ ಕುಮಾರ್ ಶೆಟ್ಟಿ ಬಣದ ತಾಲೂಕು ಅಧ್ಯಕ್ಷ ಹಮಾಮ್ ವೆಂಕಟೇಶ್, “ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ ಅವರ ನಿಧನಕ್ಕೆ ಕರವೇ ಪ್ರವೀಣ್ ಕುಮಾರ್ ಶೆಟ್ಟಿ ಬಣದಿಂದ ಗಿಡಗಳನ್ನು ನೀಡಿ ಸಂತಾಪ ವ್ಯಕ್ತಪಡಿಸಲಾಗುತ್ತಿದ್ದು, ಈ ಮೂಲಕ ತಿಮ್ಮಕ್ಕ ಅವರ ಮಹಾನ್ ವ್ಯಕ್ತಿತ್ವ ಸಾರುವ ಸಣ್ಣ ಪ್ರಯತ್ನ ಮಾಡಲಾಗುತ್ತಿದೆ ಎಂದರು.”

ಮರಗಳನ್ನೇ ಸ್ವಂತ ಮಕ್ಕಳೆಂದು ಬೆಳೆಸಿ ನೀರುಣಿಸಿದ ವೃಕ್ಷಮಾತೆ ನಮ್ಮನ್ನೆಲ್ಲಾ ಅಗಲಿ ಹೋಗಿದ್ದಾರೆ. ಇಡೀ ಪರಿಸರವೇ ದುಃಖದಲ್ಲಿ ಇರುವಂತೆ ನಮಗೆ ಭಾಸವಾಗುತ್ತಿದೆ. “ಕೊಟ್ಟು ಹೋಗಬೇಕು ಅಥವಾ ಬಿಟ್ಟು ಹೋಗಬೇಕು” ಎನ್ನುವ ಮಾತಿದೆ. ಆ ಮಾತಿಗೆ ಅನ್ವಯದಂತೆ ಬದುಕಿದ ಮಹಾನ್ ತಾಯಿಗೆ ನಾವುಗಳು ಶಿರಬಾಗಿಸಿ ನಮಿಸುತ್ತೇವೆ. 114 ವರ್ಷಗಳ ತುಂಬು ಜೀವನ ನಡೆಸಿ ಹೊರಟಿದ್ದಾರೆ.

ಅವರು ಬೆಳೆಸಿದ ಮರಗಳು ಸೇರಿದಂತೆ ನಮ್ಮೆಲ್ಲರಲ್ಲಿ ಅವರು ಮೂಡಿಸಿದ ಜಾಗೃತಿ ಸದಾ ಜೀವಂತವಾಗಿರಲಿದೆ. ತಿಮ್ಮಕ್ಕ ಅವರು ಕರ್ನಾಟಕದ ಹಾಗೂ ಇಡೀ ಭಾರತದ ಹೆಮ್ಮೆ. ರಸ್ತೆ ಬದಿಯಲ್ಲಿ ಕಿಲೋಮೀಟರ್ ಗಟ್ಟಲೇ ಗಿಡಗಳನ್ನು ನೆಟ್ಟು ನಿತ್ಯ ನೀರು ಹಾಕಿ ಮರಗಳಾಗುವಂತೆ ಬೆಳೆಸಿದ್ದರು. ಮಕ್ಕಳಂತೆ ನೋಡಿಕೊಂಡಿದ್ದರು.

ಬೆಂಗಳೂರು ದಕ್ಷಿಣ ಜಿಲ್ಲೆಯ ಹುಲಿಕಲ್ ಮತ್ತು ಕುದೂರು ನಡುವೆ 4.5 ಕಿಲೋಮೀಟರ್ ಹೆದ್ದಾರಿಯ ಉದ್ದಕ್ಕೂ 385 ಆಲದ ಮರಗಳನ್ನು ನೆಟ್ಟು ಬೆಳೆಸಿದ್ದರು. ಆ ದಾರಿಯಲ್ಲಿ ಹೋದಾಗಲೆಲ್ಲಾ ಅವರೇ ನೆನಪಾಗುತ್ತಿದ್ದರು. ಈವರೆಗೆ 8,000ಕ್ಕೂ ಹೆಚ್ಚು ಮರಗಳನ್ನು ನೆಟ್ಟು ಬೆಳೆಸಿದ್ದಾರೆ. ಹೊಸ ಪೀಳಿಗೆಗೆ ಮಾದರಿಯನ್ನು ಬಿಟ್ಟು ಹೋಗಿದ್ದಾರೆ ಎಂದು ಸ್ಮರಿಸಿದರು.

ಈ ಸಂದರ್ಭದಲ್ಲಿ ಉಪಾಧ್ಯಕ್ಷ ಜೋಗಳ್ಳಿ ಅಮ್ಮು, ಖಜಾಂಚಿ ಆನಂದ್, ಕಾರ್ಯದರ್ಶಿ ಮುಖೇನಳ್ಳಿ ರವಿ, ನಗರ ಉಪಾಧ್ಯಕ್ಷ ಮಂಜುನಾಥ್, ಸೂರಿ, ರಾಮು ಮಡಿವಾಳ, ಹಮಾಮ್ ಮಂಜುನಾಥ್, ಕೊಡಳ್ಳಿ ಶಾಖೆಯ ಅಧ್ಯಕ್ಷ ರವಿ, ಉಪಾಧ್ಯಕ್ಷ ಮುನೀಂದ್ರ, ಕಾರ್ಯದರ್ಶಿ ಶಶಿಕುಮಾರ್, ದಾದಾಪೀರ್, ನೂರಲ್ಲ, ಚಿಕ್ಕಣ್ಣ ಉಪಸ್ಥಿತರಿದ್ದರು

ರಾಜಕೀಯ

ಕಾಂಗ್ರೆಸ್‌ ಆಡಳಿತದ ಅವಧಿ ಮುಗಿಯುತ್ತಾ ಬಂದಿದೆ: ಆರ್‌.ಅಶೋಕ

ಕಾಂಗ್ರೆಸ್‌ ಆಡಳಿತದ ಅವಧಿ ಮುಗಿಯುತ್ತಾ ಬಂದಿದೆ: ಆರ್‌.ಅಶೋಕ

ಈ ಬಾರಿಯ ಬಜೆಟ್‌ ಅಧಿವೇಶನದಲ್ಲಿ ಸರ್ಕಾರದ ಲೋಪದೋಷಗಳನ್ನು ಚರ್ಚಿಸಲಾಗುವುದು. ರಾಜ್ಯದ ಆರ್ಥಿಕ ದುಸ್ಥಿತಿಯ ವಿರುದ್ಧ ಹೋರಾಟ ಮಾಡಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R.Ashoka) ಹೇಳಿದರು.

[ccc_my_favorite_select_button post_id="119883"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ಗ್ಯಾಸ್ ಗೀಸರ್ (Gas geyser) ಬಳಕೆ ಮಾಡುವವರು ಆದಷ್ಟು ಮುಂಜಾಗ್ರತೆಯ ಕ್ರಮಕೈಗೊಳ್ಳಬೇಕಿದೆ. ಏಕೆಂದರೆ ಪದೇ ಪದೇ ವಿಷಾನಿಲ ಸೋರಿಕೆಯಿಂದ ಸಾವನಪ್ಪುವ ಪ್ರಕರಣಗಳು ವರದಿಯಾಗುತ್ತಿವೆ.

[ccc_my_favorite_select_button post_id="119828"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!