ದೊಡ್ಡಬಳ್ಳಾಪುರ: ವಾತ್ಸಲ್ಯ ಧಾಮ ಚಾರಿಟಬಲ್ ಟ್ರಸ್ಟ್‌ನ ವೈ.ಎನ್. ಅರ್ಜುನ ಹಾಗೂ ಡಬ್ಲ್ಯೂ ಡಬ್ಲ್ಯೂ ಎಫ್ ಇಂಡಿಯಾ ಸಂಸ್ಥೆಯ ವೈ.ಟಿ.ಲೋಹಿತ್ ಅವರಿಗೆ ಇಂದಿರಾ ಪ್ರಿಯದರ್ಶಿನಿ ಪರಿಸರ ಪ್ರಶಸ್ತಿ (Indira Priyadarshini Environmental Award) ದೊರೆತಿದೆ.
ಬುಧವಾರ ಬೆಂಗಳೂರಿನ ಅರಮನೆ ಮೈದಾನದಲ್ಲಿ ಮಾಲಿನ್ಯ ನಿಯಂತ್ರಣಾ ಮಂಡಳಿಯ ಸುವರ್ಣ ಮಹೋತ್ಸವದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಿಂದ ‘ಇಂದಿರಾ ಪ್ರಿಯದರ್ಶಿನಿ ಪರಿಸರ ಪ್ರಶಸ್ತಿ’ಯನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ನೀಡಿ ಗೌರವಿಸಿದರು.