ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ತಾಲೂಕು ಕಲಾವಿದರ ಸಂಘದ ವತಿಯಿಂದ 70ನೇ ಕನ್ನಡ ರಾಜ್ಯೋತ್ಸವ ಹಾಗೂ ಕಲಾವಿದರ ಸಾಂಸ್ಕೃತಿಕ ಹಬ್ಬ-2025 (Artists’ Cultural Festival-2025) ಕಾರ್ಯಕ್ರಮ ನ.21ರಿಂದ 23ರವರೆಗೆ ಮೂರು ದಿನಗಳ ಕಾಲ ನಗರದ ಡಾ.ರಾಜ್ಕುಮಾರ್ ಕಲಾ ಮಂದಿರದಲ್ಲಿ ನಡೆಯಲಿದೆ.
ನ.21 ರಂದು ಬೆಳಿಗ್ಗೆ 9 ಗಂಟೆಗೆ ಭುವನೇಶ್ವರಿಯ ಭವ್ಯ ಮೆರವಣಿಗೆ ವಿವಿಧ ಜಾನಪದ ಕಲಾ ತಂಡಗಳೊಡನೆ ನಗರದ ವಿನಾಯಕ ನಗರದ ಕಲಾಭವನದ ಬಳಿಯಿಂದ ಡಾ.ರಾಜ್ಕುಮಾರ್ ಕಲಾ ಮಂದಿರದವರೆಗೆ ನಡೆಯಲಿದೆ.
ಸಾಂಸ್ಕೃತಿಕ ಹಬ್ಬ ಕಾರ್ಯಕ್ರಮವನ್ನು ತಪಸೀಹಳ್ಳಿಯ ಪುಷ್ಪಾಂಡಜ ಆಶ್ರಮದ ಪೀಠಾಧ್ಯಕ್ಷ ದಿವ್ಯಜ್ಞಾನಾನಂದ ಸ್ವಾಮಿ ಉದ್ಘಾಟಿಸಲಿದ್ದಾರೆ.
ಹಿರಿಯ ಕಲಾವಿದರ ಸಂಘದ ಅಧ್ಯಕ್ಷ ಎನ್.ರಾಮಾಂಜಿನಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಚಲನಚಿತ್ರ ನಟರಾದ ತಬಲಾ ನಾಣಿ, ಷಣ್ಮುಗ ಗೋವಿಂದರಾಜ್, ವೀಡಾ ಸುಧೀರ್, ನಿರ್ದೇಶಕ ಚಿಕ್ಕಣ್ಣ ಮೊದಲಾದವರು ಭಾಗವಹಿಸಲಿದ್ದಾರೆ.
ಈ ವೇಳೆ ದೊಡ್ಡಬಳ್ಳಾಪುರ ತಾಲೂಕಿನ ಹಿರಿಯ ಕಲಾವಿದರಿಗೆ ಸನ್ಮಾನ ಹಾಗೂ ನಿತ್ಯ ನಾಟಕ ಪ್ರದರ್ಶನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿವೆ. (ಸಂಗ್ರಹ ಸಾಂದರ್ಭಿಕ ಚಿತ್ರ ಬಳಸಲಾಗಿದೆ)