ಬೆಂ.ಗ್ರಾ.ಜಿಲ್ಲೆ: 2026 -27ನೇ ಸಾಲಿನಲ್ಲಿ ಪಿಎಮ್ ಶ್ರೀ ಜವಾಹರ್ ನವೋದಯ ವಿದ್ಯಾಲಯಕ್ಕೆ (Navodaya School) 6 ನೇ ತರಗತಿಗೆ ಪ್ರವೇಶಕ್ಕೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿತ್ತು ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ಡಿಸೆಂಬರ್ 13 ಶನಿವಾರ ರಂದು ಜಿಲ್ಲೆಯ ಆಯ್ದ ತಾಲ್ಲೂಕು ಕೇಂದ್ರಗಳಲ್ಲಿ ಪ್ರವೇಶ ಪರೀಕ್ಷೆ ಏರ್ಪಡಿಸಲಾಗಿದ್ದು ಆನ್ ಲೈನ್ ಮೂಲಕ ಪ್ರವೇಶ ಪತ್ರವನ್ನು ಪಡೆಯಲು ಅವಕಾಶ ಕಲ್ಪಿಸಲಾಗಿದೆ.
ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳು www.navodayavidyalaya.gov.in ಅಥವಾ https://cbseitms.rcil.gov.in/nvs/ ಎಂಬ ವೆಬ್ಸೈಟ್ ಮೂಲಕ ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಿಕೊಂಡು ಪ್ರವೇಶ ಪರೀಕ್ಷೆ ಬರೆಯಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜವಾಹರ್ ನವೋದಯ ವಿದ್ಯಾಲಯ ಬೆಂಗಳೂರು ಗ್ರಾಮಾಂತರ ದೊಡ್ಡಬಳ್ಳಾಪುರ ದೂರವಾಣಿ ಸಂಖ್ಯೆ: 9901868959, 9862775541 ಸಂಪರ್ಕಿಸಬಹುದು ಎಂದು ಪಿಎಮ್ ಶ್ರೀ ಜವಾಹರ್ ನವೋದಯ ವಿದ್ಯಾಲಯದ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.