Where did Achchedin go? Ask Kumaraswamy what happened to the 15 lakhs in the account: DCM D.K. Shivakumar

ಸಿಎಂ ಸಿದ್ದರಾಮಯ್ಯರೊಂದಿಗೆ ನಾವೆಲ್ಲರೂ ಒಟ್ಟಿಗೆ ಕೆಲಸ ಮಾಡುತ್ತಿದ್ದೇವೆ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: “ಸಿದ್ದರಾಮಯ್ಯ (Siddaramaiah) ಅವರು ಮುಖ್ಯಮಂತ್ರಿಯಾಗಿ ಇರುವುದಿಲ್ಲ ಎಂದು ಯಾರೂ ಹೇಳಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ಸ್ಪಷ್ಟನೆ ನೀಡಿದರು.

ಸದಾಶಿವನಗರದ ನಿವಾಸದ ಬಳಿ ಗುರುವಾರ ರಾತ್ರಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಉತ್ತರಿಸಿದರು.

ಐದೂ ವರ್ಷವೂ ನಾನೇ ಮುಖ್ಯಮಂತ್ರಿ ಎಂದು ಸಿದ್ದರಾಮಯ್ಯ ಅವರು ಚಾಮರಾಜನಗರದಲ್ಲಿ ಹೇಳಿರುವ ಬಗ್ಗೆ ಕೇಳಿದಾಗ “ಬಹಳ ಸಂತೋಷ, ಅವರಿಗೆ ಮುಖ್ಯಮಂತ್ರಿ ಹುದ್ದೆ ಜವಾಬ್ದಾರಿಯನ್ನು ಪಕ್ಷ ಕೊಟ್ಟಿದೆ. ನಾವೆಲ್ಲರೂ ಒಟ್ಟಿಗೆ ಕೆಲಸ ಮಾಡುತ್ತಿದ್ದೇವೆ” ಎಂದರು.

ವಿಧಾನ ಪರಿಷತ್ ಸದಸ್ಯರ ಭೇಟಿಯ ಬಗ್ಗೆ ಕೇಳಿದಾಗ, “ವಿಧಾನಪರಿಷತ್ ಸಭಾಧ್ಯಕ್ಷರು ಹಾಗೂ ಉಪ ಸಭಾಧ್ಯಕ್ಷರನ್ನು ಈ ಬಾರಿ ಕಾಂಗ್ರೆಸ್ ಪಕ್ಷದಿಂದಲೇ ಆಯ್ಕೆ ಮಾಡಬೇಕು ಎಂದು ಪಕ್ಷದ ಸದಸ್ಯರುಗಳು ಮನವಿ ಮಾಡಿದ್ದಾರೆ. ಈ ಹಿಂದೆಯೇ ಇದನ್ನು ಮಾಡಬೇಕಿತ್ತು. ಮೇಲ್ಮನೆಯಲ್ಲಿ ವಿಪಕ್ಷಗಳ ಹಾಗೂ ನಮ್ಮ ಸಂಖ್ಯೆ ಸಮನಾಗಿದೆ. ಗಾಯತ್ರಿ ಅವರ ಪ್ರಕರಣವನ್ನು ನ್ಯಾಯಲಯದಲ್ಲಿ ಗೆದ್ದಿದ್ದೇವೆ. ಅಲ್ಲಿಂದ ಆದೇಶ ಪಡೆಯಬೇಕಿದೆ. ಆಗ ನಮ್ಮ ಸದಸ್ಯರ‌ ಸಂಖ್ಯೆ ಹೆಚ್ಚಳವಾಗಲಿದೆ ಎಂದು ಸದಸ್ಯರು ತಿಳಿಸಿದ್ದಾರೆ” ಎಂದರು.

ಸಚಿವರು, ಶಾಸಕರು, ಎಂಎಲ್ ಸಿಗಳ ದೆಹಲಿ ಭೇಟಿ ಹಾಗೂ ವಿಚಾರವಾಗಿ ಕೇಳಿದಾಗ, “ನನಗೆ ಇದರ ಬಗ್ಗೆ ಗೊತ್ತಿಲ್ಲ. ಯಾರೂ ನನ್ನ ಬಳಿ ಕೇಳಿಯೂ ಇಲ್ಲ. ಈ ವಿಚಾರ ನನಗೆ ಗೊತ್ತೂ ಇಲ್ಲ” ಎಂದರು.

ಸರ್ಕಾರಕ್ಕೆ ಎರಡುವರೆ ವರ್ಷ ಪೂರೈಸಿದ ದಿನವೇ ಅಧಿಕಾರ ಹಂಚಿಕೆ ವಿಚಾರ ಚರ್ಚೆಯಾಗುತ್ತಿರುವ ಬಗ್ಗೆ ಕೇಳಿದಾಗ, “ನನಗೆ ಆರೋಗ್ಯ ಸರಿಯಿಲ್ಲದ ಕಾರಣಕ್ಕೆ ಮನೆಯಿಂದ ಹೊರಗಡೆ ಬಂದಿಲ್ಲ. ಸ್ನಾನವನ್ನೂ ಮಾಡಿಲ್ಲ” ಎಂದರು.

ರಾಜಕೀಯ

ಬಿಜೆಪಿ ಏಜೆಂಟ್‌ಗಳಂತೆ ವರ್ತಿಸಬೇಡಿ: ನ್ಯೂಸ್ ಚಾನಲ್‌ಗಳ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ| Video

ಬಿಜೆಪಿ ಏಜೆಂಟ್‌ಗಳಂತೆ ವರ್ತಿಸಬೇಡಿ: ನ್ಯೂಸ್ ಚಾನಲ್‌ಗಳ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ| Video

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಸುತ್ತಲೇ ಸುತ್ತುತ್ತಿದ್ದ ರಾಷ್ಟ್ರ ರಾಜಕಾರಣ, ಇತ್ತೀಚೆಗೆ ಹಲವು ಕಾರಣಗಳಿಂದ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಸುತ್ತ ಸುತ್ತುತ್ತಿದೆ.

[ccc_my_favorite_select_button post_id="119385"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ಬೆಳ್ಳಂಬೆಳಗ್ಗೆ ಭೀಕರ ಅಪಘಾತ.. 7 ಸಾವು

ಬೆಳ್ಳಂಬೆಳಗ್ಗೆ ಭೀಕರ ಅಪಘಾತ.. 7 ಸಾವು

ಬೈಕ್, ಕಾರು ಹಾಗೂ ಕ್ಯಾಂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ (Accident) 7 ಮಂದಿ ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಸೂಲಿಬೆಲೆ ಹೋಬಳಿ ಕಂಬ್ಳಿಪುರ ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="119381"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!