CM is the elder, we the younger ones should listen to what he says with respect and humility: DCM D.K. Shivakumar

ಸಿಎಂ ದೊಡ್ಡವರು, ಅವರು ಹೇಳಿದ್ದನ್ನು ನಾವು ಚಿಕ್ಕವರು ಗೌರವ, ನಮ್ರತೆಯಿಂದ ಕೇಳಬೇಕು: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: “ಮುಖ್ಯಮಂತ್ರಿಗಳು ಐದು ವರ್ಷ ಇರುವುದಿಲ್ಲ ಎಂದು ನಾವುಗಳು ಹೇಳಿಲ್ಲ. ಅವರೇ ತಾನು ಐದು ವರ್ಷ ಇರುವುದಾಗಿ ಹೇಳಿದ್ದಾರೆ. ದೊಡ್ಡವರು ಹೇಳಿದ ಮೇಲೆ, ನಾವು ಚಿಕ್ಕವರು ಗೌರವದಿಂದ ಕೇಳಿಕೊಂಡು ನಮ್ರತೆಯಿಂದ ಇರಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ತಿಳಿಸಿದರು.

ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ರಾತ್ರಿ ಪ್ರತಿಕ್ರಿಯಿಸಿದರು.

ಸಿಎಂ ನುಡಿದಂತೆ ನಡೆಯುತ್ತಿದ್ದಾರಾ ಎಂದು ಕೇಳಿದಾಗ, “ಅವರು ಎಲ್ಲವನ್ನು ಹೇಳಿದ್ದಾರಲ್ಲ. ಮುಖ್ಯಮಂತ್ರಿಯವರ ಅಧಿಕಾರವನ್ನು ನಾವುಗಳು ಯಾರೂ ಪ್ರಶ್ನೆ ಮಾಡಿಲ್ಲ. ಸಂಪುಟ ಪುನಾರಚನೆ ಬಗ್ಗೆ ಅವರೇ ಹೇಳಿದ್ದಾರೆ” ಎಂದರು.

ಅನಗತ್ಯವಾಗಿ ಊಹಾಪೋಹ ಸೃಷ್ಟಿಸಬೇಡಿ

ಅಧಿಕಾರ ಹಸ್ತಾಂತರದ ಬಗ್ಗೆ ಚರ್ಚೆಯಾಗುತ್ತಿದ್ದು, ಈ ಬಗ್ಗೆ ಚರ್ಚಿಸಲು ಖರ್ಗೆ ಅವರನ್ನು ಭೇಟಿ ಮಾಡುತ್ತೀರಾ ಎಂದು ಕೇಳಿದಾಗ, “ಅನಗತ್ಯವಾಗಿ ಊಹಾಪೋಹ ಸೃಷ್ಟಿಸಬೇಡಿ. ಕಾಂಗ್ರೆಸ್ ಪಕ್ಷಕ್ಕೆ ಹಿರಿಯರ ಸಲಹೆ, ಮಾರ್ಗದರ್ಶನ ಅವಶ್ಯಕತೆ ಇದೆಯೋ ಆಗ ನಾನು ಭೇಟಿ ಮಾಡುವೆ. ಅವರು ನಮ್ಮ ನಾಯಕರು, ನಮ್ಮ ಪಕ್ಷದ ಅಧ್ಯಕ್ಷರು. ಅವರು ಬಂದಾಗ ಅವರನ್ನು ಭೇಟಿ ಮಾಡುವುದು, ನಮ್ಮ ಕರ್ತವ್ಯ. ಶಿಷ್ಟಾಚಾರದ ಬಗ್ಗೆ ನನಗೆ ಬೇರೆಯವರಿಗಿಂತ ಹೆಚ್ಚಿನ ಅರಿವಿದೆ. ಅವರು ನಮ್ಮ ರಾಜ್ಯದವರೇ ಆದರೂ ಅವರ ಹಿರಿತನ ಹಾಗೂ ಹುದ್ದೆಗೆ ನಾವು ಗೌರವ ನೀಡಬೇಕು” ಎಂದು ತಿಳಿಸಿದರು.

“ವಿಧಾನ ಪರಿಷತ್ ಪದವೀಧರ ಕ್ಷೇತ್ರದ ಚುನಾವಣೆಗೆ ಅಭ್ಯರ್ಥಿ ಘೋಷಣೆಗೆ ಪ್ರಕ್ರಿಯೆ ಆರಂಭಿಸಿದ್ದು, ಈ ವಿಚಾರವಾಗಿ ಗುರುವಾರ ವಿಧಾನ ಪರಿಷತ್ ಸದಸ್ಯರೊಂದಿಗೆ ಚರ್ಚೆ ಮಾಡಿರುವೆ. ನೀವುಗಳು ಚುನಾವಣೆ ಜವಾಬ್ದಾರಿ ವಹಿಸಿಕೊಳ್ಳಬೇಕು ಎಂದು ಹೇಳಿರುವೆ. ಅವರೆಲ್ಲರೂ ಜವಾಬ್ದಾರಿ ಪಡೆದು ಕೆಲಸ ಮಾಡುವುದಾಗಿ ತಿಳಿಸಿದ್ದಾರೆ. ಮಂತ್ರಿಗಳಿಗೂ ಜವಾಬ್ದಾರಿ ನೀಡಬೇಕಿದೆ. ಇನ್ನು ಪರಿಷತ್ ಸಭಾಧ್ಯಕ್ಷರು ಹಾಗೂ ಉಪಸಭಾಧ್ಯಕ್ಷರ ಆಯ್ಕೆ ವಿಚಾರವಾಗಿ ಚರ್ಚೆ ಮಾಡಿರುವೆ” ಎಂದು ತಿಳಿಸಿದರು.

“ಸ್ಥಳೀಯ ಸಂಸ್ಥೆಗಳ ಚುನಾವಣೆ ಸಮೀಪಿಸುತ್ತಿದೆ. ನ. 19ರಂದು ಇಂದಿರಾ ಗಾಂಧಿ ಅವರ ಜನ್ಮದಿನದಂದು ಬೆಂಗಳೂರಿನ 369 ವಾರ್ಡ್ ಗಳನ್ನು ಪ್ರಕಟಿಸಿದ್ದೇವೆ. ಈ ಚುನಾವನೆಗೂ ನಾವು ಅರ್ಜಿ ಸ್ವೀಕರಿಸಬೇಕಿದೆ. ಈ ವಿಚಾರವಾಗಿ ದೆಹಲಿ ನಾಯಕರ ಜೊತೆ ಚರ್ಚೆ ಮಾಡಿ ಮುಂದುವರಿಯುತ್ತೇನೆ” ಎಂದರು.

“ನಾನು ಶುಕ್ರವಾರ ಪರಪ್ಪನ ಅಗ್ರಹಾರ ಜೈಲಿಗೆ ಹೋಗಿ ನಮ್ಮ ಶಾಸಕರನ್ನು ಭೇಟಿ ಮಾಡಿರುವೆ. ರಾಜಕೀಯ ಕಾರಣಗಳಿಗೆ ಅವರನ್ನು ಜೈಲಿಗೆ ಹಾಕಲಾಗಿದೆ” ಎಂದು ಹೇಳಿದರು.

ಸಿಎಂ ಅವರು ದೂರವಾಣಿ ಮೂಲಕ ಖರ್ಗೆ ಅವರ ಭೇಟಿಗೆ ಸಮಯ ಕೇಳಿದ್ದು, ನಾಳೆ ಸಮಯ ನೀಡಿದ್ದಾರಂತೆ ಎಂದು ಕೇಳಿದಾಗ, “ಅದರಲ್ಲಿ ತಪ್ಪೇನಿದೆ? ಅವರು ಮಾತನಾಡಬಾರದೇ? ಮುಖ್ಯಮಂತ್ರಿಗಳು ಎಐಸಿಸಿ ಅಧ್ಯಕ್ಷರ ಜೊತೆ ಮಾತನಾಡುವುದಿದ್ದರೆ ಮಾತನಾಡುತ್ತಾರೆ. ಅದರಲ್ಲಿ ತಪ್ಪೇನಿದೆ” ಎಂದರು.

ಯಾವುದೇ ಗೊಂದಲ ಇಲ್ಲ

ಸಾಕಷ್ಟು ಗೊಂದಲ ಸೃಷ್ಟಿಯಾಗಿದೆ ಎಂದು ಕೇಳಿದಾಗ, ಯಾವ ಗೊಂದಲವೂ ಇಲ್ಲ. ಗೊಂದಲ ಆಗಿರುವುದು ಕೇವಲ ಮಾಧ್ಯಮಗಳಿಗೆ ಮಾತ್ರ. ನನಗೆ ಹಾಗೂ ಮುಖ್ಯಮಂತ್ರಿಗಳಿಗೆ ಯಾವುದೇ ಗೊಂದಲ ಇಲ್ಲ. ಎಐಸಿಸಿ ನಾಯಕರ ಮಾತಿಗೆ ಬದ್ಧವಿರುವುದಾಗಿ ಸಿಎಂ ಹೇಳಿದ್ದಾರೆ.

ನಾವು ಕೂಡ ಅವರ ಮಾತಿಗೆ ಬದ್ಧ ಎಂದು ಈಗಾಗಲೇ ಹೇಳಿದ್ದೇವೆ. ಇದರಲ್ಲಿ ಗೊಂದಲ ಏನಿದೆ? ಎಂದು ಕೇಳಿದರು.

ರಾಜಕೀಯ

ಒಳ ಮೀಸಲಾತಿಯಡಿ ಹುದ್ದೆ ಭರ್ತಿ: ಬಿ.ವೈ. ವಿಜಯೇಂದ್ರ ಆಗ್ರಹ

ಒಳ ಮೀಸಲಾತಿಯಡಿ ಹುದ್ದೆ ಭರ್ತಿ: ಬಿ.ವೈ. ವಿಜಯೇಂದ್ರ ಆಗ್ರಹ

ಒಳ ಮೀಸಲಾತಿಯನ್ನೂ ಪರಿಗಣಿಸಿ ಯುವಜನತೆಗೆ ಉದ್ಯೋಗ ಸೃಷ್ಟಿ ಮಾಡಬೇಕು. ನ್ಯಾಯಾಲಯದ ಕುಂಟುನೆಪ ಕೊಡಬಾರದು. ಇಲ್ಲವಾದರೆ ಬಿಜೆಪಿ ಉಗ್ರ ಹೋರಾಟಕ್ಕೆ ಇಳಿಯುವುದು ಅನಿವಾರ್ಯವಾದೀತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y. Vijayendra) ಎಚ್ಚರಿಕೆ

[ccc_my_favorite_select_button post_id="119931"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ಗ್ಯಾಸ್ ಗೀಸರ್ (Gas geyser) ಬಳಕೆ ಮಾಡುವವರು ಆದಷ್ಟು ಮುಂಜಾಗ್ರತೆಯ ಕ್ರಮಕೈಗೊಳ್ಳಬೇಕಿದೆ. ಏಕೆಂದರೆ ಪದೇ ಪದೇ ವಿಷಾನಿಲ ಸೋರಿಕೆಯಿಂದ ಸಾವನಪ್ಪುವ ಪ್ರಕರಣಗಳು ವರದಿಯಾಗುತ್ತಿವೆ.

[ccc_my_favorite_select_button post_id="119828"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕಾರು-ಬೈಕ್ ನಡುವೆ ಅಪಘಾತ..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕಾರು-ಬೈಕ್ ನಡುವೆ ಅಪಘಾತ..!

ಮೊನ್ನೆಯಷ್ಟೇ ಉದ್ಘಾಟನೆಯಾಗಿದ್ದ ರೈಲ್ವೇ ನಿಲ್ದಾಣದ ಸಿಗ್ನಲ್ ಬಳಿ ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿ (Accident) ಓರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ವರದಿಯಾಗಿದೆ.

[ccc_my_favorite_select_button post_id="119943"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!