ಗುಡ್ಮಾರ್ನಿಂಗ್ ನ್ಯೂಸ್: ಮಾರಾಟಗಾರರಿಗೆ ಎಚ್ಚರಿಕೆ ನೀಡಿದ ದೊಡ್ಡಬಳ್ಳಾಪುರ ನೇಕಾರರು..!

Doddaballapur weavers warn sellers..!

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರದಲ್ಲಿ ನೇಕಾರರು ತಯಾರು ಮಾಡುವ ಬಟ್ಟೆಗಳನ್ನು ಸೂರತ್ ಹಾಗೂ ಇತರೆಡೆ ರೇಪಿಯರ್ ಮಗ್ಗಗಳಲ್ಲಿ ನೇಯ್ದು ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿರುವ ಪರಿಣಾಮ ದೊಡ್ಡಬಳ್ಳಾಪುರದ ನೇಕಾರಿಕೆ ಸಂಕಷ್ಟಕ್ಕೀಡಾಗಿದೆ. ಈ ನಿಟ್ಟಿನಲ್ಲಿ ರೇಪಿಯರ್ ಮತ್ತು ಸೂರತ್ನಿಂದ ತರುವ ಏರ್ಜೆಟ್ ಸೀರೆಗಳನ್ನು ಇಲ್ಲಿಗೆ ತಂದು ಮಾರುವುದನ್ನು ಈ ಕೂಡಲೇ ನಿಲ್ಲಿಸಬೇಕು. ಸರ್ಕಾರ ರೇಪಿಯರ್ ಮಗ್ಗಗಳಲ್ಲಿ ನೇಯದಂತೆ ಕಾನೂನು ಜಾರಿಗೆ ತರಬೇಕಿದೆ. ಇಲ್ಲವಾದಲ್ಲಿ ನೇಕಾರರು (Weavers) ಹೋರಾಟ ನಡೆಸಬೇಕಾಗುತ್ತದೆ ಎಂದು ದೊಡ್ಡಬಳ್ಳಾಪುರ ಟೆಕ್ಸ್ಟೈಲ್ಸ್ ವೀವರ್ಸ್ ಅಸೋಸಿಯೇಶನ್ನ ನೇಕಾರ ಮುಖಂಡರು ಒತ್ತಾಯಿಸಿದ್ದಾರೆ.

ನಗರದ ಡಿಪಿವಿ ಕಲ್ಯಾಣ ಮಂದಿರದಲ್ಲಿ ನಡೆದ ಸುದ್ಧಿಗೋಷ್ಟಿಯಲ್ಲಿ ಮಾತನಾಡಿದ ನೇಕಾರ ಮುಖಂಡರಾದ ಆರ್.ಎಸ್.ಶ್ರೀನಿವಾಸ್. ವಿ.ನರಸಿಂಹಮೂರ್ತಿ, ಡಿ.ಆರ್.ದ್ರುವ ಕುಮಾರ್, ದೊಡ್ಡಬಳ್ಳಾಪುರದಲ್ಲಿ 25ಸಾವಿರ ಮಗ್ಗಗಳಿದ್ದು, ಗುಡಿ ಕೈಗಾರಿಕೆಯಾಗಿರುವ ನೇಕಾರಿಕೆಯನ್ನು, ವಿವಿಧ ಹಂತಗಳ ನೇಕಾರರು ಹಾಗೂ ಕುಟುಂಬ ಸೇರಿ ಒಂದು ಲಕ್ಷ ಮಂದಿ ಅವಲಂಬಿಸಿದ್ದಾರೆ.

ಈ ಮದ್ಯೆ ನಮ್ಮ ನೇಕಾರಿಕೆಯಲ್ಲಿ ನಾವು ಉತ್ಪಾದನೆ ಮಾಡುವ ಸೀರೆಗಳನ್ನು ಸೂರತ್ ನಲ್ಲಿರುವ ಆಧುನಿಕ ತಂತ್ರಜ್ಞಾನದ ರೇಪಿಯರ್ ವಿರ್ಜೆಟ್ ಮಗ್ಗಗಳಲ್ಲಿ ಉತ್ಪಾದನೆ ಮಾಡುತ್ತಿದ್ದು ದೊಡ್ಡಬಳ್ಳಾಪುರಕ್ಕೆ ತಂದು ನಾವು ಮಾರುತ್ತಿರುವ ಬೆಲೆಗಿಂತ ಅರ್ಧ ಬೆಲೆಗೆ ಮಾರಾಟ ಮಾಡಿ ದೊಡ್ಡಬಳ್ಳಾಪುರ ನೇಕಾರಿಕೆ ಉದ್ಯಮವನ್ನು ಹಾಳು ಮಾಡಿರುತ್ತಾರೆ.

ಆಧುನಿಕ ಮಗ್ಗಗಳಲ್ಲಿ ಅತಿಹೆಚ್ಚು ಸೀರೆಗಳ ಉತ್ಪಾದನೆಯಾಗುವುದರಿಂದ ನಮ್ಮ ದೊಡ್ಡಬಳ್ಳಾಪುರದ ಉದ್ಯಮ ಉಳಿಯ ಬೇಕಾದರೆ ಆಧುನಿಕ ಮಗ್ಗಗಳಿಂದ ಅನ್ಯ ರಾಜ್ಯಗಳಿಂದ ದಿನನಿತ್ಯ ಹತ್ತಾರು ಸಾವಿರ ಸೀರೆಗಳು ಬರುತ್ತಿದ್ದು ಅದನ್ನು ಅರ್ಧ ಬೆಲೆಗೆ ಮಾರಿ ದೊಡ್ಡಬಳ್ಳಾಪುರದಲ್ಲಿ ನಾವು ತಯಾರಿಸುವ ಸೀರೆಗಳು ಕಮ್ಮಿ ಬೆಲೆಗೆ ಮಾರಲಾಗದೆ ತ್ರಿಶಂಕು ಸ್ಥಿತಿಯಲ್ಲಿ ಇದ್ದೇವೆ.

ಇದೇ ರೀತಿ ಅನ್ಯ ರಾಜ್ಯಗಳಿಂದ ಮತ್ತು ನಮ್ಮ ರಾಜ್ಯದ ಬೇರೆ ಬೇರೆ ಕಡೆಯಿಂದ ರೇಪಿಯರ್ ಮತ್ತು ಏರ್ಜೆಟ್ ಸೀರೆಗಳು ಬರುವುದನ್ನು ಅತಿ ಜರೂರಾಗಿ ತಡೆಯದಿದ್ದರೆ ನೇಕಾರರು ಮತ್ತು ಇದನ್ನು ನಂಬಿರುವ ಹಲವಾರು ನೇಕಾರರು ಬೀದಿ ಪಾಲಾಗುವ ಸಂಭವ ಉದ್ಭವವಾಗಿದೆ.

ಈ ಉದ್ಯೋಗವನ್ನು ನಂಬಿಕೊಂಡು ನೇಕಾರರು ಬ್ಯಾಂಕುಗಳಲ್ಲಿ ಮತ್ತು ಸಹಕಾರ ಸಂಘಗಳಲ್ಲಿ ಸಾಲವನ್ನು ಪಡೆದಿದ್ದಾರೆ. ರೇಪಿಯರ್ ಏರ್ ಜೆಟ್ ಮತ್ತು ಇತರೆ ಆಧುನಿಕ ಮಗ್ಗಗಳಿಂದ ಬರುವ ಒತ್ತಡವನ್ನು ತಾಳಲಾರದೆ ಬ್ಯಾಂಕುಗಳಲ್ಲಿ ಪಡೆದಿರುವ ಸಾಲ ತೀರಿಸಲಾಗದೇ ನೇಕಾರರ ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗುವ ಸಂಭವವಿದೆ.

ಕಾನೂನಿಕ ಪ್ರಕಾರ ಲಾಳಿರಹಿತ ಮಗ್ಗಗಳಲ್ಲಿ (ರೇಪಿಯರ್ ಮತ್ತು ಖರ್ ಜೆಟ್) ಸೀರೆಗಳು ಮತ್ತು ಜರಿ ಸೀರೆಗಳು ಉತ್ಪಾದಿಸುವಂತಿಲ್ಲ. ಆದ್ದರಿಂದ ಸಂಭಂಧಪಟ್ಟ ಅಧಿಕಾರಿಗಳು ಈ ಕೂಡಲೇ ರೇಪಿಯರ್ ಮತ್ತು ಏರ್ಜೆಟ್ ಮಗ್ಗಗಳ ಮೇಲೆ ಕ್ರಮ ಜರುಗಿಸಿ ಸೀರೆಗಳು ಬರುವುದನ್ನು ಹಾಗೂ ಮಾರಾಟ ಮಾಡುವುದನ್ನು ನಿಲ್ಲಿಸಬೇಕಿದೆ.

ಸೂರತ್ನಲ್ಲಿ ತಯಾರಾಗುವ ಬಟ್ಟೆಗಳನ್ನು ಇಲ್ಲಿನವರೇ ತಂದು ಮಾರಿ, ಇಲ್ಲಿನ ನೇಕಾರರಿಗೆ ಅನ್ಯಾಯ ಮಾಡುತ್ತಿರುವುದು ಸಹ ದುರದರಷ್ಟಕರ. ಈ ಬಗ್ಗೆ ಮಾಲೀಕರಿಗೆ ಮನವಿ ಮಾಡಲಾಗಿದ್ದು, ಅವರು ಸಹ ನೇಕಾರರ ಹಿತ ಕಾಪಾಡಬೇಕಿದೆ. ಈ ಬಗ್ಗೆ ಸಂಬಂಧಪಟ್ಟವರ ಗಮನಕ್ಕೂ ತರಲಾಗಿದೆ. ಇದು ಹೀಗೆಯೇ ಮುಂದುವೆರೆದರೆ, ಸರ್ಕಾರದ ಕಚೇರಿ ಹಾಗೂ ಸೂರತ್ ಸೀರೆ ಮಾರಾಟಗಾರರ ಮನೆಗಳ ಮುಂದೆ ಪ್ರತಿಭಟನಾ ಧರಣಿ ನಡೆಸಲಾಗುವುದು ಎಂದರು.

ಸುದ್ಧಿಗೋಷ್ಟಿಯಲ್ಲಿ ನೇಕಾರ ಮುಖಂಡರಾದ ಡಿ.ಪಿ.ಮಂಜುನಾಥ್, ಎಸ್.ಎಂ.ಭಾಸ್ಕರ ಮೂರ್ತಿ, ಅನಿಲ್ ಕುಮಾರ್, ಬಿ.ಆರ್.ಚಂದ್ರಶೇಖರ್, ಜಿ.ಶಿವಕುಮಾರ್ ಮೊದಲಾದವರು ಭಾಗವಹಿಸಿದ್ದರು.

ರಾಜಕೀಯ

ತಮಿಳುನಾಡು/ಪಶ್ಚಿಮ ಬಂಗಾಳ ರಾಜ್ಯಪಾಲರ ನಡೆ: ವ್ಯಾಪಕ ಚರ್ಚೆ

ತಮಿಳುನಾಡು/ಪಶ್ಚಿಮ ಬಂಗಾಳ ರಾಜ್ಯಪಾಲರ ನಡೆ: ವ್ಯಾಪಕ ಚರ್ಚೆ

ತಮಿಳುನಾಡು (Tamil Nadu) ಮತ್ತು ಪಶ್ಚಿಮ ಬಂಗಾಳ (West Bengal) ಚುನಾವಣೆ ದೇಶಾದ್ಯಂತ ಸುದ್ದಿಯಾಗಿದೆ. ತಮಿಳುನಾಡಿನಲ್ಲಿ ಟಿವಿಕೆ (TVK) ವಿಜಯ್ (Vijay) ಸದ್ದು ಮಾಡಿದರೆ, ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿಯವರದ್ದೇ (Mamata banerjee) ಸುದ್ದಿ.

[ccc_my_favorite_select_button post_id="121883"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ಬಕ್ರೀದ್; ಅಕ್ರಮ ಗೋವು ಸಾಗಣೆ / ಹತ್ಯೆ ಮಾಡಿದರೆ ಜೈಲು.. ಜಿಲ್ಲಾಧಿಕಾರಿ ವಾರ್ನಿಂಗ್

ಬಕ್ರೀದ್; ಅಕ್ರಮ ಗೋವು ಸಾಗಣೆ / ಹತ್ಯೆ ಮಾಡಿದರೆ ಜೈಲು.. ಜಿಲ್ಲಾಧಿಕಾರಿ ವಾರ್ನಿಂಗ್

ಗೋವುಗಳ ಅಕ್ರಮ ಸಾಗಣೆ ಅಥವಾ ಹತ್ಯೆ (illegal cow transport/slaughter) ಮಾಡಿದಲ್ಲಿ ಏಳು ವರ್ಷ ಜೈಲು, ಹಾಗೂ ರೂ 10 ಲಕ್ಷ ಗಳ ವರೆಗೆ ದಂಡ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.

[ccc_my_favorite_select_button post_id="121833"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]