JDS worker passes away; Nikhil Kumaraswamy visits the deceased's residence

ಕುಮಾರಣ್ಣನ ಅಪ್ಪಟ ಅಭಿಮಾನಿ ಆತ್ಮಹತ್ಯೆ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ನಿಖಿಲ್ ಕುಮಾರಸ್ವಾಮಿ

ಮದ್ದೂರು (ಮಂಡ್ಯ): ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ದೇವೇಗೌಡನ ದೊಡ್ಡಿ ಗ್ರಾಮದ ನಿವಾಸಿ ಮಹದೇವು ಅವರ ನಿವಾಸಕ್ಕೆ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರು ಭೇಟಿ ನೀಡಿ ಮೃತ ಮಹದೇವು ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಆರ್ಥಿಕ ನೆರವು ನೀಡಿದರು.

ಈ ಘಟನೆಯಿಂದ ನನಗೆ ಹಾಗೂ ಕುಮಾರಣ್ಣ ಅವರಿಗೆ ತುಂಬ ಮನಸ್ಸಿಗೆ ನೋವಾಗಿದೆ. ಕುಮಾರಣ್ಣ ಸಿಎಂ ಆಗುವವರೆಗೂ ಚಪ್ಪಲಿ ಧರಿಸಲ್ಲ ಎಂದಿದ್ದರು. ಈಗ ಮಹದೇವು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಯಾವ ಕಾರಣಕ್ಕೆ ಮಾಡಿಕೊಂಡಿದ್ದಾರೆ ಗೊತ್ತಿಲ್ಲ ಹೋದ ಜೀವ ವಾಪಸ್ಸು ತರಲು ಸಾಧ್ಯವಿಲ್ಲ ಎಂದು ನಿಖಿಲ್ ಅವರು ಬೇಸರ ವ್ಯಕ್ತಪಡಿಸಿದರು.

ಕುಮಾರಣ್ಣನ ಅಪ್ಪಟ ಅಭಿಮಾನಿ ಆತ್ಮಹತ್ಯೆ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ನಿಖಿಲ್ ಕುಮಾರಸ್ವಾಮಿ

ಅವರ ಕುಟುಂಬದ ಜೀವನೋಪಾಯಕ್ಕೆ ನೆರವು ನೀಡುತ್ತೇವೆ.ಆ ನೋವನ್ನ ಭರಿಸುವ ಶಕ್ತಿಯನ್ನ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ನಿಖಿಲ್ ಕುಮಾರಸ್ವಾಮಿ ಅವರು ಸಂತಾಪ ಸೂಚಿಸಿದರು.

ಈ ಸಂದರ್ಭದಲ್ಲಿ ಮಂಡ್ಯ ಜಿಲ್ಲಾಧ್ಯಕ್ಷರಾದ ಡಿ.ರಮೇಶ್ , ತಾಲ್ಲೂಕು ಅಧ್ಯಕ್ಷರಾದ ಚಿಕ್ಕ ತಿಮ್ಮೇಗೌಡ ಅವರು, ಮುಖಂಡರಾದ ಹನುಮಂತೇಗೌಡ ಅವರು, ಜತೆಯಲ್ಲಿದ್ದರು.

ನಂತರ ಮಾಧ್ಯಮಗಳ ಜತೆ ಮಾತನಾಡಿದ ಅವರು, ರಾಜ್ಯದ ಇತಿಹಾಸದಲ್ಲಿ ಅತೀ ಹೆಚ್ಚು ಸಾಲ ಮಾಡಿದ ಕೀರ್ತಿ ಕಾಂಗ್ರೆಸ್ ಗೆ ಸಲ್ಲಬೇಕು. ಕಳೆದ ಎರಡೂವರೆ ವರ್ಷದಲ್ಲಿ ಐದು ಲಕ್ಷ ಕೋಟಿ ಹೆಚ್ಚು ಸಾಲ ಮಾಡಿದೆ. ಇದು ಕಾಂಗ್ರೆಸ್ ಆಡಳಿತ ಎಂದು ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದ ಇತಿಹಾಸದಲ್ಲಿ ಅತೀ ಹೆಚ್ಚು ಸಾಲ ಮಾಡಿದ ಕೀರ್ತಿ ಕಾಂಗ್ರೆಸ್ ಗೆ ಸಲ್ಲಬೇಕು. ಗ್ಯಾರಂಟಿ, ಗ್ಯಾರಂಟಿ ಅಂತಾರೆ ಅದನ್ನ ಕೂಡ ಸರಿಯಾಗಿ ಕೊಟ್ಟಿಲ್ಲ.ಯುವನಿಧಿ ಕೊಟ್ಟಿದ್ದಿರಾ? ಚುನಾವಣೆ ಸಂದರ್ಭದಲ್ಲಿ ಮಾತ್ರ ದುಡ್ಡು ಬಿಡುಗಡೆ ಮಾಡ್ತರೆ. ಈ ಸರ್ಕಾರದಲ್ಲಿ ಬಡವರು ಬದಕಲು ಆಗ್ತಿಲ್ಲ ಎಂದು ಕಿಡಿಕಾರಿದರು.

ಬಿಹಾರ ಚುನಾವಣೆಯಲ್ಲಿ ಕಾಂಗ್ರೆಸ್ ಪರಿಸ್ಥಿತಿ ಏನಾಯ್ತು.?

ನಮ್ಮ ಪಕ್ಷದ ಬಗ್ಗೆ ಕಲಾಪದಲ್ಲಿ ಕೀಳಾಗಿ ಮಾತನಾಡಿದ್ರು. ಜೆಡಿಎಸ್ 18 ಸೀಟ್ ಮುಂದೆ ಸಿಂಗಲ್ ಡಿಜಿಟ್ ಗೆ ಬರುತ್ತೆ ಅಸ್ತಿತ್ವ ಇಲ್ಲ ಅಂತ ಲೇವಡಿ ಮಾಡಿದ್ರು. ಬಿಹಾರ ಚುನಾವಣೆಯಲ್ಲಿ ಕಾಂಗ್ರೆಸ್ ಪರಿಸ್ಥಿತಿ ಏನಾಯ್ತು.? ಅಲ್ಲಿನ ಜನರು ಕಾಂಗ್ರೆಸ್ ಪರಿಸ್ಥಿತಿ ತೋರಿಸಿದ್ದಾರೆ ಎಂದು ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ನಮ್ಮ ಪಕ್ಷ ಮೇಲೆ ಚಲುವರಾಯಸ್ವಾಮಿಗೆ ಯಾಕೆ ಚಿಂತೆ.?

ಬಂಡವಾಳ ಇದ್ದಿದ್ದಕ್ಕೆ ಕುಮಾರಸ್ವಾಮಿಗೆ ರೆಡ್ ಕಾರ್ಪೆಟ್ ಹಾಕಿ ಎನ್.ಡಿ.ಎ ಗೆ ಸೇರಿಸಿಕೊಂಡಿದ್ದಾರೆ. ಕುಮಾರಸ್ವಾಮಿ ಅವರಪ್ಪನಾಣೆ ಗೆಲ್ಲಲ್ಲ ಅಂತಾ ಕಾಂಗ್ರೆಸ್ ನವರು ಭಾಷಣ ಬಿಗಿದ್ರು. ಆದ್ರೆ ಮಂಡ್ಯ ಜನರ ಆಶೀರ್ವಾದದಿಂದ ದಾಖಲೆ ಗೆಲುವು ಸಿಕ್ತು. ಬಂಡವಾಳ ಇರೋದಕ್ಕೆ ಕುಮಾರಣ್ಣನ ಗೆಲ್ಲಿಸಿರೋದು ಎಂದು ಹೇಳಿದರು.

ರಾಜ್ಯದ ಜನತೆ ಕುಮಾರಣ್ಣಗೆ ಶಕ್ತಿ ತುಂಬಿದ್ದಾರೆ

ಚುನಾವಣೆಯಲ್ಲಿ ಗೆದ್ದಾಗ ತಲೆ ಎತ್ತಿ ಮೆರೆಯಲ್ಲ, ಸೋತಾಗ ಕೈ ಕಟ್ಟಿ ಮನೆಯಲ್ಲಿ ಕೂರಲಿಲ್ಲ ಎಂದು ಸಚಿವ ಚಲುವರಾಯಸ್ವಾಮಿ ಹೇಳಿಕೆಗೆ ನಿಖಿಲ್ ಕುಮಾರಸ್ವಾಮಿ ಅವರುಟಾಂಗ್ ನೀಡಿದರು.

ಮದ್ದೂರು ತಾಲ್ಲೂಕಿನ ಪೊಲೀಸ್ ಠಾಣೆ ಇವರಪ್ಪನ ಮನೆನಾ?

ಮದ್ದೂರು ತಾಲ್ಲೂಕಿನಲ್ಲಿ ಪೊಲೀಸ್ ಠಾಣೆ ಇವರಪ್ಪನ ಮನೆನಾ? ಇಲ್ಲಿರುವ ಶಾಸಕರ ನಡವಳಿಕೆ ಸರಿಯಿಲ್ಲ. ಜಿಲ್ಲೆಯ ಶಾಸಕರು ಡಿಕೆ ಶಿವಕುಮಾರ್ ಅವರನ್ನ ಮುಖ್ಯಮಂತ್ರಿ ಮಾಡಲು ಹೊರಟಿದ್ದಾರೆ. ಮಂಡ್ಯ ಜಿಲ್ಲೆಗೆ ಅವರು ಏನು ಬಿರುದ್ದು ಕೊಟ್ಟರು? ಛತ್ರಿಗಳು ಅಂದ್ರು ಅದರ ಅರ್ಥ ತಿಳಿದಿಕೊಳ್ಳಬೇಕು. ಜೆಡಿಎಸ್ ಬಗ್ಗೆ ಯಾಕೆ ತಲೆ ಕೆಡಿಸಿಕೊಳ್ತಾರೆ? ಎಂದು ನಿಖಿಲ್ ಕುಮಾರಸ್ವಾಮಿ ಅವರು ಟಾಂಗ್ ನೀಡಿದರು.

ಕುಮಾರಣ್ಣ ಸಿಎಂ ಬಗ್ಗೆ ಚಲುವರಾಯಸ್ವಾಮಿ ಅವರಿಗೆ ಯಾಕೆ ಆತಂಕ ಶುರುವಾಗಿದೆ. ಇನ್ನೂ ಚುನಾವಣೆ ಎರಡೂವರೆ ವರ್ಷ ಇದೆ. ಯಾವ ನಾಯಕತ್ವದಲ್ಲಿ ಚುನಾವಣೆ ನಡೆಯಬೇಕು ಅಂತ ಎನ್‌ಡಿಎ ತೀರ್ಮಾನ ಮಾಡುತ್ತೆ.ಕುಮಾರಣ್ಣ ಅರ್ಜಿ ಹಾಕೊಂಡು ಹೋಗಿಲ್ಲ, ಸ್ವಾಭಿಮಾನದಿಂದ ಬದುಕಿದ್ದಾರೆ. ಎರಡೂ ಪಕ್ಷದ ನಾಯಕರು ಅದರ ಬಗ್ಗೆ ತೀರ್ಮಾನ ಮಾಡ್ತಾರೆ ಎಂದು ಹೇಳಿದರು.

ರಾಜಕೀಯ

ಒಳ ಮೀಸಲಾತಿಯಡಿ ಹುದ್ದೆ ಭರ್ತಿ: ಬಿ.ವೈ. ವಿಜಯೇಂದ್ರ ಆಗ್ರಹ

ಒಳ ಮೀಸಲಾತಿಯಡಿ ಹುದ್ದೆ ಭರ್ತಿ: ಬಿ.ವೈ. ವಿಜಯೇಂದ್ರ ಆಗ್ರಹ

ಒಳ ಮೀಸಲಾತಿಯನ್ನೂ ಪರಿಗಣಿಸಿ ಯುವಜನತೆಗೆ ಉದ್ಯೋಗ ಸೃಷ್ಟಿ ಮಾಡಬೇಕು. ನ್ಯಾಯಾಲಯದ ಕುಂಟುನೆಪ ಕೊಡಬಾರದು. ಇಲ್ಲವಾದರೆ ಬಿಜೆಪಿ ಉಗ್ರ ಹೋರಾಟಕ್ಕೆ ಇಳಿಯುವುದು ಅನಿವಾರ್ಯವಾದೀತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y. Vijayendra) ಎಚ್ಚರಿಕೆ

[ccc_my_favorite_select_button post_id="119931"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ಗ್ಯಾಸ್ ಗೀಸರ್ (Gas geyser) ಬಳಕೆ ಮಾಡುವವರು ಆದಷ್ಟು ಮುಂಜಾಗ್ರತೆಯ ಕ್ರಮಕೈಗೊಳ್ಳಬೇಕಿದೆ. ಏಕೆಂದರೆ ಪದೇ ಪದೇ ವಿಷಾನಿಲ ಸೋರಿಕೆಯಿಂದ ಸಾವನಪ್ಪುವ ಪ್ರಕರಣಗಳು ವರದಿಯಾಗುತ್ತಿವೆ.

[ccc_my_favorite_select_button post_id="119828"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕಾರು-ಬೈಕ್ ನಡುವೆ ಅಪಘಾತ..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕಾರು-ಬೈಕ್ ನಡುವೆ ಅಪಘಾತ..!

ಮೊನ್ನೆಯಷ್ಟೇ ಉದ್ಘಾಟನೆಯಾಗಿದ್ದ ರೈಲ್ವೇ ನಿಲ್ದಾಣದ ಸಿಗ್ನಲ್ ಬಳಿ ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿ (Accident) ಓರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ವರದಿಯಾಗಿದೆ.

[ccc_my_favorite_select_button post_id="119943"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!