ಕಲಬುರಗಿ (ನ.25): ಜೇವರ್ಗಿಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ (Accident) ಪ್ರಸಿದ್ಧ IAS ಅಧಿಕಾರಿ, ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಮಹಾಂತೇಶ್ ಬೀಳಗಿ ಮಹಾಂತೇಶ್ ಬೀಳಗಿ (Mahantesh Bilagi) ಮೃತಪಟ್ಟಿದ್ದಾರೆ.
ರಾಮದುರ್ಗದಿಂದ ಕಲಬುರಗಿ ಕಡೆಗೆ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಮಹಾಂತೇಶ್ ಬೀಳಗಿ ಸೇರಿ ನಾಲ್ವರು ಪ್ರಯಾಣಿಸುತ್ತಿದ್ದ ಕಾರು ಜೇವರ್ಗಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.
ತಕ್ಷಣವೇ ಸ್ಥಳೀಯರು ಹಾಗೂ ಇತರ ಸಾವರರು ನಜ್ಜು ಗುಜ್ಜಾದ ವಾಹನದಿಂದ ನಾಲ್ವರನ್ನು ಹೊರತೆಗಿದ್ದಾರೆ. ಘಟನೆಯಲ್ಲಿ ಬೀಳಗಿ ತೀವ್ರವಾಗಿ ಗಾಯಗೊಂಡು ಚಿಂತಾಜನಕ ಸ್ಥಿತಿಯಲ್ಲಿದ್ದರು. ತಕ್ಷಣವೇ ಕಲಬುರಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸುತ್ತಿದ್ದ ಮಹಾಂತೇಶ ಬೀಳಗಿ ಹಾಗೂ ಸಹೋದರರು ದುರ್ಘಟನೆಯಲ್ಲಿ ಮೃತಪಟ್ಟಿದ್ದಾರೆ.
ಮಹಾಂತೇಶ್ ಬೀಳಗಿ ಅವರು ಬೆಸ್ಕಾಂ ಎಂಡಿ ಸಹ ಆಗಿದ್ದರು, ಜೊತೆಗೆ ದಾವಣಗೆರೆ, ಉಡುಪಿ ಸೇರಿದಂತೆ ಕರ್ನಾಟಕದ ಬೇರೆ ಬೇರೆ ಕಡೆ ಕಾರ್ಯನಿರ್ವಹಿಸಿದ್ದರು. ಜನಪರ ಕಾರ್ಯಗಳ ಮೂಲಕ ಹೆಸರುವಾಸಿಯಾಗಿದ್ದ ದಕ್ಷ ಅಧಿಕಾರಿಯಾಗಿದ್ದರು.