The fight between the supporters of CM Siddaramaiah and DCM D.K. Shivakumar is fierce at the national level..!

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಬೆಂಬಲಿಗರ ನಡುವೆ ಕಿತ್ತಾಟ ರಾಷ್ಟ್ರ ಮಟ್ಟದಲ್ಲಿ ಜೋರು..!

ಕೆ.ಎಂ.ಸಂತೋಷ್, ಆರೂಢಿ (ದೊಡ್ಡಬಳ್ಳಾಪುರ): ರಾಜ್ಯ ಕಾಂಗ್ರೆಸ್‌ನಲ್ಲಿ ಸಿಎಂ ಸಿದ್ದರಾಮಯ್ಯ (Cmsiddaramaiah) ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ನಡುವೆ ನಾಯಕತ್ವ ಬದಲಾವಣೆಯ ಕಿಡಿ ಹೊತ್ತಿದೆ ಎಂಬ ನ್ಯೂಸ್ ಚಾನಲ್‌ಗಳ ವರದಿ ಮುಗಿಲು ಮುಟ್ಟಿದೆ.

ಇನ್ನೂ ಕೆಲ ದಿನ ಪತ್ರಿಕೆಗಳ ವರದಿ ಅನ್ವಯ ಕಳೆದ ದಿನಗಳಿಂದ ನಾಲ್ಕು ಬೆಂಗಳೂರಿನಲ್ಲಿಯೇ ಇದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕಿಚ್ಚು ಶಮನ ಮಾಡಲು ಸಾಧ್ಯವಾಗಿಲ್ಲ, ಇಂದು ಸಂಜೆ ರಾಹುಲ್ ಜತೆ ಚರ್ಚಿಸಿದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬುಲಾವ್ ಬರುವುದು ಖಚಿತವಾಗಿದೆ ಎಂದಿವೆ.

ಅಲ್ಲದೆ ರಾಹುಲ್ ಗಾಂಧಿ ಅವರ ಸೂಚನೆಯಂತೆ ಬೆಂಗಳೂರಿನಲ್ಲಿಯೇ ಎಲ್ಲವನ್ನೂ ಇತ್ಯರ್ಥಪಡಿಸಲು ಮಲ್ಲಿಕಾರ್ಜುನ ಖರ್ಗೆ ಅವರು ಪ್ರಯತ್ನಿಸಿದ್ದು, ಸಾಧ್ಯವಾಗಿಲ್ಲವಂತೆ. ಆದ್ದರಿಂದ ರಾಜ್ಯದ ಬೆಳವಣಿಗೆ ಬಗ್ಗೆ ರಾಹುಲ್‌ಗೆ ವರದಿ ಸಲ್ಲಿಸಲು ತೀರ್ಮಾನಿಸಿದ್ದಾರಂತೆ.

ಮಂಗಳವಾರ ಸಂಜೆ ವೇಳೆಗೆ ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರು ಕರ್ನಾಟಕ ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ ಸಭೆ ನಡೆಸುವ ಸಾಧ್ಯತೆಯಿದೆಯಂತೆ.

ಈ ಸಭೆಯ ಬಳಿಕ ವಾರಾಂತ್ಯದೊಳಗೆ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್‌ರನ್ನು ದೆಹಲಿಗೆ ಕರೆಸಿ ಕೊಂಡು ಇಬ್ಬರ ನಡುವೆ ಉದ್ಭವಿಸಿರುವ ನಾಯಕತ್ವ ಗೊಂದಲಕ್ಕೆ ಪರಿಹಾರ ಕಂಡುಕೊಳ್ಳುವ ಸಾಧ್ಯತೆಯಿದೆ. ಆದರೆ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುವ ಈ ಸಭೆಯಲ್ಲಿ ಸಂಕ್ರಾಂತಿ ವೇಳೆಗೆ ‘ಸಂ’ ಕ್ರಾಂತಿಯೋ ಅಥವಾ ಸದ್ಯಕ್ಕೆ ಯಾವುದೇ ಬದಲಾವಣೆ ಬೇಡ ಎನ್ನುವ ಸಂದೇಶ ನೀಡುವರೋ ಎನ್ನುವ ಕುತೂಹಲ ಇದೀಗ ರಾಜ್ಯ ನಾಯಕರಲ್ಲಿದೆಯಂತೆ.

ಈ ಹಿಂದೆ ರಾಹುಲ್ ಗಾಂಧಿ ಅವರು ವಿದೇಶಿ ಪ್ರವಾಸ ಕೈಗೊಂಡಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಸೋಮವಾರ ಬೆಳಗ್ಗೆ ಕಾಂಗ್ರೆಸ್‌ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸುವ ಮೂಲಕ ರಾಹುಲ್ ವಿದೇಶದಿಂದ ವಾಪಸಾಗಿದ್ದಾರೆ ಎನ್ನುವುದು ಖಾತ್ರಿಯಾಯಿತು. ಆದರೆ ಮತ್ತೊಂದು ಮೂಲಗಳ ಪ್ರಕಾರ ರಾಹುಲ್ ಅವರು ವಿದೇಶ ಪ್ರವಾಸವನ್ನೇ ಕೈಗೊಂಡಿರಲಿಲ್ಲ ಎನ್ನಲಾಗಿದೆ.

ಗೊಂದಲದ ಹೊರತಾಗಿ ರಾಹುಲ್ ದೆಹಲಿಯಲ್ಲಿರುವುದು ಖಚಿತವಾಗುತ್ತಿದ್ದಂತೆ, ಭೇಟಿಗೆ ರಾಜ್ಯ ನಾಯಕರು ಮತ್ತೆ ತಮ್ಮ ಪ್ರಯತ್ನ ಮುಂದುವರಿಸಿದ್ದಾರೆ. ಆದರೆ ಈವರೆಗೆ ಹರಿಪ್ರಸಾದ್ ಹೊರತುಪಡಿಸಿ, ಇನ್ಯಾರಿಗೂ ಅವಕಾಶ ಸಿಕ್ಕಿಲ್ಲ ಎಂದು ತಿಳಿದುಬಂದಿದೆ ಎಂದು ವರದಿಯಾಗಿದೆ.

ಬಣಗಳ ಕಿತ್ತಾಟ

ಇನ್ನೂ ಸಾಮಾಜಿಕ ಜಾಲತಾಣದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಬೆಂಬಲಿಗರ ಕಿತ್ತಾಟ ಜೋರಾಗಿಯೇ ನಡೆಯುತ್ತಿದೆ.

ಸಿಎಂ ಸಿದ್ದರಾಮಯ್ಯ ಮಾಸ್ ಲೀಡರ್ ಅವರಿಂದಲೇ ಕಾಂಗ್ರೆಸ್ ಅಧಿಕಾರದಲ್ಲಿ ಉಳಿಯಲು ಸಾಧ್ಯ, ಡಿ.ಕೆ. ಶಿವಕುಮಾರ್ ಅವರು ಬಿಜೆಪಿಯ ಪ್ರಪೋಗಂಡ.

ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ಅವರನ್ನು ಕೆಳಗಿಳಿಸಿ, ಡಿ.ಕೆ. ಶಿವಕುಮಾರ್ ಅವರನ್ನು ಅಧಿಕಾರಕ್ಕೆ ತಂದು ಸುಲಭವಾಗಿ ಅಧಿಕಾರಕ್ಕೆ ಬರುವ ಉದ್ದೇಶ ಬಿಜೆಪಿ ವರಿಷ್ಠರದ್ದು ಎನ್ನುತ್ತಿದ್ದಾರೆ.

ಮತ್ತೊಂದೆಡೆ ಡಿ.ಕೆ. ಶಿವಕುಮಾರ್ ಬೆಂಬಲಿಗರು, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವಲ್ಲಿ ಡಿ.ಕೆ. ಶಿವಕುಮಾರ್ ಪಾತ್ರ ಅಪಾರವಾಗಿದೆ. ದೇಶದಲ್ಲಿ ಕಾಂಗ್ರೆಸ್ ಮೂಲೆ ಗುಂಪಾದರೂ, ಕರ್ನಾಟಕ ಮತ್ತು ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಡಿ.ಕೆ.ಶಿವಕುಮಾರ್ ಪ್ರಮುಖ ಕಾರಣ.

ಸಿಎಂ ಆಗಿರುವ ಸಿದ್ದರಾಮಯ್ಯ ಕಳೆದ ವಿಧಾನಸಭೆ ಚುನಾವಣೆ ಬಹುತೇಕ ಅವರ ಕ್ಷೇತ್ರದ ಬಗ್ಗೆ ಗಮನಹರಿಸಿದರೆ, ಡಿ.ಕೆ. ಶಿವಕುಮಾರ್ ರಾಜ್ಯಾದ್ಯಂತ ಓಡಾಡಿ ತನು, ಮನ, ಧನವನ್ನು ಅರ್ಪಿಸಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ.

ವರಿಷ್ಠರು ಈ ಮುಂಚೆ ನೀಡಿದ ಮಾತಿನಂತೆ ಸಿದ್ದರಾಮಯ್ಯ ಅವರು ಡಿ.ಕೆ. ಶಿವಕುಮಾರ್ ಅವರಿಗೆ ಅಧಿಕಾರ ಬಿಟ್ಟುಕೊಡಬೇಕು ಎನ್ನುತ್ತಿದ್ದಾರೆ.

ಇದರ ಬೆನ್ನಲ್ಲೇ ಇಂದು ದೊಡ್ಡಬಳ್ಳಾಪುರ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಡಿ.ಕೆ. ಶಿವಕುಮಾರ್ ಸಿಎಂ ಆಗಲೆಂದು ಅವರ ಅಭಿಮಾನಿಗಳು 1001 ಈಡುಗಾಯಿ ಹೊಡೆದಿದ್ದಾರೆ.

ಇನ್ನೂ ಕಾಂಗ್ರೆಸ್ ನಲ್ಲಿ ನಡೆಯುತ್ತಿರುವ ಬಣ ಬಡಿದಾಟದ ಕುರಿತು ಅನೇಕ ಕಾಂಗ್ರೆಸ್ ಮುಖಂಡರು ಬೇಸರ ವ್ಯಕ್ತಪಡಿಸಿದ್ದು, ಕರ್ನಾಟಕ ಕಾಂಗ್ರೆಸ್ ಪವರ್ ಶೇರಿಂಗ್ ಬಣಬಡಿದಾಟ ರಾಷ್ಟ್ರ ಮಟ್ಟದಲ್ಲಿ ಸುದ್ದಿಯಾಗುತ್ತಿದೆ.

ಗೋದಿ ಮೀಡಿಯಾಗಳು ರಾಜ್ಯ ಬಿಜೆಪಿ ಅಧ್ಯಕ್ಷ ಆಯ್ಕೆ ಗೊಂದಲದ ಕುರಿತು ಪ್ರಶ್ನೆ ಮಾಡದೆ, ಕೇವಲ ಕಾಂಗ್ರೆಸ್ ಗೊಂದಲವನ್ನು ರಾಷ್ಟ್ರ ಮಟ್ಟದಲ್ಲಿ ಸುದ್ದಿಮಾಡಿ, ಪಕ್ಷಕ್ಕೆ ಬಹಳಷ್ಟು ಡ್ಯಾಮೇಜ್ ಮಾಡುತ್ತಿದ್ದು, ವರಿಷ್ಠರು ಹೆಚ್ಚೆತ್ತುಕೊಳ್ಳದಿದ್ದರೆ ಪಕ್ಷಕ್ಕೆ ಮತ್ತಷ್ಟು ಹಿನ್ನಡೆಯಾಗಿ, ಕಾರ್ಯಕರ್ತರ ಆತ್ಮ ಸ್ಥೈರ್ಯ ಕುಸಿಯುತ್ತದೆ ಎನ್ನುತ್ತಿದ್ದಾರೆ.

ರಾಜಕೀಯ

2 ಕೋಟಿ ಬಾಂಗ್ಲಾ ಪ್ರಜೆಗಳು ಭಾರತಕ್ಕೆ ಬಂದಿದ್ದಾರೆ: ಆರ್‌.ಅಶೋಕ

2 ಕೋಟಿ ಬಾಂಗ್ಲಾ ಪ್ರಜೆಗಳು ಭಾರತಕ್ಕೆ ಬಂದಿದ್ದಾರೆ: ಆರ್‌.ಅಶೋಕ

2 ಕೋಟಿ ಬಾಂಗ್ಲಾ ಪ್ರಜೆಗಳು ಭಾರತಕ್ಕೆ ಬಂದಿದ್ದು, ಅಪರಾಧಿ ಚಟುವಟಿಕೆಗಳಲ್ಲಿ ತೊಡಗುತ್ತಿದ್ದಾರೆ; ಆರ್. ಅಶೋಕ (R.AShoka)

[ccc_my_favorite_select_button post_id="118528"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ದ್ವಿಚಕ್ರ ವಾಹನದಲ್ಲಿ ತೆರಳುವ ವೇಳೆ ಗಾಳಿಪಟ ಹಾರಿಸುವ ಮಾಂಜಾ ದಾರ (Maanja thread) ಕುತ್ತಿಗೆ ಸೀಳಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಟಗುಪ್ಪ ತಾಲೂಕಿನ ತಾಳಮಡಗಿ ಗ್ರಾಮದ ಸೇತುವೆ ಸಮೀಪ ನಡೆದಿದೆ.

[ccc_my_favorite_select_button post_id="118471"]
ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ಇಂದು ಸಂಭವಿಸಿದ ಎರಡು ಪ್ರತ್ಯೇಕ ಕಾರುಗಳ ಅಪಘಾತದಲ್ಲಿ (Accident) ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡು, ಆಸ್ಪತ್ರೆಗೆ ದಾಖಲಾಗಿದ್ದಾರೆ.

[ccc_my_favorite_select_button post_id="118357"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!