ದೊಡ್ಡಬಳ್ಳಾಪುರ: ನಗರದ ಜೆಡಿಎಸ್ (JDS) ಕಚೇರಿಯಲ್ಲಿ ಸಾಮಾಜಿಕ ಜಾಲತಾಣ ಕಾರ್ಯಾಗಾರವನ್ನು ನಾಳೆ (ನ.28) ರಂದು ಆಯೋಜಿಸಲಾಗಿದೆ.
ಜೆಡಿಎಸ್ ಪಕ್ಷದ ಸಾಮಾಜಿಕ ಜಾಲತಾಣಗಳ ವಿಭಾಗದ ರಾಜ್ಯಾಧ್ಯಕ್ಷ ಚಂದನ್ ಹೆಚ್.ಎಸ್ ನೇತೃತ್ವದ ತಂಡದ ರಾಜ್ಯ ಪ್ರವಾಸದ ಭಾಗವಾಗಿ ನಾಳೆ ದೊಡ್ಡಬಳ್ಳಾಪುರದಲ್ಲಿ ಕಾರ್ಯಾಗಾರ ಏರ್ಪಡಿಸಲಾಗಿದೆ.
ಒಕ್ಕಲಿಗರ ಸಮುದಾಯದ ಭವನದ ಸಮೀಪವಿರುವ ಜೆಡಿಎಸ್ ಕಚೇರಿಯಲ್ಲಿ ಜೆಡಿಎಸ್ ಸಾಮಾಜಿಕ ಜಾಲತಾಣ ಅಧ್ಯಕ್ಷ ವಿನಯ್ ಅಧ್ಯಕ್ಷತೆಯಲ್ಲಿ ನ.28ರಂದು ಶುಕ್ರವಾರ ಮಧ್ಯಾಹ್ನ 03:00 ಗಂಟೆಗೆ ಕಾರ್ಯಾಗಾರ ನಡೆಯಲಿದ್ದು, ಯುವ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಜೆಡಿಎಸ್ ಸಾಮಾಜಿಕ ಜಾಲತಾಣ ದೊಡ್ಡಬಳ್ಳಾಪುರ ತಾಲೂಕು ಪ್ರಧಾನ ಕಾರ್ಯದರ್ಶಿ ಗೌಡಹಳ್ಳಿ ಮನು ಮನವಿ ಮಾಡಿದ್ದಾರೆ. (ಸಾಂದರ್ಭಿಕ ಚಿತ್ರ ಬಳಸಲಾಗಿದೆ)