ಬೆಂಗಳೂರು ಗ್ರಾಮಾಂತರ ಜಿಲ್ಲೆ; ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಅರ್ಹ ಸಾಧಕ ಕ್ರೀಡಾಪಟುಗಳು ಹಾಗೂ ಇತರರಿಂದ ವಿವಿಧ ಪ್ರೋತ್ಸಾಹಧನ ನೀಡುವ ಯೋಜನೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ (invites applications).
2024 ನೇ ಸಾಲಿನ ಏಕಲವ್ಯ ಪ್ರಶಸ್ತಿ, ಜೀವಮಾನ ಸಾಧನೆ ಪ್ರಶಸ್ತಿ, ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿ, ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿಗಳಿಗೆ, 2025-26 ನೇ ಸಾಲಿನ ಗುರಿ ಒಲಂಪಿಕ್ ಪದಕ, 2023-24 ನೇ ಸಾಲಿನ ನಗದು ಪುರಸ್ಕಾರ, 2025-26 ನೇ ಸಾಲಿನ ಶೈಕ್ಷಣಿಕ ಶುಲ್ಕ ಮರುಪಾವತಿ ಹಾಗೂ ಕ್ರೀಡಾ ವಿದ್ಯಾರ್ಥಿ ವೇತನವನ್ನು ಅರ್ಜಿಯನ್ನು ಸಲ್ಲಿಸಬಹುದು.
ಕ್ರೀಡಾಪಟುಗಳು ಅಧಿಕೃತ ಜಾಲತಾಣ https://sevasindhu.karnataka.gov.in ಮೂಲಕ ಡಿಸೆಂಬರ್ 03 ರೊಳಗೆ ಅರ್ಜಿಯನ್ನು ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಚೇರಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೂ.ಸಂಖ್ಯೆ:080-29787442 / 8147537870 ಗೆ ಕಚೇರಿ ಸಮಯದಲ್ಲಿ ಸಂಪರ್ಕಿಸಬಹುದು ಎಂದು ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.