Prime Minister Modi to visit Udupi today..

ಗುಡ್ಮಾರ್ನಿಂಗ್ ನ್ಯೂಸ್: ಉಡುಪಿಗಿಂದು ಪ್ರಧಾನಿ ಮೋದಿ ಭೇಟಿ‌.. ಶಾಲೆಗಳಿಗೆ ರಜೆ ಘೋಷಣೆ

ಉಡುಪಿ: ಕಡಲತಡಿಯ ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಶುಕ್ರವಾರ (ನವೆಂಬರ್ 28) ನಡೆಯಲಿರುವ ಐತಿಹಾಸಿಕ ಲಕ್ಷ ಕಂಠ ಗೀತಾ ಪಾರಾಯಣ ಮತ್ತು ಒಂದು ಲಕ್ಷ ಭಕ್ತರ ಸಾಮೂಹಿಕ ಭಗವದ್ಗೀತೆ ಪಠಣ ಕಾಠ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಭಾಗವಹಿಸಲಿದ್ದು, ಪ್ರಧಾನಿಯ ಸ್ವಾಗತಕ್ಕೆ ನಗರದಲ್ಲಿ ಅದ್ದೂರಿಯ ಸಿದ್ಧತೆ ನಡೆದಿದೆ.

ಇದೇ ವೇಳೆ ಮೋದಿ ಭೇಟಿ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿದೆ.

ಮೋದಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಇಳಿದು ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಉಡು ಪಿಗೆ ಆಗಮಿಸಿ, ಮಧ್ಯಾಹ್ನದ ಸುಮಾರಿಗೆ ಮಠವನ್ನು ತಲುಪುತ್ತಾರೆ.

ಮೊದಲು ಶ್ರೀಕೃಷ್ಣನ ದರ್ಶನ ಪಡೆದು ಬಳಿಕ ದೇಗುಲದ ಆಚರಣೆಗಳಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಗೀತಾಪಾರಾಯಣದ ಕಾಠ್ಯಕ್ರಮದ ಜತೆಯಲ್ಲಿಯೇ ಗರ್ಭಗುಡಿಯ ಮುಂಭಾಗದಲ್ಲಿರುವ ತೀರ್ಥ ಮಂಟಪಕ್ಕೆ ಮತ್ತು ಕನಕನ ಕಿಂಡಿಗೆ ಚಿನ್ನದ ಹೊದಿಕೆ (ಕನಕ ಕವಚ)ಯನ್ನು ಪ್ರಧಾನಿ ಲೋಕಾರ್ಪಣೆ ಮಾಡುವ ನಿರೀಕ್ಷೆ ಇದೆ.

ಮಾಜಿ ಶಾಸಕ ಪ್ರಮೋದ್ ಮಧ್ವರಾಜ್ ಅವರು ಕನಕನ ಕಿಂಡಿಗೆ ಚಿನ್ನದ ಹೊದಿಕೆಯನ್ನು ಉಡುಗೊರೆಯಾಗಿ ನೀಡಿದ್ದಾರೆ. ಗೀತಾ ಪಠಣವು ಬೆಳಗ್ಗೆ 10 ರಿಂದ ಮಧ್ಯಾಹ್ನ 12:30 ರವರೆಗೆ ನಡೆಯಲಿದ್ದು, ಒಂದು ಲಕ್ಷಕ್ಕೂ ಹೆಚ್ಚು ಜನರು ಸೇರುವ ನಿರೀಕ್ಷೆಯಿದೆ.

ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಮಾರ್ಗದರ್ಶನದಲ್ಲಿ ಲಕ್ಷ ಕಂಠ ಗೀತಾ ಪಾರಾಯಣವು ನವೆಂಬರ್ 8 ರಂದು ಪ್ರಾರಂಭವಾಗಿದ್ದು ಡಿಸೆಂಬರ್ 7 ರವರೆಗೆ ನಡೆಯಲಿದೆ.

ಶಾಲೆಗಳಿಗೆ ರಜೆ

ಸಂಚಾರ ವ್ಯವಸ್ಥೆಯನ್ನು ಸುಗಮ ಗೊಳಿಸುವ ನಿಟ್ಟಿನಲ್ಲಿ ಶುಕ್ರವಾರ ಉಡುಪಿಯಲ್ಲಿ ಹೈಸ್ಕೂಲ್ ವರೆಗಿನ ಶಾಲೆಗಳಿಗೆ ರಜೆ ಸಾರಲಾಗಿದೆ. ಜನಸಂದಣಿಯನ್ನು ನಿಯಂತ್ರಿಸಲು ಜಿಲ್ಲೆಯ ಹಲವು ಮಾರ್ಗಗಳಲ್ಲಿ ಸಂಚಾರ ಬದಲಾವಣೆ ಮಾಡಲಾಗಿದೆ.

ಮಠದ ಆವರಣಕ್ಕೆ ಸಾರ್ವಜನಿಕ ಪ್ರವೇಶವನ್ನು ಮಧ್ಯಾಹ್ನ 3 ಗಂಟೆಯವರೆಗೆ ಸೀಮಿತಗೊಳಿಸಲಾಗಿದೆ. ನಗರದ ಮುಖ್ಯ ಮಾರ್ಗದಲ್ಲಿ ಅಂಗಡಿ ಮುಂಗಗಟ್ಟುಗಳನ್ನು ಬೆಳಗ್ಗೆ 9 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಮುಚ್ಚಲು ಸೂಚಿಸಲಾಗಿದೆ ಎಂದು ವರದಿಯಾಗಿದೆ.

ಪ್ರಧಾನಿ ಮೋದಿ ಟ್ವೀಟ್

ಉಡುಪಿ ಭೇಟಿಯ ಕುರಿತು ಪ್ರಧಾನಿ ಮೋದಿ ಅವರು ಟ್ವೀಟ್ ಮಾಡಿದ್ದು, ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಭಾಗವಹಿಸುವ ಅವಕಾಶ ದೊರೆತಿರುವುದು ನನಗೆ ಗೌರವದ ವಿಷಯ.

ಗೀತಾ ಪಠಣಕ್ಕಾಗಿ ಸಮಾಜದ ವಿವಿಧ ವರ್ಗಗಳ ಜನರನ್ನು ಒಂದೆಡೆ ಸೇರಿಸುವ ವಿಶೇಷ ಕಾರ್ಯಕ್ರಮ ಇದಾಗಿದೆ. ಈ ಮಠವು ನಮ್ಮ ಸಾಂಸ್ಕೃತಿಕ ಜೀವನದಲ್ಲಿ ಅತ್ಯಂತ ವಿಶೇಷ ಮಹತ್ವವನ್ನು ಹೊಂದಿದೆ. ಶ್ರೀ ಮಧ್ವಾಚಾರ್ಯರಿಂದ ಪ್ರೇರಿತವಾದ ಈ ಮಠವು, ಸಮಾಜ ಸೇವೆಯಲ್ಲಿ ಮುಂಚೂಣಿಯಲ್ಲಿದೆ ಎಂದಿದ್ದಾರೆ.

(2008ರಲ್ಲಿ ಮೋದಿ ಅವರ ಉಡುಪಿ ಭೇಟಿ ಸಂಧರ್ಬದ ಸಂಗ್ರಹ ಚಿತ್ರ ಬಳಸಲಾಗಿದೆ)

ರಾಜಕೀಯ

ಕಾಂಗ್ರೆಸ್‌ ಆಡಳಿತದ ಅವಧಿ ಮುಗಿಯುತ್ತಾ ಬಂದಿದೆ: ಆರ್‌.ಅಶೋಕ

ಕಾಂಗ್ರೆಸ್‌ ಆಡಳಿತದ ಅವಧಿ ಮುಗಿಯುತ್ತಾ ಬಂದಿದೆ: ಆರ್‌.ಅಶೋಕ

ಈ ಬಾರಿಯ ಬಜೆಟ್‌ ಅಧಿವೇಶನದಲ್ಲಿ ಸರ್ಕಾರದ ಲೋಪದೋಷಗಳನ್ನು ಚರ್ಚಿಸಲಾಗುವುದು. ರಾಜ್ಯದ ಆರ್ಥಿಕ ದುಸ್ಥಿತಿಯ ವಿರುದ್ಧ ಹೋರಾಟ ಮಾಡಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R.Ashoka) ಹೇಳಿದರು.

[ccc_my_favorite_select_button post_id="119883"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ಗ್ಯಾಸ್ ಗೀಸರ್ (Gas geyser) ಬಳಕೆ ಮಾಡುವವರು ಆದಷ್ಟು ಮುಂಜಾಗ್ರತೆಯ ಕ್ರಮಕೈಗೊಳ್ಳಬೇಕಿದೆ. ಏಕೆಂದರೆ ಪದೇ ಪದೇ ವಿಷಾನಿಲ ಸೋರಿಕೆಯಿಂದ ಸಾವನಪ್ಪುವ ಪ್ರಕರಣಗಳು ವರದಿಯಾಗುತ್ತಿವೆ.

[ccc_my_favorite_select_button post_id="119828"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!