ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ಹಾಸ್ಯನಟ ಎಂ.ಎಸ್. ಉಮೇಶ್ (Umesh) ಇಹಲೋಕ ತ್ಯಜಿಸಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರಿಗೆ 80 ವರ್ಷ ವಯಸ್ಸಾಗಿತ್ತು.
ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿ ಆಗದೇ ಕೊನೆಯುಸಿರು ಎಳೆದಿದ್ದಾರೆ.
1960ರ ದಶಕದಿಂದಲೂ ಕನ್ನಡ ಚಿತ್ರರಂಗದಲ್ಲಿ ನೂರಾರು ಸಿನಿಮಾಗಳಲ್ಲಿ ನಟಿಸಿ ಎಂ.ಎಸ್. ಉಮೇಶ್ ಅವರು ಜನಪ್ರಿಯತೆ ಪಡೆದಿದ್ದಾರೆ.
ಉಮೇಶ್ ಅಗಲಿಕೆಗೆ ಅಭಿಮಾನಿಗಳು, ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ. ತಮ್ಮ ಪರಿಶುದ್ಧ ಹಾಸ್ಯದ ಮೂಲಕ ಪ್ರೇಕ್ಷಕರ ಮನಸ್ಸಿನಲ್ಲಿ ಶಾಶ್ವತ ಸ್ಥಾನ ಸಂಪಾದಿಸಿದ್ದಾರೆ. ಅವರ ಅಂತ್ಯಕ್ರಿಯೆಗೆ ಕುಟುಂಬಸ್ಥರು ಸಿದ್ಧತೆ ನಡೆಸುತ್ತಿದ್ದಾರೆ.