ದೊಡ್ಡಬಳ್ಳಾಪುರ: ಕಾರು ಡಿಕ್ಕಿ ಹೊಡೆದ ಪರಿಣಾಮ (Accident) ದ್ವಿಚಕ್ರ ವಾಹನ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಾಂಬೆ ರೆಯಾನ್ ಕಾರ್ಖಾನೆ ಬಳಿ ಇಂದು ಸಂಜೆ ಸಂಭವಿಸಿದೆ.
ಘಟನೆಯಲ್ಲಿ ಗಾಯಗೊಂಡಿರುವ ಬೈಕ್ ಸವಾರನನ್ನು ಅರೇಹಳ್ಳಿ ಗುಡ್ದದಹಳ್ಳಿಯಲ್ಲಿ ವಾಸವಿದ್ದ ಬಿಜಾಪುರ ಮೂಲದ ಆದಿತ್ಯ (25 ವರ್ಷ) ಎಂದು ಗುರುತಿಸಲಾಗಿದೆ.
ಕಾರು ಡಿಕ್ಕಿ ಪರಿಣಾಮ ಆದಿತ್ಯ ಅವರಿಗೆ ತೀವ್ರ ಪೆಟ್ಟಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ರವಾನಿಸಲಾಗಿದೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.