ಬೆಂಗಳೂರು: ಚಿಕ್ಕಪೇಟೆ ವಿಧಾನಸಭೆ ಕ್ಷೇತ್ರದ ಮಾಜಿ ಶಾಸಕ ಆರ್ ವಿ. ದೇವರಾಜ್ (R.V. Devraj) ಅವರು ತೀವ್ರ ಹೃದಯಾಘಾತದಿಂದ (Heart attack) ನಿಧನರಾಗಿದ್ದಾರೆ. ಅವರಿಗೆ 67 ವರ್ಷ ವಯಸ್ಸಾಗಿತ್ತು.
ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳುತ್ತಿದ್ದಾಗ ಅವರಿಗೆ ಹೃದಯಾಘಾತವಾಗಿದೆ ಎಂದು ತಿಳಿದುಬಂದಿದೆ.
ಕೂಡಲೇ ದೇವರಾಜ್ ಅವರನ್ನು ಮೈಸೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಬಳಿಕ ಅವರನ್ನು ಜಯದೇವ ಆಸ್ಪತ್ರೆಗೆ ರವಾನಿಸಿ ದಾಖಲಿಸಲಾಗಿತ್ತು ಎಂದು ಮಾಧ್ಯಮಗಳು ವರದಿ ಮಾಡಿವೆ.
ಡಿಸೆಂಬರ್ 3ರಂದು ಆರ್ ವಿ ದೇವರಾಜ್ ಅವರ ಜನ್ಮ ದಿನದ ನಿಮಿತ್ತ ಅವರು ಚಾಮುಂಡೇಶ್ವರಿ ದರ್ಶನ ಮಾಡಲು ಚಾಮುಂಡಿ ಬೆಟ್ಟಕ್ಕೆ ತೆರಳಿದ್ದರು. ಈ ವೇಳೆ ಅವರಿಗೆ ಹೃದಯಾಘಾತವಾಗಿದೆ ಎಂದು ಹೇಳಲಾಗಿದೆ.
ಡಿಸಿಎಂ ಡಿ.ಕೆ. ಶಿವಕುಮಾರ್ ಸಂತಾಪ
ಚಿಕ್ಕಪೇಟೆ ಮಾಜಿ ಶಾಸಕ ಮತ್ತು ಹಿರಿಯ ಕಾಂಗ್ರೆಸ್ ನಾಯಕ ಶ್ರೀ ಆರ್.ವಿ.ದೇವರಾಜ್ ಅವರ ನಿಧನದ ಸುದ್ದಿ ತೀವ್ರ ದುಃಖ ತಂದಿದೆ. ರಾಜಕೀಯ ಮತ್ತು ಸಮಾಜಸೇವೆ ಮೂಲಕ ಚಿಕ್ಕಪೇಟೆ ಕ್ಷೇತ್ರಕ್ಕೆ ಅವರ ಕೊಡುಗೆ ಅಪಾರ. ಅವರ ಅಗಲಿಕೆಯಿಂದಾಗಿ ರಾಜ್ಯ ರಾಜಕಾರಣ ಮತ್ತು ಚಿಕ್ಕಪೇಟೆ ಕ್ಷೇತ್ರಕ್ಕೆ ದೊಡ್ಡ ನಷ್ಟ ಉಂಟಾಗಿದೆ. ದೇವರಾಜ್ ಅವರ ಆತ್ಮಕ್ಕೆ ಶಾಂತಿ… pic.twitter.com/SeIDjsDk21
— DK Shivakumar (@DKShivakumar) December 1, 2025