ದೊಡ್ಡಬಳ್ಳಾಪುರ: ಖಾಸಗಿ ಬಸ್ಗೆ ಹಿಂದಿನಿಂದ ಪ್ಯಾಸೆಂಜರ್ ಆಟೋ ಡಿಕ್ಕಿ ಹೊಡೆದ ಪರಿಣಾಮ (Accident) ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಜೆ ತಾಲೂಕಿನ ಕಂಟನಕುಂಟೆ ಸಮೀಪ ಸಂಭವಿಸಿದೆ.
ಘಟನೆಯಲ್ಲಿ ಚೀಲೇನಹಳ್ಳಿ ನಿವಾಸಿ ಮಾಲ ಎನ್ನುವವರು ಸೇರಿ ಮೂವರಿಗೆ ಪೆಟ್ಟಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ದೊಡ್ಡಬಳ್ಳಾಪುರದ ಕಾರ್ಖಾನೆಯೊಂದರಿಂದ ಕಾರ್ಮಿಕರ ಕರೆದೊಯ್ಯುತ್ತಿದ್ದ ಖಾಸಗಿ ಬಸ್, ಕಾರ್ಮಿಕರ ಇಳಿಸಲು ಕಂಟನಕುಂಟೆ ಬಳಿ ನಿಲ್ಲಿಸಿದ ವೇಳೆ ಕಾರ್ಮಿಕರ ಕರೆದೊಯ್ಯುತ್ತಿದ್ದ ಆಟೋ ಹಿಂದಿನಿಂದ ಡಿಕ್ಕಿ ಹೊಡೆದಿದೆ.
ಪರಿಣಾಮ ಆಟೋ ಜಖಂಗೊಂಡಿದ್ದು, ಆಟೋದಲ್ಲಿದ್ದ ಮೂವರು ಗಾಯಗೊಂಡಿದ್ದಾರೆ. ಗಾಯಳುಗಳನ್ನು ನಗರದ ವಿವಿಧ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಓರ್ವರಿಗೆ ಗಂಭೀರ ಪ್ರಮಾಣ ಪೆಟ್ಟಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.