ದೊಡ್ಡಬಳ್ಳಾಪುರ: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ರಾಜ್ಯದಲ್ಲಿ ಅಧಿಕಾರಕ್ಕೆ ತರಲು ಹಗಲಿರುಳು ಶ್ರಮಿಸಿದ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ. ಶಿವಕುಮಾರ್ (D.K. ShivaKumar) ಅವರು ಮುಖ್ಯಮಂತ್ರಿ ಆಗಬೇಕೆಂಬುದು ಅವರ ಅನೇಕ ಅಭಿಮಾನಿಗಳ ಹಾರೈಕೆಯಾಗಿದೆ.
ಈ ಹಿನ್ನೆಲೆಯಲ್ಲಿ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗಬೇಕೆಂದು ರಾಜ್ಯದ ಹಲವು ದೇವಾಲಯಗಳಲ್ಲಿ ಪೂಜಾ ಕೈಂಕರ್ಯಗಳು ನಡೆಯುತ್ತಿವೆ.
ಅಂತೆಯೇ ದೊಡ್ಡಬಳ್ಳಾಪುರದ ವಕೀಲ ಹಾಗೂ ಉಪನಗರ ವರ್ತುಲ ರಸ್ತೆ ಯೋಜನಾ ಪ್ರಾಧಿಕಾರ ಸದಸ್ಯ ದೀಪು ಸಿ ಆರ್ ಅವರು, ಡಿ.ಕೆ. ಶಿವಕುಮಾರ್ ಅವರ ಫೋಟೋ ಹಿಡಿದು ಶಬರಿಮಲೆ ಅಯ್ಯಪ್ಪ ದರ್ಶನ ಮಾಡಿ, ಡಿ.ಕೆ. ಶಿವಕುಮಾರ್ ಸಿಎಂ ಆಗಲೆಂದು ಪ್ರಾರ್ಥಿಸಿ ಗಮನ ಸೆಳೆದಿದ್ದಾರೆ.
ಈ ಕುರಿತಾದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.