ದೊಡ್ಡಬಳ್ಳಾಪುರ: 6 ಎಕರೆ ಗೋಮಾಳಕ್ಕೆ ನಕಲಿ ದಾಖಲೆ ಸೃಷ್ಠಿ ಆರೋಪ; ಜಿಲ್ಲಾಧಿಕಾರಿಗೆ ದೂರು

Doddaballapura: Gomala accused of creating fake documents; complaint filed with the District Collector

ದೊಡ್ಡಬಳ್ಳಾಪುರ: ತಾಲ್ಲೂಕಿನ ಅರೆಹಳ್ಳಿಗುಡ್ಡದಹಳ್ಳಿ ಗ್ರಾಮದ ಸರ್ವೇ ನಂ. 57ರಲ್ಲಿ 10 ಎಕರೆ ಸರ್ಕಾರಿ ಗೋಮಾಳಕ್ಕೆ ನಕಲಿ ದಾಖಲೆ ಸೃಷ್ಠಿಸಿ (creating fake documents) 6 ಎಕರೆ ಜಮೀನನ್ನು ಭೂಗಳ್ಳರು ಅಧಿಕಾರಿಗಳ ಸಹಾಯದಿಂದ ಮ್ಯುಟೇಷನ್ ಪುಸ್ತಕದಲ್ಲಿ ಇಲ್ಲದ ಪುಟಗಳನ್ನು ಸೇರಿಸಿ ನಕಲಿ ಸಹಿ ಹಾಕುವುದರ ಮೂಲಕ ದಾಖಲೆಯನ್ನು ತಿರುಚಿರುವ ಅಧಿಕಾರಿಗಳ ವಿರುದ್ಧ ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಕರ್ನಾಟಕ ರಕ್ಷಣಾ ವೇದಿಕೆ ಕನ್ನಡಿಗರ ಬಣದ ವತಿಯಿಂದ ಮಂಗಳವಾರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು (A.B. Basavaraju) ಅವರಿಗೆ ಮನವಿ ಸಲ್ಲಿಸಿದರು.

ಈ ಬಗ್ಗೆ ಮಾಹಿತಿ ನೀಡಿರುವ ರಾಜ್ಯ ಅಧ್ಯಕ್ಷ ಬಿ.ಎಸ್.ಚಂದ್ರಶೇಖರ್, ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶ ಹಾಗೂ ನಗರದ ಅಂಚಿನಲ್ಲೇ ಇರುವ ಕೋಟ್ಯಾಂತರ ರೂಪಾಯಿ ಬೆಲೆ ಬಾಳುವ ಜಮೀನಿಗೆ ತಿರುಚಿರುವ ನಕಲಿ ದಾಖಲೆಗಳನ್ನು ಆಧಾರವನ್ನಾಗಿಸಿಕೊಂಡು ಭೂಗಳ್ಳರು ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿ ಈ ಜಮೀನಿಗೆ ಖಾತೆ ಮಾಡಿಕೊಡುವಂತೆ ದೂರು ದಾಖಲಿಸಿ ಆದೇಶ ಪಡೆದಿದ್ದಾರೆ.

ಜಿಲ್ಲಾಧಿಕಾರಿಗಳು ಉಪವಿಭಾಗಾಧಿಕಾರಿಗಳ ಆದೇಶವನ್ನು ಈಗಾಗಲೇ ರದ್ದುಗೊಳಿಸಿ ಸರ್ಕಾರದ ವಶಕ್ಕೆ ಪಡೆದಿದ್ದಾರೆ. ಇಷ್ಟಾದರು ಸಹ ಭೂ ಸುರಕ್ಷಾ ಯೋಜನೆ ಬಳಸಿಕೊಂಡು ನಕಲಿ ದಾಖಲೆಗಳನ್ನು ಸೃಷ್ಠಿಸಿಕೊಂಡು ಮತ್ತೆ ಭೂಗಳ್ಳರು ಸರ್ಕಾರಿ ಜಾಗವನ್ನು ಕಬಳಿಸಲು ಹುನ್ನಾರ ರೂಪಿಸಿದ್ದಾರೆ.

ಈ ದಾಖಲೆಗಳನ್ನು ಸೃಷ್ಟಿಸಲು ಸಹಕರಿಸಿರುವ ಎಲ್ಲಾ ಸರ್ಕಾರಿ ಅಧಿಕಾರಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಭೂ ಸುರಕ್ಷಾ ಯೋಜನೆಯಲ್ಲಿ ಹಳೇಯ ದಾಖಲೆಗಳನ್ನು ಸ್ಕ್ಯಾನಿಂಗ್ ಮಾಡುತ್ತಿರುವ ಕೇಂದ್ರ ಹಾಗೂ ಹಳೇಯ ದಾಖಲೆ ಕೊಠಡಿಯಲ್ಲಿ ಸಿ.ಸಿ. ಕ್ಯಾಮೆರಾ ಅಳವಡಿಸಬೇಕು.

ಈ ಕೂಡಲೇ ಜಿಲ್ಲಾಧಿಕಾರಿಗಳು ಪೊಲೀಸ್ ಇಲಾಖೆಗೆ ದೂರು ನೀಡಿ ಈ ಪ್ರಕರಣಕ್ಕೆ ಸಂಬಂಧಿಸಿದ ಕಡತಗಳನ್ನು ವಶಕ್ಕೆ ಪಡೆಯಬೇಕು, ಈ ಜಮೀನಿಗೆ ಈಗಾಗಲೇ ಸ್ಕ್ಯಾನ್ ಮಾಡಿರುವ ದಾಖಲೆಗಳನ್ನು ನಕಲಿ ದಾಖಲೆ ಎಂದು ಗುರುತು ಮಾಡಿ ಸಾರ್ವಜನಿಕರಿಗೆ ವಿತರಿಸದಂತೆ ತಡೆಹಿಡಿಯಬೇಕು.

ಸರ್ವೇ ನಂ.57ರ ಸ್ವತ್ತಿನ ಸಂಬಂಧ ನಡೆದಿರುವ ಭೂಗಳ್ಳತನದ ವಿರುದ್ಧ ಕಾನೂನು ಬದ್ಧ ಕ್ರಮ ಕೈಗೊಳ್ಳಬೇಕು ಎಂದರು.

ರಾಜ್ಯ ಪ್ರಧಾನ ಕಾರ್ಯದರ್ಶಿ ಆರ್ ರಮೇಶ್, ರಾಜ್ಯ ಮುಖಂಡ ಪಿ ವಾಸು, ಜಿಲ್ಲಾ ಯುವ ಘಟಕ ಅಧ್ಯಕ್ಷ ರಂಜಿತ್ ಗೌಡ, ತಾಲೂಕು ಅಧ್ಯಕ್ಷ ವಿನಯ ಆರಾಧ್ಯ, ದೊಡ್ಡಬಳ್ಳಾಪುರ ತಾಲೂಕು ಕಾರ್ಯದರ್ಶಿ ಪ್ರದೀಪ್ ಕುಮಾರ್ ಇದ್ದರು.

ರಾಜಕೀಯ

ಪ್ರಜಾಕೀಯ ಆ್ಯಪ್ ಬಿಡುಗಡೆ..!

ಪ್ರಜಾಕೀಯ ಆ್ಯಪ್ ಬಿಡುಗಡೆ..!

ಜಿಬಿಎ ಮತ್ತು 2028ರ ವಿಧಾನಸಭೆಯ ಚುನಾವಣೆಗೂ ಮುನ್ನ ಪ್ರಜಾಕೀಯ ನೂತನ ನಿಯಮ ಜಾರಿಗೊಳಿಸಿದ್ದು, ಪ್ರಜಾಕೀಯ (Prajakiya) ವೆಬ್ಸೈಟ್ ಮತ್ತು ಆ್ಯಪ್ ಮೂಲಕ ಆಡಳಿತ ಬದಲಾವಣೆಗೆ, ಜನರು ಹಾಗೂ ಪ್ರಜಾಕೀಯ ಮಧ್ಯೆ ನೇರ ಸಂಪರ್ಕ, ಜನರೊಂದಿಗೆ

[ccc_my_favorite_select_button post_id="120632"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ ಶೋಭಾಯಾತ್ರೆಯಲ್ಲಿ ಡಿಜೆ ಬಳಕೆ..!; ಆಯೋಜಕರ ವಿರುದ್ಧ FIR.!

ದೊಡ್ಡಬಳ್ಳಾಪುರ ಶೋಭಾಯಾತ್ರೆಯಲ್ಲಿ ಡಿಜೆ ಬಳಕೆ..!; ಆಯೋಜಕರ ವಿರುದ್ಧ FIR.!

ವಿಶ್ವ ಹಿಂದೂಪರಿಷತ್ ಮತ್ತು ಬಜರಂಗದಳ ದಿಂದ ಭಾನುವಾರ ದೊಡ್ಡಬಳ್ಳಾಪುರದಲ್ಲಿ ಶೋಭಾಯಾತ್ರೆ (Sobhayatre) ಅದ್ದೂರಿಯಾಗಿ ನೆರವೇರಿದೆ. ಆದರೆ ಆಯೋಜಕರಿಗೆ ಸಂಕಷ್ಟ ಎದುರಾಗಿದೆ.

[ccc_my_favorite_select_button post_id="120613"]
ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ಶ್ರೀರಾಮನವಮಿ ಹಬ್ಬಕ್ಕೆಂದು ತಮ್ಮನ ಮನೆಗೆ ಬರುತ್ತಿದ್ದ ಮಹಿಳೆಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ಹಮಾಮ್ ಗೇಟ್ ಬಳಿ ಗುರುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120487"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]