ಶಿವಮೊಗ್ಗ: ಬಿಜೆಪಿ (BJP) ರಾಜ್ಯ ಘಟಕದ ಅಧ್ಯಕ್ಷರ ನೇಮ ಕದ ವಿಚಾರದಲ್ಲಿ ಪಕ್ಷದ ವರಿಷ್ಠರ ತೀರ್ಮಾನಕ್ಕೆ ನಾವು ನಮ್ಮ ಬದ್ದರಾಗಿದ್ದೇವೆ ಎಂದು ಮಾಜಿ ಸಚಿವ ಕುಮಾರ ಬಂಗಾರಪ್ಪ (Kumara Bangarappa) ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ತಂಡದ ನಿಲುವನ್ನು ಈಗಾ ಗಲೇ ಸ್ಪಷ್ಟಪಡಿಸಿದ್ದೇವೆ. ಅಧ್ಯಕ್ಷರ ಆಯ್ಕೆ ಇನ್ನೂ ತೀರ್ಮಾನವಾಗಬೇಕಿದೆ. ಮಾಜಿ ಸಂಸದ ಜಿ.ಎಂ.ಸಿದೇಶರ ನೇತೃತ್ವದಲ್ಲಿ ನಮ್ಮ ತಂಡ ಕೆಲವು ವಿಚಾರಗಳನ್ನು ಪ್ರಸ್ತಾಪ ಮಾಡಿದ್ದು, ಬಿಜೆಪಿಯಲ್ಲಿರುವ ಆಂತರಿಕ ಪ್ರಜಾಪ್ರಭುತ್ವದ ಭಾಗವಾಗಿಯೇ ಹೊರತು, ಅದು ಯಾರನ್ನೂ ಗುರಿಯಾಗಿಸಿಕೊಂಡು ಮಾಡಿದ ಹೋರಾಟವಲ್ಲ.
ಬಿಜೆಪಿ ಪಕ್ಷವಾಗಿಯೇ ನಾವು ಮಾಡಿದ್ದ ವಕ್ಸ್‌ಬೋರ್ಡ್ ಭೂಮಿ ಕಬಳಿಕೆ ವಿಚಾರ, ವಾಲ್ಮೀಕಿ ನಿಗಮದ ಹಗರಣಗಳ ಬಗ್ಗೆ ಮಾಡಿದ್ದ ಹೋರಾಟಗಳು ತಾರ್ಕಿಕ ಅಂತ್ಯಕ್ಕೆ ಹೋಗಿವೆ. ನಮಗೆ ಜಯ ಸಿಕ್ಕಿದೆ ಎಂದರು.