ದೊಡ್ಡಬಳ್ಳಾಪುರ: ಧಾರವಾಡದ ಕರ್ನಾಟಕ ಬಾಲವಿಕಾಸ ಅಕಾಡಮಿ ಹಾಗೂ ಶಾಲಾ ಶಿಕ್ಷಣ ಇಲಾಖೆ ಸಹಯೋಗದಲ್ಲಿ ನಡೆದ ರಾಜ್ಯಮಟ್ಟದ ಭಾಷಣ ಸ್ಪರ್ಧೆಯಲ್ಲಿ ದೊಡ್ಡಬಳ್ಳಾಪುರ ನಗರದ ನೇಯ್ಗೆ ಬೀದಿಯ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ (Government school) ವಿದ್ಯಾರ್ಥಿನಿ ಹಿತೈಷಿಣಿ.ಡಿ.ಎಸ್. ಸ್ಥಾನ ಗಳಿಸಿ ಉತ್ತಮ ಸಾಧನೆ ಮಾಡಿದ್ದಾರೆ.
ಧಾರವಾಡದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಗೆ ಪ್ರಶಸ್ತಿ ಪತ್ರ ಹಾಗೂ ಬಹುಮಾನಿತ ಹಣ 12,500 ರೂಗಳನ್ನು ಕರ್ನಾಟಕ ಬಾಲವಿಕಾಸ ಅಕಾಡಮಿ ಅಧ್ಯಕ್ಷ ಸಂಗಮೇಶ್ವರ ಬಬಲೇಶ್ ವಿತರಿಸಿದರು.
ವಿದ್ಯಾರ್ಥಿನಿಯನ್ನು ದೊಡ್ಡಬಳ್ಳಾಪುರ ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎಸ್.ಶಂಕರಯ್ಯ, ನಗರ ವ್ಯಾಪ್ತಿಯ ಶಿಕ್ಷಣ ಸಂಯೋಜಕರಾದ ಕೆ.ಜೆ. ಜಯಶ್ರೀ, ಸಮೂಹ ಸಂಪನ್ಮೂಲ ವ್ಯಕ್ತಿಯಾದ ರಾಜಶೇಖರ್, ಶಾಲೆಯ ಮುಖ್ಯೋಪಾಧ್ಯಾಯರಾದ ಎಸ್.ಭಾಗ್ಯಮ್ಮ, ಮಾರ್ಗದರ್ಶಿ ಶಿಕ್ಷಕಿ ಕನಕಲತಾ ಹಾಗೂ ಶಾಲೆಯ ಸಿಬ್ಬಂದಿ ವರ್ಗ ಅಭಿನಂದಿಸಿದ್ದಾರೆ.