ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ನಟನೆಯ ‘ ದಿ ಡೆವಿಲ್’ (The Devil) ಸಿನಿಮಾ ಇದೇ ತಿಂಗಳ 11ರಂದು ಬಿಡುಗಡೆಯಾಗುತ್ತಿದೆ.
ಇದಕ್ಕೂ ಒಂದು ವಾರ ಮೊದಲು ಚಿತ್ರದ ಟ್ರೇಲರ್ ಬಿಡುಗಡೆ ಮಾಡಲಾಗಿದ್ದು. ‘ಡೆವಿಲ್’ ಸಿನಿಮಾ ಯಾವ ರೀತಿ ಇರಲಿದೆ ಎಂಬುದು, ಹೊಸ ಅವತಾರದಲ್ಲಿ ದರ್ಶನ್ ಅವರನ್ನು ನೋಡಿ ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ.
ಆ ಮೂಲಕ ಸಿನಿಮಾ ಬಗ್ಗೆ ಇರುವ ನಿರೀಕ್ಷೆಯನ್ನು ಹೆಚ್ಚಿಸಿದೆ.
ದರ್ಶನ್ ಅವರು ಟ್ರೇಲರ್ನಲ್ಲಿ ಹಲವು ಗೆಟಪ್ಗಳಲ್ಲಿ ಕಾಣಿಸಿಕೊಂಡಿದ್ದಾರೆ. ಅವರ ಸ್ಟೈಲಿಶ್ ಲುಕ್, ಮಾಸ್ ಡೈಲಾಗ್ ಗಮನ ಸೆಳೆಯುವಂತಿದೆ. ‘ಸೂರ್ಯಂಗೆ ಹೆಚ್ಚು ಹೊತ್ತು ಗ್ರಹಣ ಹಿಡಿಯಲ್ಲ. ನಾನ್ ಬರ್ತಿದೀನಿ ಚಿನ್ನ’ ಎಂದು ದರ್ಶನ್ ಡೈಲಾಗ್ ಹೇಳುವಾಗ ರಿಲೀಸ್ ದಿನಾಂಕ ತೋರಿಸಲಾಗುತ್ತದೆ.
ವಿನಯ್ ಗೌಡ, ಅಚ್ಯುತ್ ಕುಮಾರ್ ಹಾಗೂ ಗಿಲ್ಲಿ ನಟ ಮೊದಲಾದವರನ್ನು ಟ್ರೇಲರ್ನಲ್ಲಿ ತೋರಿಸಲಾಗಿದೆ.