ದೊಡ್ಡಬಳ್ಳಾಪುರ: ಡಿ. 21 ರಂದು ನಡೆಯಲಿರುವ ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆಗೆ (Bashettihalli Town Panchayat Election) ಈವರೆಗೆ ಎರಡು ನಾಮಪತ್ರಗಳು ಸಲ್ಲಿಕೆಯಾಗಿವೆ.
4ನೇ ವಾರ್ಡ್ ಅರೇಹಳ್ಳಿಗುಡ್ಡದಹಳ್ಳಿ ಸಾಮಾನ್ಯ ಕ್ಷೇತ್ರಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ಶ್ರೀನಿವಾಸ ರೆಡ್ಡಿ ಹಾಗೂ 5ನೇ ವಾರ್ಡ್ ವರದನಹಳ್ಳಿ (ಪೂರ್ವ) ಪರಿಶಿಷ್ಟ ಜಾತಿ ಕ್ಷೇತ್ರಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ಮುನೀಂದ್ರ.ಸಿ ನಾಮಪತ್ರ ಸಲ್ಲಿಸಿದ್ದಾರೆ.
ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯಲ್ಲಿ 19 ವಾರ್ಡುಗಳಿದ್ದು, 1ರಿಂದ 10ನೇ ವಾರ್ಡ್‌ವರೆಗೆ ಬಾಶೆಟ್ಟಿಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಾಮಪತ್ರಗಳನ್ನು ಸಲ್ಲಿಸಲು ಹಾಗೂ 11ರಿಂದ 19 ನೇ ವಾರ್ಡ್‌ವರೆಗೆ ಇಲ್ಲಿನ ಅಂಬೇಡ್ಕರ್ ಭವನದಲ್ಲಿ ನಾಮಪತ್ರ ಸಲ್ಲಿಸಲು ವ್ಯವಸ್ಥೆ ಮಾಡಲಾಗಿದೆ.
ಡಿ.9 ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನ. ಡಿ.10 ನಾಮಪತ್ರಗಳನ್ನು ಪರಿಶೀಲಿಸುವುದು.
ಡಿಸೆಂಬರ್ 12 ರಂದು ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿದೆ.
ವಿವಿಧ ರಾಜಕೀಯ ಪಕ್ಷಗಳಲ್ಲಿ ಅಭ್ಯರ್ಥಿಗಳ ಆಯ್ಕೆ ಕಸರತ್ತುಗಳು ನಡೆಯುತ್ತಿದ್ದು, ಡಿ.8 ಸೋಮವಾರದಂದು ಹೆಚ್ಚಿನ ಮಂದಿ ನಾಮಪತ್ರ ಸಲ್ಲಿಸುವ ನಿರೀಕ್ಷೆಯಿದೆ.
ದೊಡ್ಡಬಳ್ಳಾಪುರ ನಗರಸಭೆ ಉಪಚುನಾವಣೆ: ನಾಮಪತ್ರ ಸಲ್ಲಿಕೆಯಿಲ್ಲ..
ದೊಡ್ಡಬಳ್ಳಾಪುರ ನಗರಸಭೆಯ 21 ನೇ ವಾರ್ಡ್ ನ ಹೇಮಾವತಿಪೇಟೆ ವಾರ್ಡ್ ಸದಸ್ಯರಾಗಿದ್ದ ಎಸ್.ಎ.ಭಾಸ್ಕರ್ ನಿಧನದಿಂದಾಗಿ ತೆರವಾಗಿರುವ ಸ್ಥಾನಕ್ಕೆ ಡಿ.21ರಂದೇ ಉಪ ಚುನಾವಣೆ ನಡೆಯಲಿದ್ದು, ಇಲ್ಲಿಯವರೆಗೆ ಯಾವುದೇ ನಾಮಪತ್ರ ಸಲ್ಲಿಕೆಯಾಗಿಲ್ಲ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.