BJP leaders' job is to divide and set people on fire: DCM D.K. Shivakumar

ಇಡಿ ಸಮನ್ಸ್: ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಬೆಂಬಲಿಗರಿಗೆ ಕಿರುಕುಳ – ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: “ನ್ಯಾಷನಲ್ ಹೆರಾಲ್ಡ್ ಹಾಗೂ ಯಂಗ್ ಇಂಡಿಯಾ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಇಡಿ ಸಮನ್ಸ್ (ED summons) ನೀಡಿದೆ. ಆ ಮೂಲಕ ನಮಗೆ ಕಿರುಕುಳ ನೀಡಲಾಗುತ್ತಿದೆ. ಇದು ಸರಿಯಲ್ಲ. ಇದನ್ನು ನಾನು ಖಂಡಿಸುತ್ತೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ಹೇಳಿದರು.

ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳಿಗೆ ಶನಿವಾರ ಪ್ರತಿಕ್ರಿಯೆ ನೀಡಿದರು.

ಇಡಿ ಸಮನ್ಸ್ ನೀಡಿರುವ ಬಗ್ಗೆ ಕೇಳಿದಾಗ, “ನಾವು ಮೊದಲಿನಿಂದಲೂ ತನಿಖೆಗೆ ಸಹಕರಿಸುತ್ತಲೇ ಬಂದಿದ್ದೇವೆ. ಇಲ್ಲಿ ಯಾವುದೇ ಮುಚ್ಚುಮರೆಯಿಲ್ಲ. ಇಷ್ಟೆಲ್ಲಾ ಆದರೂ ಇ.ಡಿ. ಚಾರ್ಜ್ ಶೀಟ್ ಹಾಕಿರೋದು ಏಕೆ ಎಂಬುದೇ ಗೊತ್ತಿಲ್ಲ. ಇದರಲ್ಲಿ ಪೊಲೀಸರು ಪ್ರಕರಣ ದಾಖಲಿಸುವ ಅಗತ್ಯ ಇರಲಿಲ್ಲ. ನಾವು ಕಾನೂನಾತ್ಮಕವಾಗಿ ನ್ಯಾಯಲಯದಲ್ಲಿ ಹೋರಾಟ ಮಾಡುತ್ತೇವೆ” ಎಂದರು.

ಡಿ.19 ರ ಒಳಗೆ ಪೊಲೀಸರಿಗೆ ಮಾಹಿತಿ ನೀಡಬೇಕು

“ನನಗೆ ಹಾಗೂ ನನ್ನ ತಮ್ಮ ಡಿ.ಕೆ.ಸುರೇಶ್ ಗೆ ಇಡಿ ಸಮನ್ಸ್ ನೀಡಿದೆ. ಈಗಾಗಲೇ ನಾವು ಇದಕ್ಕೆ ಹಿಂದೆಯೇ ಉತ್ತರ ಕೊಟ್ಟಿದ್ದೆವು. ಆದರೂ ನಮಗೆ ಸಮನ್ಸ್ ನೀಡಿರುವುದು ಆಘಾತಕಾರಿ. ದೆಹಲಿ ಪೊಲೀಸರು ಡಿಸೆಂಬರ್ 19 ನೇ ತಾರೀಕಿನ ಒಳಗೆ ಮಾಹಿತಿ ನೀಡಬೇಕು ಎಂದು ತಿಳಿಸಿದ್ದಾರೆ” ಎಂದು ಹೇಳಿದರು.

“ನಾವು ತೆರಿಗೆ ಪಾವತಿ ಮಾಡುತ್ತಿದ್ದೇವೆ. ನಮ್ಮ ಹಣವನ್ನು ನಮಗೆ ಬೇಕಾದವರಿಗೆ ನೀಡುತ್ತೇವೆ. ಕಿರುಕುಳ ನೀಡಲು ಪಿಎಂಎಲ್ ಎ ಪ್ರಕರಣ ಕೂಡ ದಾಖಲಿಸಿದ್ದರು. ಆನಂತರ ಏನಾಯಿತು? ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಬೆಂಬಲಿಗರಿಗೆ ಕಿರುಕುಳ ನೀಡುವುದು, ಜತೆಗೆ ಗೊಂದಲ ಮೂಡಿಸುವುದು ಇದರ ಉದ್ದೇಶ” ಎಂದರು.

“ನ್ಯಾಷನಲ್ ಹೆರಾಲ್ಡ್ ಹಾಗೂ ಯಂಗ್ ಇಂಡಿಯಾ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಇಡಿ ನೋಟಿಸ್ ನೀಡಿದೆ. ನ್ಯಾಷನಲ್ ಹೆರಾಲ್ಡ್, ಯಂಗ್ ಇಂಡಿಯಾ ಇವು ನಮ್ಮ ಕಾಂಗ್ರೆಸ್ ಪಕ್ಷದ ಸಂಸ್ಥೆಗಳು. ನಾವು ಕಾಂಗ್ರೆಸ್ಸಿಗರಾದ ಕಾರಣಕ್ಕೆ ಈ ಸಂಸ್ಥೆಗಳು ಕಷ್ಟ ಕಾಲದಲ್ಲಿದ್ದಾಗ ನಮ್ಮ ಟ್ರಸ್ಟ್ ಗಳಿಂದ ದೇಣಿಗೆ ನೀಡಿದ್ದೇವೆ. ನಮ್ಮಂತೆ ಅನೇಕ ಜನರು ಸಹಾಯ ಮಾಡಿದ್ದಾರೆ” ಎಂದರು.

“ಶುಕ್ರವಾರ ನನಗೆ ಹಾಗೂ ಸುರೇಶ್ ಅವರಿಗೆ ನೋಟಿಸ್ ಬಂದಿದೆ. ಆತ ಸಂಸದನಾದ ಸಮಯದಲ್ಲಿ ಒಂದಷ್ಟು ಹಣ ದೇಣಿಗೆ ನೀಡಿದ್ದ. ನೋಟಿಸ್ ಅನ್ನು ವಿವರವಾಗಿ ತಿಳಿದುಕೊಂಡು ಕಾನೂನಾತ್ಮಕವಾಗಿ ಏನು ಮಾಡಬೇಕೋ ಅದನ್ನು ಮಾಡುತ್ತೇವೆ” ಎಂದರು.

ರಾಜಕೀಯ

ರಾಜಘಟ್ಟದಲ್ಲಿ ಬೀದಿಗೆ ಬಂದ ಜೆಡಿಎಸ್ ಮುಖಂಡರ ಒಳಜಗಳ..!

ರಾಜಘಟ್ಟದಲ್ಲಿ ಬೀದಿಗೆ ಬಂದ ಜೆಡಿಎಸ್ ಮುಖಂಡರ ಒಳಜಗಳ..!

ಜೆಡಿಎಸ್ (JDS) ಮುಖಂಡರ ಒಳಜಗಳ ರಾಜಘಟ್ಟ ಆಂಜನೇಯಸ್ವಾಮಿ ದೇವಸ್ಥಾನದ ಸಮೀಪದಲ್ಲಿನ ಅರಳಿಕಟ್ಟೆಯಲ್ಲಿ ಬೀದಿಗೆ ಬಂದಿದೆ.

[ccc_my_favorite_select_button post_id="118288"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ಅಸೆಂಬ್ಲಿ ಚುನಾವಣೆ 2028; 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ NDA ಗೆಲ್ಲುತ್ತೆ ಎಂದ ನಿಖಿಲ್ ಕುಮಾರಸ್ವಾಮಿ

ಅಸೆಂಬ್ಲಿ ಚುನಾವಣೆ 2028; 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ NDA ಗೆಲ್ಲುತ್ತೆ ಎಂದ ನಿಖಿಲ್

ಮುಂದಿನ ರಾಜ್ಯದ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳ ಎನ್ಡಿಎ (NDA) ಮೈತ್ರಿಕೂಟವು 150 ಕ್ಷೇತ್ರಗಳಲ್ಲಿ ಜಯ ಸಾಧಿಸಲಿದೆ. ಆ ನಿಟ್ಟಿನಲ್ಲಿ ಎರಡೂ ಪಕ್ಷಗಳು ಸೇರಿ ಕೆಲಸ ಮಾಡುತ್ತಿದ್ದೇವೆ ಎಂದು ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಹೇಳಿದರು.

[ccc_my_favorite_select_button post_id="118301"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರರಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರರಿಗೆ ಗಂಭೀರ ಗಾಯ

ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತ (Accident) ಸಂಭವಿಸಿ ಬೈಕ್ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ **** ಹಾಗೂ *** ನಡುವೆ ಸಂಭವಿಸಿದೆ.

[ccc_my_favorite_select_button post_id="118304"]

ಆರೋಗ್ಯ

ಸಿನಿಮಾ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

ಹಿರಿಯ ಚಲನಚಿತ್ರ ಕಲಾವಿದರು, ನಿರ್ದೇಶಕರು ನಿರ್ಮಾಪಕ ಪ್ರಕಾಶ್ ರಾಜ್ (Prakash Raj) ಅವರನ್ನು 17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ (Brand Ambassador) ಆಗಿ ನೇಮಿಸಲಾಗಿದೆ.

[ccc_my_favorite_select_button post_id="117722"]
error: Content is protected !!