ಭಗವದ್ಗೀತೆಯನ್ನು ಶಾಲಾ ಮಕ್ಕಳಿಗೆ ಬೋಧಿಸಬೇಕು: ಸಚಿವ ಹೆಚ್.ಡಿ. ಕುಮಾರಸ್ವಾಮಿ

JDS-BJP alliance government will come to power; H.D. Kumaraswamy

ನವದೆಹಲಿ: ಭಗವದ್ಗೀತೆಯನ್ನು ಶಾಲಾ ಮಕ್ಕಳಿಗೆ ಬೋಧಿಸಬೇಕು ಎಂದು ಪುನರುಚ್ಚರಿಸಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ (H.D. Kumaraswamy) ಅವರು, ತಮ್ಮನ್ನು ಮನುವಾದಿ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಹಾಗೂ ಸೈದ್ಧಾಂತಿಕ ಅಧಃಪತನ ಎಂದ ಸಚಿವ ಹೆಚ್.ಸಿ. ಮಹದೇವಪ್ಪ (H.C. Mahadevappal ಇಬ್ಬರಿಗೂ ತಿರುಗೇಟು ನೀಡಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಕೇಂದ್ರ ಸಚಿವರು; ನಾನು ಕೃಷ್ಣತತ್ತ್ವ ನಂಬಿದವನೇ ಹೊರತು ಕಂಸ ಹಿಂಸೆಯನ್ನಲ್ಲ. ಕಾಂಗ್ರೆಸ್‌ ಕಂಸನಲ್ಲಿ ನಂಬಿಕೆ ಇಟ್ಟಿದೆ! ಎಂದು ಕಟುವಾಗಿ ಟೀಕಿಸಿದ್ದಾರೆ.

ನನ್ನನ್ನು ಮನುವಾದಿ ಎಂದಿರುವ ಮುಖ್ಯಮಂತ್ರಿ, ಸೈದ್ಧಾಂತಿಕ ಅಧಃಪತನ ಎಂದು ತಾಳ ಹಾಕಿದ ಸಚಿವ ಮಹದೇವಪ್ಪ; ಇವರಿಬ್ಬರೂ ಶಾಲಾ ಮಕ್ಕಳಿಗೇನು ಬೋಧಿಸುತ್ತಾರೆ ಎಂಬುದನ್ನು ಹೇಳಿಲಿ. ಬುದ್ಧಿಗೇಡಿತನಕ್ಕೂ ಮಿತಿ ಬೇಡವೇ? ಎಂದು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಭಗವದ್ಗೀತೆ ಜಗದ ಬೆಳಕು, ಅರಿವು. ಸನ್ಮಾರ್ಗದ ದೀವಿಗೆ. ಆದರ್ಶಗಳ ಮಹಾಸಾರ. ಮಕ್ಕಳನ್ನು ಬಾಲ್ಯದಿಂದಲೇ ಒಳ್ಳೇ ಮಾರ್ಗದಲ್ಲಿ ನಡೆಸುವ ಸುದುದ್ದೇಶದಿಂದ ನಾನು ಕೇಂದ್ರದ ಶಿಕ್ಷಣ ಸಚಿವರಾದ ಶ್ರೀ ಧರ್ಮೇಂದ್ರ ಪ್ರಧಾನ್‌ ಅವರಿಗೆ ಪತ್ರ ಬರೆದು ಪಠ್ಯದಲ್ಲಿ ಭಗವದ್ಗೀತೆ ಸೇರಿಸಬೇಕು ಎಂದು ವಿನಂತಿಸಿದ್ದೇನೆ.

ಬಹುಶಃ; ಮಹದೇವಪ್ಪನವರಿಗೆ ಭಗವದ್ಗೀತೆಯ ಸಾರ ಗೊತ್ತಿಲ್ಲ. ಅವರಿಗೆ ಇನ್ನಾವುದೋ ಗ್ರಂಥದ ಸಾರ ಗಾಢವಾಗಿ ಇಳಿದಿರಬೇಕು!? ಎಂದು ಕುಮಾರಸ್ವಾಮಿ ಟಾಂಗ್ ನೀಡಿದ್ದಾರೆ.

ನಾನೂ ಸೇರಿ ಜನಪ್ರತಿನಿಧಿಗಳೆಲ್ಲರೂ ಪ್ರಮಾಣ ಸ್ವೀಕರಿಸುವುದು ಸಂವಿಧಾನಬದ್ಧವಾಗಿಯೇ. ದೇವರು, ತಂದೆ ತಾಯಿ ಹೆಸರಿನಲ್ಲಿ ಪ್ರಮಾಣ ಸ್ವೀಕರಿಸುತ್ತೇವೆ. ಇದು ಕೂಡ ಸನ್ಮಾರ್ಗವೇ. ಹಾಗಾದರೆ ಮಹದೇವಪ್ಪನವರ ‘ಮಾರ್ಗ’ ಯಾವುದು? ಕಂಸ ಮಾರ್ಗವೇ!!?? ಎಂದು ಕೇಂದ್ರ ಸಚಿವರು ಪ್ರಶ್ನಿಸಿದ್ದಾರೆ.

ಮಹದೇವಪ್ಪನವರೇ.. ನಿಮಗೆ ತಿಳಿದಿರಲಿ. ಇವತ್ತು ಭಾರತದ ರಾಜನೀತಿ ನಿಂತಿರುವುದೇ ಕೃಷ್ಣತತ್ತ್ವದ ಮೇಲೆ. ಸಮರ, ರಾಜಕೀಯ, ಜ್ಞಾನ, ಆಡಳಿತ, ಮನುಷ್ಯ ಸಂಬಂಧಗಳು ಎಲ್ಲಕ್ಕೂ ಭಗವದ್ಗೀತೆಯೇ ದೀವಿಗೆ. ಕೃಷ್ಣಬೋಧೆ ಸಾರ್ವಕಾಲಿಕ, ಭಗವದ್ಗೀತೆ ಕಾಲಾತೀತ. ನಿಮ್ಮನ್ನು ಅಜ್ಞಾನಿ ಎನ್ನುವುದು ನನಗೆ ಇಷ್ಟವಿಲ್ಲ.

ಸಂವಿಧಾನ, ಪ್ರಜಾಪ್ರಭುತ್ವ ಎಂದು ಸದಾ ಜಪಿಸುವ ನೀವು, ಭಗವದ್ಗೀತೆಯ ಜತೆಗೆ ರಾಮಾಯಣ, ಮಹಾಭಾರತವನ್ನೂ ಓದಿ. ಇದು ನನ್ನ ಸಲಹೆಯಷ್ಟೇ. ಕೊನೆಗೆ; ಭಗವದ್ಗೀತೆ ಓದಬೇಡಿ ಎಂದು ನಾನೆಂದೂ ಹೇಳಿಲ್ಲ. ಹೇಳುವುದೂ ಇಲ್ಲ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ರಾಜಕೀಯ

ಡಾಕ್ಟರೇಟ್ ನಿರಾಕರಿಸಿ ಮಾದರಿಯಾದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಡಾಕ್ಟರೇಟ್ ನಿರಾಕರಿಸಿ ಮಾದರಿಯಾದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಡಾಕ್ಟರೇಟ್ ಪಡೆಯಲು ತರಾವರಿ ಪ್ರಯತ್ನ ನಡೆಸುವವರ ನಡುವೆ, ಹಾವೇರಿ ವಿಶ್ವವಿದ್ಯಾಲಯವು ನೀಡಲು ಮುಂದಾಗಿದ್ದ ಗೌರವ ಡಾಕ್ಟರೇಟ್ ಅನ್ನು, ಸಾರ್ವಜನಿಕ ಸೇವೆಯಲ್ಲಿ ಇರುವುದರಿಂದ, ಸಾರ್ವಜನಿಕ ಸೇವೆಗೆ ಯಾವುದೇ ಪ್ರಶಸ್ತಿಯನ್ನು ಅಪೇಕ್ಷಿಸುವುದಿಲ್ಲ ಎಂದು ನಿರಾಕರಿಸುವ ಮೂಲಕ ಮಾಜಿ

[ccc_my_favorite_select_button post_id="120744"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆ (Marriage) ಮಾಡಿಲ್ಲವೆಂದು ಜಗಳ ತಗೆದ ಮಗ (Son) ಸ್ವಂತ ತಾಯಿಯನ್ನೇ (Mother) ಹೊಡೆದು ಕೊಂದಿರುವ (Murder) ಘಟನೆ ವರದಿಯಾಗಿದೆ.

[ccc_my_favorite_select_button post_id="120643"]
ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ (Accident) ಪಲ್ಟಿಯಾದ ಪರಿಣಾಮ 9 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ನಡೆದಿದೆ.

[ccc_my_favorite_select_button post_id="120735"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]