Congress-backed candidates win in BDCC Bank elections..!

ಬಿಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳ ಜಯಭೇರಿ..!

ಕೆ.ಎಂ.ಸಂತೋಷ್, ಆರೂಢಿ, (ದೊಡ್ಡಬಳ್ಳಾಪುರ): “ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಬೆಂಗಳೂರು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ (BDCC Bank) ಚುನಾವಣೆಯಲ್ಲಿ ದೊಡ್ಡಬಳ್ಳಾಪುರದ ಚುಂಚೇಗೌಡ, ಎಂ.ಗೋವಿಂದ ರಾಜು, ರಮೇಶ್ ಸೇರಿದಂತೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ”.

“ಇಂದು ಬ್ಯಾಂಕಿನ ಚುನಾವಣೆ ನಡೆದಿದ್ದು, 18 ಕ್ಷೇತ್ರಗಳ ಪೈಕಿ 16ರಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ನೇರವಾಗಿ ಗೆದ್ದಿದ್ದಾರೆ.

ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರದ 2 ಕ್ಷೇತ್ರಗಳು, ಚನ್ನಪಟ್ಟಣದ 1, ಕನಕಪುರದ 2, ಮಾಗಡಿಯ 2 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.

ಬಿಜೆಪಿ ಉಚ್ಚಾಟಿತ ಶಾಸಕ ಸೋಮಶೇಖರ್ ಅವರು ಕಾಂಗ್ರೆಸ್ ಜೊತೆ ಕೈಜೋಡಿಸಿದ್ದು, ಅವರ ಕ್ಷೇತ್ರದಲ್ಲೂ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯ 2, ದೇವನಹಳ್ಳಿಯಲ್ಲಿ 1, ದೊಡ್ಡಬಳ್ಳಾಪುರದಲ್ಲಿ 3, ಆನೇಕಲ್ ನಲ್ಲಿ 1, ಬೆಂಗಳೂರು ಉತ್ತರ ಕ್ಷೇತ್ರದಿಂದ 1 ಕ್ಷೇತ್ರದಲ್ಲಿ ಹಾಗೂ ಹೆಚ್. ಎಂ ರೇವಣ್ಣ ಅವರ ಸಹಕಾರದಿಂದ 1 ಇತರೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ.

ಉಳಿದಂತೆ ನೆಲಮಂಗಲ ಹಾಗೂ ಸೋಲೂರು ಕ್ಷೇತ್ರಗಳ 2 ಸ್ಥಾನಗಳನ್ನು ಬಿಜೆಪಿ ಸಹಕಾರದೊಂದಿಗೆ ಜೆಡಿಎಸ್ ಅಭ್ಯರ್ಥಿಗಳು ಗೆದ್ದಿದ್ದಾರೆ‌.

“ಡಿಸಿಎಂ ಡಿ.ಕೆ. ಶಿವಕುಮಾರ್, ಸಚಿವರಾದ ರಾಮಲಿಂಗಾರೆಡ್ಡಿ, ಕೆ.ಹೆಚ್ ಮುನಿಯಪ್ಪ, ಕೃಷ್ಣ ಭೈರೇಗೌಡ ಹಾಗೂ ಶಾಸಕರಾದ ಶಿವಣ್ಣ, ಶರತ್ ಬಚ್ಚೇಗೌಡ, ಇಕ್ಬಾಲ್ ಹುಸೇನ್, ಬಾಲಕೃಷ್ಣ, ಸಿ.ಪಿ ಯೋಗೇಶ್ವರ್, ಶ್ರೀನಿವಾಸ್, ಮುಖಂಡರಾದ ಆರ್.ಕೆ. ರಮೇಶ್, ದೊಡ್ಡಬಳ್ಳಾಪುರದ ಟಿ.ವೆಂಕಟರಮಣಯ್ಯ ಮತ್ತಿತರ ಮುಖಂಡರ ಸಹಕಾರದಿಂದ ಈ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳನ್ನು ಆಡಳಿತ ಮಂಡಳಿಗೆ ಆಯ್ಕೆ ಮಾಡಲಾಗಿದೆ.

ದೊಡ್ಡಬಳ್ಳಾಪುರದ ವಿಜೇತರು

ಕನಸವಾಡಿ ಕ್ಷೇತ್ರದಿಂದ ಚುಂಚೇಗೌಡ, ಎಂ. ಗೋವಿಂದ ರಾಜು, ದೊಡ್ಡಬಳ್ಳಾಪುರ ರಮೇಶ್ ಕೆ.

ಈ ಚುನಾವಣೆಯಲ್ಲಿ ಸಹಕಾರ ನೀಡಿದ ಎಲ್ಲಾ ಸಹಕಾರಿ ಬಂಧುಗಳು, ಪಕ್ಷದ ಎಲ್ಲಾ ಮುಖಂಡರು, ಸಚಿವರು, ಶಾಸಕರು, ಪರಾಜಿತ ಅಭ್ಯರ್ಥಿಗಳಿಗೆ ಧನ್ಯವಾದಗಳು” ಎಂದು ಡಿ.ಕೆ. ಸುರೇಶ್ ತಿಳಿಸಿದರು.

ಈ ಕುರಿತು ಮಾತನಾಡಿ, “ಬೆಂಗಳೂರು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಬಹಳ ಇತಿಹಾಸ ಇರುವ ಬ್ಯಾಂಕ್. ರಾಜಧಾನಿಯಲ್ಲಿರುವ ರಾಜ್ಯದ ಗಮನ ಸೆಳೆಯುವ ಬ್ಯಾಂಕ್ ಇದಾಗಿದ್ದು, ಅನೇಕ ಏಳು ಬೀಳು ಕಂಡಿದೆ. ಪ್ರಸ್ತುತ ಪರಿಸ್ಥಿತಿಯಲ್ಲಿ ಬ್ಯಾಂಕ್ ಉತ್ತಮ ಆಡಳಿತ ನಡೆಸಿಕೊಂಡು ಬಂದಿದೆ. ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ ಹಾಗೂ ಬೆಂಗಳೂರು ನಗರ ಜಿಲ್ಲೆಗಳ ಒಟ್ಟು 36 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿ ಹೊಂದಿರುವ ಬ್ಯಾಂಕ್ ಇದಾಗಿದೆ” ಎಂದರು.

“ಬಿಡಿಸಿಸಿ ಬ್ಯಾಂಕ್ ಅನ್ನು ಅತ್ಯುತ್ತಮವಾಗಿ ಮುನ್ನಡೆಸಿ, ಈ ಬ್ಯಾಂಕ್ ವ್ಯಾಪ್ತಿಗೆ ಬರುವ ರೈತರು ಹಾಗೂ ನಾಗರಿಕರಿಗೆ ಉತ್ತಮ ಸೇವೆ, ಸೌಲಭ್ಯವನ್ನು ನಮ್ಮ ಆಡಳಿತ ಮಂಡಳಿ ನೀಡಲಿದೆ” ಎಂದು ಭರವಸೆ ನೀಡಿದರು.

ರಾಜಕೀಯ

ಬಿಜೆಪಿ ಏಜೆಂಟ್‌ಗಳಂತೆ ವರ್ತಿಸಬೇಡಿ: ನ್ಯೂಸ್ ಚಾನಲ್‌ಗಳ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ| Video

ಬಿಜೆಪಿ ಏಜೆಂಟ್‌ಗಳಂತೆ ವರ್ತಿಸಬೇಡಿ: ನ್ಯೂಸ್ ಚಾನಲ್‌ಗಳ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ| Video

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಸುತ್ತಲೇ ಸುತ್ತುತ್ತಿದ್ದ ರಾಷ್ಟ್ರ ರಾಜಕಾರಣ, ಇತ್ತೀಚೆಗೆ ಹಲವು ಕಾರಣಗಳಿಂದ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಸುತ್ತ ಸುತ್ತುತ್ತಿದೆ.

[ccc_my_favorite_select_button post_id="119385"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ಬೆಳ್ಳಂಬೆಳಗ್ಗೆ ಭೀಕರ ಅಪಘಾತ.. 7 ಸಾವು

ಬೆಳ್ಳಂಬೆಳಗ್ಗೆ ಭೀಕರ ಅಪಘಾತ.. 7 ಸಾವು

ಬೈಕ್, ಕಾರು ಹಾಗೂ ಕ್ಯಾಂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ (Accident) 7 ಮಂದಿ ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಸೂಲಿಬೆಲೆ ಹೋಬಳಿ ಕಂಬ್ಳಿಪುರ ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="119381"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!