Congress came to power in the state by stealing votes; H.D. Kumaraswamy makes serious allegations

ಮಕ್ಕಳಿಗೆ ಭಗವದ್ಗೀತೆ ಕಲಿಸಿ ಎನ್ನುವುದು ಮಹಾನ್ ಅಪರಾಧವೇ?: ಹೆಚ್.ಡಿ. ಕುಮಾರಸ್ವಾಮಿ

ನವದೆಹಲಿ: ಬೆಂಗಳೂರು ಸೇರಿ ರಾಜ್ಯದಲ್ಲಿ ಮಾದಕ ವಸ್ತುಗಳ ನಶೆಗೆ ಸಿಕ್ಕಿ ಯುವಜನರು ಹಾಳಾಗುತ್ತಿದ್ದಾರೆ. ರಾತ್ರಿಯಿಂದ ಬೆಳಗ್ಗೆವರೆಗೂ ರೇವ್ ಪಾರ್ಟಿಗಳಲ್ಲಿ ಡ್ರಗ್ಸ್ ಅನ್ನು ನಿರಂತರವಾಗಿ ಪೂರೈಕೆ ಮಾಡುತ್ತಿದ್ದಾರೆ. ಇಂಥ ಕೆಟ್ಟ ಪರಿಸ್ಥಿತಿಯಿಂದ ಯುವಕರನ್ನು ಸರಿದಾರಿಗೆ ತರಲು ವಿದ್ಯಾರ್ಥಿ ದಿಸೆಯಿಂದಲೇ ಭಗವದ್ಗೀತೆ ಬೋಧಿಸಬೇಕು ಎಂದು ಹೇಳಿದ್ದೇನೆ. ಇದರಲ್ಲಿ ತಪ್ಪೇನಿದೆ? ಎಂದು ಎಂದು ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ (H.D. Kumaraswamy) ಅವರು ಪ್ರಶ್ನಿಸಿದರು.

ನವದೆಹಲಿಯ ತಮ್ಮ ಗೃಹ ಕಚೇರಿಯಲ್ಲಿ ಸೋಮವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಸಚಿವರು; ಸಮಾಜ ಯಾವ ದಿಕ್ಕಿಗೆ ಹೋಗುತ್ತಿದೆ ಎಂಬುದನ್ನು ನಾವು ನಿತ್ಯವೂ ನೋಡುತ್ತಿದ್ದೇವೆ. ಒಳ್ಳೆಯ ಸಮಾಜ ನಿರ್ಮಿಸುವ ಉದ್ದೇಶದಿಂದ ಮಕ್ಕಳಿಗೆ ಚಿಕ್ಕಂದಿನಿಂದಲೇ ಭಗವದ್ಗೀತೆ ಕಲಿಸಬೇಕು ಎಂಬುದು ನನ್ನ ಅಭಿಪ್ರಾಯ. ಮನುವಾದಕ್ಕೂ ಭಗವದ್ಗೀತೆಗೂ ಏನು ಸಂಬಂಧ? ಇಂಥ ಮನಃಸ್ಥಿತಿಯೇ ಅಪಾಯಕಾರಿ ಎಂದು ಅಭಿಪ್ರಾಯಪಟ್ಟರು.

ಈ ಬಗ್ಗೆ ತಮ್ಮನ್ನು ಟೀಕಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಹೆಚ್.ಸಿ. ಮಹಾದೇವಪ್ಪ ಅವರಿಗೆ ತಿರುಗೇಟು ಕೊಟ್ಟ ಸಚಿವರು; ಒಳ್ಳೆಯದು, ಸದ್ವಿಚಾರಗಳನ್ನು ಚರ್ಚೆ ಮಾಡುವುದು, ಮಕ್ಕಳಿಗೆ ಒಳ್ಳೆಯ ವಿಷಯಗಳನ್ನು ಬೋಧನೆ ಮಾಡುವುದು ಮನುವಾದ ಆಗುತ್ತದೆಯೇ? ಭಗವದ್ಗೀತೆಯನ್ನು ಕಲಿಸಿ ಎಂದು ಕೇಂದ್ರದ ಶಿಕ್ಷಣ ಸಚಿವರಿಗೆ ಪತ್ರ ಬರೆಯುವುದು ಕೂಡ ಮಹಾನ್‌ ಅಪರಾಧವೇ? ಎಂದು ಖಾರವಾಗಿ ಪ್ರಶ್ನಿಸಿದರು.

ನಾನೆಂದೂ ಭಗವದ್ಗೀತೆಗೆ ಅಪಮಾನ ಮಾಡಿಲ್ಲ, ಮಾಡುವುದೂ ಇಲ್ಲ. ಹಿಂದೊಮ್ಮೆ ರಾಜ್ಯದ ಸಮಸ್ಯೆಗಳ ಬಗ್ಗೆ ಚರ್ಚಿಸುವಾಗ ನಾನು ಭಗವದ್ಗೀತೆ ಬಗ್ಗೆ ಹೇಳಿದ್ದೆ. ಯಾವುದೋ ಒಂದು ವರ್ಗದ ಮಕ್ಕಳಿಗೆ ಕಲಿಸಬೇಕು, ಬೋಧಿಸಬೇಕು ಎಂದು ನಾನು ಹೇಳಿಲ್ಲ. ಎಲ್ಲಾ ಮಕ್ಕಳಿಗೂ ಭಗವದ್ಗೀತೆ ಕಲಿಸಬೇಕು ಎಂದು ಒತ್ತಿ ಹೇಳಿದ್ದೇನೆ. ಇದನ್ನು ಸಚಿವ ಮಹಾದೇವಪ್ಪ ಅರ್ಥ ಮಾಡಿಕೊಳ್ಳಬೇಕು. ಅದನ್ನು ಬಿಟ್ಟು ವೈಯಕ್ತಿಕವಾಗಿ ನನ್ನ ಮೇಲೆ ದಾಳಿ ಮಾಡಿದರೆ ಉಪಯೋಗವೇನು? ಎಂದು ಸಚಿವ ಕುಮಾರಸ್ವಾಮಿ ಅವರು ಕೇಳಿದರು.

ನನಗೆ ಸಾಧ್ಯವಾದಷ್ಟು ಮಟ್ಟಿಗೆ ಭಗವದ್ಗೀತೆ, ರಾಮಾಯಣ ಮತ್ತು ಮಹಾಭಾರತವನ್ನು ಓದಿಕೊಂಡಿದ್ದೇನೆ. ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರೇ ಭಗವದ್ಗೀತೆ ಪ್ರಭಾವಕ್ಕೆ ಒಳಗಾಗಿದ್ದರು. ಅದು ನನ್ನ ಮಾತೃಗ್ರಂಥ, ತಾಯಿ ಸಮಾನ ಎಂದು ಸ್ವತಃ ಬಾಪೂಜಿ ಅವರೇ ಹೇಳಿದ್ದಾರೆ. ಭಗವದ್ಗೀತೆ ಅಮೂಲ್ಯ ಗ್ರಂಥವೆಂದು ನನಗೆ ತೋರಿದೆ. ಸತ್ಯ ಮಾರ್ಗಕ್ಕೆ, ಜ್ಙಾನ ಸಂಪಾದನೆಗೆ ಈ ಗ್ರಂಥ ಸರ್ವೋತ್ಕೃಷ್ಟವಾದುದು ಎಂದು ನಾನು ಭಾವಿಸುತ್ತೇನೆ. ನನ್ನ ನಿರಾಶೆಯ ಸಂದರ್ಭದಲ್ಲಿ ಈ ಗ್ರಂಥ ನನಗೆ ಅಮೂಲ್ಯವಾದ ಸಹಾಯವನ್ನು ಮಾಡಿದೆ ಎಂದು ಗಾಂಧೀಜಿ ಅವರು ಹೇಳಿದ್ದರು ಎಂದ ಸಚಿವರು ಮಾಧ್ಯಗೋಷ್ಠಿಯಲ್ಲಿ ಗೀತೆಯ 63ನೇ ಶ್ಲೋಕವನ್ನು ಓದಿದರು.

ರಾಜ್ಯ ಡ್ರಗ್ಸ್ ದಂಧೆಯಲ್ಲಿ ದಾಪುಗಾಲು ಇಡುತ್ತಿದೆ

ಕರ್ನಾಟಕ ರಾಜ್ಯ ಡ್ರಗ್ಸ್ ದಂಧೆಯಲ್ಲಿ ದಾಪುಗಾಲು ಇಡುತ್ತಿದೆ. ಎಲ್ಲಾ ದಂದೆಗಳಿಗೂ ರಾಜ್ಯವೇ ಕೇಂದ್ರ ಸ್ಥಾನವಾಗುತ್ತಿದೆ. ಶಾಲಾ ಕಾಲೇಜುಗಳ ಬಳಿ ಡ್ರಗ್ಸ್ ಮಾರಾಟ ನಿರಾತಂಕವಾಗಿ ನಡೆಯುತ್ತಿದೆ. ಮಕ್ಕಳು ದಾರಿ ತಪ್ಪುತ್ತಿದ್ದಾರೆ. ಡ್ರಗ್ಸ್ ಸೇವನೆಯಿಂದ ಸಮಾಜದಲ್ಲಿ ಸಂಬಂಧಗಳು ಹಾಳಾಗುತ್ತಿವೆ.

ಕೆಟ್ಟ ಸಂಸ್ಕೃತಿಯತ್ತ ಯುವಜನರು ಆಕರ್ಷಿತರಾಗಿ ಭವಿಷ್ಯ ಹಾಳು ಮಾಡಿಕೊಳ್ಳುತ್ತಿದ್ದಾರೆ. ಪೊಲೀಸ್ ಅಧಿಕಾರಿಗಳೇ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿದ್ದಾರೆ. ಇಂಥ ಸುದ್ದಿಗಳು ಮುಖಪುಟಗಳಲ್ಲಿ ರಾರಾಜಿಸುತ್ತಿವೆ. ಪ್ರೊಬೆಷನರಿ ಅವಧಿಯಲ್ಲೇ ಪೊಲೀಸರು ದರೋಡೆ ಕೃತ್ಯಗಳಲ್ಲಿ ಶಾಮೀಲಾಗುತ್ತಿದ್ದಾರೆ.

ಇದೆಲ್ಲಾ ಯಾಕಾಗುತ್ತಿದೆ ಎಂಬುದನ್ನು ಆಲೋಚನೆ ಮಾಡಿ ಮಹಾದೇವಪ್ಪನವರೇ ಎಂದು ಕೇಂದ್ರ ಸಚಿವರು ಟಾಂಗ್ ನೀಡಿದರು.

ಭಗವದ್ಗೀತೆ ನಮಗೆ ಶಾಂತಿ, ಶಿಸ್ತು, ಸಂಯಮ ಕಲಿಸುತ್ತದೆ. ಸದ್ವಿಚಾರಗಳ ಮೂಲಕ ವ್ಯಕ್ತಿತ್ವವನ್ನು ಪರಿಪೂರ್ಣಗೊಳಿಸುತ್ತದೆ. ನಾನೂ ಸಂವಿಧಾನದ ಅಡಿಯಲ್ಲೇ ಮಂತ್ರಿಯಾಗಿದ್ದೆನೆ. ಎಲ್ಲರೂ ಭಗವಂತನ ಹೆಸರಿನಲ್ಲಿಯೇ ಪ್ರಮಾಣ ಸ್ವೀಕಾರ ಮಾಡುತ್ತೇವೆ. ನಾನೂ ಅದನ್ನೇ ಮಾಡಿದ್ದೇನೆ. ಆದರೆ, ಮಹಾದೇವಪ್ಪ ಅವರು ಯಾರ ಹೆಸರಲ್ಲಿ ಪ್ರಮಾಣ ಸ್ವೀಕಾರ ಮಾಡಿದ್ದರೋ ನನಗೆ ಗೊತ್ತಿಲ್ಲ ಎಂದು ಕೇಂದ್ರ ಸಚಿವರು ತಿರುಗೇಟು ನೀಡಿದರು.

ನಾನು ಯಾರನ್ನೂ ಮನುವಾದಿ ಆಗುವಂತೆ ಹೇಳಿಲ್ಲ. ಬದಲಿಗೆ ಭಗವದ್ಗೀತೆ ಓದಿದರೆ ಒಳ್ಳೆಯ ಗುಣಗಳನ್ನು ಕಲಿಯಬಹುದು ಎಂದು ಹೇಳಿದ್ದೇನೆ. ಇದನ್ನು ತಿರುಚಿ, ವಿರೂಪಗೊಳಿಸಿ ಹೇಳುವ ಅಗತ್ಯವೇನಿದೆ?

ಕೆಲ ದಿನಗಳ ಹಿಂದೆ ಶಿವಮೊಗ್ಗದಲ್ಲಿ ಶ್ರೀ ಸೋಂದಾ ಸ್ವರ್ಣವಲ್ಲಿ ಮಹಾಸ್ವಾಮಿಗಳು ಹಮ್ಮಿಕೊಂಡಿದ್ದ ಭಗವದ್ಗೀತಾ ಅಭಿಯಾನ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದೆ. ಅಲ್ಲಿ ಎಲ್ಲಾ ಪರಮಪೂಜ್ಯರು, ಹಿರಿಯರು, ಪೋಷಕರು ನನ್ನನ್ನು ಒತ್ತಾಯ ಮಾಡಿ, ಪಠ್ಯದಲ್ಲಿ ಭಗವದ್ಗೀತೆಯನ್ನು ಬೋಧಿಸಬೇಕು ಎಂದು ಪ್ರತಿಪಾದಿಸಿದ್ದರು. ನನಗೂ ಅದು ಸರಿ ಎನಿಸಿತು. ಅದೇ ಕಾರಣಕ್ಕೆ ನಾನು ಧರ್ಮೇಂದ್ರ ಪ್ರಧಾನ್ ಅವರಿಗೆ ಪತ್ರ ಬರೆದಿದ್ದೇನೆ. ಹೀಗೆಂದ ಮಾತ್ರಕ್ಕೆ ಮಕ್ಕಳಿಗೆ ಸಂವಿಧಾನದ ಬಗ್ಗೆ ಹೇಳಬೇಡಿ ಎಂದು ಹೇಳಿದ್ದೇನೆಯೇ ಎಂದು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದರು.

ರಾಜಕೀಯ

ಬಿಜೆಪಿ ಏಜೆಂಟ್‌ಗಳಂತೆ ವರ್ತಿಸಬೇಡಿ: ನ್ಯೂಸ್ ಚಾನಲ್‌ಗಳ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ| Video

ಬಿಜೆಪಿ ಏಜೆಂಟ್‌ಗಳಂತೆ ವರ್ತಿಸಬೇಡಿ: ನ್ಯೂಸ್ ಚಾನಲ್‌ಗಳ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ| Video

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಸುತ್ತಲೇ ಸುತ್ತುತ್ತಿದ್ದ ರಾಷ್ಟ್ರ ರಾಜಕಾರಣ, ಇತ್ತೀಚೆಗೆ ಹಲವು ಕಾರಣಗಳಿಂದ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಸುತ್ತ ಸುತ್ತುತ್ತಿದೆ.

[ccc_my_favorite_select_button post_id="119385"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ಬೆಳ್ಳಂಬೆಳಗ್ಗೆ ಭೀಕರ ಅಪಘಾತ.. 7 ಸಾವು

ಬೆಳ್ಳಂಬೆಳಗ್ಗೆ ಭೀಕರ ಅಪಘಾತ.. 7 ಸಾವು

ಬೈಕ್, ಕಾರು ಹಾಗೂ ಕ್ಯಾಂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ (Accident) 7 ಮಂದಿ ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಸೂಲಿಬೆಲೆ ಹೋಬಳಿ ಕಂಬ್ಳಿಪುರ ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="119381"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!