ಕೆ.ಎಂ. ಸಂತೋಷ್, ಆರೂಢಿ (ದೊಡ್ಡಬಳ್ಳಾಪುರ): ರಾಜ್ಯದಲ್ಲಿ ಸರ್ಕಾರದಲ್ಲಿ ವಿವಿಧ ಇಲಾಖೆಗಳೂ ಸೇರಿದಂತೆ ರಾಜ್ಯದಲ್ಲಿ ಬರೋಬ್ಬರಿ 2,84,881 ಹುದ್ದೆಗಳು ಖಾಲಿಯಿರುವ (vacant posts) ಮಾಹಿತಿ ಬಯಲಾಗಿದೆ.
ರಾಜ್ಯದ ನಿಗಮ ಮಂಡಳಿಗಳು ಸೇರಿದಂತೆ ಬರೋಬ್ಬರಿ 2,84,881 ಹುದ್ದೆಗಳು ಖಾಲಿಯಿರುವ ಹುದ್ದೆಗಳು ಖಾಲಿಯಿದೆ. ಅದರಲ್ಲಿ ವಿವಿಧ ನಿಗಮ ಮಂಡಳಿಗಳಲ್ಲಿ101420 ಹುದ್ದೆಗಳು, ವಿಶ್ವವಿದ್ಯಾಲಯಗಳ್ಲಲಿ 14677 ಹುದ್ದೆಗಳು ಒಟ್ಟು 188037 ಹುದ್ದೆಗಳು ಖಾಲಿಯಿದೆ.
ಈಗಾಗಲೇ 24,300 ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಆರ್ಥಿಕ ಇಲಾಖೆಯಿಂದ ಅನುಮತಿ ದೊರೆತಿದೆ. ಹೈದ್ರಾಬಾದ್ ಕರ್ನಾಟಕಕ್ಕೆ 371 ಜೆ ಅಡಿ 32,132 ಹುದ್ದೆಗಳು ಭರ್ತಿಯಾಗಬೇಕಿದೆ. ಆದರೆ ಕೇವಲ 56,432 ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರ ಮುಂದಾಗಿದೆ.
ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ; ಸಿಎಂ
ಆರ್ಥಿಕ ಇಲಾಖೆಯ ಅನುಮತಿ ಪಡೆದು ಖಾಲಿ ಹುದ್ದೆಗಳನ್ನು ಹಂತಹಂತವಾಗಿ ಭರ್ತಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಅವರು ಇಂದು ವಿಧಾನ ಪರಿಷತ್ ಸದಸ್ಯ ನಿರಾಣಿ ಹಣಮಂತ ರುದ್ರಪ್ಪ ರವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು.
ಒಳಮೀಸಲಾತಿಯ ಬಿಕ್ಕಟ್ಟಿನಿಂದಾಗಿ ನೇಮಕಾತಿ ಪ್ರಕ್ರಿಯೆಯಲ್ಲಿ ವಿಳಂಬವುಂಟಾಗಿತ್ತು. ಈಗ ಈ ಸಮಸ್ಯೆಗೆ ಬಗೆಹರಿದಿದ್ದು, ಆರ್ಥಿಕ ಇಲಾಖೆಯ ಅನುಮತಿ ಪಡೆದು ಹಂತ ಹಂತವಾಗಿ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದರು.
ಇಷ್ಟೇಲ್ಲ ಉದ್ಯೋಗ ನಿರುದ್ಯೋಗಿಗಳಿಗೆ ದೊರಕಿದರೆ 2,84,881 ಮಂದಿಗೆ ಉದ್ಯೋಗ ದೊರಕಲಿದೆ. ಆದರೆ ವಿಪಕ್ಷಗಳು ಈ ಕುರಿತಂತೆ ಸರ್ಕಾರವನ್ನು ಗಟ್ಟಿ ದನಿಯಲ್ಲಿ ಪ್ರಶ್ನೆ ಮಾಡದೇ ಇರುವುದು, ಸರ್ಕಾರ ಹುದ್ದೆಗಳ ಭರ್ತಿಗೆ ತ್ವರಿತ ಕ್ರಮಕೈಗೊಳ್ಳದೆ ಇರುವುದು ಮಾತ್ರ ವಿಪರ್ಯಾಸ.