National Lok Adalat on December 13

ನಾಳೆ ದೊಡ್ಡಬಳ್ಳಾಪುರ ಸೇರಿ ಹಲವೆಡೆ ರಾಷ್ಟ್ರೀಯ ಲೋಕ್ ಅದಾಲತ್

ಬೆಂ.ಗ್ರಾ.ಜಿಲ್ಲೆ: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ನಿರ್ದೇಶನದ ಮೇರೆಗೆ 2025 ರ ಡಿಸೆಂಬರ್ 13 ರಂದು ರಾಜ್ಯದಲ್ಲಿ ರಾಷ್ಟ್ರೀಯ ಲೋಕ್ ಅದಾಲತ್ (National Lok Adalat) ಹಮ್ಮಿಕೊಳ್ಳಲಾಗಿದೆ.

ಲೋಕ್ ಅದಾಲತ್ ನಲ್ಲಿ ಸಾರ್ವಜನಿಕರು ಜಿಲ್ಲಾ ವ್ಯಾಪ್ತಿಯ ಆನೇಕಲ್, ಹೊಸಕೋಟೆ, ನೆಲಮಂಗಲ, ದೊಡ್ಡಬಳ್ಳಾಪುರ, ದೇವನಹಳ್ಳಿ ಮತ್ತು ಬೆಂಗಳೂರು ಪೂರ್ವ ತಾಲ್ಲೂಕು ಕೃಷ್ಣರಾಜಪುರಂ ನ್ಯಾಯಾಲಯಗಳಲ್ಲಿ ಚಾಲ್ತಿಯಲ್ಲಿರುವ ಪ್ರಕರಣಗಳು ಹಾಗೂ ಇನ್ನೂ ನ್ಯಾಯಾಲಯಕ್ಕೆ ದಾಖಲಿಸದೇ ಇರುವ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.

ನಗರಸಭೆ, ಪುರಸಭೆ, ಗ್ರಾಮ ಪಂಚಾಯತಿಗೆ ಭರಿಸಬೇಕಾಗಿರುವ ನೀರಿನ ಕರ, ಆಸ್ತಿ ಕರ, ಹಣಕಾಸು ಸಂಸ್ಥೆಗಳಿಗೆ ಸಂಬಂಧಿಸಿದ ಹಣ ವಸೂಲಾತಿ ಪ್ರಕರಣಗಳನ್ನು ವ್ಯಾಜ್ಯಪೂರ್ವ ಪ್ರಕರಣಗಳು ಎಂದು ದಾಖಲಿಸಿ, ವಿವಿಧ ಪ್ರಕರಣಗಳಾದ ಮೋಟಾರು ವಾಹನ ಅಪಘಾತ ಪರಿಹಾರದ ಪ್ರಕರಣಗಳು, ಅಸಲು ಧಾವೆಗಳು, ಬ್ಯಾಂಕುಗಳಿಗೆ ಸಂಬಂಧಿಸಿದ ಪ್ರಕರಣಗಳು, ಭೂಸ್ವಾಧೀನ ಪರಿಹಾರದ ಪ್ರಕರಣಗಳು, ವೈವಾಹಿಕ ಹಾಗೂ ಜೀವಾನಾಂಶ ಪ್ರಕರಣಗಳು, ಕಾನೂನಿನ ಅನ್ವಯ ರಾಜಿ ಆಗಬಹುದಾದ ಕ್ರಿಮಿನಲ್ ಪ್ರಕರಣಗಳು, ಚೆಕ್ ಬೌನ್ಸ್ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಇಚ್ಛಿಸಿದಲ್ಲಿ ಮುಂಚಿತವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ತಾಲೂಕು ಕಾನೂನು ಸೇವಾ ಸಮಿತಿಗಳು ಆನೇಕಲ್, ಹೊಸಕೋಟೆ, ನೆಲಮಂಗಲ, ದೊಡ್ಡಬಳ್ಳಾಪುರ, ಹಾಗೂ ದೇವನಹಳ್ಳಿಗೆ ಆನ್ ಲೈನ್/ ಪಿಡಿಯೋ ಕಾನ್ಸರೆನ್ಸ್/ ಇ-ಮೇಲ್ / ಎಸ್.ಎಂ.ಎಸ್/ವಾಟ್ಸಪ್/ ಎಲೆಕ್ಟ್ರಾನಿಕ್ ಮೋಡ್/ ಖುದ್ದಾಗಿ ಹಾಜರಾಗುವ ಮುಖಾಂತರ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬಹುದು.

ಜೊತೆಗೆ ನ್ಯಾಯಾಲಯಗಳಲ್ಲಿ, ಬಾಕಿ ಇರುವ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಡಿಸೆಂಬರ್ 13 ರಂದು ಆಯಾ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ್ ಆದಾಲತನ್ನು ಏರ್ಪಡಿಸಲಾಗಿದ್ದು, ಕಕ್ಷಿದಾರರು, ಸಾರ್ವಜನಿಕರು ಇದರ ಸದುಪಯೋಗ ಪಡಿಸಿಕೊಳ್ಳಬೇಕೆಂದು ಮತ್ತು ಖಾಯಂ ಜನತಾ ನ್ಯಾಯಾಲಯಗಳಲ್ಲಿ, ಆನ್ ಲೈನ್/ವಿಡಿಯೋ ಕಾನ್ವರೆನ್ಸ್/ ಇ-ಮೇಲ್ / ಎಸ್.ಎಂ.ಎಸ್/ವಾಟ್ಸಪ್/ಎಲೆಕ್ಟ್ರಾನಿಕ್ ಮೋಡ್/ ಖುದ್ದಾಗಿ ಹಾಜರಾಗುವ ಮೂಲಕ ಸಂಪರ್ಕಿಸಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ ಮತ್ತು ಪ್ರಕರಣಗಳನ್ನು ರಾಷ್ಟ್ರೀಯ ಲೋಕ ಅದಾಲತ್ ಮೂಲಕ ರಾಜೀ ಮಾಡಿಕೊಂಡರೆ ನ್ಯಾಯಾಲಯದ ಶುಲ್ಕವನ್ನು ಸಂಪೂರ್ಣವಾಗಿ ಮರುಪಾವತಿಸಲಾಗುವುದು ಹಾಗೂ ಲೋಕ್ ಆದಾಲತ್ ನಲ್ಲಿ ಪ್ರಕರಣ ಇತ್ಯರ್ಥಗೊಂಡರೆ ಮೇಲ್ಮನವಿಗೆ ಅವಕಾಶ ಇರುವುದಿಲ್ಲ. ಹಾಗಾಗಿ ಸಾರ್ವಜನಿಕರು ಈ ಲೋಕ ಅದಾಲತ್ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಿ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರಧಾನ ಜಿಲ್ಲಾ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಬಿ.ಎಸ್ ರೇಖಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜಕೀಯ

ದೊಡ್ಡಬಳ್ಳಾಪುರ: ನಾರನಹಳ್ಳಿ MPCS ಅಧ್ಯಕ್ಷ ಸ್ಥಾನಕ್ಕೆ ಎನ್.ಎಮ್. ಸುರೇಶ್ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ನಾರನಹಳ್ಳಿ MPCS ಅಧ್ಯಕ್ಷ ಸ್ಥಾನಕ್ಕೆ ಎನ್.ಎಮ್. ಸುರೇಶ್ ಅವಿರೋಧ ಆಯ್ಕೆ

ನಾರನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ (MPCS) ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಎನ್.ಎಮ್. ಸುರೇಶ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

[ccc_my_favorite_select_button post_id="119997"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ಗ್ಯಾಸ್ ಗೀಸರ್ (Gas geyser) ಬಳಕೆ ಮಾಡುವವರು ಆದಷ್ಟು ಮುಂಜಾಗ್ರತೆಯ ಕ್ರಮಕೈಗೊಳ್ಳಬೇಕಿದೆ. ಏಕೆಂದರೆ ಪದೇ ಪದೇ ವಿಷಾನಿಲ ಸೋರಿಕೆಯಿಂದ ಸಾವನಪ್ಪುವ ಪ್ರಕರಣಗಳು ವರದಿಯಾಗುತ್ತಿವೆ.

[ccc_my_favorite_select_button post_id="119828"]
ದೊಡ್ಡಬಳ್ಳಾಪುರ: ಹೊಸಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ.. ಬೈಕ್ ಸವಾರನ ಸ್ಥಿತಿ ಗಂಭೀರ

ದೊಡ್ಡಬಳ್ಳಾಪುರ: ಹೊಸಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ.. ಬೈಕ್ ಸವಾರನ ಸ್ಥಿತಿ ಗಂಭೀರ

ಆದರೆ ಹೊಸಹಳ್ಳಿ ಠಾಣೆಯ ಪೊಲೀಸರು ಅವರ ವ್ಯಾಪ್ತಿಯಲ್ಲಿನ ಗುಂಡಿ ಬಿದ್ದ ರಸ್ತೆಯಲ್ಲಿ ಎದ್ದು, ಬಿದ್ದು ಬರುವ ವಾಹನಗಳನ್ನು ತಡೆದು, ಹೆಲ್ಮೆಟ್ ಹಾಕಿಲ್ಲ, ಸೀಟ್ ಬೆಲ್ಟ್ ಹಾಕಿಲ್ಲ ಎಂದು ವಾಹನ ಸವಾರರ ದಂಡ ವಿಧಿಸಲು ಮಾತ್ರ

[ccc_my_favorite_select_button post_id="120010"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!