We must work hard to stop the war: Basavaraja Bommai

ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ

ಹಾವೇರಿ: ಓಟ್ ಚೋರಿ ಹೆಸರಿನಲ್ಲಿ ಕಾಂಗ್ರೆಸ್ ನವರು ಸುಳ್ಳನ್ನು ಸತ್ಯ ಮಾಡಲು ಹೊರಟಿದ್ದಾರೆ‌. ಅದರಿಂದ ಏನೂ ಆಗುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ (Basavaraja Bommai) ಹೇಳಿದರು.

ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಓಟ್ ಚೋರಿ ಸುಳ್ಳನ್ನು ಸತ್ಯ ಮಾಡುವ ಅಭಿಯಾನ ಬಹಳಷ್ಟು ಕಾಂಗ್ರೆಸ್ ನಾಯಕರಿಗೆ ಅದರ ಬಗ್ಗೆ ನಂಬಿಕೆ ಇಲ್ಲ. ಅವರ ಪ್ರತಿಷ್ಠೆಗೆ ಅಲ್ಲಿಗೆ ಹೋಗುತ್ತಿದ್ದಾರೆ.

ಸುಳ್ಳು ಸಾವಿರ ಬಾರಿ ಹೇಳಿ ಸತ್ಯ ಮಾಡಲು ಹೊರಟವರ ಮೇಲೆ ಕಾಂಗ್ರೆಸ್ ನವರಿಗೆ ನಂಬಿಕೆ ಇದೆ. ಅದರಿಂದ ಏನೂ‌ ಆಗಲ್ಲ. ಬಿಹಾರ್ ನಲ್ಲಿ ಇದನ್ನೇ ಮುಂದಿಟ್ಟುಕೊಂಡು ಚುನಾವಣೆ ಮಾಡಿದರು. ಅಲ್ಲಿ ಕಾಂಗ್ರೆಸ್ ಅತ್ಯಂತ ಕಡಿಮೆ ಸ್ಥಾನ ಪಡೆಯಿತು. ಅದರಿಂದ ಇನ್ನೂ ಪಾಠ ಕಲಿತಿಲ್ಲ ಅಂದರೆ ಏನು ಮಾಡಲು ಆಗುವುದಿಲ್ಲ ಎಂದು ಹೇಳಿದರು.

ಸತ್ಯ ಹೊರಬರುತ್ತದೆ

ಆಳಂದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತಿದಾರ್ ವಿರುದ್ದ ಚಾರ್ಜ್ ಶೀಟ್ ಸಲ್ಲಿಸಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಚಾರ್ಜ್ ಶೀಟ್ ಸಲ್ಲಿಸಿದ ತಕ್ಷಣ ಏನೂ ಆಗಲ್ಲ. ಕೋರ್ಟ್ ನಲ್ಲಿ ಸಾಬೀತಾಗಬೇಕು.

ಯಾವ ಸಂದರ್ಭದಲ್ಲಿ ಎಸ್ ಐ ಟಿ ರಚನೆ ಆಗಿದೆ. ಎಸ್ ಐಟಿ ಯಾವ ರೀತಿ ತನಿಖೆ ಮಾಡಿದೆ. ಇಲೆಕ್ಷನ್ ಕಮಿಷನ್ ಆಗಲೇ ಸ್ಪಷ್ಟನೆ ನೀಡಿದೆ. ಆರು ಸಾವಿರ ಮತ ಕಡಿತ ಮಾಡುವಂತೆ ಅರ್ಜಿ ಬಂದರೂ ಕೇವಲ 18 ಮತ ಕಡಿತ ಮಾಡಿದ್ದಾರೆ. ಹೀಗಾಗಿ ಕೋರ್ಟ್ ನಲ್ಲಿ ಸತ್ಯ ಹೊರಬರುತ್ತದೆ. ಚುನಾವಣಾ ಆಯೋಗದ ಪಾತ್ರ ಏನು ಸತ್ಯಾಂಶ ಏನು ಎಲ್ಲವೂ ಹೊರ ಬರುತ್ತದೆ ಎಂದು ಹೇಳಿದರು.

ನೈತಿಕ ಪೊಲೀಸ್ ಗಿರಿ ಒಪ್ಪುವುದಿಲ್ಲ

ಸವಣೂರಿನಲ್ಲಿ ಶಿಕ್ಷಕನ ಮೇಲೆ ಹಲ್ಲೆ ಮಾಡಿರುವ ಪ್ರಕರಣ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನೈತಿಕ ಪೊಲಿಸ್ ಗಿರಿ ಒಪ್ಪುವುದಿಲ್ಲ ತಪ್ಪು ಮಾಡಿದವರಿಗೆ ಶಿಕ್ಷೆ ಆಗಬೇಕು. ಅದರ ಬದಲು ರಸ್ತೆಯಲ್ಕಿ ಮೆರವಣಿಗೆ ಮಾಡಿ ಬಟ್ಟೆ ಹರಿಯುವುದು ಸರಿಯಲ್ಲ.

ಅಮಾನವೀಯವಾಗಿ ಮಾಡುವ ಕೃತ್ಯಕ್ಕೆ ಅವಕಾಶ ಕೊಡಬಾರದು. ಶಿಕ್ಷಕನಿಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿ ಕಾನೂನು ಕೈ ತೆಗೆದುಕೊಂಡಿದ್ದಾರೆ. ಆತ ತಪ್ಪು ಮಾಡಿದ್ದರೆ ಶಿಕ್ಷೆ ಆಗಬೇಕು. ಅದಕ್ಕಿಂತ ಮುಂಚೆ ಬೀದಿ ಬೀದಿಗಳಲ್ಲಿ ಮೆರವಣಿಗೆ ಮಾಡಿರುವುದು ಅನಾಗರಿಕತೆ. ಪ್ರಜಾಪ್ರಭುತ್ವದಲ್ಲಿ ಇದಕ್ಕೆ ಅವಕಾಶ ಇಲ್ಲ.

ಇಲ್ಲಿ ಪೊಲೀಸರು ನಿಷ್ಕ್ರಿಯ ಆಗಿದ್ದಾರೆ. ಅವರ ನಿರ್ಲಕ್ಷ್ಯದಿಂದ ಇದೆಲ್ಲಾ ಆಗಿದೆ. ಹಲವು ರೇಪ್ ಪ್ರಕರಣಗಳು ನಡೆದರೂ ಪುಂಡ ಪೋಕರಿಗಳನ್ನೇ ಹಿಡಿದಿಲ್ಲ. ಕಾನೂನು ಉಲ್ಲಂಘನೆ ಮಾಡುವವರಿಗೆ ಪ್ರೋತ್ಸಾಹ ಕೊಟ್ಟಿದ್ದಕ್ಕೆ ಇಂತಹ ಪ್ರಕರಣ ನಡೆಯುತ್ತಿವೆ. ಹೀಗಾಗಿ ಇದೆಲ್ಲಾ ಆಗುತ್ತಿದೆ.

ಇಲ್ಲದಿದ್ದರೆ ಇದನ್ನು ತಡೆಯಬಹುದಿತ್ತು ಒಂದು ವರ್ಗ ಓಲೈಸುವ ಕೆಲಸದ ಪರಿಣಾಮ ಈ ರೀತಿ ನಡೆದಿದೆ ಓಲೈಕೆ ರಾಜಕಾರಣದ ಪ್ರತಿಬಿಂಬ ಇದು ಎಂದು ಆರೋಪಿಸಿದರು.

ಸ್ಥಳೀಯ ಶಾಸಕರು ಕೆಲವರು ನೀರು ಹಾಕುತ್ತಾರೆ, ಕೆಲವರು ಪೆಟ್ರೋಲ್ ಹಾಕುತ್ತಾರೆ ಎಂದು ನೀಡಿರುವ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಯಾರು ನೀರು ಹಾಕುತ್ತಾರೆ, ಯಾರು ಪೆಟ್ರೋಲ್ ಹಾಕುತ್ತಾರೆ ಎಂದು ಶಾಸಕರೇ ಹೇಳಬೇಕು.

ನಾವು ಆರೋಪಿ ಪರ ಮಾತನಾಡುತ್ತಿಲ್ಲ. ತಪ್ಪು ಮಾಡಿದವರನ್ನೆಲ್ಲ ಚಪ್ಪಲಿಯಲ್ಲಿ ಹೊಡೆಯುತ್ತಾರಾ? ಹಾನಗಲ್ ನಲ್ಲಿ ರೇಪ್ ಮಾಡಿದವರನ್ನು ಚಪ್ಪಲಿಯಲ್ಲಿಯೇ ಹೊಡೆದು ಕರೆದುಕೊಂಡು ಹೋಗಿದ್ದರಾ ಎಂದು ಪ್ರಶ್ನಿಸಿದರು.

ರಾಜಕೀಯ

ಅಡುಗೆ ಅನಿಲ ಕೊರತೆ; ಸಂಸದರು ಸಂಸತ್ತಿನಲ್ಲಿ ಮಾತನಾಡಿ ಜನರಿಗೆ ನ್ಯಾಯ ಒದಗಿಸಲಿ: ಡಿಸಿಎಂ ಡಿ.ಕೆ. ಶಿವಕುಮಾರ್

ಅಡುಗೆ ಅನಿಲ ಕೊರತೆ; ಸಂಸದರು ಸಂಸತ್ತಿನಲ್ಲಿ ಮಾತನಾಡಿ ಜನರಿಗೆ ನ್ಯಾಯ ಒದಗಿಸಲಿ: ಡಿಸಿಎಂ

"ಬೇರೆ ವಿಚಾರಗಳಲ್ಲಿ ಮಾತನಾಡುವ ಸಂಸದರು ಅಡುಗೆ ಅನಿಲ ಕೊರತೆ ವಿಚಾರವಾಗಿ ಸಂಸತ್ತಿನಲ್ಲಿ ಮಾತನಾಡಬೇಕು. ರಾಜ್ಯಕ್ಕೆ ನ್ಯಾಯ ಒದಗಿಸಿಕೊಡಬೇಕು" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="120157"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ ಪ್ರಮಾದ

ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ

ಮುಂದೆ ಸಾಗುತ್ತಿದ್ದ ಬೈಕ್ ಸವಾರರ ಜೀವ ಉಳಿಸಲು ಮುಂದಾದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ ಬೆಸ್ಕಾಂ ಕೇಂದ್ರಕ್ಕೆ ಡಿಕ್ಕಿ ಹೊಡೆದಿದ್ದು (Accident) ಅದೃಷ್ಟವಶಾತ್ ಸಂಭವಿಸಬಹುದಾಗಿದ್ದ ದೊಡ್ಡ ಪ್ರಮಾಣದ ಅನಾಹುತವೇ ತಪ್ಪಿದೆ.

[ccc_my_favorite_select_button post_id="120119"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!