
ಬೆಂಗಳೂರು: ರಾಜ್ಯ ಕಾಂಗ್ರೆಸ್ ನ ದಾವಣಗೆರೆ ಮೂಲದ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ (Shamanur Shivashankarappa) ಅವರು ವಿಧಿವಶರಾಗಿದ್ದಾರೆ. ಅವರಿಗೆ 95 ವರ್ಷ ವಯಸ್ಸಾಗಿತ್ತು.
ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
ಕಳೆದ ಒಂದು ತಿಂಗಳಿನಿಂದ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. 95 ವರ್ಷದಲ್ಲೂ ಶಾಸಕರಾಗಿ ಗುರುತಿಸಿಕೊಂಡಿದ್ದ ಶಿವಶಂಕರಪ್ಪ ಏಕೈಕ ಹಿರಿಯ ರಾಜಕಾರಣಿಯಾಗಿ ಗುರುತಿಸಿಕೊಂಡಿದ್ದವರು ಇದೀಗ ಅವರು ಶಿವೈಕ್ಯರಾಗಿದ್ದಾರೆ.
ಕೆಪಿಸಿಸಿಯ ಖಾಯಂ ಖಜಾಂಚಿಯಾಗಿ ಕರೆಸಿಕೊಳ್ಳುತ್ತಿದ್ದ ಅವರು ಅಗಲಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಆಪ್ತರೂ ಆಗಿದ್ದ ಶಿವಶಂಕರಪ್ಪ ಅವರು 6 ಬಾರಿ ಶಾಸಕರಾಗಿದ್ದರು.
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷರಾಗಿ ಮೂರನೇ ಬಾರಿಗೆ ಆಯ್ಕೆಯಾಗಿ ಸಭಾದ ಏಳಿಗೆ ಶ್ರಮವಹಿಸಿದ್ದರು.
ವೀರಶೈ ಲಿಂಗಾಯತ ಸಮುದಾಯದ ಅಜಾತಶತ್ರು ನಾಯಕ ಎಂದು ಗುರುತಿಸಿಕೊಂಡಿದ್ದರು.
ಸಕಲ ಸರ್ಕಾರಿ ಗೌರವದೊಂದಿಗೆ ವೀರಶೈವ ವಿಧಿವಿಧಾನದ ಮೂಲಕ ನಾಳೆ ದಾವಣಗೆರೆಯಲ್ಲಿ ಅವರ ಅಂತ್ಯಕ್ರಿಯ ನೆರವೇರಲಿದೆ ಎಂದು ವರದಿಯಾಗಿದೆ.
ಡಿಸಿಎಂ ಡಿ.ಕೆ. ಶಿವಕುಮಾರ್ ಸಂತಾಪ
ಮಾಜಿ ಸಚಿವರು, ಶಾಸಕರು, ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಶ್ರೀ ಶಾಮನೂರು ಶಿವಶಂಕರಪ್ಪ ಅವರ ನಿಧನದ ಸುದ್ದಿ ಕೇಳಿ ಅತೀವ ದುಃಖವಾಯಿತು. ಸಮಾಜ ಸೇವೆಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಶಿವಶಂಕರಪ್ಪನವರು ಶೈಕ್ಷಣಿಕ ಕ್ಷೇತ್ರಕ್ಕೆ ವಿಶೇಷ ಕೊಡುಗೆ ನೀಡಿದ್ದರು. ಅವರ… pic.twitter.com/mjvsqqYkln
— DK Shivakumar (@DKShivakumar) December 14, 2025
ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸಂತಾಪ
ನಾಡಿನ ಹಿರಿಯ ರಾಜಕಾರಣಿಗಳು, ಮಾಜಿ ಮಂತ್ರಿಗಳು, ಉದ್ಯಮಿಗಳು ಆಗಿದ್ದ ಸರಳ ಸಜ್ಜನಿಕೆಯ ನಾಯಕರಾದ ಶ್ರೀ ಶ್ಯಾಮನೂರು ಶಿವಶಂಕರಪ್ಪನವರ ನಿಧನದ ವಾರ್ತೆ ಕೇಳಿ ಬಹಳ ದುಃಖವಾಯಿತು. ವೈಯಕ್ತಿಕವಾಗಿ ನಾನು ಬಹಳ ಗೌರವಿಸುತ್ತಿದ್ದ ನಾಯಕರು ಅವರಾಗಿದ್ದರು. ರಾಜಕಾರಣ ಮಾತ್ರವಲ್ಲದೆ ಶಿಕ್ಷಣ, ಉದ್ಯಮ, ಸಮಾಜಸೇವೆ ಕ್ಷೇತ್ರಗಳಲ್ಲಿಯೂ ಯಶಸ್ಸು ಗಳಿಸಿ ಮಾದರಿ… pic.twitter.com/E51CLDf2AR
— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) December 14, 2025