
ದೊಡ್ಡಬಳ್ಳಾಪುರ: ನಾಡಿನ ಹಿರಿಯ ರಾಜಕಾರಣಿ, ಮಾಜಿ ಮಂತ್ರಿಗಳು, ಉದ್ಯಮಿಯೂ ಆಗಿದ್ದ ಶ್ಯಾಮನೂರು ಶಿವಶಂಕರಪ್ಪ (Shyamanoor Shivashankarappa) ಅವರ ನಿಧನಕ್ಕೆ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷ ಎನ್. ವಿಶ್ವನಾಥ್ ರೆಡ್ಡಿ (N. Vishwanath Reddy) ಅವರು ಸಂತಾಪ ಸೂಚಿಸಿದ್ದಾರೆ.
ಈ ಬಗ್ಗೆ ಹರಿತಲೇಖನಿಯೊಂದಿಗೆ ಮಾತನಾಡಿದ ಅವರು, ನಾಡಿನ ಹಿರಿಯ ರಾಜಕಾರಣಿಗಳು, ಮಾಜಿ ಮಂತ್ರಿಗಳು, ಉದ್ಯಮಿಗಳು ಆಗಿದ್ದ ಸರಳ ಸಜ್ಜನಿಕೆಯ ನಾಯಕರಾದ ಶ್ಯಾಮನೂರು ಶಿವಶಂಕರಪ್ಪನವರ ನಿಧನದ ವಾರ್ತೆ ಕೇಳಿ ಬಹಳ ದುಃಖವಾಯಿತು ಎಂದು ತಿಳಿಸಿದ್ದಾರೆ.
ರಾಜಕಾರಣ ಮಾತ್ರವಲ್ಲದೆ ಶಿಕ್ಷಣ, ಉದ್ಯಮ, ಸಮಾಜಸೇವೆ ಕ್ಷೇತ್ರಗಳಲ್ಲಿಯೂ ಯಶಸ್ಸು ಗಳಿಸಿ ಮಾದರಿ ವ್ಯಕ್ತಿತ್ವದ ಸಾಧಕರಾಗಿದ್ದರು. ನೇರ ನಡೆನುಡಿಯ ಅವರು ಸಚಿವರಾಗಿಯೂ ನಾಡಿಗೆ ಅಪಾರ ಕೊಡುಗೆ ನೀಡಿದ್ದಾರೆ. ತಮ್ಮ ಇಡೀ ಜೀವನವನ್ನು ಕಾಂಗ್ರೆಸ್ ಪಕ್ಷಕ್ಕೆ ಮೀಸಲಿಟ್ಟು ದುಡಿದರು. ಅವರ ಅಗಲಿಕೆ ನಾಡಿಗೆ ಬಹುದೊಡ್ಡ ನಷ್ಟವಾಗಿದೆ.
ಶ್ರೀಯುತರ ಆತ್ಮಕ್ಕೆ ಸದ್ಗತಿ ಸಿಗಲಿ. ಈ ದುಃಖವನ್ನು ಭರಿಸುವ ಶಕ್ತಿಯನ್ನು ಆ ಪರಮ ಶಿವನು ಅವರ ಕುಟುಂಬಕ್ಕೆ, ಅಭಿಮಾನಿಗಳಿಗೆ, ಹಿತೈಷಿಗಳಿಗೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ವಿಶ್ವನಾಥ್ ರೆಡ್ಡಿ ಹೇಳಿದ್ದಾರೆ.