
ದೊಡ್ಡಬಳ್ಳಾಪುರ; ಕೇಂದ್ರದ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ, ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ (H.D. Kumaraswamy) ಅವರು ಇಂದು (ಮಂಗಳವಾರ) 66ನೇ ವಸಂತಕ್ಕೆ ಕಾಲಿಟ್ಟಿದ್ದಾರೆ.
ಕುಮಾರಸ್ವಾಮಿ ಅವರ ಹುಟ್ಟುಹಬ್ಬದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿದಂತೆ ಗಣ್ಯರು ಸಾಮಾಜಿಕ ಮಾಧ್ಯಮಗಳಲ್ಲಿ ಶುಭಹಾರೈಸಿದ್ದಾರೆ.
ಇನ್ನೂ ಕುಮಾರಣ್ಣರ ಜನ್ಮದಿನದ ಅಂಗವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಬಿ. ಮುನೇಗೌಡರ ನೇತೃತ್ವದಲ್ಲಿ ದೊಡ್ಡಬಳ್ಳಾಪುರದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಹಾಲು, ಹಣ್ಣು, ಬ್ರೆಡ್ ವಿತರಣೆ ಮಾಡಲಾಯಿತು.

ಈ ವೇಳೆ ಮಾತನಾಡಿದ ಬಿ.ಮುನೇಗೌಡ ಅವರು, ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ಅವರಿಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯ ಸಿಗಲೆಂದು ನಾವು ಪ್ರಾರ್ಥಿಸುತ್ತೇವೆ. ಕರ್ನಾಟಕ ಮುಂದಿನ ಮುಖ್ಯಮಂತ್ರಿಯಾಗಿ ಹೆಚ್ಚಿನ ಸಮರ್ಪಣಾಭಾವದಿಂದ ರಾಜ್ಯದ ಜನರ ಸೇವೆ ಸಲ್ಲಿಸಲು ಅವರಲ್ಲಿ ಶಕ್ತಿ ಹೆಚ್ಚಾಗಲಿ ಎಂದು ಹಾರೈಸಿದರು.

ಈ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಲಕ್ಷ್ಮೀಪತಯ್ಯ, ನಗರ ಅಧ್ಯಕ್ಷ ವಡ್ಡರಹಳ್ಳಿ ರವಿ, ನಗರಸಭೆ ಉಪಾಧ್ಯಕ್ಷ ಮಲ್ಲೇಶ್, ಸದಸ್ಯ ತ.ನ.ಪ್ರಭುದೇವ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ದೇವರಾಜಮ್ಮ, ತೆಂಗುನಾರು ಮಂಡಳಿ ಅಧ್ಯಕ್ಷ ಗಂಟಿಗಾನಹಳ್ಳಿ ಬಾಬು, ವಕ್ತಾರ ಕುಂಟನಹಳ್ಳಿ ಮಂಜುನಾಥ್, ಶಶಿಕಲಾ, ಹೋಬಳಿ ಅಧ್ಯಕ್ಷರಾದ ಸಿದ್ದಪ್ಪ, ಜಗನ್ನಾಥ ಚಾರ್, ಮುಖಂಡರಾದ ತಳವಾರ ನಾಗರಾಜ್, ಹರ್ಷ, ನಾರಾಯಣಪ್ಪ, ಪ್ರಭಾಕರ್, ಶ್ರೀನಿವಾಸ್, ಮೂರ್ತಿ, ರಾಮಕೃಷ್ಣ, ಅಲ್ಲಾಬಕಾಶ್, ಜ್ಯೋತಿ ಮತ್ತಿತರರಿದ್ದರು.