Central government criteria: 13 lakh BPL cards in the state are ineligible..!

ಕೇಂದ್ರ ಸರ್ಕಾರದ ಮಾನದಂಡ: ರಾಜ್ಯದ 13 ಲಕ್ಷ BPL ಕಾರ್ಡ್ಗಳು ಅನರ್ಹ..!

ಬೆಳಗಾವಿ: ಬಿಪಿಎಲ್ (BPL) ಕಾರ್ಡ್ ಸೇರಿದಂತೆ ಆಹಾರ ಇಲಾಖೆಯ ಯೋಜನೆ ಕುರಿತಂತೆ ಅಧಿಕಾರಿಗಳು ಮತ್ತು ನ್ಯಾಯ ಬೆಲೆ ಅಂಗಡಿಗಳ ಮಾಲಿಕರ ಸಂಘದ ಅಧ್ಯಕ್ಷರುಗಳೊಂದಿಗೆ ಸಚಿವ ಕೆ.ಹೆಚ್. ಮುನಿಯಪ್ಪ (K.H. Muniyappa) ಅವರು ಸುವರ್ಣ ವಿಧಾನ ಸೌಧದ ಸಭಾಂಗಣದಲ್ಲಿ ಬೆಳಗಾವಿ ಮತ್ತು ಕಲಬುರಗಿ ವಿಭಾಗದ ಪ್ರಗತಿ ಪರಿಶೀಲನೆ ಸಭೆಯನ್ನು ನಡೆಸಿದರು.

ನಂತರ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿ, ಪಡಿತರ ಫಲಾನುಭವಿಗಳು ಕಡ್ಡಾಯವಾಗಿ ತಮ್ಮ ಕಾರ್ಡನ್ನು ಇಕೆವೈಸಿ ಮಾಡಿಸತಕ್ಕದ್ದು.

ಪಡಿತರ ಪರಿಷ್ಕರಣೆಯ ಕಾರ್ಯ ಸಮರ್ಪಕವಾಗಿರಲಿ ಮತ್ತು ಅರ್ಹರು ಒಂದು ವೇಳೆ ಪರಿಷ್ಕರಣೆ ವೇಳೆ ಎಪಿಎಲ್ ಗೆ ಬದಲಾಗಿದ್ದಲ್ಲಿ ಅದನ್ನು ಸಂಬಂದಪಟ್ಟ ತಾಲ್ಲೂಕಿನ ತಹಶಿಲ್ದಾರರ ಕಚೇರಿಗೆ ಬೇಟಿ ಮಾಡಿ ಮನವಿ ಸಲ್ಲಿಸುದಾಗ ಅದನ್ನು ಪರಿಶೀಲನೆ ಮಾಡಿ ಪುನಃ ಬಿಪಿಎಲ್ ಗೆ ವರ್ಗಾಯಿಸಲಾಗುತ್ತದೆ ಎಂದರು.

ತಾಲ್ಲೂಕು‌ ಮಟ್ಟದಲ್ಲಿ ಅಧಿಕಾರಿಗಳು ಅರ್ಹ ಫಲಾನುಭವಿಗಳ ಮನೆಗಳಿಗೆ ಬೇಟಿ ನೀಡಿ ಪಡಿತರ ಕಾರ್ಡ್ ನ್ನು ಪರಿಶೀಲನೆ ಮಾಡಿ ಸತ್ಯಾಂಶವನ್ನು ನಮಗೆ ಒಂದು ವಾರದೊಳಗೆ ತಿಳಿಸಬೇಕು ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರದ ಮಾನದಂಡಗಳ ನಿರದೇಶನದಂತೆ ಅನರ್ಹ ಬಿಪಿಎಲ್ ಕಾರ್ಡ್ಗಳನ್ನು ಪತ್ತೆ ಹಚ್ಚಿ ಎಪಿಎಲ್ ಆಗಿ ಪರಿವರ್ತಿಸುವುದು. ಯಾವುದೇ ಕಾರಣಕ್ಕೂ ಅರ್ಹ ಫಲಾನುಭವಿಗಳ ಕಾರ್ಡ್ಗಳನ್ನು ರದ್ದು ಮಾಡಬಾರದು ಎಂದು ತಿಳಿಸಿದರು.

ರಾಜ್ಯದಲ್ಲಿ ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗದ ನ್ಯಾಯಬೆಲೆ ಅಂಗಡಿಗಳನ್ನು ಆಧ್ಯಾತೆಯ ಮೇಲೆ ಮಂಜೂರು ಮಾಡಲು ಒಂದು ತಿಂಗಳೊಳಗೆ ಕ್ರಮ ವಹಿಸಲಾಗುವುದು ಇದರಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯ ಮೇರೆಗೆ ಸುಮಾರು 3517 ನೂತನ ನ್ಯಾಯ ಬೆಲೆ ಅಂಗಡಿಗಳನ್ನು ಒಳ ಮೀಸಲಾತಿ ಆದಾರದ ಮೇಲೆ ರಾಷ್ಟ್ರದಲ್ಲಿಯೇ ಮೊದಲ ಬಾರಿಗೆ ನಮ್ಮ ರಾಜ್ಯದಲ್ಲಿ ನೀಡುತ್ತಿರುವುದು ಎಂದರು.

ನ್ಯಾಯಬೆಲೆ ಅಂಗಡಿ‌ ಮಾಲಿಕರಿಗೆ ಯಾವುದೇ ಸಮಸ್ಯೆಗಳಿಲ್ಲದೆ ಪರಿಹರಿಸಲಾಗುವುದು ನ್ಯಾಯ ಬೆಲೆ ಅಂಗಡಿಗಳಲ್ಲಿ ಯಂತ್ರಗಳ ಅಳವಡಿಕೆಗೆ ತಾವು ಮುಂದಾಗಿ‌ ಇದನ್ನು ಒಳಪಡಿಸಬೇಕು ತಮಗೆ ಬರುವ ಚಿಲ್ಲರೆ ಲಾಭಾಂಶವನ್ನು ಸರಿಯಾದ ಸಮಯಕ್ಕೆ ಸಮರ್ಪಕವಾಗಿ ನೀಡಲಾಗುತ್ತದೆ ತಾವು ಗ್ರಾಹಕರಿಗೆ ಸರಿಯಾದ ಸಮಯದಲ್ಲಿ ಪಡಿತರ ವಿತರಿಸಬೇಕು ಎಂದರು.

ಕೇಂದ್ರ ಸರ್ಕಾರದ ಮಾನದಂಡಗಳ ಆದಾರದ ಮೇಲೆ ಸುಮಾರು 13 ಲಕ್ಷ ಕಾರ್ಡ್ಗಳು ಅನರ್ಹ ಕಾರ್ಡಗಳಿದ್ದು ಇವುಗಳನ್ನು ಎಪಿಎಲ್ ಗೆ ವರ್ಗಾವಣೆ ಮಾಡಿರುವ ಬಗ್ಗೆ ಚರ್ಚೆ ನಡೆಸಿದ್ದು.

ರಾಜ್ಯದಲ್ಲಿ ಅರ್ಹ ಫಲಾನುಭವಿಯನ್ನು ಶೀಘ್ರದಲ್ಲಿ ಗುರುತಿಸಬೇಕು, ಅನರ್ಹರನ್ನು ಮಾತ್ರ ತಾವು ಎಪಿಎಲ್ ಗೆ ವರ್ಗಾಯಿಸಲು ಅಧಿಕಾರಿಗಳಿಗೆ ಸೂಚಿಸಿದರು.

ಇತರೆ ರಾಜ್ಯಗಳ ಮಾನದಂಡಗಳನ್ನು ಸಹಾ ತಾವು ಸಂಗ್ರಹಿಸಿ ಅವನ್ನು ಪರಿಶೀಲನೆ ನಡೆಸಿ ಅನ್ವಯಿಸಲು ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.

3 ಲಕ್ಷದ 96 ಸಾವಿರ ಪಡಿತರ ಕಾರ್ಡ್ಗಳನ್ನು ಒಂದು ತಿಂಗಳೊಳಗೆ ಪರಿಷ್ಕರಣೆ ಮಾಡಿ ನೂತನ ಕಾರ್ಡ್ ನೀಡಲು ಕ್ರಮ ವಹಿಸಲು ಸೂಚಿಸಿದರು.

6ಲಕ್ಷ ಮೆಟ್ರಿಕ್ ಟನ್ ರಾಗಿ ಖರೀದಿ

ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಈ ವರ್ಷ ಪ್ರತಿ ಕ್ವಿಂಟಾಲ್ ರಾಗಿಗೆ ರೂ 4886 ಬೆಲೆಯಂತೆ ಖರೀದಿಸಲಾಗುತ್ತಿದೆ. ಈಗಾಗಲೇ 6ಲಕ್ಷ ಮೆಟ್ರಿಕ್ ಟನ್ ರಾಗಿ ಖರೀದಿಗೆ ರೈತರು ನೊಂದಣಿ ಮಾಡಿಕೊಂಡಿದ್ದಾರೆ.

ಇದರಿಂದ ಒಟ್ಟು 3000 ಕೋಟಿ ರೂಗಳೊಂದಿಗೆ 257000 ಸಾವಿರ ರೈತರಿಗೆ ಈ ಯೋಜನೆಯು ಪ್ರಯೋಜನವಾಗಲಿದೆ.

ಕಾನೂನು ‌ಮಾಪನ ಶಾಸ್ತ್ರ ಇಲಾಖೆಯ ವತಿಯಿಂದ ಬೆಳಗಾವಿ ಮತ್ತು ಕಲಬುರಗಿ ವಿಭಾಗದಲ್ಲಿ ಸುಮಾರು 71 ಸಕ್ಕರೆ ಕಾರ್ಖಾನೆಗಳ ತಪಾಸಣೆ ಮಾಡಿದ್ದು ಕಬ್ಬು ಬೆಳೆಗಾರರ ಹಿಂದೆ ಇದ್ದ ಲೋಪದೋಷಗಳನ್ನು ಸರಿಪಡಿಸಲಾಗಿದೆ ತೂಕದಲ್ಲಿ ಮೋಸವನ್ನು ತಡೆಯಲಾಗಿದೆ ಇಲ್ಲಿಯವರೆಗೂ ಸುಮಾರು 50 ಸಾವಿರ ಕೋಟಿ ರೂಗಳು ಅಭಿಸಂಧಾನ ಶುಲ್ಕ ವಸೂಲಿ ಮಾಡಲಾಗಿದೆ ಎಂದರು.

ಸಭೆಯಲ್ಲಿ ಸರ್ಕಾರದ ಕಾರ್ಯದರ್ಶಿ ಪ್ರಸಾದ್ ಎನ್.ವಿ,ಆಯುಕ್ತರಾದ ಎಂ. ಕನಗವಲ್ಲಿ, ಕಾನೂನು ಮಾಪನ ಇಲಾಖೆಯ ನಿಯಂತ್ರಕರಾದ ಎಂ.ಎಸ್.ಎನ್ ಬಾಬು,ನಿಗಮ ನಿರ್ದೇಶಕ ಜಗದೀಶ್, ಸಚಿವರ ಆಪ್ತ ಕಾರ್ಯದರ್ಶಿ ಡಾ.ಹೆಚ್.ನಟರಾಜ್, ಜಂಟಿ ನಿರ್ದೇಶಕರು ಐಟಿ ರಾಜಶೇಖರ್, ಕುಮುದಾ ಹಾಗೂ ಪಡಿತರ ವಿತರಕ ಸಂಘದ ಅಧ್ಯಕ್ಷರಾದ ಕೃಷ್ಣಪ್ಪ, ಮತ್ತು ಕೃಷ್ಣ ನಾಯಕ್ ಹಾಗೂ ಸಂಘದ ಪಧಾದಿಕಾರಿಗಳು ಅಧಿಕಾರಿಗಳು ಉಪಸ್ಥಿತರಿದ್ದರು.

ರಾಜಕೀಯ

ಸಿಎಂ, ನನ್ನನ್ನು ಸೂಕ್ತ ಸಮಯದಲ್ಲಿ ಕರೆಯುವುದಾಗಿ ಹೈಕಮಾಂಡ್ ತಿಳಿಸಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ಸಿಎಂ, ನನ್ನನ್ನು ಸೂಕ್ತ ಸಮಯದಲ್ಲಿ ಕರೆಯುವುದಾಗಿ ಹೈಕಮಾಂಡ್ ತಿಳಿಸಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

“ನಮ್ಮ ಹೈಕಮಾಂಡ್ ನಾಯಕರು ಸಿಎಂ ಮತ್ತು ನನಗೆ ಇಬ್ಬರಿಗೂ ಏನೋ ಹೇಳಿದ್ದಾರೆ. ಸೂಕ್ತ ಸಮಯದಲ್ಲಿ ಕರೆಸುತ್ತೇವೆ ಎಂದೂ ಇಬ್ಬರಿಗೂ ಹೇಳಿದ್ದಾರೆ. ಆಗ ಇಬ್ಬರೂ ದಿಲ್ಲಿಗೆ ಹೋಗುತ್ತೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar)

[ccc_my_favorite_select_button post_id="117560"]
ಕಲಾವಿದರಾದ ಉಮೇಶ್, ರಾಮಚಂದ್ರಯ್ಯ ಅವರಿಗೆ ದೊಡ್ಡಬಳ್ಳಾಪುರದಲ್ಲಿ ನುಡಿನಮನ

ಕಲಾವಿದರಾದ ಉಮೇಶ್, ರಾಮಚಂದ್ರಯ್ಯ ಅವರಿಗೆ ದೊಡ್ಡಬಳ್ಳಾಪುರದಲ್ಲಿ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಚಲನಚಿತ್ರ ಹಾಸ್ಯ ನಟ ಉಮೇಶ್ (Umesh) ಮತ್ತು ಜಾನಪದ ಕಲಾವಿದ ಶ್ಯಾಕಲದೇವನಪುರ ರಾಮಚಂದ್ರಯ್ಯ (Ramachandraiah) ಅವರಿಗೆ ನುಡಿನಮನ ಕಾರ್ಯಕ್ರಮ ನಡೆಯಿತು. 

[ccc_my_favorite_select_button post_id="117539"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದ ಎಂ.ಆ‌ರ್.ಜಾಹ್ನವಿಗೆ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ

ದೊಡ್ಡಬಳ್ಳಾಪುರದ ಎಂ.ಆ‌ರ್.ಜಾಹ್ನವಿಗೆ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ

ಇಲ್ಲಿನ ನಿಸರ್ಗ ಯೋಗ ಕೇಂದ್ರದ ಯೋಗಪಟು ಎಂ. ಆರ್. ಜಾಹ್ನವಿ (M.R. Jahnavi) ಅವರಿಗೆ ಧಾರವಾಡದ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ವತಿಯಿಂದ 2023-24ನೇ ಸಾಲಿಗೆ ನೀಡಲಾಗುವ ಅಕಾಡೆಮಿ ಬಾಲ ಗೌರವ ಪ್ರಶಸ್ತಿ ಬಾಲ

[ccc_my_favorite_select_button post_id="117462"]
ಬೆಂಕಿ ಹಚ್ಚಿಕೊಂಡು ಬಿಜೆಪಿ ಕಾರ್ಯಕರ್ತೆ ‘ಜ್ಯೋತಿ ಪಾಟೀಲ್’ ಆತ್ಮಹತ್ಯೆ.!

ಬೆಂಕಿ ಹಚ್ಚಿಕೊಂಡು ಬಿಜೆಪಿ ಕಾರ್ಯಕರ್ತೆ ‘ಜ್ಯೋತಿ ಪಾಟೀಲ್’ ಆತ್ಮಹತ್ಯೆ.!

ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಬಿಜೆಪಿ (BJP) ಕಾರ್ಯಕರ್ತೆ ಜ್ಯೋತಿ ಪಾಟೀಲ್ ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾರೆ.

[ccc_my_favorite_select_button post_id="117562"]
ದೊಡ್ಡಬಳ್ಳಾಪುರ; ಕಂಟೇನರ್‌ಗೆ ಡಿಕ್ಕಿ.. ಬೈಕ್ ಸವಾರ ಸಾವು..

ದೊಡ್ಡಬಳ್ಳಾಪುರ; ಕಂಟೇನರ್‌ಗೆ ಡಿಕ್ಕಿ.. ಬೈಕ್ ಸವಾರ ಸಾವು..

ಕಂಟೇನರ್ (container) ಚಾಲಕ ನಿರ್ಲಕ್ಷ್ಯದಿಂದ ಏಕಾಏಕಿ ತಿರುವ ಪಡೆದ ವೇಳೆ ಎದುರು ರಸ್ತೆಯಲ್ಲಿ ಬರುತ್ತಿದ್ದ ದ್ವಿಚಕ್ರ ವಾಹನ‌ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ (Bike) ಸವಾರ ಸಾವನಪ್ಪಿರುವ ಘಟನೆ ಕನ್ನಮಂಗಲ ಗೇಟ್ ಬಳಿ

[ccc_my_favorite_select_button post_id="117565"]

ಆರೋಗ್ಯ

ಸಿನಿಮಾ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video ನೋಡಿ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video

ಅಭಿಮಾನಿಗಳ ದಾಸ, ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ (Darshan) ಅಭಿನಯದ ಬಹುನಿರೀಕ್ಷಿತ ಚಿತ್ರ 'ದಿ ಡೆವಿಲ್' ಇಂದು (ಡಿ.11) ರಾಜ್ಯಾದ್ಯಂತ ಅದ್ಧೂರಿಯಾಗಿ ರಿಲೀಸ್ ಆಗಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ.

[ccc_my_favorite_select_button post_id="117242"]
error: Content is protected !!