
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣಾ (Bashettihalli Town Panchayat Election) ಕಣದಲ್ಲಿರುವ ಕಾಂಗ್ರೆಸ್ ಅಭ್ಯರ್ಥಿಗಳ (Congress candidates) ಪರ ಕೆಪಿಸಿಸಿ ಉಪಾಧ್ಯಕ್ಷ ಟಿ.ವೆಂಕಟರಮಣಯ್ಯ (T. Venkataramaniah) ಅವರು ಬಿರುಬಿಸಿಲಿನಲ್ಲಿಯೂ ಮತಯಾಚನೆ ನಡೆಸುತ್ತಿದ್ದಾರೆ..
ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ಎಲ್ಲಾ 19 ವಾರ್ಡ್‌ಗಳಿಂದ ಕಣಕ್ಕೆ ಇಳಿಸಿರುವ ಕಾಂಗ್ರೆಸ್ ಅಭ್ಯರ್ಥಿಗಳ ಪರ ಕಳೆದ ಹಲವು ದಿನಗಳಿಂದ ಟಿ.ವೆಂಕಟರಮಣಯ್ಯ ಅವರು ಮುಖಂಡರೊಂದಿಗೆ ಮನೆಮನೆ ಪ್ರಚಾರ ನಡೆಸುತ್ತಿದ್ದು, ಇಂದು ಎಳ್ಳುಪುರ ಗ್ರಾಮದಲ್ಲಿ ಪ್ರಚಾರ ನಡೆಸುತ್ತಿದ್ದಾರೆ.
ಮತದಾರರ ಮನೆಗಳಿಗೆ ಹಾಗೂ ಮುಖಂಡರನ್ನು ಭೇಟಿ ಮಾಡಿ ಕಾಂಗ್ರೆಸ್ ಎಲ್ಲಾ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಅಧಿಕಾರದ ಚುಕ್ಕಾಣಿ ಹಿಡಿಯಲು ಸಹಕಾರ ನೀಡುವಂತೆ ಮನವಿ ಮಾಡುತ್ತಿದ್ದಾರೆ.
ರಾಜ್ಯ ಕಾಂಗ್ರೆಸ್ ಸರ್ಕಾರದ ಜನಪರ ಯೋಜನೆಗಳಾದ ಗ್ಯಾರಂಟಿ ಯೋಜನೆಗಳ ಕುರಿತು ಬರೆದ ವಿವರಿಸುತ್ತಿರುವ ಟಿ.ವೆಂಕಟರಮಣಯ್ಯ ಅವರು, ತಮ್ಮದೇ ಅವಧಿಯಲ್ಲಿ ಕೈಗಾರಿಕೆಗಳ ಸ್ಥಾಪನೆಯಿಂದಾಗಿ ವೇಗವಾಗಿ ಬೆಳೆಯುತ್ತಿರುವ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಅಭಿವೃದ್ಧಿಯನ್ನು ಮತ್ತಷ್ಟು ನೋಡಬೇಕಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ಅಭಿವೃದ್ಧಿಗೆ ಸಹಕಾರ ನೀಡಬೇಕಿದೆ ಎಂದಿದ್ದಾರೆ.
ಈ ವೇಳೆ ಮುಖಂಡರಾದ ಕಂಟನಕುಂಟೆ ಕೃಷ್ಣಮೂರ್ತಿ, ಕಸಬಾ ಬ್ಲಾಕ್ ಅಧ್ಯಕ್ಷ ಅಪ್ಪಿ ವೆಂಕಟೇಶ್, ಪ್ರಧಾನ ಕಾರ್ಯದರ್ಶಿ ಅಶೋಕ್ ಕುಮಾರ್, ವಿನೋದ್ ಕುಮಾರ್, ಮಾಜಿ ತಾಪಂ ಸದಸ್ಯ ಹಸನ್ ಘಟ್ಟರವಿ, ಕೆಪಿಸಿಸಿ ಸದಸ್ಯ ಹೇಮಂತರಾಜ್, ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಅಧ್ಯಕ್ಷ ವಿಶ್ವನಾಥ ರೆಡ್ಡಿ, ಪ್ರಧಾನ ಕಾರ್ಯದರ್ಶಿಗಳಾದ ಜವಾಜಿ ರಾಜೇಶ್, ಮುಖಂಡರಾದ ಹುಲ್ಲುಕುಂಟೆ ರಾಜಣ್ಣ, ಪ್ರೇಮ್, ಖಾಸಿಮ್ ಸಾಬ್, ಕಂಟನಕುಂಟೆ ರಾಜಗೋಪಾಲ್, ಎಂ. ಮಾರಪ್ಪ ಮತ್ತಿತರರಿದ್ದರು.