
ದೊಡ್ಡಬಳ್ಳಾಪುರ: ಇಲ್ಲಿನ ನಿಸರ್ಗ ಯೋಗ ಕೇಂದ್ರದ ಯೋಗಪಟು ಎಂ. ಆರ್. ಜಾಹ್ನವಿ (M.R. Jahnavi) ಅವರಿಗೆ ಧಾರವಾಡದ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ವತಿಯಿಂದ 2023-24ನೇ ಸಾಲಿಗೆ ನೀಡಲಾಗುವ ಅಕಾಡೆಮಿ ಬಾಲ ಗೌರವ ಪ್ರಶಸ್ತಿ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿಯನ್ನು ನೀಡಲಾಗಿದೆ.
ಇಂದು ಬೆಳಗಾವಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಪ್ರಶಸ್ತಿ ಪ್ರದಾನ ಮಾಡಿದರು.
ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ.ಅ.ಬಬಲೇಶ್ವರ ಮೊದಲಾದವರು ಹಾಜರಿದ್ದರು.