Farmers in Doddaballapura demand continuation of registration for purchase of Ragi

ರಾಗಿ ಖರೀದಿ ನೋಂದಣಿ ಮುಂದುವರೆಸುವಂತೆ ದೊಡ್ಡಬಳ್ಳಾಪುರದಲ್ಲಿ ರೈತರ ಆಗ್ರಹ

ದೊಡ್ಡಬಳ್ಳಾಪುರ: ಬೆಂಬಲ ಬೆಲೆ ಯೋಜನೆಯಡಿ ರಾಗಿ (Ragi) ಖರೀದಿಗೆ ರೈತರ ನೋಂದಣಿ ಮುಕ್ತಾಯವಾಗಿರುವುದರಿಂದ ರಾಗಿ ಬೆಳೆದಿರುವ ರೈತರಿಗೆ ಅನಾನುಕೂಲವಾಗಲಿದ್ದು, ಕೂಡಲೇ ಸರ್ಕಾರ ರಾಗಿ ಖರೀದಿ ನೋಂದಣಿ ದಿನಾಂಕವನ್ನು ವಿಸ್ತರಿಸಬೇಕು ಹಾಗೂ ಇದಕ್ಕೆ ಪೂರಕವಾಗಿ ರಾಗಿ ಖರೀದಿ ಗುರಿ ಏರಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ನಗರದ ಎಪಿಎಂಸಿ ಎಪಿಎಂಸಿ ಖರೀದಿ ಕೇಂದ್ರದ ಮುಂಭಾಗ ಪ್ರತಿಭಟನೆ ನಡೆಸಿ, ತಹಶೀಲ್ದಾರರಿಗೆ ಮನವಿ ಸಲ್ಲಿಸಲಾಯಿತು.

ಈ ವೇಳೆ ಮಾತನಾಡಿದ ರಾಜ್ಯ ರೈತ ಸಂಘದ ಮುಖಂಡರು, ರಾಜ್ಯದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದಿಂದ ಕನಿಷ್ಠ ಬೆಲೆ ಯೋಜನೆ ಅಡಿಯಲ್ಲಿ ಕೆಲವು ಕೃಷಿ ಉತ್ಪನ್ನಗಳನ್ನು ಖರೀದಿ ಮಾಡುತ್ತಿರುವುದು ಸ್ವಾಗತಾರ್ಹವಾಗಿದೆ. ಆದರೆ ರೈತರು ಬೆಳೆದ ಬೆಳೆಗಳಿಗೆ ಮಿತಿ ಹಾಗೂ ದಿನಾಂಕದ ನೆಪದಲ್ಲಿ ತಡೆಯೊಡ್ಡುವುದು ಸರಿಯಿಲ್ಲ.

ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಮಳೆ ಕಾರಣದಿಂದಾಗಿ ರಾಗಿ ಕೊಯ್ಲಿನಲ್ಲಿ ರೈತರು ತೊಂಡಗಿಸಿಕೊಂಡಿದ್ದರಿಂದಾಗಿ ನೋಂದಣಿ ಮಾಡಿಸುವ ಪ್ರಕ್ರಿಯೆ ನಿಧಾನವಾಗಿದೆ. ಪೂರ್ಣ ಪ್ರಮಾಣದ ರೈತರ ನೋಂದಣಿ ಕಾರ್ಯವು ಇನ್ನು ಸಾಕಷ್ಟು ಪ್ರಮಾಣದಲ್ಲಿ ಇದ್ದು ಅಂತ ರೈತರು ಈ ಯೋಜನೆ ಅಡಿಯಲ್ಲಿ ಅನುಕೂಲವನ್ನು ಪಡೆಯಲು ಸಾಧ್ಯವಾಗಿಲ್ಲ.

ಈ ನಿಟ್ಟಿನಲ್ಲಿ ರಾಗಿ ಖರೀದಿ ನೋಂದಣಿ ದಿನಾಂಕವನ್ನು ಇನ್ನೂ 15 ದಿನಗಳ ಕಾಲ ವಿಸ್ತರಿಸಬೇಕು ಅಥವಾ ಒಂದು ಲಕ್ಷ ಮೆಟ್ರಿಕ್ ಟನ್ ರಾಗಿಯನ್ನು ಖರೀದಿ ಮಾಡಲು ವ್ಯವಸ್ಥೆ ಮಾಡಬೇಕು.

ರಾಗಿ ಖರೀದಿ ನೋಂದಣಿಗೆ ಕೊನೆಯ ದಿನಾಂಕ ತಿಳಿಸದೇ, ಕೆಲವೇ ದಿನಗಳು ಇದ್ದಾಗ ಏಕಾಏಕಿ ಹೇಳಿ ನಿಲ್ಲಿಸಲಾಗಿದೆ. ಕೊನೆಯ ದಿನಾಂಕದಂದು ಮಧ್ಯಾಹ್ನ 12 ಗಂಟೆಗೆ ಬಂದ್ ಆಗಿದೆ.

ಇನ್ನು ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಸಾವಿರಾರು ರೈತರು ನೋಂದಣಿ ಮಾಡಿಸುವವರಿದ್ದಾರೆ. ರಾಗಿ ಧಾನ್ಯಕ್ಕೆ ವಿದೇಶಗಳಲ್ಲಿಯೂ ಬೇಡಿಕೆ ಇದೆ. ಸರ್ಕಾರ ರೈತರಿಂದ ರಾಗಿ ಖರೀದಿ ಮಾಡಿ, ಶೇಖರಣೆಗೆ ಆಧುನಿಕ ತಂತ್ರಜ್ಞಾನ ಬಳಸಿ ರೈತರಿಗೆ ನೆರವಾಗಬೇಕಿದೆ ಎಂದರು.

ಸ್ಥಳಕ್ಕೆ ಆಗಮಿಸಿದ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಜಿಲ್ಲಾ ವ್ಯವಸ್ಥಾಪಕ ಪ್ರವೀಣ್ ಮಾತನಾಡಿ, ರಾಜ್ಯದಲ್ಲಿ 60 ಲಕ್ಷ ಕ್ವಿಂಟಾಲ್ ರಾಗಿ ಖರೀದಿ ಗುರಿ ಹೊಂದಲಾಗಿದ್ದು, ದೊಡ್ಡಬಳ್ಳಾಪುರ ತಾಲೂಕಿನಲ್ಲಿ 12,687 ರೈತರಿಂದ 2,40,106 ಕ್ವಿಂಟಾಲ್ ನೋಂದಣಿಯಾಗಿದ್ದು, ಕಳೆದ ಸಾಲಿಗಿಂತ 60 ಸಾವಿರ ಕ್ವಿಂಟಾಲ್ ಹೆಚ್ಚಾಗಿದೆ.

ರೈತರು ರಾಗಿ ಖರೀದಿ ದಿನಾಂಕ ವಿಸ್ತರಿಸಲು ಹಾಗೂ ಖರೀದಿ ಗುರಿಯ ಮಿತಿ ಹೆಚ್ಚಿಸುವ ಕುರಿತಂತೆ ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ. ನಿಗಮದ ಕೇಂದ್ರ ಕಚೇರಿಗೂ ವರದಿ ಕಳುಹಿಸಿದ್ದೇವೆ. ಇದು ಸರ್ಕಾರದ ಮಟ್ಟದಲ್ಲಿ ನಿರ್ಧಾರವಾಗುವ ವಿಚಾರವಾಗಿದ್ದು, ಬೆಳಗಾಗಿ ಅಧಿವೇಷನ ಮುಗಿದ ನಂತರ ಸೂಕ್ತ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದರು.

ರಾಜಕೀಯ

ದೊಡ್ಡಬಳ್ಳಾಪುರದಲ್ಲಿ ಬೃಹತ್ ಶ್ರೀರಾಮ ಶೋಭಾಯಾತ್ರೆ: ಪೂರ್ವಭಾವಿಯಾಗಿ ಅಬ್ಬರದ ಬೈಕ್ ರ‍್ಯಾಲಿ

ದೊಡ್ಡಬಳ್ಳಾಪುರದಲ್ಲಿ ಬೃಹತ್ ಶ್ರೀರಾಮ ಶೋಭಾಯಾತ್ರೆ: ಪೂರ್ವಭಾವಿಯಾಗಿ ಅಬ್ಬರದ ಬೈಕ್ ರ‍್ಯಾಲಿ

ವಿಶ್ವ ಹಿಂದೂ ಪರಿಷದ್ ಬಜರಂಗದ ವತಿಯಿಂದ ಮೂರು ದಿನಗಳ ಕಾಲ ಹಮ್ಮಿಕೊಂಡಿರುವ ಬೃಹತ್ ಶ್ರೀರಾಮ ಶೋಭಾಯಾತ್ರೆ (Sri Rama Sobhayatre) ಹಿನ್ನಲೆಯಲ್ಲಿ ಮೊದಲ ದಿನ ಪೂರ್ವಭಾವಿಯಾಗಿ ಬೈಕ್ ರ‍್ಯಾಲಿ ನಡೆಸುವ ಮೂಲಕ ಶೋಭಾ ಯಾತ್ರೆಯ

[ccc_my_favorite_select_button post_id="120514"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಫೋಟೋಶೂಟ್ ವೇಳೆ ಫೊಟೋಗ್ರಾಫರ್‌‌ಗಳ ಮೇಲೆ ಹಲ್ಲೆ: 7 ಜನರ ಬಂಧನ

ಫೋಟೋಶೂಟ್ ವೇಳೆ ಫೊಟೋಗ್ರಾಫರ್‌‌ಗಳ ಮೇಲೆ ಹಲ್ಲೆ: 7 ಜನರ ಬಂಧನ

ಮದುವೆ ನಿಶ್ಚಯವಾಗಿದ್ದ ಜೋಡಿಯೊಂದರ ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆಂದು (photoshoot) ತೆರಳಿದ್ದ ಫೋಟೋಗ್ರಾಫರ್‌ಗಳ (Photographers) ಮೇಲೆ ಸ್ಥಳೀಯ ಕೆಲವರು ಹಲ್ಲೆ ನಡೆಸಿರುವ ಘಟನೆ ಸಕಲೇಶಪುರ ತಾಲೂಕಿನ ಬೆಟ್ಟದ ಭೈರವೇಶ್ವರ ದೇವಾಲಯದ ಆವರಣದಲ್ಲಿ ನಡೆದಿದೆ.

[ccc_my_favorite_select_button post_id="120523"]
ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ಶ್ರೀರಾಮನವಮಿ ಹಬ್ಬಕ್ಕೆಂದು ತಮ್ಮನ ಮನೆಗೆ ಬರುತ್ತಿದ್ದ ಮಹಿಳೆಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ಹಮಾಮ್ ಗೇಟ್ ಬಳಿ ಗುರುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120487"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!